AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು ಎಚ್ಚರ!

ಸೆಪ್ಟೆಂಬರ್​ 27,​ 2024ರ​​ ನಿಮ್ಮ ರಾಶಿಭವಿಷ್ಯ: ಕಡಿಮೆ ಖರ್ಚಿನಲ್ಲಿ ನಿಮ್ಮ ಕೆಲಸವು ಮುಗಿಯುವಂತೆ ನೋಡಿಕೊಳ್ಳುವಿರಿ. ಏನಾದರೂ ಹೊಸತನ್ನು ಮಾಡುವ ಹಂಬಲವಿರುವುದು. ಉತ್ಸಾಹ ಹಾಗೂ ಸಿದ್ಧತೆಯಲ್ಲಿರುವ ನಿಮಗೆ ಮನೆಯವರ ಮಾತು ಉತ್ಸಾಹಕ್ಕೆ ಭಂಗವನ್ನು ಮಾಡಿಸಬಹುದು. ಹಾಗಾದರೆ ಸೆಪ್ಟೆಂಬರ್​ 27ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು ಎಚ್ಚರ!
ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು ಎಚ್ಚರ!
TV9 Web
| Edited By: |

Updated on: Sep 27, 2024 | 12:05 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಶಿವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:53 ರಿಂದ ಮಧ್ಯಾಹ್ನ 12:23, ಯಮಘಂಡ ಕಾಲ ಮಧ್ಯಾಹ್ನ 03:24ರಿಂದ ಸಂಜೆ 04:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ 09:23 ರ ವರೆಗೆ.

ಮೇಷ ರಾಶಿ: ಇಂದು ನಿಮಗೆ ಶುಭಾಶುಭ ಸೂಚನೆಯು ಸಿಗಲಿದ್ದು ಅದೇ ಪ್ರಕಾರವಾಗಿ ನೀವು ಮುನ್ನಡೆಯುವಿರಿ. ನಿಮಗೆ ಸಾಧ್ಯವಿರುವ ಕಾರ್ಯಗಳನ್ನು ಮಾತ್ರ ಮಾಡಿ. ಪಾಲುದಾರಿಕೆಯಲ್ಲಿ ಉಂಟಾದ ಗೊದಲ್ಲವನ್ನು ಬಗೆಹರಿಸಿಕೊಂಡು ಮೈತ್ರಿ ಮಾಡಿಕೊಂಡರೆ ಇಬ್ಬರಿಗೂ ಅನುಕೂಲವಾಗುವುದು. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ರಕ್ತಸಂಬಂಧಗಳು ನಿಮ್ಮ‌ಮನಸ್ಸನ್ನು ಕಡಿಸುವುವು. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ಮಾಡುವಿರಿ. ನಿಮ್ಮ ಯಶಸ್ಸು ನಿಮಗೆ ಮುಳುವಾಗಬಹುದು. ಹಿರಿಯರ ಮಾರ್ಗದರ್ಶನವನ್ನು ಪಡೆಯುವ ಅವಶ್ಯಕತೆ ಇರಲಿದೆ. ಸೌಲಭ್ಯಗಳ ದುರ್ಬಳಕೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ನಿಮ್ಮ ಮಾತೇ ನಿಮಗೆ ಹಿಂದಿರುಗಿ ಬರಬಹುದು.

ವೃಷಭ ರಾಶಿ: ನ್ಯಾಯಸಮ್ಮತವಾದ ದಾರಿಯಲ್ಲಿ ಇದ್ದರೂ ನಿಮಗೆ ನೋವು ತಪ್ಪದು. ಇಂದು ನಿಮ್ಮ ಬಗ್ಗೆ ತಿಳಿಯದೇ ಸುಮ್ಮನೇ ಕುಖ್ಯಾತಿ ಬರುವುದು. ಆಸ್ತಿಯ ವಿಚಾರಕ್ಕೆ ಕುಟುಂಬದಲ್ಲಿ ಪರಸ್ಪರ ಜಗಳವಾಗುವ ಸಾಧ್ಯತೆ ಇದೆ. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಮಾಡುವುದು ಉತ್ತಮ. ಕಡಿಮೆ ಖರ್ಚಿನಲ್ಲಿ ನಿಮ್ಮ ಕೆಲಸವು ಮುಗಿಯುವಂತೆ ನೋಡಿಕೊಳ್ಳುವಿರಿ. ಏನಾದರೂ ಹೊಸತನ್ನು ಮಾಡುವ ಹಂಬಲವಿರುವುದು. ಉತ್ಸಾಹ ಹಾಗೂ ಸಿದ್ಧತೆಯಲ್ಲಿರುವ ನಿಮಗೆ ಮನೆಯವರ ಮಾತು ಉತ್ಸಾಹಕ್ಕೆ ಭಂಗವನ್ನು ಮಾಡಿಸಬಹುದು. ಮಾತನಾಡಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಪ್ರಶಂಸೆಯಿಂದ ನೀವು ದೂರವಿರುವಿರಿ. ಅಪರಿಚಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ಪಡೆದು ಮುನ್ನಡೆಯುವುದು ಶ್ರೇಯಸ್ಕರ. ಹಣವಿದ್ದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗದು ಎಂಬ ಸತ್ಯವು ಗೊತ್ತಾಗುವುದು. ಯಾರ ಮಾತನ್ನೂ ನಿರ್ಲಕ್ಷ್ಯ ಮಾಡಬೇಡಿ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಂಡು ವ್ಯವಹರಿಸಿ.

ಮಿಥುನ ರಾಶಿ: ಯಾರನ್ನಾದರೂ ಹಿಡಿದುಕೊಂಡು ನಿಮಗೆ ಆಗಬೇಕಾದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ನಿಮಗೆ ನಿಮ್ಮವರ ಮಾತಿನಿಂದ ಇರುಸು ಮುರುಸಾದೀತು. ರಾಜಕೀಯ ವ್ಯಕ್ತಿಗಳಿಂದ ಕೆಲಸವಾಗಲು ಅವರಿಗೆ ಹಣವನ್ನು ಕೊಡುವಿರಿ. ಸ್ನೇಹಿತ ಸಹವಾಸದಿಂದ ದುರಭ್ಯಾಸವನ್ನು ಕಲಿಯುವ ಸಾಧ್ಯತೆ ಇದೆ. ಎಲ್ಲರ ಎದುರೂ ನಿಮ್ಮ ಆತುರವನ್ನು ತೋರಿಸುವುದು ಬೇಡ. ನಿಮ್ಮ ಯೋಜನೆಗಳು ಹೆಚ್ಚು ಇಷ್ಟವಾಗಲಿದೆ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ನೀವು ಅಲ್ಲಗಳೆಯುವಿರಿ. ನಿಮ್ಮನ್ನು ಅಳೆಯಬಹುದು. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ಆಪ್ತರ ಅಗಲಿಕೆಯಿಂದ ನೋವಾಗುವುದು. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಏಕಾಂತದಲ್ಲಿ ನಿಮಗೆ ಹಿತವೆನಿಸುವುದು.

ಕರ್ಕಾಟಕ ರಾಶಿ; ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು. ಇಂದು ಸಾಲಬಾಧೆಯು ನಿಮಗೆ ಅತಿಯಾದಂತೆ ಭಾಸವಾಗುವುದು. ದೂರದ ಬಂಧುಗಳ ಭೇಟಿಯಾಗಲಿದೆ. ಅವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ನಡವಳಿಕೆಯು ಅಹಂಕಾರದಂತೆ ತೋರೀತು. ವರ್ತನೆಯನ್ನು ಆದಷ್ಟು ಸಂದರ್ಭಕ್ಕೆ ತಕ್ಕಂತೆ ಇಟ್ಟುಕೊಳ್ಳುವುದು ಉತ್ತಮ. ಉದ್ಯೋಗದಲ್ಲಿ ಭಡ್ತಿಯನ್ನು ಕೇಳುವಿರಿ. ಕೆಲವರ ಮಾತುಗಳು ನಿಮಗೆ ನೋವನ್ನು ತಂದೀತು. ಹೇಳಿಕೊಳ್ಳದೇ ಒಳಗೇ ಇಟ್ಟುಕೊಳ್ಳುವಿರಿ. ಉದ್ಯೋಗದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿಯವರಿಗೆ ಕಷ್ಟವು ಬರುವುದು. ಹಣಕಾಸಿನ‌ ವಿಚಾರದಲ್ಲಿ ಜಾಗರೂಕತೆ ಮುಖ್ಯವಾದೀತು. ಮಾಡುತ್ತಿರುವ ಉದ್ಯೋಗವು ನಿಮಗೆ ಸರಿಯೆನಿಸದು. ನಿಮ್ಮ‌ ಭವಿಷ್ಯದ ಕನಸನ್ನು ಮಿತ್ರರ ಜೊತೆ ಹಂಚಿಕೊಳ್ಳುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು