ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 28) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪುನರ್ವಸು, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 56 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 13:58 ರವರೆಗೆ, ಯಮಘಂಡ ಕಾಲ ಬೆಳಗ್ಗೆ 08:21 ರಿಂದ 09:45ರ ವರೆಗೆ, ಗುಳಿಕ ಕಾಲ 11:09 ರಿಂದ 12:34ರ ವರೆಗೆ.
ಮೇಷ ರಾಶಿ: ಮಹಿಳೆಯರಿಗೆ ಶುಭ ಸುದ್ದಿ ಇರಲಿದ್ದು ಬಹಳ ದಿನಗಳ ಅನಂತರ ನಿಮಗೆ ನಿರಾಳ ಸಿಕ್ಕಂತೆ ಆಗುವುದು. ವಸ್ತುಗಳ ಉತ್ಪನ್ನ ಮಾಡುವವರಿಗೆ ನೌಕರರ ಕೊರತೆ ಕಾಣಿಸಬಹುದು. ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಗುರು ಹಿರಿಯರಿಂದ ಸಿಕ್ಕ ಉಪದೇಶವು ಪ್ರಯೋಜನಕಾರಿಯಾಗುವುದು. ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ. ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ.
ವೃಷಭ ರಾಶಿ: ಉದ್ಯೋಗದಲ್ಲಿ ಗೊತ್ತಾಗದೇ ನಿಮ್ಮ ಮೇಲೆ ಅಪವಾದಗಳು ಬರಬಹುದು. ಅದನ್ನು ತಾಳ್ಮೆ ತಿಳಿಸಿ, ಸರಿ ಮಾಡಿಕೊಳ್ಳುವಿರಿ. ಆರೋಗ್ಯದ ವ್ಯತ್ಯಾಸದಿಂದ ನಿಮ್ಮ ಮುಖ್ಯ ಕಾರ್ಯಗಳನ್ನು ಮಾಡಲು ಆಗದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ಆರೋಗ್ಯವು ಸಾಮಾನ್ಯವಾಗಿ ಇರಲಿದೆ. ವ್ಯವಹಾರದ ಬಗ್ಗೆ ಹೆಚ್ಚಿನ ಗಮನ ಹರಿಸಿದ ಅನಂತರವೂ ಕೆಲಸ ತಡವಾಗಿ ಪೂರ್ಣಗೊಳ್ಳುತ್ತದೆ. ಅನೇಕ ಲಾಭದ ಅವಕಾಶಗಳು ಸಿಗುತ್ತವೆ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಹೊಸ ಸಂಬಂಧದ ಮೂಲಕ ಅದೃಷ್ಟ ಬರಬಹುದು. ಸಾಮಾಜಿಕ ಗೌರವವನ್ನು ಪಡೆಯುತ್ತೀರಿ. ನಿಮ್ಮ ಆಜ್ಞೆಯಂತೆ ಎಲ್ಲವೂ ನಡೆಯುವುದು ಕಷ್ಟವಾದೀತು.
ಮಿಥುನ ರಾಶಿ: ಉನ್ನತ ವಿದ್ಯಾಭ್ಯಾಸಕ್ಕೆ ಹಿರಿಯರಿಂದ ಆಶೀರ್ವಾದವನ್ನು ಪಡೆದುಕೊಳ್ಳುವಿರಿ. ಇನ್ನೊಬ್ಬರಲ್ಲಿ ಪ್ರೀತಿ ಮೂಡುವ ಸಾಧ್ಯತೆ ಇದೆ. ಹಳೆಯ ಗೆಳೆಯರು ನಿಮಗೆ ಆಕಸ್ಮಿಕವಾಗಿ ಸಿಕ್ಕಾರು. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ಇನ್ನೊಬ್ಬರ ಭಾವಕ್ಕೆ ಸ್ಪಂದಿಸುವ ಗುಣವಿರುವುದು. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಮಕ್ಕಳನ್ನು ಹಿಡೆತಕ್ಕೆ ತರಲು ಪ್ರಯತ್ನಿಸುವಿರಿ. ಪ್ರಮುಖ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದು ಬೇಡ. ಅಧ್ಯಾತ್ಮದ ಬಗ್ಗೆ ಆಸಕ್ತಿ ಇರುತ್ತದೆ. ಸಹೋದರಿಯರು ಮತ್ತು ಸಂಗಾತಿಯ ಬೆಂಬಲ ಪಡೆಯುವಿರಿ.
ಕಟಕ ರಾಶಿ: ನಿಮ್ಮ ಕಾರ್ಯಗಳಲ್ಲಿ ಉತ್ಸಾಹವಿದ್ದರೂ ಹಿತಶತ್ರುಗಳು ನಿಮ್ಮ ಕಾರ್ಯವನ್ನು ಕಾಳು ಮಾಡಿಯಾರು. ಅಧಿಕಾರಿ ವರ್ಗದಿಂದ ನಿಮ್ಮ ಮೇಲೆ ಒತ್ತಡವು ಬರಬಹುದು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ಅಪರಿಚಿತರ ವ್ಯವಹಾರವನ್ನು ಕಡಿಮೆ ಮಾಡಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ದೈನಂದಿನ ವ್ಯಾಪಾರಿಗಳು ಹೆಚ್ಚು ಶ್ರಮಿಸಬೇಕು. ನಿಮ್ಮ ಮನೋವಿಕಾರದಿಂದ ಇತರರಿಗೂ ಕಷ್ಟವಾದೀತು.