ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು,
ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವಜ್ರ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 9:52 ರಿಂದ 11:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:06 ರಿಂದ 03:31ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:02 ರಿಂದ 08:27ರ ವರೆಗೆ.
ಮೇಷ ರಾಶಿ : ಮಿತ್ರರ ಸಹಕಾರವನ್ನು ಮರೆಯುವುದು ಬೇಡ. ವಂಚನೆಗೆ ಪ್ರತಿವಂಚನೆಯು ನಿಮ್ಮ ದೃಷ್ಟಿಯಲ್ಲಿ ಸರಿ ಎನಿಸಬಹುದು. ಪ್ರಮಾಣಿಕತೆಯನ್ನು ಹಣಕಾಸಿನ ವ್ಯವಹಾರವನ್ನು ಕೊಡಬಹುದು. ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಸಹೋದರರು ನಿಮ್ಮ ಯೋಜನೆಗೆ ಸಹಕರಿಸಬಹುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ನೌಕರರನ್ನು ಯೋಗ್ಯ ರೀತಿಯಲ್ಲಿ ಕಂಡುಕೊಂಡು ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ಬಗ್ಗೆ ಯಾರು ಏನೇ ಎಂದರೂ ಸ್ವಭಾವವನ್ನು ಬದಲಿಸಲಾರಿರಿ.
ವೃಷಭ ರಾಶಿ :ನೀವು ಇಂದು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರಲಾರಿರಿ. ಅನುಮಾನದಿಂದ ಹೊರಬರುವುದು ನಿಮಗೆ ಇಷ್ಟವಾಗದು. ಉದ್ಯೋಗದಲ್ಲಿ ಶ್ರಮವಿದ್ದರೂ ಯಶಸ್ಸು ನಿಮ್ಮದಾಗದು. ಕೆಲವು ಸನ್ನಿವೇಶವನ್ನು ನೀವಾಗಿಯೇ ಸೃಷ್ಟಿಸಿಕೊಳ್ಳುವಿರಿ. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು. ಏಕಕಾಲಕ್ಕೆ ಹತ್ತಾರು ಚಿಂತನೆಯನ್ನು ಮನಸ್ಸು ಮಾಡಲಿದೆ. ಅಸಭ್ಯ ಮಾತುಗಳನ್ನು ಕಡಿಮೆ ಮಾಡಿ. ನಿಮ್ಮನ್ನು ನೋಡುವ ದೃಷ್ಟಿಕೋನವು ಬದಲಾದೀತು. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣವಿದ್ದರೂ ಸಂತೋಷವು ಇರದು. ಇಂದು ನಿಮ್ಮ ಬಗ್ಗೆಯೇ ನಿಮಗೆ ಅಸಮಾಧಾನವಿರಬಹುದು. ಬರಬೇಕಿದ್ದ ಹಣವು ಬಹಳ ದಿನವಾದರೂ ಬಾರದೇ ಚಿಂತೆಯಾಗುವುದು. ಅದಕ್ಕಾಗಿ ಖರೀದಿಯನ್ನು ಮುಂದೂಡುವಿರಿ.
ಮಿಥುನ ರಾಶಿ :ಹೂಡಿಕೆಯನ್ನು ಮಾಡಿ ಹೊಸ ಚಿಂತೆಯನ್ನು ತಲೆಯೊಳಗೆ ತಂದುಕೊಳ್ಳುವಿರಿ. ಸರಿಯಾದುದನ್ನು ಆಯ್ಕೆ ಮಾಡುವುದು ನಿಮ್ಮಿಂದಾಗದು. ಸರ್ಕಾರಿ ಉದ್ಯೋಗದ ಕಡೆ ನಿಮ್ಮ ಮನಸ್ಸು ಹೊರಳುವುದು. ನಿಶ್ಚಿತ ಕಾರ್ಯವು ನಿಮ್ಮಿಂದ ಆಗದೇ ಹೋಗಬಹುದು. ಪ್ರಯಾಣದ ಅನಿವಾರ್ಯತೆ ಇದ್ದರೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿ. ಆದಾಯದಿಂದ ಸಂತೋಷವಿದ್ದರೂ ಅದನ್ನು ರಕ್ಷಿಸುವ ಹೊಣೆಗಾರಿಕೆಯೂ ಇರುವುದು. ಗೊಂದಲವನ್ನು ನೀವು ಮೀರುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು. ಪುನಃ ಪುನಃ ನಿಮಗೆ ಆಗದ ವಿಚಾರಗಳೇ ನಿಮ್ಮ ಕಿವಿಗೆ ಬೀಳಬಹುದು. ನಿಮ್ಮ ಸಾಮರ್ಥ್ಯದ ಬಗ್ಗೆ ಸರಿಯಾಗಿ ತಿಳಿಯಿರಿ. ಒತ್ತಡಗಳು ನಿಮ್ಮ ಕೆಲಸವನ್ನು ನಿಧಾನ ಮಾಡುವುದು. ಇಂದು ಎಲ್ಲರ ಜೊತೆ ಹೊಂದಾಣಿಕೆಯ ಸ್ವಭಾವವನ್ನು ಬಿಡಬಹುದು.
ಕರ್ಕ ರಾಶಿ :ಉದ್ಯಮವನ್ನು ಬಿಟ್ಟು ಬೇರೆಯ ಕಾರ್ಯವನ್ನು ಮಾಡಲು ಆಗದು. ನಿಮ್ಮ ನಕಾರಾತ್ಮಕ ಚಿಂತನೆಗಳೇ ನಿಮ್ಮನ್ನು ಹಿಂದೆಳೆಯುವುದು. ಮೌನವೂ ಉತ್ತರವಾದೀತು. ಕುಟುಂಬದ ಜವಾಬ್ದಾರಿಯು ನಿಮ್ಮ ಮೇಲೇ ಬರಬಹುದು. ಯಾರನ್ನೋ ಆಡಿಕೊಳ್ಳುವುದು ಪ್ರಿಯವಾಗಬಹುದು. ಇಂದು ನಿಮ್ಮ ಮಾರ್ಗಗಳು ಎಲ್ಲವೂ ಮುಚ್ಚಿದಂತೆ ಅನ್ನಿಸಬಹುದು. ವೇಗದ ನಡಿಗೆಯಿಂದ ಬೀಳುವಿರಿ. ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿ. ವ್ಯಂಗ್ಯ ಮಾತುಗಳನ್ನು ಆಡಿ ಯಾರಿಂದಲೂ ಏನನ್ನೂ ನಿರೀಕ್ಷಿಸಲಾಗದು. ಸ್ತ್ರೀಯರಿಂದ ನಿಮಗೆ ಬೈಗುಳವು ಸಿಗಬಹುದು. ಅವಿವಾಹಿತರು ವಿವಾಹದ ಬಗ್ಗೆ ಚಿಂತೆಯಾದೀತು. ಉದ್ಯೋಗದಲ್ಲಿ ಪ್ರಾಮಾಣಿಕರಾಗಿದ್ದರೂ ಅಪವಾದವು ಬರಬಹುದು. ಎಲ್ಲದಕ್ಕೂ ಕೋಪವಿಂದೇ ಪರಿಹಾರವಾಗದು.
ಸಿಂಹ ರಾಶಿ :ಎಂದೂ ಊಹಿಸದ ಅವಕಾಶವನ್ನು ಪಡೆದುಕೊಳ್ಳುವಿರಿ. ಕಛೇರಿಯಿಂದ ನಿಮಗೆ ತಿಳಿಯಬೇಕಾದ ವಿಚಾರವು ತಿಳಿಯದೇಹೋಗಬಹುದು. ಭಾರವಾದ ವಸ್ತುಗಳನ್ನು ಎತ್ತುವುದು ಬೇಡ. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಬೆನ್ನು ನೋವು ನಿಮ್ಮನ್ನು ಬಾಧಿಸೀತು. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಯಾರ ಮೇಲೇ ರೇಗದೇ ಇರುವುದು ನಿಮಗೆ ಇಷ್ಟವಾದೀತು. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ಕಾರ್ಯದ ಒತ್ತಡ ಹೆಚ್ಚಿರುವುದು. ಜವಾಬ್ದಾರಿಯ ಕಾರ್ಯವನ್ನೇ ಸರಿಯಾಗಿ ಮಾಡಿ ಆದಾಯವು ಹೆಚ್ಚಾಗುವಂತೆ ಮಾಡಿಕೊಳ್ಳಿ.
ಕನ್ಯಾ ರಾಶಿ :ಸತ್ಯವನ್ನು ಹೇಳಲು ಇಂದು ನೀವು ಹಿಂಜರಿಯುವಿರಿ. ತನಗೆ ತೊಂದರೆಯಾಗುವುದೆಂಬ ಭಯವೂ ಕಾಡಬಹುದು. ಪ್ರಭಾವಿ ವ್ಯಕ್ತಿಗಳ ಸಹಾಯಕರಾಗಿ ಹೋಗುವ ಅವಕಾಶಗಳು ಸಿಗಬಹುದು. ಜವಾಬ್ದಾರಿಯ ಮಾತುಗಳಿಂದ ಅಚ್ಚರಿಯಾದೀತು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಮಕ್ಕಳ ಅನಾರೋಗ್ಯದಿಂದ ನೀವು ಆತಂಕಕ್ಕೆ ಒಳಗಾಗುವಿರಿ. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಗೊತ್ತಿದ್ದರೂ ಗೊತ್ತಿಲ್ಲದಂತೆ ಇರುವಿರಿ. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ. ನಿಮ್ಮ ದುಃಖಕ್ಕೆ ಬಂಧುಗಳಿಂದ ಸಾಂತ್ವನವು ಸಿಗುವುದು. ಸಿಕ್ಕಿದ್ದರಲ್ಲಿ ಸುಖ ಪಡುವುದನ್ನು ಬೆಳೆಸಿಕೊಳ್ಳುವಿರಿ. ಯಾರನ್ನೂ ಅಲ್ಪವಾಗಿ ಕಾಣುವುದು ಬೇಡ.
ತುಲಾ ರಾಶಿ :ಧನಾತ್ಮಕವಾಗಿ ಆಲೋಚಿಸಿ ಕಾರ್ಯದಲ್ಲಿ ಮುಂದುವಿರಿ. ಹಣಕಾಸಿನ ವಿಚಾರದಲ್ಲಿ ಧಾರಾಳತನ ಒಳ್ಳೆಯದಲ್ಲ. ಆಪತ್ಕಾಲಕ್ಕೆ ಬೇಕಾದ ಹಣವನ್ನು ತೆಗೆದಿರಿಸುವಿರಿ. ಸ್ತ್ರೀಯರು ಆಭರಣಗಳನ್ನು ಜತನದಿಂದ ಇರಿಸಿಕೊಳ್ಳಿ. ಚರಾಸ್ತಿಯು ಅನ್ಯರ ಪಾಲಾಗಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ. ಇನ್ನೊಬ್ಬರನ್ನು ನೋಡಿ ಕಲಿಯುವ ವಿಚಾರವು ಸಾಕಷ್ಟಿರಬಹುದು. ಸಾಲ ಪಡೆದರವರ ಹುಡುಕಾಟವನ್ನು ಮಾಡುವಿರಿ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ. ಪುರುಷ ಪ್ರಯತ್ನವು ಹೆಚ್ಚಿರಬೇಕಾಗುವುದು. ತಪ್ಪನ್ನು ಸಮರ್ಥಿಸಿ ಒಪ್ಪಿಕೊಳ್ಳುವುದು ಬೇಡ. ಇನ್ನೊಬ್ಬರಿಗೆ ನೋವಾದೀತು. ಹೇಳಬೇಕಾದ್ದನ್ನು ಹೇಳದೇ ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ.
ವೃಶ್ಚಿಕ ರಾಶಿ : ಇಂದು ಸಂಗಾತಿಯ ಮಾತನ್ನು ಕೇಳಿ ಮುಂದುವರಿಯಲಾರಿರಿ. ದೈವಭಕ್ತಿಯನ್ನು ಬೆಳೆಸಿಕೊಂಡು ನಿಮ್ಮ ಕರ್ತವ್ಯವನ್ನು ಮಾಡುವುದು ಉಚಿತ. ಕೃಷಿಯ ವ್ಯಾಪಾರದಲ್ಲಿ ಹಿನ್ನಡೆಯನ್ನು ಕಾಣಬೇಕಾಗುವುದು. ಪ್ರತಿಫಲದ ನಿರೀಕ್ಷೆ ಇಲ್ಲದೇ ನೀವು ಸ್ನೇಹಿತನಿಗೆ ಸಹಾಯವನ್ನು ಮಾಡುವಿರಿ. ನಿರ್ದಿಷ್ಟ ಕ್ರಮವನ್ನು ಅಳವಡಿಸಿಕೊಂಡು ಉದ್ಯಮವನ್ನು ಕ್ರಮಬದ್ಧವಾಗಿಸಿ. ಆರೋಗ್ಯದ ಸಮಸ್ಯೆಯಿರುವ ಕಾರಣ ಸಹೋದ್ಯೋಗಿಗಳ ಸಹಕಾರವು ನಿಮಗೆ ಸಿಗಲಿದೆ. ಮಾತಿನಿಂದ ಇನ್ನೊಬ್ಬರು ನಿಮ್ಮನ್ನು ದ್ವೇಷಿಸುವರು. ಸಾಧಿಸುವ ವಿಧಾನವವನ್ನು ಹೇಳಿಕೊಳ್ಳುವುದು ಬೇಡ. ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ. ಖಾಸಗಿ ಸಂಸ್ಥೆಯು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸಬಹುದು. ವಿದೇಶೀಯ ಹಣವನ್ನು ಪಡೆದುಕೊಳ್ಳುವಾಗ ಎಚ್ಚರ.
ಧನು ರಾಶಿ :ಇಂದು ನಿಮ್ಮ ಕೆಲಸಕ್ಕೆ ಇತರರ ಹಸ್ತಕ್ಷೇಪವು ಇರಲಿದ್ದು ಅದನ್ನು ಸಹಿಸುವುದು ಆಗದು. ನಿಮ್ಮ ಸ್ವಾಭಿಮಾನವನ್ನು ಎಲ್ಲ ಕಡೆಗಳಲ್ಲಿ ಪ್ರದರ್ಶಿಸಿ ತೊಂದರೆಗೆ ಸಿಕ್ಕಿಕೊಳ್ಳುವಿರಿ. ಕಬ್ಬಿಣ ಮುಂತಾದ ವ್ಯಾಪಾರವನ್ನು ಮಾಡುವವರಿಗೆ ಆದಾಯವು ಹೆಚ್ಚಾಗುವುದು. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಣಕಾಸಿನ ವ್ಯವಹಾರದ ಪ್ರತಿನಿಧಿಗಳು ಅಂದುಕೊಂಡ ಕೆಲಸವನ್ನು ಸಾಧಿಸಿಕೊಳ್ಳುವರು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪರಿಗಳಿಗೆ ಉತ್ತಮ ಲಾಭವಿರಲುದೆ. ಇಂದು ನಿಮ್ಮ ಕಾರ್ಯಗಳನ್ನು ಇನ್ನೊಬ್ಬರು ಮಾಡಬಹುದು.
ಮಕರ ರಾಶಿ : ನಿಮ್ಮ ದ್ವಂದ್ವ ಯೋಚನೆಯಿಂದ ಇಂದು ನಿಮ್ಮ ಕೆಲಸಗಳು ಹಾದಿ ತಪ್ಪಬಹುದು. ಕಾರ್ಯದ ಕಾರಣ ಸಂಭ್ರಮವನ್ನು ಕಳೆದುಕೊಳ್ಳಬೇಕಾಗುವುದು. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಯೋಚಿಸುವುದು ಉತ್ತಮ. ಧಾರ್ಮಿಕಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ಒಗ್ಗಟ್ಟಿನಿಂದ ಕಾರ್ಯವನ್ನು ಸಾಧಿಸುವುದು ಇಂದಿನ ಅಗತ್ಯವೂ ಇದೆ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ.
ಕುಂಭ ರಾಶಿ :ಶತ್ರುಗಳು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಇಚ್ಛಿಸುವರು. ಕಳೆದುಕೊಂಡ ವಸ್ತುವಿನ ಚಿಂತೆಯನ್ನು ನೀವು ಬಿಡುವುದು ಕಷ್ಟವಾದೀತು. ಅನಗತ್ಯ ಖರ್ಚುಗಳು ಒಂದಾದಮೇಲೆ ಒಂದು ಬರಲಿದ್ದು ಕಷ್ಟವಾದೀತು. ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಔಷಧಗಳ ವ್ಯತ್ಯಾಸದಿಂದ ಮತ್ತೇನಾದರೂ ಆದೀತು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ಪ್ರೀತಿಯಿಂದ ಸಿಗುವುದು.
ಮೀನ ರಾಶಿ :ದೈವದತ್ತವಾದ ವಿಶೇಷತೆಗಳನ್ನು ಕಳೆದುಕೊಳ್ಳುವುದು ಬೇಡ. ರೂಢಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯು ಚೇತರಿಕೆಯಾಗಬಹುದು. ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಕಷ್ಟವಾದೀತು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಇಂದಿನ ಬಹುಪಾಲು ಸಮಯವನ್ನು ಅನ್ಯ ಚಿಂತನೆಯಲ್ಲಿ ಕಳೆಯುವಿರಿ. ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ಒಂದೇ ಸಾರಿ ಖರ್ಚಿನ ಎಲ್ಲ ಅವಕಾಶಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಬಂಧುಗಳ ಮನೊಲಿಸುವುದು ವ್ಯರ್ಥವೆನಿಸಬಹುದು.
-ಲೋಹಿತ ಹೆಬ್ಬಾರ್ – 8762924271 (what’s app only)