Horoscope: ರಾಶಿಭವಿಷ್ಯ, ದ್ವೇಷಕ್ಕೆ ಸರಿಯಾದ ಕಾರಣವಿರಲಿ, ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 19, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ರಾಶಿಭವಿಷ್ಯ, ದ್ವೇಷಕ್ಕೆ ಸರಿಯಾದ ಕಾರಣವಿರಲಿ, ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 19, 2024 | 12:02 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 19) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಸಾಧ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ 11:18 ರಿಂದ 12:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:34 ರಿಂದ 04:59ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:28ರಿಂದ 09:53ರ ವರೆಗೆ.

ಮೇಷ ರಾಶಿ: ನಿಮಗಿರುವ ಕುತೂಹಲವನ್ನು ಯಾರಾದರೂ ತಣಿಸಿಯಾರು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಣ್ಣ ಅಡಚಣೆಯಾದೀತು. ವಿದ್ಯಾರ್ಥಿಗಳು ಪರೀಕ್ಷೆಯ ಭಯವನ್ನು ಕಳೆದುಕೊಳ್ಳುವುದು ಉತ್ತಮ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಮರೆವು ನಿಮಗೆ ವರದಂತೆ‌ ಕಾಣಿಸೀತು. ಯಾವುದೇ ಜವಾಬ್ದಾರಿಯನ್ನು ದೂರದಿಂದಲೇ ತಳ್ಳಿಹಾಕುವಿರಿ. ಸುಬ್ರಹ್ಮಣ್ಯನ ಉಪಾಸನೆಯು ಸಂತಸಪ್ರದವಾಗಲಿದೆ.

ವೃಷಭ ರಾಶಿ: ಇಂದಿನ ಕಾರ್ಯದ ಹೊರೆಯನ್ನು ಹೊತ್ತು ಓಡಾಡುವಿರಿ. ಇತರರನ್ನು ಹೋಲಿಸಿಕೊಂಡು ನಿಮ್ಮನ್ನು ನೀವು ಸಮಾಧಾನ‌ ಮಾಡಿಕೊಳ್ಳುವಿರಿ. ಆರ್ಥಿಕ‌ ಸಂಕಷ್ಟವನ್ನು ಎದುರಿಸುತ್ತಿದ್ದು ಸ್ಥಿರಾಸ್ತಿಯನ್ನು ಮಾರಾಟ ಮಾಡಲೂ ನಿಮಗೆ ಕಷ್ಟವಾದೀತು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ಗುರಿಯ ಬಗ್ಗೆ ಇರುವ ದೃಢತೆಯು ಸಡಿಲವಾದೀತು. ಇಂದು ಏನಾದರೂ ಆಗುತ್ತದೆ ಎಂಬ ಅಪಾಯವು ಇರಲಿದೆ. ವೃತ್ತಿಯ ಏಕತಾನತೆಯಿಂದ ಹೊರಬರಲು ಬಯಸುವಿರಿ. ಆಪ್ತರು ಕಾರಣಾಂತರಗಳಿಂದ ದೂರಾಗಬಹುದು. ಸಕಾರಾತ್ಮಕ ಆಲೋಚನೆಯನ್ನು ನೀವು ಹೆಚ್ಚು ಮಾಡಿಕೊಳ್ಳುವಿರಿ. ಯಾರನ್ನೂ ಮೆಚ್ಚುವ ನಿಮ್ಮ ಗುಣವು ಶ್ಲಾಘ್ಯವೇ. ಬಂಧುಗಳ ಮನೆಯಲ್ಲಿ ನೀವು ಇಂದು ಅನಿರೀಕ್ಷಿತವಾಗಿ ಭೋಜನ ಮಾಡುವಿರಿ. ನಿಂದಕರ ಬಗ್ಗೆ ನಿಮ್ಮ ಮಾತುಗಳು ಇರದು.

ಮಿಥುನ ರಾಶಿ: ಇಂದು ಬಂಧುಗಳು ನಿಮ್ಮನ್ನು ಭೇಟಿಯಾಗಲು ಬರಬಹುದು.‌ ನಿಮ್ಮ‌ ಬಗ್ಗೆ ನೀವೇ ಹೇಳಿಕೊಳ್ಳಬೇಕಾದೀತು. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ನೆರವಾಗುವಿಕೆ ಇರಲಿದ್ದು, ಸಂತೋಷವಾಗಲಿದೆ. ‌ಮಕ್ಕಳ ಕುರಿತು ನಿಮಗೆ ಅಭಿಮಾನ ಹೆಚ್ಚಾಗುವುದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ವೃತ್ತಿಯ ಸ್ಥಳದಲ್ಲಿ ನಿಮ್ಮನ್ನು ಗುರುತಿಸುವರು. ದ್ವೇಷಕ್ಕೆ ಸರಿಯಾದ ಕಾರಣವಿರಲಿ. ಇಂದು ಒತ್ತಡವಿಲ್ಲದೇ ಕಾರ್ಯವನ್ನು ಮುಗಿಸುವಿರಿ. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಳ್ಳುವುದು ಮುಖ್ಯವಾಗುವುದು. ನಿಮ್ಮ ಸಾಮಾಜಿಕ ಕಾರ್ಯಕ್ಕೆ ಬೆಂಬಲವನ್ನು ಅಪೇಕ್ಷಿಸುವಿರಿ. ಮಕ್ಕಳ ಕಾಳಜಿಯು ಅತಿಯಾಗುವುದು. ನಿಮ್ಮ ಬಳಿ ಇರುವುದನ್ನು ಜೋಪಾನ‌ಮಾಡಿಕೊಳ್ಳುವುದು ಸೂಕ್ತ. ಮಹಾವಿಷ್ಣುವಿನ ಉಪಾಸನೆಯು ನಿಮ್ಮ ಈ‌ ದಿನವನ್ನು ಸಾರ್ಥಕ ಮಾಡಿಸೀತು.

ಕಟಕ ರಾಶಿ: ಇಂದು ನೀವು ಯಾರಿಂದಲಾದರೂ ಸಹಾಯವನ್ನು ಪಡೆಯುವಿರಿ. ಕಾರ್ಯಸ್ಥಳದ ಬದಲಾವಣೆ ಇರಲಿದೆ. ಅಧಿಕಾರವು ಸುಮಶಯ್ಯೆಯಾಗಿರದು. ಕೆಲವು ವಿಚಾರಕ್ಕೆ ಬುದ್ಧಿಯು ಸೂಚಿಸದೇ ಇರಬಹುದು. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ಸಾಲ ಕೊಟ್ಟವರಿಂದ ನಿಮಗೆ ಕಿರಿಕಿರಿ ಎನಿಸಬಹುದು. ಸಾಧ್ಯವಾದಷ್ಟು ಸಾಲವನ್ನು ಹಿಂದಿರುಗಿಸಿ. ಕುಟುಂಬವರ ಜೊತೆ ಸಮಯವನ್ನು ಕಳೆಯುವುದು ಆಗದು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನಿಮಗೆ ಇಂದು ವಾದದಲ್ಲಿ ಸೋಲಾಗಬಹುದು, ಮುಗ್ಗರಿಸಿ ಬೀಳುವುದು ಬೇಡ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!