ಈ ರಾಶಿಯವರಿಗೆ ಹಣಕಾಸಿನ ಹರಿವು ಹೆಚ್ಚಾಗಲಿದೆ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ, ಬುಧವಾರ ಪ್ರಯಾಣದ ವ್ಯತ್ಯಾಸ, ಅನಾರೋಗ್ಯ, ಭವಿಷ್ಯದ ಚಿಂತೆ, ಸಜ್ಜನರ ಸೇವೆ ಇಲವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಶೂಲಿ, ಕರಣ: ತೈತಿಲ, ಸೂರ್ಯೋದಯ – 06:23 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:34 – 14:07, ಯಮಘಂಡ ಕಾಲ 07:56 – 09:29, ಗುಳಿಕ ಕಾಲ 11:02 – 12:34
ಮೇಷ ರಾಶಿ: ಸ್ವಪ್ರತಿಷ್ಠೆಯಿಂದ ಮನಸ್ಸನ್ನು ಹಾಳಾಗುವುದು. ಹಿರಿಯರೆದುರು ವಿನಯ, ವಿಧೇಯತೆ ಇರಲಿ. ದೇವತಾ ಕಾರ್ಯಗಳಲ್ಲಿ ಆಸಕ್ತಿಯಿಂದ ಭಾಗಿ. ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಸಂಗಾತಿಯ ಪರೀಕ್ಷೆ ನಡೆಯುವುದು. ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ ಮಾಡಿಕೊಳ್ಳಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ. ನಿಮ್ಮ ಆದಾಯವೆಲ್ಲ ನೀರಿನಂತೆ ಖರ್ಚಾಗಬಹುದು. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಕೋಪವನ್ನು ಯಾರೆದುರೂ ಪ್ರಕಟಿಸುವುದು ಬೇಡ.
ವೃಷಭ ರಾಶಿ: ವಿರೋಧಿಗಳ ಅಪಪ್ರಚಾರಕ್ಕೆ ನೀವು ಆಹಾರ. ನೀವು ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದ ಕಾರ್ಯವನ್ನು ನಿಭಾಯಿಸಲು ಕಲಿಯುವಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೊಟ್ಟ ಸಾಲ ಮರಳಿಬರಹುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಹಲವು ದಿನಗಳಿಂದ ಸೋಲಿನ ವಾರ್ತೆ ಕೇಳಿದ್ದ ನಿಮಗೆ ಗೆಲವಿನ ಸೂಚನೆ ಸಿಗಲಿದ್ದು ಉತ್ಸಾಹ ಬರಲಿದೆ. ನೀವು ಅಪರಿಚಿತರ ಸಂಪರ್ಕವನ್ನು ಹೆಚ್ಚು ಮಾಡುವಿರಿ. ಹೂಡಿಕೆಯಲ್ಲಿ ದೀರ್ಘಾವಧಿಯ ಯೋಜನೆಗಳು ಮಾಡಿಕೊಳ್ಳಿ. ನಿಮ್ಮ ಮೇಲಿನ ವಿಶ್ವಾಸವು ದೂರವಾಗಬಹುದು. ನೀವು ಹಿರಿಯರಿಂದ ಬೆಂಬಲವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ವಿನಾಕಾರಣ ಸುತ್ತಾಟದಿಂದ ಆಯಾಸವಾಗುವುದು. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು. ಯಾರದೋ ಸಂತೋಷಕ್ಕಾಗಿ ನೀವು ದುಡಿಯಬೇಕಾಗಬಹುದು.
ಮಿಥುನ ರಾಶಿ: ಅಸಹಜವಾದ ಮನಃಸ್ಥಿತಿಯಿಂದ ಹೊರಲೇ ಬೇಕಾಗುವುದು. ನಿಮ್ಮ ವಾಹನದಲ್ಲಿ ದೀರ್ಘಪ್ರಯಾಣವು ಇಂದು ಮಾಡುವುದು ಬೇಡ. ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಎಲ್ಲವುದೂ ಅಂದುಕೊಂಡಂತೆ ಆಗದು. ಸಹೋದರರಿಂದ ಸಲಹೆ ಪಡೆದು ಮುನ್ನಡೆಯಿರಿ. ಗಾಳಿ ಸುದ್ದಿಗಳು ನಿಮ್ಮ ಮನಸ್ಸಿಗೆ ತೊಂದರೆ ಕೊಡುವುದು. ಹೊಸ ಕಲಿಕೆಯ ಬಗ್ಗೆ ಆಸಕ್ತಿಯು ಹೆಚ್ಚಾಗಬಹುದು. ಭೂಮಿಯ ವ್ಯವಹಾರದಲ್ಲಿ ನಿಮಗೆ ಅನುಕೂಲ ಕಡಿಮೆ ಇರುವುದು. ನಿಮ್ಮ ಜವಾಬ್ದಾರಿಯನ್ನು ಇತರರು ಮಾಡಬೇಕಾಗಬಹುದು. ಸಾಮೂಹಿಕ ಕಾರ್ಯದಲ್ಲಿ ನಿಮಗೆ ಯಶಸ್ಸು ಸಿಗಬಹುದು. ನಿಮಗೆ ಬೇಕಾದ ಆರ್ಥಿಕಬೆಂಬಲವನ್ನು ಯಾರೂ ಸೂಚಿಸದೇ ಇರಬಹುದು. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ.
ಕರ್ಕಾಟಕ ರಾಶಿ: ಮಾಡದ ತಪ್ಪಿಗೆ ಪಶ್ಚಾತ್ತಾಪವಾಗಲಿದೆ. ಅಹಂಕಾರದಿಂದ ಕೆಲವರನ್ನು ಕಳೆದುಕೊಳ್ಳುವಿರಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ನಿಮ್ಮ ಸಾಹಿತ್ಯ ಇಂದು ಪ್ರಸಿದ್ಧಿಗೆ ಬರುವುದು. ಮಕ್ಕಳಿಗೆ ಯೋಗ್ಯವಾದ ಮಾರ್ಗದರ್ಶನವನ್ನು ಮಾಡಿ. ನಿಮ್ಮ ಇಷ್ಟದ ವಿಷಯಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತೀರಿ. ನಿಮ್ಮವರ ವಿಶ್ವಾಸವನ್ನು ನೀವು ಸುಲಭವಾಗಿ ಗೆಲ್ಲಲು ಸಾಧ್ಯವಾಗುತ್ತದೆ. ನೀವು ಅನೇಕ ವ್ಯವಹಾರಗಳನ್ನು ನಿಭಾಯಿಸಲು ಕಷ್ಟಪಡುವರು. ಮನೆಗೆ ಅಪರಿಚಿತ ವ್ಯಕ್ತಿಯ ಆಗಮನವಾಗಲಿದೆ. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.
ಸಿಂಹ ರಾಶಿ: ಸಾಧನೆ ಎಂದಮೇಲೆ ಅಡೆತಡೆಗಳು ಸಹಜ. ಅದನ್ನು ಹಿಂದೆ ಹಾಕಿ ನಡೆಯುವುದು ನಿಜವಾದ ತಾಕತ್ತು. ನಿಮ್ಮ ಕುಟುಂಬದ ಸದಸ್ಯ ಇಂದು ನಿಮ್ಮ ಜೊತೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಕೈಗೆ ಬಂದ ಹಣ ಆಸ್ಪತ್ರೆಯ ಪಾಲಾಗಬಹುದು. ನೀವು ಕೆಲಸದ ನಿಯಮಗಳ ಬಗ್ಗೆ ಗಮನ ಹರಿಸಬೇಕು. ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮ ಮಾಡಲು ಬಯಸುವಿರಿ. ಮನೋಯಾತನೆಯನ್ನು ನುಂಗುವುದೇ ಸೂಕ್ತ. ಯಾರ ಕಡೆಯಿಂದಲಾದರೂ ಸಾಲ ಪಡೆಯುವುದನ್ನು ತಪ್ಪಿಸಿ. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು. ಅಕಾರಣವಾಗಿ ಸಂತೋಷಪಡುವಿರಿ. ಈ ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು.
ಕನ್ಯಾ ರಾಶಿ: ಇಂದು ವೇಷ ಮರೆಸಿ ವಂಚಿಸುವ ಸಾಧ್ಯತೆ ಇದೆ. ಇಂದು ನೀವು ಕೋಪವನ್ನು ಹತೋಟಯಲ್ಲಿ ಇಟ್ಟುಕೊಳ್ಳುವುದು ಅಗತ್ಯ. ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ನೀವು ಜೀವನದಲ್ಲಿ ಏನೋ ಅಂದುಕೊಂಡು ಮತ್ತೇನೋ ಆಗುವ ಸ್ಥಿತಿ ಬರಬಹುದು. ಅನೇಕ ದಿನಗಳಿಂದ ಕಾದ ಸ್ಥಾನ ಕೊನೆಗೂ ಲಭ್ಯ. ಪಾಲುದಾರರ ಜೊತೆ ಕೈಜೋಡಿಸುವ ಮೊದಲು ಯೋಚಿಸಿ. ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ. ನಿಮ್ಮ ಭೇಟಿಯ ಸಮಯದಲ್ಲಿ ಅಪರಿಚಿತರು ಕೆಲವು ಪ್ರಮುಖ ಮಾಹಿತಿಯನ್ನು ನಿಮ್ಮಿಂದ ಪಡೆಯಬಹುದು. ಸ್ನೇಹಿತರ ಜೊತಗೆ ಸ್ವಲ್ಪ ಸಮಯ ಮೋಜಿನಿಂದ ಕಳೆಯುತ್ತೀರಿ. ಹಳೆಯ ನೆನಪುಗಳು ನಿಮ್ಮನ್ನು ಘಾಸಿಮಾಡಬಹುದು. ನಿಮ್ಮ ಸಂಬಂಧಿಕರಿಂದ ಕೆಲವು ಉತ್ತಮ ಸಲಹೆಯನ್ನು ಪಡೆಯಬಹುದು. ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ. ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡುವರು.