AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಆಪ್ತರ ಮಾತು ನಿಮ್ಮ ಮನಸ್ಸಿಗೆ ಬಾರವೆಸಬಹುದು, ಯಾರಿಗಾದರೂ ದಾನ ಮಾಡಿ

2023 ಡಿಸೆಂಬರ್​​​​ 05ರ ರಾಶಿ ಭವಿಷ್ಯ ಹೇಗಿದೆ? ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಆಪ್ತರ ಮಾತು ನಿಮ್ಮ ಮನಸ್ಸಿಗೆ ಬಾರವೆಸಬಹುದು, ಯಾರಿಗಾದರೂ ದಾನ ಮಾಡಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 05, 2023 | 12:10 AM

Share

ಇಂದಿನ (2023 ಡಿಸೆಂಬರ್​​ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ ಎಂಬ ಮಾಹಿತಿ ಇಲ್ಲಿದೆ. ಅದೇ ರೀತಿಯಾಗಿ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ ಎಂದು ತಿಳಿಯಲು ಮುಂದೆ ಓದಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ವಿಷ್ಕಂಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 44 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:37 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:34 ರಿಂದ 10:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:23 ರಿಂದ 01:48ರ ವರೆಗೆ.

ಮೇಷ ರಾಶಿ: ಯಾರನ್ನೋ ಮೆಚ್ಚಿಸಲು ಯಾರನ್ನೋ ಅವಮಾನಿಸುವಿರಿ. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರುವಿರಿ. ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಆಪ್ತರ ಮಾತು ನಿಮ್ಮ ಮನಸ್ಸಿಗೆ ಬಾರದು. ಕೆಲವನ್ನು ನೀವು ಜಾಡ್ಯದಿಂದಲೇ ಕಳೆದುಕೊಳ್ಳುವಿರಿ. ಸರ್ಕಾರದ ಉದ್ಯೋಗದಲ್ಲಿ ನಿಮಗೆ ಅಸಮಾಧಾನ ಉಂಟಾಗಬಹುದು. ಸಂಗಾತಿಯ ಮಾತಿಗೆ ಎದುರು ಮಾತನಾಡಬೇಡಿ. ಹತ್ತಿರದವರ ಬಗ್ಗೆ ನಿಮಗೆ ಸಭ್ಯಭಾವವು ಇರದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ.

ವೃಷಭ ರಾಶಿ: ಹೂಡಿಕೆಗೆ ನಿಮ್ಮ ಹಣವನ್ನು ಹಾಕುವುದು ತಪ್ಪಾಗುವುದು. ತಾರತಮ್ಯ ಭಾವವು ನಿಮ್ಮ‌ ಮನಸ್ಸಿನ‌ ನೆಮ್ಮದಿಯನ್ನು ಹಾಳುಮಾಡುವುದು.‌ ಯಾರಿಗಾದರೂ ದಾನವನ್ನು ಮಾಡುವಿರಿ. ವಾಹನ ಚಾಲನೆಯಲ್ಲಿ ಹಿಂಜರಿಯುವಿರಿ. ಮನಶ್ಚಾಂಚಲ್ಯದಿಂದ ಕೆಲಸದಲ್ಲಿ ತೊಂದರೆ ಆಗುವುದು. ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಆರ್ಥಿಕ ಬೆಳವಣಿಗೆಗೆ ಹೆಚ್ಚು ಸಮಯವನ್ನು ಕೊಡುವಿರಿ. ದಿನದ ಕಾರ್ಯಕ್ಕೆ ಸಮಯ ಸಾಲದೇ ಇರಬಹುದು. ಅನಾರೋಗ್ಯದಿಂದ ನೀವು ಗುಣಮುಖರಾದರೂ ಪೂರ್ಣ ಹೊರ ಬರಲು ಆಗದು. ಧಾರ್ಮಿಕ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಇಂದಿನ ಪ್ರಯಾಣವನ್ನು ಅನಿವಾರ್ಯವಾದರೆ ಮಾತ್ರ ಮಾಡಿ.‌

ಮಿಥುನ ರಾಶಿ: ಬೇಡದ ವಿಚಾರಗಳಿಗೆ ಹೆಚ್ಚು ಸಮಯವನ್ನು ಕೊಡುವಿರಿ. ನಿಮಗೆ ಆಗದವರನ್ನು ದೂರ ಮಾಡಿಕೊಳ್ಳಲು ಇಷ್ಟಪಡುವಿರಿ. ಬೇಕೆಂದೇ ಕಲಹವನ್ನು ತಂದುಕೊಳ್ಳುವಿರಿ. ಜೀವನದ ಬಗ್ಗೆ ಒಂಟಿಯಾಗಿ ಕುಳಿತು ಗಂಭೀರ ಚಿಂತನೆಯನ್ನು ಮಾಡುವಿರಿ. ಧಾರ್ಮಿಕ ವಿಚಾರದ ಬಗ್ಗೆ ಹೆಚ್ಚು ಆಸಕ್ತಿ ಇರುವುದು. ಬಂಧುಗಳು ನಿಮ್ಮ ಬಗ್ಗೆ ಔದಾರ್ಯ ತೋರಿಸುವರು. ಸಹಾಯವೂ ಸಿಗಬಹುದು. ನಿಮ್ಮ ಸರಳತೆಯನ್ನು ಆಡಿಕೊಳ್ಳುವರು. ಯಾರನ್ನೂ ದೂಷಿಸುತ್ತ ಇರಬೇಡಿ.‌ ಇನ್ನೊಬ್ಬರ ನಂಬಿಕೆಯನ್ನು ಘಾಸಿಮಾಡುವಿರಿ. ನಿಮ್ಮ ತಪ್ಪನ್ನು ತಿದ್ದಿಕೊಳ್ಳುವ ಸ್ವಭಾವವು ಉತ್ತಮವಾದುದು. ಲಾಭಕ್ಕಾಗಿ ದೇಹವನ್ನು ದಂಡಿಸಬೇಕಾದೀತು. ಪಾಲುದಾರಿಕೆಯಲ್ಲಿ ನಿಮ್ಮ ಮಾತೇ ಅಂತಿಮವಾಗುವುದು. ಇನ್ನೊಬ್ಬರಿಗೆ ಹಣವನ್ನು ಕೊಡುವಾಗ ವ್ಯಕ್ತಿತ್ವದ‌ ಬಗ್ಗೆ ಗಮನವಿರಲಿ. ಎಲ್ಲವೂ ನಿಮ್ಮ ಮೂಗಿನ‌ ನೇರಕ್ಕೆ ನಡೆಯಬೇಕು ಎನ್ನುವುದು ತಪ್ಪಾದೀತು.

ಕಟಕ ರಾಶಿ: ಯಾರ ಸ್ವಭಾವವನ್ನೂ ನೀವು ಪೂರ್ಣವಾಗಿ ಅರ್ಥಮಾಡಿಕೊಳ್ಳಲಾಗದು. ಮೇಲಧಿಕಾರಿಗಳ ಮಾತಿಗೆ ನೀವು ಅನಾದರ ತೋರಿಸುವಿರಿ. ಮಾತನ್ನು ಮಿತವಾಗಿ ಆಡಬೇಕಾದೀತು. ಅವಶ್ಯಕವಿರುವಷ್ಟೇ ಆಹಾರವನ್ನು ಪಡೆಯುವಿರಿ. ಯಾರ ಸಹವಾಸವೂ ಬೇಡವೆನಿಸಬಹುದು. ಮೋಹದಲ್ಲಿ ನೀವು ಬೀಳುವಿರಿ. ಯಾರನ್ನೂ ನಂಬುವ ಸ್ವಭಾವವು ನಿಮ್ಮದಲ್ಲ. ಖರ್ಚಿನಿಂದ ನೀವು ಆತಂಕಗೊಳ್ಳುವಿರಿ. ನಿಮ್ಮ ಸಮಯವನ್ನು ಸಹೋದ್ಯೋಗಿಗಳು ಹಾಳು ಮಾಡುವರು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ತಂತ್ರವನ್ನು ಕಂಡುಕೊಳ್ಳಿ. ನಿಮ್ಮ ಬಗ್ಗೆ ನಿಮ್ಮೆದುರೇ ಆಡಿಕೊಳ್ಳುವರು. ಸಿಟ್ಟು ಬಂದರೂ ನಿಯಂತ್ರಣ ಮಾಡಿಕೊಳ್ಳುವಿರಿ. ಒಂದನ್ನೇ ಸಾಧಿಸುವ ಗುಣವನ್ನು ಬಿಟ್ಟುಬಿಡುವುದು ಉತ್ತಮ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?