AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಉದ್ಯೋಗದಲ್ಲಿ ಬಡ್ತಿ, ಅಪರಿಚತ ವ್ಯಕ್ತಿಗಳಿಂದ ವಂಚನೆ ಸಾಧ್ಯತೆ ಎಚ್ಚರ!

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 25 ಮೇ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ದಿನಭವಿಷ್ಯ: ಉದ್ಯೋಗದಲ್ಲಿ ಬಡ್ತಿ, ಅಪರಿಚತ ವ್ಯಕ್ತಿಗಳಿಂದ ವಂಚನೆ ಸಾಧ್ಯತೆ ಎಚ್ಚರ!
ದಿನಭವಿಷ್ಯ: ಉದ್ಯೋಗದಲ್ಲಿ ಬಡ್ತಿ, ಅಪರಿಚತ ವ್ಯಕ್ತಿಗಳಿಂದ ವಂಚನೆ ಸಾಧ್ಯತೆ ಎಚ್ಚರ!
ಗಂಗಾಧರ​ ಬ. ಸಾಬೋಜಿ
|

Updated on: May 25, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ​​​​​ 25ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸಿದ್ಧಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ ಮಧ್ಯಾಹ್ನ 10:53ರ ವರೆಗೆ, ಯಮಘಂಡ ಕಾಲ 02:06ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ.

ಮೇಷ ರಾಶಿ: ಹಲವು ದಿನಗಳ ಮನಸ್ಸಿನ ಗೊಂದಲಹಳಿಗೆ ಪರಿಹಾರ ಇರುವುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ದುಡುಕಿನ ನಿರ್ಧಾರಗಳನ್ನು ತಗೆದುಕೊಂಡು ಸಂಕಟಪಡಬೇಕಾದೀತು. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸಂಗಾತಿಯ ವಿರುದ್ಧವಾದ ಕೆಲಸವನ್ನು ಮಾಡಿ ಮಾತಿಗೆ ಗುರಿಯಾಗುವಿರಿ. ನಿಮ್ಮನ್ನು ನಿಂದಿಸಲು ಕೆಲವು ಹೊಂಚು ಹಾಕಿದ್ದು ತಿಳಿದು ಅದನ್ನು ಸರಿ ಮಾಡಿಕೊಳ್ಳುವಿರಿ. ಬಂಧುಗಳು ನಿಮ್ಮ ಸಂಕಟಕ್ಕೆ ಜೊತೆಯಾಗುವರು. ರಾಜಕೀಯಕ್ಷೇತ್ರವು ನಿಮಗೆ ಕೈಹಿಡಿಯಬಹುದು. ಆದಷ್ಟು ಆಲೋಚಿಸಿ ಮುಂದಡಿಯಿಡಿ. ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿವೆ. ನಿಮ್ಮ ಆಸಕ್ತಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳಿರಬಹುದು. ನಿಮ್ಮ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಸೂಯೆ ಪಡಬಹುದು. ಅಪರಿಚಿತರ ವ್ಯಕ್ತಿಗಳಿಂದ ನಿಮಗೆ ಸಂತೋಷವು ಸಿಗಲಿದೆ.

ವೃಷಭ ರಾಶಿ: ಇಂದು ಸ್ತ್ರೀಯರು ವ್ಯವಹಾರದಲ್ಲಿ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ದೈವವು ಅನುಕೂಲವನ್ನು ಮಾಡಲಿದೆ‌. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಧನಾಗಮನವನ್ನು ನೀವು ನಿರೀಕ್ಷಿಸಬಹುದು. ಸಣ್ಣ ಉಧಯಮವನ್ನು ಮಾಡುವವರಗೆ ಸ್ವಲ್ಪ ಹೆಚ್ಚು ಆದಾಯವು ದೊರೆಯಲಿದೆ. ಸುಳ್ಳಾಡಿ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅನಾರೋಗ್ಯದಿಂದ ಕಿರಿಕಿರಿ ಅನುಭವಿಸಿದರೆ ಇಂದು ಸ್ವಲ್ಪ ಕಿಡಮೆ ಆಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಲ್ಲಿ ಬಲವಾದ ಹಿಡಿತವಿರಲಿದೆ. ಒಂದೇ ವಿಚಾರವನ್ನು ಮತ್ತೆ ಮತ್ತೆ ಕೇಳಿ ಕಿರಿ ಕಿರಿ ಎನಿಸಬಹುದು.‌ ವಿದ್ಯಾರ್ಥಿಗಳಿಗೆ ಕರ್ತವ್ಯವನ್ನು ನೆನಪಿಸುವಂತಾಗುತ್ತದೆ. ನಿಮ್ಮ ಸ್ಥಗಿತಗೊಂಡ ಕಾರ್ಯಗಳನ್ನು ಪೂರ್ಣಗೊಳ್ಳಬಹುದು. ಇಂದು ನೀವು ಸಂತೋಷವಾಗಿರುವುದರಿಂದ ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತೀರಿ.

ಮಿಥುನ ರಾಶಿ: ಇಂದು ಅನಗತ್ಯವಾಗಿ ಸುತ್ತಾಟವಾಗುವುದೇ ವಿನಃ ಪ್ರಯೋಜನವಾಗದು. ಇದರಿಂದ ಸಿಟ್ಟೂ ಹತಾಶೆಯೂ ಇರಲಿದೆ. ನಿಧಾನವಾಗಿ ಸಾಗುವ ಸಾಗುತ್ತಿರುವ ಕೆಲಸದಿಂದ ಬೇಸರವಾಗಲಿದೆ. ತಂದೆಯೊಂದಿಗೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ದೈವದ ಸಹಾಯವನ್ನು ನೀವು ಪಡೆಯಬೇಕಾಗಿರುವುದು ಅನಿವಾರ್ಯ. ನಿಮ್ಮ ಸಕಾರಾತ್ಮಕ ಆಲೋಚನೆಗಳೇ ನಿಮ್ಮನ್ನು ಒಂದು ಒಳ್ಳೆಯ ಮಾರ್ಗಕ್ಕೆ ಒಯ್ಯುವುದು. ಶಿಕ್ಷಕವೃತ್ತಿಯವರಿಗೆ ಮಕ್ಕಳಿಂದ ಗೌರವವು ಸಿಗಲಿವೆ. ನಿಮ್ಮನ್ನು ಪ್ರೀತಿಮಾಡಿಕೊಳ್ಳಲಿದ್ದಾರೆ. ನಿಮ್ಮವರಿಂದಲೇ ವಂಚಿತರಾಗುವಿರಿ. ವಿಶ್ವಾಸವು ಇಲ್ಲದೇ ಹೋಗಿ ಸಂಬಂಧವೂ ಒಡೆದುಹೋಗಲಿದೆ. ಉದ್ಯೋಗಿಗಳಿಗೆ ಉದ್ಯಮದಲ್ಲಿಉತ್ತಮ ಅವಕಾಶಗಳು ಬರಲಿವೆ. ಮೌಲ್ಯಯುತವಾದ ಏನನ್ನಾದರೂ ಪಡೆಯುವ ಬಯಕೆಯನ್ನು ಇಂದು ಪೂರೈಸಬಹುದು. ನಿಮ್ಮ ವಸ್ತುವು ಕಳೆದುಹೋಗಬಹುದು. ಯಾವುದೇ ಉದ್ವೇಗಕ್ಕೆ ಒಳಗಾಗುವುದು ಬೇಡ.

ಕಟಕ ರಾಶಿ: ಇಂದು ದುಶ್ಚಟವನ್ನು ಸ್ನೇಹಿತರ ಮೂಲಕ ಕಲಿಯುವ ಸಂಭವವಿದೆ. ಉದ್ಯೋಗದಲ್ಲಿ ಬಡ್ತಿಯು ಸಿಗಲಿದೆ. ಮಕ್ಕಳಿಂದ ಸಂತೋಷವಾರ್ತೆಯು ಇರುತ್ತದೆ. ಅಪರಿಚಿತ ವ್ಯಕ್ತಿಗಳ ಸಹವಾಸದಿಂದ ನಿಮಗೆ ವಂಚನೆಯಾಗಬಹುದು. ಕೃಷಿಯಲ್ಲಿ ನೀವು ಮಾಡಿದ ಕೆಲಸವು ಪ್ರಶಂಸೆಗೆ ಒಳಗಾಗುವುದು. ಉತ್ತಮ ಇಳುವರಿಯನ್ನು ಪಡೆಯುವಿರಿ. ವಾಹನದಲ್ಲಿ ಸಂಚಾರ ಮಾಡಿ ಖುಷಿ ಪಡುವಿರಿ. ಎಲ್ಲವನ್ನೂ ನಿಮ್ಮ ಮಾತಿನಂತೆ ನಡಸಲಾಗದು. ಬಂಧುಗಳ ಮನೆಯಲ್ಲಿ ಇಂದು ನಿಮ್ಮ ವಾಸವಿರಲಿದೆ. ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ತೋರಿಸದೇ ಇರುವುದರಿಂದ ಬೈಯ್ಯುವಿರಿ. ಆಲಸ್ಯದಿಂದ ಹೊರಬರಬೇಕಾದ ಸ್ಥಿತಿಯು ಇದೆ. ಹೊಸ ಆಲೋಚನೆಗೆ ನೀವು ತೆರೆದುಕೊಳ್ಳುವಿರಿ. ರಾಜಕೀಯವಾಗಿ ಕೆಲವು ಬದಲಾವಣೆಗಳು ಆಗುವುದು. ದೈವಭಕ್ತಿಯನ್ನು ಬೆಳೆಸಿಕೊಂಡು ಸಾಗಬೇಕಾಗುವುದು. ನೀವು ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಸ್ಥಾನವನ್ನು ದುರ್ಬಲಗೊಳಿಸಬಹುದು. ನಿಮ್ಮದಾದ ವಸ್ತುವನ್ನು ಇತರರಿಗೆ ಕೊಡಬೇಕಾಗುವುದು.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!