Horoscope 12 Jan: ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ಯಾವ ರಾಶಿಯವರಿಗೆ ಅದೃಷ್ಟ?

ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.

Horoscope 12 Jan: ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ಯಾವ ರಾಶಿಯವರಿಗೆ ಅದೃಷ್ಟ?
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ರಮೇಶ್ ಬಿ. ಜವಳಗೇರಾ

Updated on: Jan 12, 2024 | 1:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ​​​​ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಶ್ರವಣಾ, ಯೋಗ: ಹರ್ಷಣ, ಕರಣ: ಬವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:16 ರಿಂದ 12:41ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:30 ರಿಂದ 04:55ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:27 ರಿಂದ 09:51ರ ವರೆಗೆ.

ಮೇಷ ರಾಶಿ :ಇಂದು ನಿದ್ರಾಭಂಗದ ಬಹಳ‌ ಕಷ್ಟಪಡಬೇಕಾದೀತು. ಗುರುಸೇವೆಯನ್ನು ಮಾಡುವ ಅವಕಾಶದಿಂದ ವಂಚಿತರಾಗುವುದು ಬೇಡ. ನಿಮ್ಮ ಪ್ರಾಮಾಣಿಕತೆಗೆ ಪ್ರಶಂಸೆಯು ಸಿಗುವುದು. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ಅನಿರೀಕ್ಷಿತ ಘಟನೆಯಿಂದ‌ ಸ್ತಬ್ಧವಾಗುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಸಹೋದರನ ಪ್ರೀತಿಯಿಂದ ಸಂತೋಷಪಡುವಿರಿ.

ವೃಷಭ ರಾಶಿ :ಮಾತನ್ನು ಉಳಿಸಿಕೊಳ್ಳಲು ಸೋಲುಬಹುದು. ಚೋರ ಭಯವು ನೀವು ಹೊರಗೆ ಹೋದಾಗ‌ಕಾಡಬಹುದು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲು ಸಾಧ್ಯವಾಗದೇ ಹೋಗಬಹುದು. ಪತ್ನಿಯ ಬಗ್ಗೆ ದಾಮದೃಷ್ಟಿಯು ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ಹೂಡಿಕೆಯಿಂದ‌ ಲಾಭವು ಸಿಗಲಿದೆ.

ಮಿಥುನ ರಾಶಿ :ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ ಹೆಚ್ಚಿದ್ದು, ಬೇಕಾದ ಕಾರ್ಯವನ್ನು ಮಾಡುವಿರಿ. ಅತಿಯಾದ ಮಾತು ನಿಮಗೆ ತೊಂದರೆಯನ್ನು ಕೊಟ್ಟೀತು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಕಲಾವಿದರು ಅವಕಾಶದ ನಿರೀಕ್ಷೆಯಲ್ಲಿ ಇರುವರು. ಹಳೆಯ ಪ್ರೇಮಿಯ ಭೇಟಿಯಾಗಿ ಮುಜುಗರಕ್ಕೆ ಸಿಕ್ಕಿಕೊಳ್ಳಬಹುದು.

ಕಟಕ ರಾಶಿ :ವಿದ್ಯಾಭ್ಯಾಸಕ್ಕೆ ಪ್ರೇಮವು ತೊಂದರೆ ಕೊಟ್ಟೀತು. ಬಂಧುಗಳ ಆಗಮನದಿಂದ ಸಂತೋಷಗೊಳ್ಳುವಿರಿ.‌ ಹಣಕಾಸಿನ ಹರಿವು ಸರಿಯಾದ ಮಾರ್ಗದಲ್ಲಿ ಬರವಂತೆ ನೋಡಿಕೊಳ್ಳಿ. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಸಹೋದರನಿಂದ ಉಡುಗೊರೆಯು ಸಿಗಬಹುದು.‌ ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಮೇಲಧಿಕಾರಿಗಳ ಬಗ್ಗೆ ಸದ್ಭಾವವು ಇರದು.‌

ಸಿಂಹ ರಾಶಿ :ಯಾರನ್ನಾದರೂ ಪ್ರಶಂಸಿಸುವ ಮನಸ್ಸಾಗುವುದು. ನಿಯಮಿತ ಆಹಾರದಿಂದ ನಿಮಗೆ ಸೌಖ್ಯವು ಸಿಗಬಹುದು. ನೂತನ ವಾಹನದಿಂದ ಅಹ್ಲಾದಕರವಾಗಿ ಇರುವಿರಿ. ಸಂಗಾತಿಯ ಸಣ್ಣ ಮಾತೂ ನಿಮಗೆ ದೋಷವಾಗಿ ಕಾಣಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ದಾನದಿಂದ ಯಶಸ್ಸು ಪ್ರಾಪ್ತವಾಗುವುದು. ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸರಳತೆಯು ನಿಮ್ಮ ಸ್ವಭಾವವಾಗಿರಲಿ.

ಕನ್ಯಾ ರಾಶಿ :ಹಳೆಯ ವಸ್ತುಗಳನ್ನು ಮಾರಾಟ ಮಾಡಿ ಬೇಕಾದುದನ್ನು ಖರೀದಿಸುವ ಅನಿವಾರ್ಯತೆ ಬರಬಹುದು. ನಿಮ್ಮ ಅಹಂಕಾರವು ಹತಾಶೆಯನ್ನು ತರಿಸೀತು. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ನಿಮ್ಮ ಮಾತುಗಳು ಪಾಲನೆಯಗದೇ ಇರಬಹುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಹಣಕಾಸಿನ ಉಳಿತಾಯದ ಬಗ್ಗೆ ಅಧಿಕ ಗಮನ ಕೊಡುವಿರಿ.

ತುಲಾ ರಾಶಿ :ನಿಮ್ಮ ಉದ್ಯಮವನ್ನು ವಿಸ್ತರಿಸುವ ಬಗ್ಗೆ ಚಿಂತನೆ ನಡೆಸುವಿರಿ. ಸಾಹಸದಿಂದ ಇಂದಿನ‌ ಕೆಲಸವನ್ನು ಪೂರ್ಣಮಾಡುವಿರಿ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಆಗುತ್ತದೆ ಎಂದು ಏನನ್ನಾದರೂ ಮಾಡುವುದು ಉಚಿತವಾಹದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಬೇಕಾದಷ್ಟು ಅವಕಾಶಗಳನ್ನು ಬಿಡುವುದು ನಿಮಗೆ ಅಭ್ಯಾಸಬಾಗಬಹುದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ.

ವೃಶ್ಚಿಕ ರಾಶಿ :ಇಂದು ನೀವು ತುರ್ತು ಪ್ರಯಾಣವನ್ನು ಮಾಡಬೇಕಾಗಬಹುದು. ಕಛೇರಿಯ ಕಲಹದಲ್ಲಿ ಭಾಗಿಯಾಗದೇ ನಿಮ್ಮಷ್ಟಕ್ಕೇ ಇದ್ದು ಬಿಡಿ. ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಅಸ್ವಾಭಾವಿಕ ಬೆಳವಣಿಗೆಯು ನಿಮಗೆ ಬೇಸರವನ್ನು ತರಿಸೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನವು ಬರಬಹುದು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ಆಪ್ತರಿಂದ ನಿಮಗಾಗದವರ ಬಗ್ಗೆ ಮಾಹಿತಿಯನ್ನು ಪಡೆಯುವಿರಿ.

ಧನು ರಾಶಿ :ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಿಕೊಳ್ಳುವ ಕಡೆ ಗಮನಹರಿಸುವಿರಿ. ಹಳೆಯ ಅಭ್ಯಾಸವನ್ನು ಬಿಟ್ಟು ಹೊಸತನ್ನು ರೂಢಿಸಿಕೊಳ್ಳುವಿರಿ. ಸಾಲಗಾರದಿಂದ ವಂಚನೆ ಆಗುವ ಸಾಧ್ಯತೆ ಇದೆ. ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಸಿಟ್ಟನ್ನು ವೃತ್ತಿಯಲ್ಲಿ ತೋರಿಸುವುದು ಬೇಡ. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಕೆಲವರ ಸಹವಾಸವು ನಿಮಗೆ ಇಷ್ಟವಾಗದೇ ಇರಬಹುದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಸ್ತ್ರೀಯರಿಂದ‌ ಕೆಲವು ಸಮಸ್ಯೆಯು ಬರಲಿದೆ. ಆಗಬೇಕೆಂದುಕೊಂಡ ಕಾರ್ಯವನ್ನು ಪೂರ್ಣ ಮಾಡಲಾಗದು.‌

ಮಕರ ರಾಶಿ :ಹಣಕಾಸಿನ ಉದ್ಯಮದಲ್ಲಿ ಕೆಲವು ಅಡಚಣೆಗಳು ಉಂಟಾಗಬಹುದು. ಎಲ್ಲಿಗೇ ಹೋದರೂ ನಿಮಗೆ ಹಿತವೆನಿಸದು. ಬಿಡಿಸಲಾಗದಷ್ಟು ಆಪ್ತವಾದ ಸಂಬಂಧವು ದೂರವಾಗಬಹುದು. ಇಂದು ಪ್ರಯಾಣದ ಆಯಾಸವು ಇರಲಿದೆ. ಶತ್ರುಗಳನ್ನು ಕ್ಷಮಿಸಿ, ಅವರ ಮೇಲೆ ನಿಮ್ಮ ದೃಷ್ಟಿಯು ಬೇಕಾಗುವುದು. ಪಾಲುದಾರಿಕೆಯಲ್ಲಿ ನಿಮ್ಮ ಪಾಲೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಚರಾಸ್ತಿಯ ಬಗ್ಗೆ ಪೂರ್ಣ ಮಾಹಿತಿ ಇರದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಸಂಶೋದನೆಯ ಬಗ್ಗೆ ಆಸಕ್ತಿ ಅಧಿಕವಾಗಿ ಇರುವುದು. ‌ಅವಕಾಶಗಳನ್ನು ಹುಡುಕುವಿರಿ.

ಕುಂಭ ರಾಶಿ :ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು. ಸರ್ಕಾರದ ಉದ್ಯೋಗಸ್ಥರು ಕೆಲವರ ಒತ್ತಡಕ್ಕೆ ಸಿಕ್ಕಿಕೊಳ್ಳಬೇಕಾಗುವುದು. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಕಳೆದುಕೊಂಡ ಹಣವನ್ನು ಪಡೆಯಲು ಹಠವು ಬರಬಹುದು.‌ ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ಮಕ್ಕಳ ವಿಚಾರದಲ್ಲಿ ಅಧಿಕ ಖರ್ಚನ್ನು ಇಂದು ಮಾಡಬೇಕಾಗಬಹುದು.

ಮೀನ ರಾಶಿ :ನಿಮ್ಮ ವೃತ್ತಿಯಲ್ಲಿ ಕೆಲವು ಮಾರ್ಪಾಡುಗಳು ಆದ ಕಾರಣ ವೃತ್ತಿಯನ್ನು ಬದಲಿಸುವ ಯೋಚನೆ ಬರಲಿದೆ. ವ್ಯಾಪಾರಸ್ಥರು ಅಧಿಕ ಖರ್ಚಿನ‌ ಕಾರಣ ಯಾವುದೇ ಕೆಲಸಕ್ಕೂ ಮುಂದಾಗಲಾರರು. ಬೋಧನ ಕಲೆಯನ್ನು ಸಿದ್ಧಿಸಿಕೊಳ್ಳುವಿರಿ. ಮಕ್ಕಳ‌ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ವೈಷಮ್ಯವನ್ನು ಎಲ್ಲರೆದುರು ಪ್ರದರ್ಶಿಸುವುದು ಬೇಡ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌

-ಲೋಹಿತ ಹೆಬ್ಬಾರ್ – 8762924271 (what’s app only)

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ