Horoscope: ಮನೆಯಿಂದ ದೂರವಿರಬೇಕಾದೀತು, ಇಷ್ಟಾರ್ಥ ಸಿದ್ಧಿಗೆ ದೇವರ ಮೊರೆ
ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 17, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 17) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವ್ಯಾಘಾತ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 51 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಸಂಜೆ 04:41 ರಿಂದ 06:06ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:29 ರಿಂದ 01:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:17 ರಿಂದ 04:41ರ ವರೆಗೆ.
ಮೇಷ ರಾಶಿ: ನಿಮ್ಮವರ ನಡೆಯು ನಿಮಗೆ ವಿಚಿತ್ರ ಎನಿಸಬಹುದು. ಹತ್ತಿರದಿಂದ ತಿಳಿಯದೇ ಯಾರ ಮೇಲೂ ಆರೋಪವನ್ನು ಮಾಡುವುದು ಬೇಡ. ಮನೆಯ ಬೇಕಾದ ವಸ್ತುಗಳನ್ನು ಖರೀದಿ ಮಾಡುವಿರಿ. ವಾಹನ ಖರೀದಿಗೆ ಮನೆಯಲ್ಲಿ ಮನಸ್ಸು ಮಾಡುವುದಿಲ್ಲ. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡುವುದು. ಗೊಂದಲದಲ್ಲಿ ನೀವು ಇರಬೇಕಾದೀತು. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗುವುದು. ನಿಮ್ಮ ಇಂದಿನ ನೋವನ್ನು ನೀವೇ ಇಟ್ಟುಕೊಳ್ಳುವಿರಿ. ನಿಮ್ಮವರನ್ನು ನೀವು ಬಿಟ್ಟಕೊಡಲು ಇಷ್ಟಪಡುವುದಿಲ್ಲ. ವಿದ್ಯಾಭ್ಯಾಸಕ್ಕೆ ಬೇಕಾದ ವಾತಾವರಣವನ್ನು ನೀವು ನಿರ್ಮಿಸಿಕೊಳ್ಳುವಿರಿ. ಪೂರಕವಾದ ವಾತಾವರಣವು ಹೆಚ್ಚು ಖುಷಿಕೊಡುವುದು. ಇನ್ನೊಬ್ಬರನ್ನು ಹಾಸ್ಯ ಮಾಡುತ್ತ ಸಮಯವನ್ನು ಕಳೆಯುವಿರಿ.
ವೃಷಭ ರಾಶಿ: ಯಾವುದೇ ತಾಪತ್ರಯಗಳು ಇಲ್ಲದಿದ್ದರೂ ಅಸಮಾಧಾನ, ಕಿರಿಕಿರಿಗಳು ಕಾಣಿಸುವುದು. ನಿಮ್ಮವರನ್ನು ದೂರ ಮಾಡಿಕೊಂಡು ಸ್ವತಂತ್ರವಾಗಿ ಬದುಕುವಿರಿ. ನಿಮ್ಮವರನ್ನು ಕಂಡು ನೀವು ಅಸೂಯೆಪಡಬಹುದು. ದೂರ ಪ್ರಯಾಣದಿಂದ ಆರೋಗ್ಯವು ಹದಗೆಟ್ಟು ವಿಶ್ರಾಂತಿಯನ್ನು ಪಡಯಬೇಕಾದೀತು. ಕಾರ್ಯದ ಆರಂಭದಲ್ಲಿ ಒತ್ತಡವು ಹೆಚ್ಚು ಇರುವುದು. ನಿಮ್ಮ ಇಂದಿನ ಖರ್ಚಿಗೆ ಕಡಿವಾಣ ಹಾಕುವುದು ಅಸಾಧ್ಯವಾಗಬಹುದು. ದುರ್ಬಲರ ಮೇಲೆ ನೀವು ಸಿಟ್ಟಾಗುವಿರಿ. ಸಂಗಾತಿ ಮತ್ತು ಮಕ್ಕಳನ್ನು ಅವರಷ್ಟಕ್ಕೆ ಬಿಟ್ಟು ನೀವು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ. ಯಾವುದೇ ಕಾರ್ಯಕ್ಕೂ ನೀವು ಮುನ್ನುಗ್ಗುವುದು ಇಷ್ಟವಾಗದು. ವ್ಯವಹಾರದಲ್ಲಿ ನೀವು ಸರಿಯಾಗಿ ಇರದೇ ಇರುವುದು ನಿಮಗೆ ಕಷ್ಟವಾಗಬಹುದು. ಎಂತಹ ಸಂದರ್ಭವನ್ನೂ ಎದುರಿಸುವ ಮನಃಸ್ಥಿತಿ ನಿಮ್ಮದಾಗುವುದು.
ಮಿಥುನ ರಾಶಿ: ನಿಮ್ಮನ್ನು ನೀವು ಪ್ರಯೋಗಕ್ಕೆ ಬಳಸಿಕೊಳ್ಳುವಿರಿ. ಏನಾದರೊಂದು ಕಾರ್ಯವನ್ನು ನೀವು ಮಾಡುತ್ತಲೇ ಇರುವುದು ನಿಮಗೆ ಇಷ್ಟವಾಗುವುದು. ಕಛೇರಿಯಲ್ಲಿ ಸ್ತ್ರೀಯರಿಂದ ಅಪಮಾನವಾಗಬಹುದು. ನಿಮ್ಮ ತಪ್ಪುಗಳು ನಿಮಗೆ ಗೊತ್ತಾಗದೇ ಇನ್ನೊಬ್ಬರು ತಿಳಿಸಬೇಕಾಗುವುದು. ಅನಿವಾರ್ಯವಾಗಿ ಸಣ್ಣ ಸಾಲವನ್ನು ಮಾಡುವ ಸ್ಥಿತಿಯು ಬರಬಹುದು. ಮಂಗಲ ಕಾರ್ಯಕ್ಕೆ ಬಹಳ ಸಿದ್ಧತೆಯನ್ನು ಮಾಡುವಿರಿ. ಪ್ರಯಾಣದ ಆಯಾಸವು ನಿಮ್ಮನ್ನು ವಿಶ್ರಾಂತಿಗೆ ಕಳುಹಿಸಬಹುದು. ಪ್ರಾಣಿಗಳ ಮೇಲೆ ಪ್ರೀತಿಯು ಅತಿಯಾದೀತು. ನಿಮ್ಮದೊಂದೇ ಸಮಸ್ಯೆ ಎನ್ನುವಂತೆ ಬಹಳ ಚಿಂತೆಯಿಂದ ಇರುವಿರಿ. ಇಂದು ನಿಮಗೆ ಕುಟುಂಬದ ಜೊತೆ ಇರುವುದು ಖುಷಿ ಕೊಡದು. ಆರ್ಥಿಕತೆಯ ವಿಚಾರದಲ್ಲಿ ನೀವು ನಿಷ್ಠುರವಾದಿಗಳಾಗುವಿರಿ. ನಿಮ್ಮ ಬೇಸರವನ್ನು ಸಂಗಾತಿಯು ಕಳೆಯಬಹುದು.
ಕರ್ಕ ರಾಶಿ: ಉಸಿರು ಕಟ್ಟುವ ಒತ್ತಡವಿದ್ದರೂ ನೀವು ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಇರುವಿರಿ. ವಿದ್ಯಾರ್ಥಿಗಳ ಕನಸು ಸಾಕಾರವಾಗಿ ಸಂತೋಷಪಡುವರು. ಉದ್ಯೋಗದಲ್ಲಿ ವರ್ಗಾವಣೆ ಆಗುವ ಸಾಧ್ಯತೆ ಇದ್ದು, ಮನೆಯಿಂದ ದೂರವಿರಬೇಕಾದೀತು. ಇಷ್ಟಾರ್ಥವು ನಿನಗೆ ಸಿದ್ಧಿಯಾಗುವ ಬಗ್ಗೆ ನಿಮಗೆ ಅನುಮಾನವಿರಲಿದೆ. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ. ಕೋಪಗೊಂಡ ಸಂಗಾತಿಯನ್ನು ನೀವು ಸಮಾಧನಾ ಮಾಡಬೇಕಾದೀತು. ಅತಿಯಾದ ಆತ್ಮವಿಶ್ವಾಸವು ನಿಮ್ಮ ಕಾರ್ಯವನ್ನು ಹಾಳುಮಾಡಬಹುದು. ವ್ಯವಸ್ಥೆ ವ್ಯವಹಾರದಿಂದ ಚುರುಕುತನದ ಅವಶ್ಯಕತೆ ಇರುವುದು. ನಿಮ್ಮ ಮಾತು ನೇರವಾಗಿಯೂ ಸ್ಪಷ್ಟವಾಗಿಯೂ ಇರಲಿ. ಮನೆಯನ್ನು ಮಾರಾಟ ಮಾಡಿ ದೂರ ಹೋಗುವ ಆಲೋಚನೆಗಳು ಬರಬಹುದು. ನೀವು ನಿಮ್ಮನ್ನೇ ಪ್ರಶಂಸಿಸಿಕೊಳ್ಳುವುದು ಸರಿ ಕಾಣಿಸದು. ವಿದೇಶೀಯರ ಸಂಪರ್ಕವು ಉಂಟಾಗಲಿದೆ.