Horoscope: ಈ ರಾಶಿಯವರು ಅವಕಾಶ ಸಿಕ್ಕಾಗ ಮುನ್ನುಗ್ಗಲು ಹಿಂಜರಿಯುತ್ತಾರೆ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 12, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಈ ರಾಶಿಯವರು ಅವಕಾಶ ಸಿಕ್ಕಾಗ ಮುನ್ನುಗ್ಗಲು ಹಿಂಜರಿಯುತ್ತಾರೆ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
ಗಂಗಾಧರ​ ಬ. ಸಾಬೋಜಿ
|

Updated on: Dec 12, 2023 | 12:10 AM

ಮುಂಜಾನೆ ಎದ್ದ ಕೂಡಲೇ ಮಕ್ಕಳಿಂದ ಪ್ರಾರಂಭಿಸಿ ಹಿರಿಯರವರೆಗೂ ದಿನಭವಿಷ್ಯ ನೋಡುತ್ತಾರೆ. ಹಿರಿಯಾದರೆ ನಿತ್ಯ ಪಂಚಾಂಗವನ್ನೂ ಗಮನಿಸುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 12) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಧೃತಿ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:15 ರಿಂದ 04:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:38 ರಿಂದ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:26 ರಿಂದ 01:51ರ ವರೆಗೆ.

ಮೇಷ ರಾಶಿ: ನಿಮ್ಮ ಅಚಾತುರ್ಯದ ನಡೆಯು ಸಹಜ ನಡೆಯಂತೆ ತೊರುವುದು. ನಿಮಗೆ ಬರಬೇಕಾದುದನ್ನು ಹಿಂಸಾತ್ಮಕವಾಗಿ ಪಡೆದುಕೊಳ್ಳುವಿರಿ. ಪ್ರೀತಿಯಲ್ಲಿ ಕೆಲವರ ಸಹಕಾರವನ್ನು ಕೇಳುವಿರಿ. ಉದ್ಯೋಗದಲ್ಲಿ ನೌಕರರಿಗೆ ತಾರತಮ್ಯ ತೋರಿಸುವುದು ಬೇಡ. ನಿಮ್ಮ ಕಾರ್ಯ ಕುಶಲತೆಗೆ ಮೆಚ್ಚುಗೆ ಪ್ರಾಪ್ತವಾಗುವುದು. ದಿನದ ಆರಂಭದಲ್ಲಿ ಆಲಸ್ಯ ತೋರಿದರೂ ಅನಂತರ ಉತ್ಸಾಹದಿಂದ ಇರುವಿರಿ. ಆಕಸ್ಮಿಕ ದ್ರವ್ಯ ಲಾಭದಿಂದ ಖುಷಿ ಪಡುವಿರಿ. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸಂಗಾತಿಯ ಮಾನಸಿಕತೆಯು ನಿಮಗೆ ಗೊತ್ತಾಗದು. ಬಂಧುಗಳನ್ನು ಭೇಟಿಯಾಗಿ ಸ್ವಲ್ಪ ಹಗುರಾಗುವಿರಿ. ವರ್ತಮಾನದ ಘಟನೆಗಳು ತಿಳಿದಿದ್ದರೂ ಗೊತ್ತಿಲ್ಲದವರಂತೆ ಇರುವಿರಿ. ನಿರ್ಮಾಣದ ಕಾರ್ಯದಲ್ಲಿ ದುಡುಕುವಿರಿ.

ವೃಷಭ ರಾಶಿ: ತಾರ್ಕಿಕವಾಗಿ ನೀವು ಸೋತರೂ ಪ್ರಾಯೋಗಿಕ ವಿಚಾರದಲ್ಲಿ ನಿಮ್ಮದೇ ಮೇಲುಗೈ ಆಗಲಿದೆ. ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಾದರದಿಂದ ನಿಮಗೆ ಬೇಸರವಾದೀತು. ಅವಕಾಶ ಸಿಕ್ಕಾಗ ಮುನ್ನುಗ್ಗಲು ಹಿಂಜರಿಯುವಿರಿ. ಮನೋವ್ಯಥೆಯಿಂದ ನಿಮಗೆ ಬಹಳಷ್ಟು ತೊಂದರೆಗಳು ಬರಬಹುದು. ಪುಣ್ಯಕ್ಷೇತ್ರದ ದರ್ಶನವನ್ನು ಮಾಡಿ. ಮಿತವಾದ ಮಾತು ನಿಮಗೆ ಆಗದು. ಹೊಸತನಕ್ಕೆ ತೆರೆದುಕೊಳ್ಳುವ ಅಗತ್ಯತೆಯು ಇದೆ. ಮಕ್ಕಳ ವಿಚಾರದಲ್ಲಿ ನೀವು ತಿಳಿದುಕೊಳ್ಳಬೇಕಾದುದು ಬಹಳಷ್ಟು ಇವೆ. ಸಂಗಾತಿಯ ಮಾತಿನಲ್ಲಿ ನಿಮಗೆ ನಂಬಿಕೆ ಬರದು. ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು.

ಮಿಥುನ ರಾಶಿ: ಎಲ್ಲ ತಪ್ಪುಗಳೂ ತನ್ನಿಂದಲೇ ಆಗಿದ್ದು ಎನ್ನುವ ತಪ್ಪು ಕಲ್ಪನೆ ಬೇಡ. ಸೃಜನಾತ್ಮಕವಾಗಿ ಏನನ್ನಾದರೂ ಮಾಡುವುದು ಒಳ್ಳೆಯದು. ಸ್ಥಿರಾಸ್ತಿಯ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವಿರಿ. ಅತಿಯಾದ ಬುದ್ಧಿವಂತಿಕೆಯನ್ನು ತೋರಿಸಲು ಹೋಗಿ ಎಡವುವಿರಿ. ಕ್ರಿಯಾಶೀಲತೆಯನ್ನು ನೀವು ಬಿಟ್ಟಿರುವುದು ನಿಮ್ಮ ಮನಸ್ಸಿಗೆ ಬರಲಿದೆ. ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ನಿಮ್ಮ ವ್ಯವಹಾರವು ಇಂದು ಪೂರ್ಣವಾಗಲಾರದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮಗೆ ಉಂಟಾದ ಅನುಕೂಲ ಸ್ಥಿತಿಯನ್ನು ನೀವು ಪುಣ್ಯವೆಂದು ತಿಳಿಯುವಿರಿ. ಬೇರೆಯವರನ್ನು ಆಶ್ರಯಿಸುವುದು ನಿಮಗೆ ಇಷ್ಟವಾಗದ ವಿಚಾರವಾಗಿದೆ.

ಕಟಕ ರಾಶಿ: ನೀವು ನಿಮ್ಮ ಉತ್ತರಕ್ಕೆ ಸಮಜಾಯಿಷಿ ಕೊಡಲು ಹೋಗಿ ಸಿಕ್ಕಿಕೊಳ್ಳುವಿರಿ. ಎಲ್ಲ ವಿಚಾರವೂ ನಿಮ್ಮಿಂದಲೇ ಹೋಗಬೇಕು ಎನ್ನುವ ಮಾನಸಿಕತೆಯನ್ನು ಬೆಳೆಸಿಕೊಳ್ಳುವಿರಿ. ಶುಭಸಂದೇಶದ ಆಗಮನವು ನೆಮ್ಮದಿಯನ್ನು ಕೊಡುವುದು. ಕೆಲವು ವ್ಯಕ್ತಿಗಳ ಬೆಂಬಲವೂ ಕೂಡ ನಿಮಗೆ ಸಿಗುತ್ತದೆ. ಅವಸರದ ನಿರ್ಧಾರವನ್ನು ಮಾಡಲುಹೋಗುವುದು ಬೇಡ. ಸಮಯವನ್ನು ತೆಗೆದುಕೊಳ್ಳಿ. ನಿಮ್ಮ ಕಾರ್ಯವು ವಿಳಂಬವಾಗಲು ಕಾರ್ಮಿಕರು ಕಾರಣವಾಗುವರು. ಅವರ ಮೇಲೆ ಸಿಟ್ಟಗುವಿರಿ. ಮಾತಿನ ಮಿತಿಯನ್ನೂ ಮೀರಬಹುದು. ಹೂಡಿಕೆಯ ಚಿಂತನೆಯನ್ನು ಸಂಗಾತಿಯ ಜೊತೆ ಹಂಚಿಕೊಳ್ಳುವಿರಿ. ಪಕ್ಷಪಾತ ಮನಃಸ್ಥಿತಿಯು ನಿಮಗೆ ಶೋಭೆ ತರದು. ಈ ದಿನವನ್ನು ಕಳೆಯಲು ನೀವು ನಾನಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿರಿ. ಒಂಟಿತನವು ನಿಮಗೆ ಇಷ್ಟವಾಗದು. ಇನ್ನೊಬ್ಬರ ನೋವನ್ನು ಕಂಡೂ ನೀವು ಸುಮ್ಮನಿರುವುದು ಬೇಡ. ಮನೆಯ ಜವಾಬ್ದಾರಿಯನ್ನೂ ನಿವು ತೆಗೆದುಕೊಳ್ಳಲು ಇಷ್ಟಪಡಲಾರಿರಿ. ಸ್ನೇಹಿತರು ಹಳೆಯ ಹಣಕಾಸಿನ ವಿಚಾರಕ್ಕೆ ಜಗಳವಾಡುವರು.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ