Horoscope 24 Nov: ದಿನಭವಿಷ್ಯ, ಒಬ್ಬರೇ ಎಲ್ಲ ಕೆಲಸವನ್ನು ನಿಭಾಯಿಸಲು ಇಷ್ಟಪಡುವಿರಿ, ಮನಸ್ಸನ್ನು ನಿಯಂತ್ರಿಸಿ
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್ 24 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ಹರ್ಷಣ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:54 ರಿಂದ 12:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:04 ರಿಂದ 09:29ರ ವರೆಗೆ.
ಮೇಷ ರಾಶಿ: ಮಾಡುವ ಕೆಲಸ ಎಷ್ಟು ಸಣ್ಣದು ಎನ್ನುವುದು ಮುಖ್ಯವಾಗದು. ಹೇಗೆ ಮಾಡಿದ್ದೀರಿ ಎನ್ನುವುದು ಮುಖ್ಯವಾಗುವುದು. ಇನ್ನೊಬ್ಬರಲ್ಲಿ ತಪ್ಪನ್ನೇ ಹುಡುಕುತ್ತ ನಿಮ್ಮನ್ನು ನೀವು ಮರೆಯುವಿರಿ. ಇಂದು ನೀವು ಮಾತನಾಡುವ ಸಂದರ್ಭವು ಕಡಿಮಾಗುವುದು. ಕುಟುಂಬದ ಮರ್ಯಾದೆಗೆ ತಕ್ಕಂತೆ ವರ್ತನೆ ಇರಲಿ. ಕಛೇರಿಯ ಕಾರ್ಯವು ಇಂದು ಅಧಿಕವಾಗಿ ಇರಲಿದೆ. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ಕೃಷಿಯ ಬಗ್ಗೆ ಒಲವು ಬರಬಹುದು. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು. ಇಂದು ನಿಮ್ಮ ಪರಿಚಯವು ಇತರರಿಗೆ ಆಗುವುದು. ವ್ಯಕ್ತಿತ್ವವನ್ನು ನೀವು ಸರಿಯಾಗಿ ಮಾಡಿಕೊಳ್ಳಲು ಗಮನವಿರುವುದು. ಯಶಸ್ಸಿನ ವೃದ್ಧಿಯು ಮಿತ್ರರಿಂದ ಆಗುವುದು.
ವೃಷಭ ರಾಶಿ: ಆಯಾಸವನ್ನು ಪರಿಹರಿಸಿಕೊಳ್ಳಲು ನಾನಾ ವಿಧಾನವನ್ನು ಹುಡುಕುವಿರಿ. ಮನಸ್ಸು ನಿಶ್ಚಲವಾಗದು. ನೀವು ಇಂದು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರಲಾರಿರಿ. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ಕರ್ತವ್ಯದಲ್ಲಿ ನಿರಾಸಕ್ತಿ ಇರುವುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ಭವಿಷ್ಯವು ಅನಿಶ್ಚಿತ ಎನಿಸಬಹುದು. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು. ನಿಮ್ಮ ವರ್ತನೆಯು ಅಹಂಕಾರವಾಗಿ ಬದಲಾಗುವುದು. ಹಣವನ್ನು ಬಹಳ ಜೋಪಾನವಾಗಿ ತೆಗೆದಿಟ್ಟುಕೊಳ್ಳಿ. ಇಷ್ಟ ಮಿತ್ರರ ಸಹವಾಸವು ಸಿಗಬಹುದು. ಎಲ್ಲರ ಬಗ್ಗೆ ಸದ್ಭಾವವಿರುವುದು.
ಮಿಥುನ ರಾಶಿ: ಇನ್ನೊಬ್ಬರಿಗೆ ಸಹಾಯಕ್ಕೆ ಹೋಗುವ ನಿಮಗೆ ತೊಂದರೆ ಆಗಲಿದೆ. ದುರಭ್ಯಾಸವನ್ನು ಗೊತ್ತಾಗದಂತೆ ರೂಢಿಸಿಕೊಳ್ಳುವಿರಿ. ಇಂದು ನೀವು ವಿಸ್ಮರಣೆಯಿಂದ ಮಾಡಬೇಕಾದ ಕಾರ್ಯವನ್ನು ಮಾಡಲಾಗದು. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ನಿಮ್ಮ ತಪ್ಪಿಗೆ ಯಾರನ್ನೋ ಬಯ್ಯುವಿರಿ. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳಬೇಕಾದೀತು. ನಿಮ್ಮವರ ಪ್ರೀತಿಯನ್ನು ಇಂದು ಗಳಿಸುವಿರಿ. ಒಂದೇ ಕೆಲಸವನ್ನು ಬಹಳ ಕಾಲ ಮಾಡುವುದು ನಿಮಗೆ ಇಷ್ಟವಾಗದು. ಒಂದಾದಮೇಲೆ ಒಂದರಂತೆ ಒತ್ತಡಗಳು ಬರಬಹುದು.
ಕಟಕ ರಾಶಿ: ನೀವು ಪ್ರಭಾವೀ ವ್ಯಕ್ತಿಗಳ ಸಂಪರ್ಕವನ್ನು ಮಾಡುವಿರಿ. ಬರಬೇಕಾದ ಹಣವನ್ನು ನೀವು ಒತ್ತಾಯದಿಂದ ಪಡೆದುಕೊಳ್ಳುವಿರಿ. ಪ್ರವಾಸಕ್ಕೆ ಸ್ನೇಹಿತರ ಜೊತೆ ಎಲ್ಲಗಾದರೂ ಹೋಗುವಿರಿ. ಸಮಾರಂಭಗಳಿಗೆ ಸ್ನೇಹಿತರ ಜೊತೆ ಹೋಗುವಿರಿ. ವಂಚನೆಗೆ ಗೊತ್ತಾಗದಂತೆ ಸಿಕ್ಕಿಕೊಳ್ಳಬೇಕಾದೀತು. ನಿಮ್ಮ ಸ್ಥಾನಕ್ಕೆ ಯೋಗ್ಯವಾದ ಮಾತು ಇರಲಿ. ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಸುಮ್ಮನೇ ಮಾತಿಗಾಗಿ ಮಾತು ಬೆಳೆಸುವುದು ಬೇಡ. ನಿಮ್ಮ ತಪ್ಪನ್ನು ಯಾರದೋ ಮೇಲೆ ಹಾಕಿ ಖುಷಿ ಪಡುವಿರಿ. ಸಂಗಾತಿಯಿಂದ ಮಾನಸಿಕ ಕಿರಿಕಿರಿ ಇರುವುದು. ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶಗಳು ಸಿಗದೇ ಹೋಗಬಹುದು. ಕೆಲವರನ್ನು ದೂರವಿಡುವುದು ಉತ್ತಮ.
ಸಿಂಹ ರಾಶಿ: ಜಾಣ್ಮೆಯಿಂದ ಸಿಗುವ ಜವಾಬ್ದಾರಿಯನ್ನು ಕಳೆದುಕೊಳ್ಳುವಿರಿ. ಬರವಣಿಗೆ ಕ್ಷೇತ್ರದವರು ಹೊಸ ದಾಖಲೆಯನ್ನು ಮಾಡುವರು. ಕೆಟ್ಟ ಅಭ್ಯಾಸಕ್ಕೆ ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಸರಳ ಉಪಾಯವನ್ನು ಕಾರ್ಯದಲ್ಲಿ ಹಾಕುವಿರಿ. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ಉಪಕಾರದ ಸ್ಮರಣೆಯನ್ನು ನೀವು ಇಟ್ಟುಕೊಳ್ಳುವುದು ಅನಿವಾರ್ಯ. ವಾಹನ ಸಂಚಾರಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರದಲ್ಲಿ ಸಡಿಲಿಕೆ ಬೇಡ. ಎಲ್ಲ ವಿಚಾರವನ್ನೂ ನೀವು ತಿಳಿಯಬೇಕು ಎಂಬ ಕುತೂಹಲವು ಇರುವುದು. ಕನಸಿನಲ್ಲಿಯೇ ದಿನವನ್ನು ಕಳೆಯುವಿರಿ.
ಕನ್ಯಾ ರಾಶಿ: ಹಲವು ದಿನದ ಅನಂತರ ಸ್ಥಗಿತವಾದ ಕಾರ್ಯವನ್ನು ಕೈಗೆತ್ತಿಕೊಳ್ಳುವಿರಿ. ನಿಮಗೆ ನಾನಾ ವಿಘ್ನಗಳು ಮತ್ತೆ ಬರುವುದು. ದೈವಜ್ಞರನ್ನು ಭೇಟಿಯಾಗುವುದು ಸೂಕ್ತ. ನಿಮ್ಮಅಹಂಕಾರದ ಮಾತುಗಳಿಂದ ಮಿತ್ರರೇ ನಿಮ್ಮ ವಿರುದ್ಧ ತಿರುಗಿ ನಿಲ್ಲಬಹುದು. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ. ಮನೆಯಲ್ಲಿ ನಿಮ್ಮ ಕಾರ್ಯಗಳಿಗೆ ಹಿರಿಯರಿಂದ ವಿರೋಧ ಬರಲಿದೆ. ಮನೆಯ ಎಷ್ಟೋ ಸಂಗತಿಗಳನ್ನು ಇಂದು ತಿಳಿದುಕೊಳ್ಳುವಿರಿ. ಅಪಮಾನವನ್ನು ಧೈರ್ಯದಿಂದ ಎದುರಿಸಲು ಮುಂದಾಗುವಿರಿ. ತಿಳಿವಳಿಕೆಯು ಇಂದು ನಿಮಗೆ ಮುಜುಗರವನ್ನು ತರಬಹುದು. ನಿಮ್ಮ ವೃತ್ತಿಯನ್ನು ಪ್ರೀತಿಸುವುದು ಅನಿವಾರ್ಯವೇ ಆಗಿರುತ್ತದೆ.
ತುಲಾ ರಾಶಿ: ಮನೆಗಾಗಿ ಅನವಶ್ಯಕ ಖರ್ಚನ್ನು ಮಾಡುವಿರಿ. ಸಿಟ್ಟಿನಿಂದ ಮೂಗನ್ನು ಕತ್ತರಿಸಿಕೊಳ್ಳುವಿರಿ. ಅನಂತರ ಪಶ್ಚಾತ್ತಾಪ ಪಡುವಿರಿ. ರಾಜಕೀಯದಲ್ಲಿ ತೃಪ್ತಿ ಸಿಗದೇ ತೊಳಲಾಟ ಇರಲಿದೆ. ಸಂಗಾತಿಯ ಆರೋಗ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ಪ್ರತ್ಯೇಕತೆಯನ್ನು ನೀವು ಬಯಸುತ್ತಿರುವಿರಿ. ಹೂಡಿಕೆಯಿಂದ ಆರ್ಥಕ ಅಭಿವೃದ್ಧಿಯಾಗಲಿದೆ ಎಂಬ ನೆಮ್ಮದಿ ಇರುವುದು. ದಾಂಪತ್ಯ ಜೀವನವನ್ನು ಬಹಳ ಆನಂದಿಸುವಿರಿ. ನಿಮ್ಮ ಬಗ್ಗೆಯೂ ಅಪ್ರಚಾರ ಮಾಡುತ್ತಾರೆ ಎಂಬುದು ತಿಳಿಯುವುದು. ಸ್ನೇಹಿತರ ಜೊತೆ ಆಪ್ತವಾಗಿ ಕಾಲವನ್ನು ಕಳೆಯಲಿದ್ದೀರಿ. ಖರ್ಚುಗಳಿಗೆ ನಿರ್ದಿಷ್ಟ ಕಾರಣವು ಇರಲಿ. ಚಂಚಲವಾದ ಮನಸ್ಸಿನಿಂದ ಯಾರು ಹೇಳಿದ್ದೂ ನಿಮಗೆ ಗೊತ್ತಾಗದು.
ವೃಶ್ಚಿಕ ರಾಶಿ: ನಿಮ್ಮ ವೃತ್ತಿಯೇ ನಿಮ್ಮನ್ನು ಕೈಹಿಡಿದು ನಡೆಸುವುದು. ಭೂಮಿಯ ಖರೀದಿಯ ಬಗ್ಗೆ ಪೂರ್ಣ ಮನಸ್ಸು ಇರದು. ಸಂಗಾತಿಯ ಒತ್ತಾಯಕ್ಕೆ ಮಣಿಯುವಿರಿ. ನಿಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ಇಂದು ಸುದಿನ. ನಿಮ್ಮ ಜ್ಞಾನವನ್ನು ಇತರಿಗೆ ಹಂಚುವಿರಿ. ಭೂಮಿಯ ಲಾಭವು ಆಗಲಿದ್ದು ಅನೇಕ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಸಿಗುವುದು. ನಿಮ್ಮ ಕೆಲಸವನ್ನು ಶಿಸ್ತಿನಿಂದ ಮಾಡಿ ಮುಗಿಸುವಿರಿ. ಇಂದು ಆಗಬೇಕಾದ ಕೆಲಸಕ್ಕೆ ಹೆಚ್ಚು ಓಡಾಡಬೇಕಾಗುವುದು. ಇಂದು ಪ್ರಯತ್ನಿಸಿದ ಕಾರ್ಯವು ಆಗದೇ ಇರುವುದಕ್ಕೆ ಬೇಸರಿಸುವಿರಿ. ಇನ್ನೊಬ್ಬರನ್ನು ಟೀಕಿಸುವುದು ನಿಮಗೆ ಬೇಡ. ಹಿರಿಯರ ಕಿವಿಮಾತಿನ ಮೇಲೆ ನಿರ್ಲಕ್ಷ್ಯವಿರುವುದು. ನಿಮ್ಮದಲ್ಲದ ವಸ್ತುಗಳ ಮೇಲೆ ಅಧಿಕ ಮೋಹವು ಇರುವುದು.
ಧನು ರಾಶಿ: ನಿಮ್ಮ ಸಹಾಯಕ್ಕೆ ಯಾರೂ ಬಾರದೇ ಇರುವುದು ನಿಮ್ಮ ಕಾರಣವಾಗಿದ್ದು, ಒಬ್ಬರೇ ಎಲ್ಲ ಕೆಲಸವನ್ನು ನಿಭಾಯಿಸಲು ಇಷ್ಟಪಡುವಿರಿ. ವಾಹನ ಖರೀದಿಗೆ ಆಲೋಚನೆ ಇರಲಿದ್ದು ಸಾಲ ಮಾಡಬೇಕಗಬಹುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಮನೆಯವರ ಸಣ್ಣ ತಪ್ಪುಗಳನ್ನು ಸಹಿಸಲಾರಿರಿ. ಮತ್ತೆ ಮತ್ತೆ ಉಂಟಾದ ಅನಾರೋಗ್ಯದಿಂದ ನಿಮ್ಮ ದಿನಚರಿಯನ್ನೇ ಬದಲಾಯಿಸಿಕೊಳ್ಳಬೇಕಾಗುವುದು. ಬಂಧುಗಳು ನಿಮ್ಮ ಬಗ್ಗೆ ಏನಾದರೂ ಆಡಿಕೊಂಡಾರು. ಶ್ರಮವು ಯುಕ್ತಿಯಿಂದ ಕೂಡಿರಲಿ. ನಿಯಮಿತ ಆಹಾರವನ್ನು ರೂಢಿಸಿಕೊಳ್ಳುವುದು ಸೂಕ್ತ. ಧನಾತ್ಮಕ ಚಿಂತನೆಯನ್ನು ಪ್ರಯತ್ನಪೂರ್ವಕವಾಗಿ ಮಾಡಿಬೇಕಾದೀತು. ಮನೆತನದ ಗೌರವವನ್ನು ಕಾಪಾಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಕಳೆದುಕೊಂಡ ವಸ್ತುವಿಗಾಗಿ ನೀವು ಬಹಳ ಬೇಸರಪಡುವುದು ಬೇಡ.
ಮಕರ ರಾಶಿ: ನೀವು ವಿನಾಕಾರಣ ಶತ್ರುಗಳನ್ನು ಬೆಳೆಸಿಕೊಳ್ಳುವಿರಿ. ತಪ್ಪಿದ ಅವಕಾಶವನ್ನು ಪಡೆಯಲು ಬೇರೆ ಮಾರ್ಗದಿಂದ ಮತ್ತೆ ಮತ್ತೆ ಪ್ರಯತ್ನಿಸಿ. ಪ್ರೀತಿಯ ವಿಚಾರಕ್ಕೆ ನಿಮಗೆ ಬಂದರೆ ಪೂರ್ಣ ಸಮಾಧಾನ ಸಿಗದು. ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಹಣವನ್ನು ಗಳಿಸುವ ಹಂಬಲವು ಇದ್ದು ಅದಕ್ಕಾಗಿ ಮಾರ್ಗವನ್ನೂ ಪರ್ಯಾಲೋಚಿಸಿ. ಸಹೋದರಿಯ ಜೊತೆ ಭಾವನೆಯನ್ನು ತೆರೆದಿಡುವಿರಿ. ಆಗಾಗ ಮಾತನಾಡುತ್ತ ಸಂಬಂಧವನ್ನು ಗಟ್ಟಿಮಾಡಿಕೊಳ್ಳಿ. ಮಂಗಲ ವಾತಾವರಣವು ನಿಮಗೆ ನೆಮ್ಮದಿಯನ್ನು ಕೊಡುವುದು.
ಕುಂಭ ರಾಶಿ: ವಿಶ್ವಾಸವು ಘಾಸಿಯಾಗಿ ನಿಮ್ಮ ಮೂಲಭೂತ ಅಂಶಗಳೇ ಬುಡಮೇಲಾಗಬಹುದು. ಕೆಲಸಕ್ಕಾಗಿ ಅಲೆದಾಡಿ ಆಯಾಸವಾಗುವುದು. ನಿಮ್ಮ ಪಿತ್ರಾರ್ಜಿತ ಆಸ್ತಿಯು ನಷ್ಟವಾಗಬಹುದ ಎಂಬ ಆತಂಕವು ಇರಲಿದೆ. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ಕಳ್ಳತನದ ಭೀತಿಯು ನಿಮಗೆ ಇರವುದು. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು. ಅಧಿಕಾರಿಗಳ ಪ್ರಶಂಸೆಗೆ ಕಾಯುತ್ತಿರುವಿರಿ. ನಿಮ್ಮ ತಾಳ್ಮೆಯ ವರ್ತನೆಯಿಂದ ಸಂಕಟವು ದೂರಾಗುವುದು. ಕಲಿಕೆಯಲ್ಲಿ ಹೊಸತನವನ್ನು ಇರುವುದು. ಸಂತಾನವು ನಿಮಗೆ ಖುಷಿ ಕೊಡುವುದು. ವಿದೇಶಪ್ರಯಾಣವನ್ನು ಮಾಡುವ ಯೋಚನೆಯಲ್ಲಿಯೇ ಇರುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಇರಲಿದೆ.
ಮೀನ ರಾಶಿ: ಸ್ತ್ರೀಯರ ಜೊತೆ ಕಾರ್ಯಗಳಿಗೆ ಒಡನಾಡುವಾಗ ಎಚ್ಚರಿಕೆಯಿಂದ ಇರಿ. ಆರೋಗ್ಯವು ಹದವನ್ನು ಕಳೆದುಕೊಳ್ಳಬಹುದು. ಸ್ತ್ರೀಯರಿಂದ ಇಂದಿನ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸಬಹುದು. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶವು ಬರಬಹುದು. ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ಸ್ವಾವಂಬಿಯಾಗಲು ನೀವು ಇಚ್ಛಿಸುವಿರಿ. ಸಿಟ್ಟನ್ನು ಕಡಿಮೆ ಮಾಡಿಕೊಂಡು ಎಲ್ಲವನ್ನೂ ಸ್ವೀಕರಿಸಿದರೆ ಯಶಸ್ಸು ನಿಮ್ಮದೇ. ಉನ್ನತ ಅಧಿಕಾರವು ನಿಮ್ಮನ್ನು ಹುಡುಕಿಕೊಂಡು ಬಂದೀತು.
ಲೋಹಿತಶರ್ಮಾ – 8762924271 (what’s app only)