AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ನಿಮ್ಮ ನಡೆಯು ಸುಲಭಕ್ಕೆ ತಿಳಿಯದು, ಅನಿರೀಕ್ಷಿತವಾಗಿ ಧನಾಗಮನ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 01 ಜುಲೈ​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ನಿಮ್ಮ ನಡೆಯು ಸುಲಭಕ್ಕೆ ತಿಳಿಯದು, ಅನಿರೀಕ್ಷಿತವಾಗಿ ಧನಾಗಮನ
ನಿಮ್ಮ ನಡೆಯು ಸುಲಭಕ್ಕೆ ತಿಳಿಯದು, ಅನಿರೀಕ್ಷಿತವಾಗಿ ಧನಾಗಮನ
ಗಂಗಾಧರ​ ಬ. ಸಾಬೋಜಿ
|

Updated on: Jul 01, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜುಲೈ. 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 07:46 ರಿಂದ ರಾತ್ರಿ 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:59 ರಿಂದ 12:37ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:51ರ ವರೆಗೆ.

ಮೇಷ ರಾಶಿ: ಇಂದು ನಿಮ್ಮನ್ನು ನೀವು ಪ್ರಶಂಸಿಸಿಕೊಳ್ಳುವುದು ಇತರರಿಗೆ ಇಷ್ಟವಾಗದು. ಉಪಯೋಗಕ್ಕೆ ಬಾರದ ಕೆಲಸವನ್ನು ಬಿಟ್ಟುಬಿಡುವುದು ಒಳ್ಳೆಯದು. ಮಂಗಲಕರವಾದ ಕಾರ್ಯಗಳನ್ನು ಮಾಡಲಿದ್ದೀರಿ. ಮನೆಯಲ್ಲಿಯೇ ಇರುವ ನಿಮಗೆ ಮನೆಯವರ ಮಾತುಗಳು ಕಿರಿಕಿರಿ‌ ಎನಿಸಬಹುದು. ನಿಮ್ಮ ಮಾತು ಜೊತೆಗಾರರಿಗೆ ಮನನೋಯುವಂತೆ ಇರಲಿದೆ. ನೀವು ಇಂದು ನಡೆದಾಡಲೂ ಇಷ್ಟಪಡುವುದಿಲ್ಲ. ಒಂದು ಸಂದರ್ಭದಂತೆ ಮತ್ತೊಂದು ಸಂದರ್ಭವನ್ನು ಊಹಿಸಿಕೊಳ್ಳಬೇಡಿ. ನಿಮ್ಮ ವೇಗವನ್ನು ಹಿಮ್ಮೆಟ್ಟಿಸಲು ನಾನಾ ತಂತ್ರಗಳು ನಡೆಯಬಹುದು. ನಿಮ್ಮ ಕೆಲಸವೇ ಅವರಿಗೆ ಉತ್ತರವಾಗಲಿ. ಮಾತು ಆದಷ್ಟು ಕಡಿಮೆ ಇರುವುದೇ ಒಳ್ಳೆಯದು. ನಿಮ್ಮನ್ನು ದಿಕ್ಕು ತಪ್ಪಿಸಿ ವೇಗವನ್ನು ಕಡಿಮೆ‌ ಮಾಡಿಸಬಹುದು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಅಂತಃಕರಣದ ಒಪ್ಪಿಗೆಯಿಂದ ಕಾರ್ಯವನ್ನು ಮಾಡುವಿರಿ.

ವೃಷಭ ರಾಶಿ: ಇಂದು ಕಳೆದುಕೊಂಡ ಸಂಪತ್ತು ನಿಮಗೆ ಸಿಗದು. ನಿಮ್ಮ‌ ಸಂತೋಷಕ್ಕೆ ಕಾರಣದ ಅವಶ್ಯಕತೆ ಇಲ್ಲ. ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ದಾಂಪತ್ಯವು ಸುಖವಾಗಿರಲು ಇಬ್ಬರೂ ಪ್ರಯತ್ನಿಸಬೇಕು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಜನರು ಬಹಳ ಪ್ರಯತ್ನಿಸಬಹುದು. ನಿಮ್ಮ ನಡೆಯು ಸುಲಭಕ್ಕೆ ತಿಳಿಯದು. ಐಷಾರಾಮಿಯಾಗಿ ಇರಲು ಈ ದಿನವನ್ನು ಇಷ್ಟಪಡುವಿರಿ. ಅನಿರೀಕ್ಷಿತವಾಗಿ ಧನಾಗಮನದಿಂದ ಸಂತೋಷ ಸಿಗಲಿದೆ. ಆರ್ಥಿಕತೆಯಲ್ಲಿ ಭಿನ್ನಾಭಿಪ್ರಾಯಗಳು ಬರಬಹುದು. ಸ್ನೇಹಿತರಿಗೆ ಸಹಾಯವನ್ನು ಮಾಡುವಿರಿ. ಕಾರ್ಯವು ನಿಧಾನವಾಗಿದೆ ಎಂದು ಕಂಡರೂ ಚಿಂತೆ ಬೇಡ.‌ ಪೂರ್ಣವಾಗಲಿ ಸರಿಯಾಗಿ. ನಿಮ್ಮ ಬಳಿ ಯಾರೂ ವಾದ‌ಮಾಡಬಾರದು ಎನ್ನವ ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಇನ್ನೊಬ್ಬರನ್ನು ಕೆರಳಿಸುವ ಸ್ವಭಾವವನ್ನು ಬಿಡುವುದು ಉತ್ತಮ.

ಮಿಥುನ ರಾಶಿ: ಮೇಲಧಿಕಾರಿಗಳು ತೋರಿಸುವ ಪಕ್ಷಪಾತದ ಧೋರಣೆಯು ನೀವು ಸಹಿಸಲಾರಿರಿ. ನಿಮಗೆ ಬೇಕಾದ ಸಲಹೆ ಸಹಕಾರಗಳು ಸಿಗಲಿವೆ. ಬಂಧುಗಳ ಮಾತು ಕಹಿ ಎನಿಸಬಹುದು. ನಿಮ್ಮ ಮನಸ್ಸನ್ನು ಕುಗ್ಗಿಸಬಹುದು. ಅಸಂಬದ್ಧ ಮಾತುಗಳನ್ನು ಕೇಳಿ ನಿಮಗೆ ಬೇಸರವಾದೀತು. ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಿಯಿಂದ ಭಾಗವಹಿಸುವಿರಿ. ದುಷ್ಟ ಶಕ್ತಿಯಿಂದ ತೊಂದರೆಯಾಗುವ ಅನುಮಾನ ಕಾಡವುದು. ವಾಹನದಿಂದ ಆಗುವ ಅಪಘಾತವು ಸಣ್ಣ ಅಂತರದಿಂದ ರಕ್ಷಣೆಯಾಗುವಿರಿ. ಸ್ನೇಹಿತರ ಅಥವಾ ಕುಟುಂಬದ ಜೊತೆ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಸಂಗಾತಿಯನ್ನು ತಿದ್ದುವ ಮೂರ್ಖತನ ಬೇಡ. ಆರ್ಥಿಕವಾಗಿ ದುರ್ಬಲವಲ್ಲದಿದ್ದರೂ ಸಮಯಕ್ಕೆ ಸರಿಯಾಗಿ ಹಣವಂತೂ ಸಿಗದು. ತಿದ್ದಿಕೊಳ್ಳುವ ಅಂಶಗಳನ್ನು ಗಮನಿಸುವುದು ಮುಖ್ಯವಾದೀತು. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.

ಕಟಕ ರಾಶಿ: ಎಲ್ಲ ಸಂದರ್ಭವನ್ನೂ ಆರ್ಥಿಕ ದೃಷ್ಟಿಯಿಂದ ಅಳೆಯುವುದು ಕಷ್ಟವೇ ಆದೀತು. ಹಳೆಯ ಸಿಟ್ಟನ್ನು ನೆನಪಿಸಿಕೊಂಡು ದ್ವೇಷವನ್ನು ಸಾಧಿಸುವ ಕೆಲಸವನ್ನು ಮಾಡಬೇಡಿ. ನಿಮ್ಮ ಹಳೆಯ ವಾಹನವನ್ನು ಮಾರಾಟಮಾಡುವ ಆಲೋಚನೆ ಮಾಡುವಿರಿ. ಉದ್ಯೋಗದ ನಿಮಿತ್ತ ನೀವು ಹೊರದೇಶಕ್ಕೆ ಹೋಗಬಹುದು. ಅನೇಕ ವರ್ಷಗಳ ಅನಂತರ ಆದ ಸಂತಾನದಿಂದ ಸಂತಸ ಆಗಲಿದೆ. ವಿವಾಹ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಹಳೆಯ ಸ್ನೇಹಿತರು ಸಿಕ್ಕಿ ಹಳೆಯ ವಿಚಾರಗಳನ್ನು ಸ್ಮರಿಸಿಕೊಳ್ಳುವಿರಿ. ಸ್ವಂತ ಉದ್ಯೋಗವಿದ್ದರೆ ಹೆಚ್ಚು ಶ್ರಮ ಆದೀತು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಕಾನೂನಾತ್ಮಕ ವಿಚಾರವು ನಿಮಗೆ ಅರ್ಥವಾಗದಿರಬಹುದು.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!