Horoscope: ಅಗತ್ಯವಿದ್ದಾಗ ಮಾತ್ರ ಮಾತನಾಡುವುದರಿಂದ ನಿಮ್ಮ ಮಾತಿಗೊಂದು ತೂಕ ಬರುವುದು
ಸೆಪ್ಟೆಂಬರ್ 29, 2024ರ ನಿಮ್ಮ ರಾಶಿಭವಿಷ್ಯ: ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ಇಂದು ನಿಮಗೆ ಒಳ್ಳೆಯ ಲಾಭದ ನಿರೀಕ್ಷೆಯನ್ನು ಮಾಡಬಹುದು. ಸಾರ್ವಜನಿಕ ವಲಯದಲ್ಲಿ ನೀವು ಗುರುತಿಸಿಕೊಳ್ಳಲು ಬಯಸುವಿರಿ. ರಪ್ತು ವ್ಯವಹಾರವನ್ನು ಇಂದು ಸುಗಮವಾಗಿ ನಡೆಸುವಿರಿ. ಹಾಗಾದರೆ ಸೆಪ್ಟೆಂಬರ್ 29ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮಘಾ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:52 ರಿಂದ 06:22, ಯಮಘಂಡ ಕಾಲ ಮಧ್ಯಾಹ್ನ 12:23ರಿಂದ 01:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:23 ರಿಂದ 04:52 ರ ವರೆಗೆ.
ಮೇಷ ರಾಶಿ: ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ಇಂದು ನಿಮಗೆ ಒಳ್ಳೆಯ ಲಾಭದ ನಿರೀಕ್ಷೆಯನ್ನು ಮಾಡಬಹುದು. ಸಾರ್ವಜನಿಕ ವಲಯದಲ್ಲಿ ನೀವು ಗುರುತಿಸಿಕೊಳ್ಳಲು ಬಯಸುವಿರಿ. ರಪ್ತು ವ್ಯವಹಾರವನ್ನು ಇಂದು ಸುಗಮವಾಗಿ ನಡೆಸುವಿರಿ. ಸ್ತ್ರೀಯ ಕಾರಣದಿಂದ ನಿಮಗೆ ಲಾಭಗಳು ಆಗಲಿದೆ. ವಾಹನ ಖರೀದಿಗೆ ಬೇಕಾದ ವ್ಯವಸ್ಥೆಯನ್ನು ಇಂದು ಮಾಡಿಕೊಳ್ಳಲಿದ್ದೀರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ತುಂಬಿರಲಿವೆ. ಬೇಕಾದಾಗ ಸಿಗದಿದ್ದುದು ಈಗ ಸಿಗಬಹುದು. ನಿಮ್ಮ ಮಗನ ಮೇಲೆ ಸಂಪತ್ತಿನ ವಿಚಾರವಾಗಿ ಅಪವಾದಗಳು ಕೇಳಿಬರಬಹುದು. ತುರ್ತು ಕಾರ್ಯಕ್ಕಾಗಿ ಮನೆಯಿಂದ ಹೊರಡುವಿರಿ. ಕುಟುಂಬದವರ ಸಹಾಯದಿಂದ ನೀವು ಆತ್ಮವಿಶ್ವಾಸವನ್ನು ಪಡೆಯುವಿರಿ. ಮಾತಿನಂತೆ ಕೃತಿಯೂ ಇರಬೇಕಾಗುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಹಿರಿಯರ ಪ್ರೀತಿಗೆ ಪಾತ್ರರಾಗುವಿರಿ. ನಿಮ್ಮ ಪ್ರಭಾವವನ್ನು ಯಾರಾದರೂ ಬಳಸಿಕೊಳ್ಳಬಹುದು.
ವೃಷಭ ರಾಶಿ: ನೀವು ಆರಿಸಿಕೊಂಡ ಮಾರ್ಗವು ಹಲವು ದಿನಗಳ ಅನಂತರ ಬೇಡವೆನಿಸಬಹುದು. ಇಂದು ನಿಮ್ಮ ಕೆಲಸದಲ್ಲಿ ಸಂತೋಷ ಕಾಣಬಹುದು. ನಿಮ್ಮ ವೈಯಕ್ತಿಕ ಜೀವನವನ್ನು ವೃತ್ತಿಜೀವನಕ್ಕೆ ಸಮನ್ವಯ ಸಾಧಿಸುವಿರಿ. ಆರ್ಥಿಕವಾಗಿ ಯಾವುದೇ ಪ್ರಮುಖ ಸಮಸ್ಯೆಗಳಿಲ್ಲ, ಆದರೆ ನಿರ್ಲಕ್ಷಿಸಬಹುದಾದ ವಿಷಯಗಳು ನಿಮ್ಮ ಮನಸ್ಸನ್ನು ತುಂಬಿಕೊಳ್ಳುತ್ತವೆ. ಶತ್ರುಗಳ ಬಾಧೆಯು ನಿಮಗೆ ಚಿಂತೆಯನ್ನು ಉಂಟುಮಾಡೀತು. ನಿಮ್ಮಷ್ಟಕ್ಕೆ ನೀವಿರಲು ಬಯಸುವಿರಿ. ಹಿಂದಿನಿಂದ ಮಾತನಾಡಿಕೊಳ್ಳುವರಿಗೆ ನೆಲೆಯನ್ನು ಕೊಡುವುದು ಬೇಡ. ಮಾತನಾಡಲು ನಿಮಗೆ ತೊಂದರೆಯಾದೀತು ಇಂದು ನಿಮಗಾದ ವಿಶ್ವಾಸದ್ರೋಹದಿಂದ ನೀವು ಸಿಟ್ಟಿಗೇಳುವಿರಿ. ನಿಮ್ಮದಲ್ಲದ ವಸ್ತುವನ್ನು ಪಡೆದುಕೊಳ್ಳಲು ಹಂಬಲಿಸುವಿರಿ. ಸಿಗದೇ ದುಃಖಿಸಬೇಕಾದೀತು. ಎಲ್ಲದಕ್ಕೂ ದೈವವನ್ನು ದೂರುತ್ತ ಆಲಸ್ಯದಿಂದ ಇರುವುದು ಬೇಡ. ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು. ಯಾವುದನ್ನೂ ಉಳಿಸಿಕೊಂಡು ಹೋಗುವುದನ್ನು ಕಲಿಯಬೇಕು.
ಮಿಥುನ ರಾಶಿ: ಕಾರ್ಯದ ಒತ್ತಡದಿಂದ ಆರೋಗ್ಯವು ಹದ ತಪ್ಪಬಹುದು. ಸರ್ಕಾರದ ಅಧಿಕಾರಿಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಭಾವನೆಗಳಿಂದ ಯಾರನ್ನೂ ಸುಲಭವಾಗಿ ಬಗ್ಗಿಸಲಾಗದು. ಹಣಕಾಸಿನ ವಿಚಾರದಲ್ಲಿ ನಿಮಗೆ ಸಂಕಷ್ಟವು ಬರಬಹುದು. ಹಣಕಾಸಿಗೆ ಸಂಬಂಧಿಸಿದಂತೆ ಕೆಲವರನ್ನು ದೂರಮಾಡಿಕೊಳ್ಳುವಿರಿ. ಯಾರದೋ ಒತ್ತಾಯಕ್ಕಾಗಿ ಪ್ರಯಾಣ ಮಾಡಬೇಕಾಗಬಹುದು. ಪತ್ನಿಯ ಕಡೆಯಿಂದ ನಿಮಗೆ ಕೆಲವು ಸಹಾಯವನ್ನು ನಿರೀಕ್ಷಿಸಬಹುದು. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ಲಭಿಸುವುದು. ಖಾಸಗಿಯ ಸಮಾರಂಭದಲ್ಲಿ ಭಾಗವಹಿಸುವಿರಿ. ವ್ಯಾವಹಾರಿಕವಾಗಿ ಮೋಸ ಹೋಗುವ ಸಾಧ್ಯತೆ ಇದೆ. ನಿಮಗೆ ಒತ್ತಡದ ಕೆಲಸವು ಬಂದು ಮನೆಯ ಕೆಲಸವು ಮರೆಯಾಗಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಬಾಯಿ ತಪ್ಪಿ ಕೆಟ್ಟದ್ದನ್ನು ಆಡುವಿರಿ.
ಕರ್ಕಾಟಕ ರಾಶಿ: ಇಂದು ನಿಮ್ಮ ಜಾಣತನವೇ ಮುಳುವಾಗಬಹುದು. ಸಂಕೀರ್ಣವಾದ ಜೀವನವನ್ನು ಆಶಾವಾದದಿಂದ ಸರಳವಾಗಬಹುದು. ಅಗತ್ಯವಿದ್ದಾಗ ಮಾತ್ರ ಮಾತನಾಡಿ, ಅನಗತ್ಯ ಒತ್ತಡದಿಂದ ಕುಗ್ಗಿ ಹೋಗುವಿರಿ. ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದ್ದು ಪಾಲುದಾರಿಕೆಯಲ್ಲಿ ಇನ್ನೊಬ್ಬರ ಜೊತೆ ಸೇರಿ ಮಾಡುವಿರಿ. ಕಛೇರಿಯಲ್ಲಿ ನಿಮ್ಮ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು ಮುಖ್ಯವಾಗಿರಲಿ. ನಿಮಗೆ ಬೇಡದ ವಸ್ತುಗಳನ್ನು ಯಾರಿಗಾದರೂ ಕೊಡುವ ಮನಸ್ಸಾಗುವುದು. ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಿಕೊಳ್ಳುವುದು ಉತ್ತಮ. ನೀವು ಶುಭವಾರ್ತೆಯ ನಿರೀಕ್ಷೆಯಲ್ಲಿ ಇರುವಿರಿ. ಮಕ್ಕಳ ಭವಿಷ್ಯವನ್ನು ನಿರೂಪಿಸಲು ನಿಮಗೆ ಒದ್ದಾಟವಾಗಬಹುದು. ನಿಮ್ಮ ಜೊತೆ ಉದ್ಯೋಗದ ವೃದ್ಧಿಗೆ ಸಂಬಂಧಿಸಿದ ಮಾತುಕತೆಗಳು ನಡೆಯುವುದು. ಕೆಲವನ್ನು ಬಿಟ್ಟುಕೊಡುವುದು ಅನಿವಾರ್ಯವಾಗಬಹುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು.