Horoscope: ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ, ಹಠದಿಂದ ಏನನ್ನೂ ಸಾಧಿಸಲಾಗದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 30, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ, ಹಠದಿಂದ ಏನನ್ನೂ ಸಾಧಿಸಲಾಗದು
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Dec 30, 2023 | 12:10 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 30) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವಿಷ್ಕಂಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 57 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 12 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:46 ರಿಂದ 11:11 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:59 ರಿಂದ 03:24ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:58 ರಿಂದ 08:22ರ ವರೆಗೆ.

ಮೇಷ ರಾಶಿ: ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಮರೆಯಬಹುದು. ಒಮ್ಮೆಲೆ ಹಲವಾರು ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗುವುದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು. ಸರ್ಕಾರಿ ಉದ್ಯೋಗಿಗಳು ನಿಮಗೆ ತೊಂದರೆಯನ್ನು ಕೊಡಬಹುದು. ಧೈರ್ಯವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ.

ವೃಷಭ ರಾಶಿ: ಇಂದು ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ಮಾತುಕತೆಗಳು ನಡೆಯಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ನಿಮ್ಮ ವಿಶ್ರಾಂತಿಯ ಸಮಯವು ಬದಲಾಗಿ ಆರೊಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವುದು. ಬಹಳ ದಿನಗಳಿಂದ ಕೆಟ್ಟಿದ್ದ ಆರೋಗ್ಯವು ಸರಿಯಾದರೂ ಆರೋಗ್ಯ ಪೂರ್ಣ ಮನಸ್ಸು ಸರಿಯಾಗಲು ಸಮಯು ಬೇಕು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಅನುಮಾನದ ಬುದ್ಧಿಯನ್ನು ಕಡಿಮೆ ಮಾಡಿ, ಯಾವುದಾದರೂ ಸದ್ವಿಚಾರಕ್ಕೆ ಗಮನಕೊಡಿ. ನಿಮ್ಮವರು ನಿಮ್ಮನ್ನು ಬೇರೆ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಪಾತವು ಕೆಲವರಿಗೆ ಇಷ್ಟವಾಗದು. ನೀವು ವಹಿಸಿಕೊಂಡ ನಿರ್ಮಾಣ ಕೆಲಸಗಳು ನಿಧಾನವಾಗುವುದು.

ಮಿಥುನ ರಾಶಿ: ವೃತ್ತಿಯಲ್ಲಿ ಸುಲಭದ ಕಾರ್ಯವನ್ನು ನೀವು ಆರಿಸಿಕೊಳ್ಳುವಿರಿ. ಆತ್ಮವಿಶ್ವಾಸದ ಕೊರೆತೆಯು ಕಾಣಿಸುವುದು. ಮಾತನ್ನು ಅಧಿಕವಾಗಿ ಆಡಿ ಇತರರಿಗೆ ಬೇಸರವನ್ನು ತರಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನ ಮುಖ್ಯವಾಗಿರಲಿ. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿಮಗೆ ಸಮಾಧಾನವು ಪೂರ್ಣವಾಗಿ ಇರದು. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ತಾಯಿಯ ಆರೋಗ್ಯದ ವ್ಯತ್ಯಾಸದಿಂದ ಚಿಕಿತ್ಸೆ ಕೊಡಿಸಿ. ಸ್ನೇಹಿತರು ನಿಮ್ಮ ಬಳಿ ಧನಸಹಾಯವನ್ನು ಕೇಳಬಹುದು. ಪ್ರಖ್ಯಾತ ವ್ಯಕ್ತಿಗಳ ಭೇಟಿಯಾಗಬಹುದು. ದೊಡ್ಡ ಅಪಾಯದಿಂದ ನೀವು ಸುರಕ್ಷಿತರಾಗಿರುವಿರಿ. ಸಂಗಾತಿಯ ಇಂಗಿತವನ್ನು ತಿಳಿಯಲು ಪ್ರಯತ್ನಿಸಿ.

ಕಟಕ ರಾಶಿ: ಹಠದಿಂದ ಏನನ್ನೂ ಸಾಧಿಸಲಾಗದು ಎಂಬುದು ನಿಮಗೇ ಮನವರಿಕೆಯಾಗಲಿದೆ. ವಾಹನವನ್ನು ಪರೀಕ್ಷಿಸಿ ಖರೀದಿಸಿ. ಶತ್ರುಗಳು ನಿಮ್ಮ ಮೇಲೆ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನೀರಿನ ಉತ್ಪನ್ನಗಳನ್ನು ಮಾಡುವವರಿಗೆ ಲಾಭವು ಸಿಗುವ ಸಾಧ್ಯತೆ ಇದೆ. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಆಸಮಯದಲ್ಲಿ ನೀವು ಭೋಜನವನ್ನು ಮಾಡಿದರೆ ಆರೋಗ್ಯವನ್ನು ಕೆಡಸಿಕೊಳ್ಳಬೇಕಾದೀತು. ಉದ್ಯಮದ ಹೊಸ ಕೇಂದ್ರವನ್ನು ನಿರ್ಮಿಸುವ ಸಾಧ್ಯತೆ ಇದೆ.

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?