Horoscope 20 Jan: ಈ ಶುಭ ದಿನ ನಿಮ್ಮ ರಾಶಿ ಫಲ ಹೇಗಿದೆ ಎಂದು ತಿಳಿಯಿರಿ

| Updated By: ರಮೇಶ್ ಬಿ. ಜವಳಗೇರಾ

Updated on: Jan 20, 2024 | 1:01 AM

ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.

Horoscope 20 Jan: ಈ ಶುಭ ದಿನ ನಿಮ್ಮ ರಾಶಿ ಫಲ ಹೇಗಿದೆ ಎಂದು ತಿಳಿಯಿರಿ
ದಿನಭವಿಷ್ಯ
Image Credit source: iStock Photo
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶುಭ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 24 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:53 ರಿಂದ 11:18ರ ವರೆಗೆ, ಯಮಘಂಡ ಕಾಲ 14:09 ರಿಂದ 15:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 7:03 ರಿಂದ 08:28ರ ವರೆಗೆ.

ಮೇಷ ರಾಶಿ :ಬಹಳದ ದಿನದಿಂದ ನಿರೀಕ್ಷೆಯಲ್ಲಿ ಇರುವ ನಿಮಗೆ ಕೊನೆಗೂ ಉದ್ಯೋಗಕ್ಕಾಗಿ ಅವಕಾಶವು ಪ್ರಾಪ್ತವಾಗಲಿದೆ. ಆಪ್ತರ ಜೊತೆಗಿನ ಮಾತಿನಿಂದ‌ ಮನಸ್ಸು ಹಗುರಾಗುವುದು. ಪ್ರೀತಿಯಲ್ಲಿ ಅಂತರವು ಬಂದಂತೆ ತೋರಿದ್ದು ಮಾತುಕತೆಯಿಂದ ಅದನ್ನು ಸರಿ ಮಾಡಿಕೊಳ್ಳುವಿರಿ. ದ್ವೇಷವನ್ನು ಬೆಳೆಸಿಕೊಳ್ಳುವುದು ಯೋಗ್ಯವೆನಿಸದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ಇಂದಿನ ಕೆಲವು ಸಮಯವನ್ನು ಇನ್ನೊಬ್ಬರಿಗೆ ಮೀಸಲಿಡಬೇಕಾದೀತು. ಸಂಗಾತಿಯ ನೋವಿಗೂ ಸ್ಪಂದಿಸಲು ಕಷ್ಟವಾದೀತು. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮಗೆ ಆತಂಕವಾಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವ ಚಿಂತೆಯಲ್ಲಿ ಇರುವಿರಿ.

ವೃಷಭ ರಾಶಿ :ಇಂದು ಹಣಕಾಸಿನ ವಹಿವಾಟನ್ನು ಆಪ್ತರಿಗೆ ಕೊಟ್ಟು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ. ಭೂ ವ್ಯವಹಾರದಲ್ಲಿ ಇಂದು ಪೂರ್ಣ‌ಪ್ರಗತಿ ಇರದು.
ಹೊಸ ಮನೆಯ ಪ್ರವೇಶದಲ್ಲಿ‌ ನೀವು ಭಾಗಿಯಾಗುವಿರಿ. ಕೆಲವು ಸಮಸ್ಯೆಗಳನ್ನು ನೀವು ಪರಿಹಾರ ಮಾಡಿಕೊಳ್ಳುವಿರಿ. ಸಂಬಂಧಗಳನ್ನು ನೀವು ಬೇಕಾದುದಕ್ಕೆ ಬಳಸಿಕೊಳ್ಳುವಿರಿ. ರಾಜಕಾರಣಿಗಳು ಅಸ್ಥಿರ ಮನಸ್ಸಿನಲ್ಲಿ ಇರುವರು. ಅಧಿಕವಾಗಿರುವುದು. ಇಂದಿನ ಸೋಲು ನಿಮಗೆ ಪಾಠವಾಗುವುದು. ಮುನ್ನುಗ್ಗುವ ಅಭ್ಯಾಸವನ್ನು ಬೆಳೆಸಿಕೊಂಡು ನಿಮಗೆ ಇಷ್ಟವಾದ ಆಯ್ಕೆಯನ್ನು ಮಾಡಿಕೊಳ್ಳುವಿರಿ. ಪ್ರಪಂಚಜ್ಞಾನದ ಅಗತ್ಯತೆ ಹೆಚ್ಚಿವಿರುವಂತೆ ತೋರುತ್ತದೆ. ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ.

ಮಿಥುನ ರಾಶಿ :ಯಾರದೋ ಅಧೀನರಾಗಿ ಇರುವುದು ನಿಮಗೆ ಇಷ್ಟವಾಗದು. ವ್ಯವಹಾರವು ಹಳಿ ತಪ್ಪಬಹುದು. ಅನಾರೋಗ್ಯದಿಂದ ನೀವು ಬಹಳಷ್ಟು ಸುಧಾರಿಸುವಿರಿ.‌ ಯಾವ ಕೆಲಸವನ್ನೂ ನೀವು ಪೂರ್ಣ ಮಾಡದೇ ಇರಲು ಮನಸ್ಸು ಬಾರದು. ನಿಮ್ಮ ವ್ಯವಹಾರದಲ್ಲಿ ಪೈಪೋಟಿಯು ಅಧಿಕವಾಗಿ ಇರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು. ನಕಾರಾತ್ಮಕ ಆಲೋಚನೆಗಳು ಬೆನ್ನು ಹತ್ತಬಹುದು. ಹಣಕಾಸಿನ ವ್ಯವಹಾರದಲ್ಲಿ ಇಂದು ಎಲ್ಲರಿಂದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಸಂಗಾತಿಯ ಜೊತೆ ಒಡನಾಟವು ಹೆಚ್ಚಿರಲಿದೆ. ತಂದೆಯ ಶ್ರಮವನ್ನು ಕಂಡು ಮಕ್ಕಳಿಗೆ ನೋವಾಗಬಹುದು. ನಿಮ್ಮವರ ಪ್ರೀತಿಯಿಂದ ನೀವು ಮನಸೋಲುವಿರಿ. ನೀವು ಎಲ್ಲರ‌ ನಡುವೆ ಅಂತರವನ್ನು ಕಾಯ್ದುಕೊಂಡು ವ್ಯವಹಾರ ಮಾಡುವಿರಿ. ಆಹಾರ ಉದ್ಯಮದಲ್ಲಿರುವವರು ಅಧಿಕ ಆದಾಯವನ್ನು ಕಾಣಬಹುದು.

ಕಟಕ ರಾಶಿ :ಇಂದು ನೀವು ಇತರರ ಭಾವನೆಗೆ ಸ್ಪಂದಿಸುವಿರಿ. ಹಸ್ತಕ್ಷೇಪವನ್ನು ಮಾಡಲು ಹಿಂದೇಟು ಹಾಕುವುದು ಉತ್ತಮ. ಸಂಬಂಧಿಕರು ನಿಮ್ಮನ್ನು ಕ್ಷುಲ್ಲಕ ವಿಚಾರಕ್ಕೆ ಟೀಕಿಸಬಹುದು. ಇಂದು ನಿಮ್ಮ ಸಂಗಾತಿಗೆ ಅಪರೂಪದ ಉಡುಗೊರೆಯನ್ನು ಕೊಡಿಸುವಿರಿ. ಇಂದು ನಿಮ್ಮ ಮನೆಗೆ ಅತಿಥಿ ಆಗಮಿಸುವ ಸಾಧ್ಯತೆ ಇದೆ. ನೀವು ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ಕೆಲವು ಮಾಹಿತಿಯನ್ನು ಪಡೆದುಕೊಳ್ಳುವಿರಿ.‌ ಏನನ್ನಾದರೂ ಸಾಧಿಸಬೇಕು ಎಂಬ ಹಂಬಲವು ಹುಟ್ಟಿಕೊಂಡೀತು. ಕೋಪಕ್ಕೆ ಮಿತಿ‌ ಇರಲಿ. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ. ಜಾಡ್ಯವನ್ನು ಬಿಡಬೇಕಾದೀತು. ನಿಮ್ಮ ವೃತ್ತಿಯು ನಿಮಗೆ ಸಂತೋಷವನ್ನು ಕೊಡದೇ ಇರುವುದು. ಕೆಲಸವನ್ನು ನೀವು ಸರಳವಾಗಿ ಮಾಡಿಕೊಳ್ಳುವುದು ಉತ್ತಮ.

ಸಿಂಹ ರಾಶಿ :ಪ್ರಭಾವೀ ವ್ಯಕ್ತಿಗಳ ಸಂಪರ್ಕದಿಂದ ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳುವಿರಿ. ಆರ್ಥಿಕ ಪ್ರಗತಿಯು ಮಧ್ಯಮವಾಗಲಿದೆ.‌ ನ್ಯಾಯಾಲಯದಲ್ಲಿ ನಿರೀಕ್ಷಿತ ಗೆಲವು ಕಷ್ಟವಾದೀತು. ಇಂದು ನೀವು ಕೆಲಸವನ್ನು ಹೆಚ್ಚು ಪ್ರಯತ್ನದಿಂದ ಪೂರ್ಣ ಮಾಡುವಿರಿ. ಇಂದು ನಿಮಗೆ ಅತ್ಯಂತ ಪ್ರಿಯವಾದ ಕೆಲಸವನ್ನು ಮಾಡುವುದು ಬೇಡ. ನೀವು ಇತರರಿಂದ ಗೌರವಕ್ಕೆ ಪಾತ್ರರಾಗುವಿರಿ. ಮನಸ್ಸಿನ ಚಾಂಚಲ್ಯವನ್ನು ನಿಯಂತ್ರಣ ಮಾಡಲು ವಿಧಾನಗಳನ್ನು ಬಳಸುವಿರಿ‌. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು. ನಿಮ್ಮ ಗೌಪ್ಯತೆಯನ್ನು ಯಾರ ಜೊತೆಯೂ ಹೇಳಿಕೊಳ್ಳುವುದು ಬೇಡ. ನಿಯಮ ಪಾಲನೆಯಲ್ಲಿ ತಪ್ಪಬಹುದು. ನಿಮ್ಮ ಆಕ್ಷೇಪಗಳು ಹಲವು ಸುಳ್ಳಿನಿಂದ ಇರಲಿದೆ.

ಕನ್ಯಾ ರಾಶಿ :ಇಂದಿನ ಶುಭವಾರ್ತೆಯು ನಿಮ್ಮ ಹಲವು ದಿನದ ಮನಸ್ಸಿನ ದುಗುಡಕ್ಕೆ ಶಾಂತಿಯನ್ನು ಕೊಡಬಹುದು. ವೃತ್ತಿಯ ಸ್ಥಳದಲ್ಲಿ ಕಲಹವಾಗಬಹುದು. ಅವಶ್ಯಕ ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಿ. ಆರ್ಥಿಕತೆಯಲ್ಲಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿ ಮಾಡೀತು. ಇಂದು ನೀವು ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಿಟ್ಟನ್ನು ಕಡಿಮೆ‌ ಮಾಡಿಸುವಿರಿ. ರಕ್ಷಣೆಯ ವಿಚಾರದಲ್ಲಿ ನೀವು ಸೋಲಬಹುದು. ಶತ್ರುಗಳು ನಿಮ್ಮ ಮಿತ್ರರಾಗಲು ಬಯಸಿ ಸಂಧಾನಕ್ಕೆ ಬರಬಹುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಇಷ್ಟಪಡಲಾರಿರಿ. ರಕ್ಷಣೆಯ ಜವಾಬ್ದಾರಿಯವರಿಗೆ ಆರೋಗ್ಯದ ಕೆಡಬಹುದು. ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಆಸಕ್ತಿಯು ಹೆಚ್ಚಾಗಿ ಅಭ್ಯಾಸವು ನಿಲ್ಲುವುದು.

ತುಲಾ ರಾಶಿ :ಇಂದು ನೀವು ಮಾಡಿದ ಉದ್ಯಮದ ತಂತ್ರಗಳು ಫಲಿಸಬಹುದು. ವಿದ್ಯಾರ್ಥಿಗಳು ಪ್ರಗತಿಯಿಂದ‌ ಖುಷಿಪಡುವರು. ಪ್ರೀತಿಯನ್ನು ಅವಶ್ಯಕತೆಯ ಪೂರೈಕೆಗಷ್ಟೇ ಬಳಸಿಕೊಳ್ಳುವಿರಿ. ಹಣದ ವ್ಯವಹಾರದಲ್ಲಿ ಮುಜುಗರ ಬೇಡ. ಅನ್ಯರ ಕಾರಣದಿಂದ ವಿದೇಶದ ವ್ಯಾಮೋಹವು ಹೆಚ್ಚಾದೀತು. ಇಂದು ಕೌಶಲ್ಯದ ಕಾರ್ಯಕ್ಕೆ ಹೆಚ್ಚು ಆಸಕ್ತಿಯನ್ನು ತೋರಿಸುವಿರಿ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಸ್ವಪ್ನದ ಚಿಂತೆಯಲ್ಲಿಯೇ ಇರಬಹುದು. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ. ದಾಂಪತ್ಯದ ಗುಟ್ಟನ್ನು ಹೊರಗೆ ಹಾಕುವುದು ಬೇಡ. ಇಂದು ನೀವು ನಿಮ್ಮ ಸುತ್ತಲಿನ ವಾತಾವರಣವನ್ನು ಆಹ್ಲಾದವೆನಿಸುವುದು.

ವೃಶ್ಚಿಕ ರಾಶಿ :ಇಂದು ನಿಮ್ಮ ಮುಂದಾಳುತ್ವದಲ್ಲಿ ಹೊಸ ಕೆಲಸಗಳು ನಡೆಯಬಹುದು. ಪೂರ್ಣ ಅದೃಷ್ಟವನ್ನೇ ನಂಬಿ ಕಾರ್ಯದಲ್ಲಿ ತೊಡಗುವುದು ಬೇಡ. ಪೂರ್ಣ‌ ಮನಸ್ಸಿನಿಂದ ನಿಮ್ಮ‌ ಎಲ್ಲ ಶಕ್ತಿಯನ್ನು ಹಾಕಿ ಕೆಲಸ ಮಾಡಿದರೂ ಅಂದುಕೊಂಡಷ್ಟು ಜಯವು ಸಿಗದು. ನಿಮಗೆ ಇಷ್ಟವಾದವರ ಬಗ್ಗೆ ನಿಮಗೆ ಅನುಕಂಪ ಬರಬಹುದು. ಒಡಹುಟ್ಟಿದವರ ಜೊತೆಗಿನ ನಿಮ್ಮ ವ್ಯವಹಾರಕ್ಕೆ ಮತ್ತೊಬ್ಬರು ಪ್ರವೇಶಿಸಬಹುದು. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು. ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸವನ್ನು ಮಾಡುವಿರಿ. ಆಸ್ತಿಗೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಿಂದ ಒಪ್ಪಿಗೆಯನ್ನು ಪಡೆಯುವಿರಿ. ಸಹೋದರಿಯರ ಜೊತೆ ವಾಗ್ವಾದವನ್ನು ಮಾಡುವಿರಿ. ದೃಷ್ಟಿಯನ್ನು ಸಂಕುಚಿತ ಮಾಡುವುದು ಬೇಡ.

ಧನು ರಾಶಿ :ಇಂದು ಉದ್ಯೋಗದಲ್ಲಿ ಹೊಸ ಅವಕಾಶಗಳ ಕಡೆ ಗಮನ ಹರಿಸುವಿರಿ. ಆರ್ಥಿಕತೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಪ್ರಗತಿ ಇರುವುದು. ಇಷ್ಟದವರು ನಿಮ್ಮನ್ನು ಶುಭಕಾರ್ಯಗಳಿಗೆ ಆಹ್ವಾನಿಸಬಹುದು. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಯಾರ ಜೊತೆಯಾದರೂ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ನಿಮ್ಮ ಮಾತನ್ನು ಬೇರೆ ರೀತಿಯಲ್ಲಿ ಅರ್ಥಮಾಡಿಕೊಳ್ಳಬಹುದು. ಆಭರಣ ಮುಂತಾದ ಬಹು ಮೌಲ್ಯದ ವಸ್ತುವನ್ನು ಖರೀದಿಸುವಿರಿ. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು. ಹಲವಾರು ಗೊಂದಲಗಳು ನಿಮ್ಮ ಮನಸ್ಸಿನಲ್ಲಿ ಓಡಾಡಬಹುದು. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ಕಳೆದ ಮೇಲೆ ತಂದೆಯ ಜೊತೆ ಮಾತನಾಡಿ ನೆಮ್ಮದಿಯು ಪಡೆಯುವಿರಿ.

ಮಕರ ರಾಶಿ :ನಿಮ್ಮ ಸಂಬಂಧದಲ್ಲಿಯೇ ವಿವಾಹ ನಿಶ್ಚಯವಾಗಬಹುದು. ಇಂದಿನ ವ್ಯವಹಾರದಲ್ಲಿ ಊಹೆಯು ಸತ್ಯವಾದೀತು. ವಿದ್ಯಾರ್ಥಿಗಳು ಪರಿಶ್ರಮದಿಂದ ಪಡೆಯಬೇಕಾದುದನ್ನು ಪಡೆಯುವರು. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಅನವಶ್ಯಕ ಸಂಪರ್ಕವನ್ನು ಕಡಿದುಕೊಳ್ಳಲು ಇಚ್ಛಿಸುವಿರಿ. ಕಾನೂನಿನ ಪಾಠವನ್ನು ಹಿರಿಯರು ಮಾಡುವರು. ಉದ್ಯೋಗಕ್ಕಾಗಿ ಬಂದ ಬಂಧುವಿಗೆ ಮಾರ್ಗದರ್ಶನ ಮಾಡುವಿರಿ. ಸಹೋದರನ ಸಹಕಾರವು ಅನುಕೂಲವೇ ಆಗುವುದು. ನೂತನ ವಾಹನದ‌ ಖರೀದಿಯನ್ನು ಮಾಡುವ ಇಚ್ಛೆಯು ಇಂದು ಪೂರ್ಣವಾಗುವುದು. ನಿಮ್ಮ ಬಗ್ಗೆ ದೂರಗಳು ಕೇಳಿ ಬರಬಹುದು.

ಕುಂಭ ರಾಶಿ :ಸಾಮಾಜಿಕ ಕಾರ್ಯದಿಂದ ಖ್ಯಾತಿಯು ಹೆಚ್ಚಾಗಬಹುದು. ವ್ಯಾಪಾರದಲ್ಲಿ ಬಿಡುವಿಲ್ಲ ಒತ್ತಡವು ಇರುವುದು. ನಿರುದ್ಯೋಗಿಗಳಿಗೆ ಕೆಲಸವು ಸಿಗಬಹುದು. ಇಂದು ನಿಮ್ಮ ದೇಹವು ಆಯಾಸದಿಂದ ದುರ್ಬಲವಾಗಬಹುದು. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇರುವುದು. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ದೇಹವನ್ನು ದಂಡಿಸಲು ನಿಮಗೆ ಆಗದು. ಕಾರ್ಯದ ನಿಮಿತ್ತ ನಿಮ್ಮ ಓಡಾಟವು ವ್ಯರ್ಥವಾಗಬಹುದು. ದುಷ್ಕೃತ್ಯಕ್ಕೆ ಪ್ರೇರಣೆ ಸಿಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ. ಸಮಯೋಚಿತ ಕಾರ್ಯದಿಂದ‌ ಪ್ರಶಂಸೆಯು ಇರಲಿದೆ. ಎಲ್ಲರೆದುರು ಮುಖಭಂಗವನ್ನು ಎದುರಿಸಿಬೇಕಾದೀತು. ವೈವಾಹಿಕ ಜೀವನದ ಕನಸು ಕಾಣುವಿರಿ.

ಮೀನ ರಾಶಿ :ಇಂದು ನಿಮ್ಮ ಉದ್ಯೋಗವು ಸಾಮರಸ್ಯದಿಂದ ಸಾಗುವುದು. ಯಾವುದಾದರೂ ಶುಭದ ನಿರೀಕ್ಷೆಯಲ್ಲಿ ಇರಬಹುದು. ಹಣಕಾಸಿನ ಪ್ರಯತ್ನಗಳು ಸಫಲವಾಗಬಹುದು. ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ.‌ ಜವಾಬ್ದಾರಿಯು ಬಂದು ಹೊರೆಯು ಹೆಚ್ಚಾಗುವುದು. ಬಹಳ ಹುಡುಕಾಟದ ಅನಂತರದ ಉತ್ತಮ‌ ವಿವಾಹ ಸಂಬಂಧವು ಬರುವುದು. ಪಾಲುದಾರಿಕೆಯಲ್ಲಿ ಅಧಿಕಾರದ ಬಗ್ಗೆ ಅಸಮಾಧಾನ ಹೆಚ್ಚಾಗುವುದು. ಅನಗತ್ಯ ಖರ್ಚಿಗೆ ಬೇಸರಿಸುವಿರಿ. ಬಂಧುಗಳಿಂದ ಬೇಗ ಹಣವನ್ನು ಕೊಡುವುದಾಗಿ ಪಡೆಯುವಿರಿ. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ. ನಿಮಗೆ ಸಾಕಷ್ಟು ಸಮಯವು ಇಂದು ಇರಲಿದ್ದು ಏನು ಮಾಡಬೇಕೆಂದು ತಿಳಿಯದೇ ಕಾಲವನ್ನು ಕಳೆಯುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)