AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ನಿಮ್ಮ ಕಾರ್ಯವನ್ನು ಮಿತ್ರರ ಮೂಲಕ ಮಾಡಿಕೊಳ್ಳುವಿರಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 03, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಈ ರಾಶಿಯವರು ನಿಮ್ಮ ಕಾರ್ಯವನ್ನು ಮಿತ್ರರ ಮೂಲಕ ಮಾಡಿಕೊಳ್ಳುವಿರಿ
ರಾಶಿ ಭವಿಷ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jan 03, 2024 | 12:15 PM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 03) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶೋಭನ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 14 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:01ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:24 ರಿಂದ 09:48ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:13 ರಿಂದ ಮಧ್ಯಾಹ್ನ 12:37ರ ವರೆಗೆ.

ಮೇಷ ರಾಶಿ : ಸಮಯದ ಹೊಂದಾಣಿಕೆಯನ್ನು ಮಾಡಿಕೊಳ್ಳಲು ನಿಮಗೆ ಕಷ್ಡವಸದೀತು. ಆರೋಗ್ಯ ಬಗ್ಗೆ ಗಮನವು ಕಡಿಮೆಯಾದಂತೆ ತೋರುವುದು. ಆರ್ಥಿಕಮೂಲವನ್ನು ಸರಿಯಾಗಿಸಿಕೊಳ್ಳುವುದು ಉತ್ತಮ. ಸ್ನೇಹಿತರ ಜೊತೆ ಪಾಲುದಾರಿಕೆಯಲ್ಲಿ ಸೇರಿಕೊಳ್ಳುವುದು ಇಷ್ಟವಾದೀತು. ನಿಮ್ಮ ಕಾರ್ಯವನ್ನು ಮಿತ್ರರ ಮೂಲಕ ಮಾಡಿಕೊಳ್ಳುವಿರಿ. ಮಕ್ಕಳಿಗೆ ನಿಮ್ಮಿಂದ ಮಾರ್ಗದರ್ಶನದ ಅವಶ್ಯಕತೆ ಇರಬಹುದು. ಸಮಯಕ್ಕೆ ಆಗುವ ಕೆಲಸವು ಸಮಯದ ಮಿತಿಯನ್ನು ಮೀರಬಹುದು. ಅಪರಿತ ಕರೆಗಳಿಂದ ನಿಮಗೆ ಸಂಕಟವಾಗಬಹುದು. ಇಂದಿನ ಆಲಸ್ಯವು ನಿಮಗೆ ಯಾವ ಕೆಲಸಗಳಿಗೂ ಉತ್ಸಾಹವೇ ಇರದು. ನಿಮ್ಮವರ ಆರೋಗ್ಯವು ಹದ ತಪ್ಪಿಹೋಗಬಹುದು. ಶತ್ರುಗಳ ಭಯವು ಕಾರ್ಯವನ್ನು ನಿಧಾನ ಮಾಡಿಸುವುದು. ನಿಮ್ಮ ಒತ್ತಡಗಳನ್ನು ಮರೆತು ನಿಶ್ಚಿಂತೆಯಿಂದ ದಿನವನ್ನು ಕಳೆಯುವಿರಿ.

ವೃಷಭ ರಾಶಿ : ಆರ್ಥಿಕತೆಯು ಸಮೃದ್ಧವಾಗಿದ್ದರೂ ಸರಿಯಾಗಿ ವಿನಿಯೋಗಿಸುವ ಬಗ್ಗೆ ಅನುಭವ, ತಿಳಿವಳಿಕೆ ಸಾಲದು. ಗೌರವವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ನಿರಂತರ ಶ್ರಮವಿರುವುದು. ಜೀವನ ಸಂಗಾತಿಯ ಜೊತೆ ನೀವು ಸಂತೋಷದ ಸಮಯವನ್ನು ಕಳೆಯುವಿರಿ. ಕಳೆದುಕೊಂಡ ಮನೆಯ ಸದಸ್ಯರ ಬಗ್ಗೆ ನೆನಪು ಬರಬಹುದು. ಹೊಸ ಬಗೆಯಲ್ಲಿ ಯೋಚಿಸುವ ಸ್ವಭಾವವನ್ನು ಬೆಳೆಸಿಕೊಳ್ಳುವಿರಿ. ಪುಣ್ಯಸ್ಥಳಗಳ ಭೇಟಿಯಿಂದ ಖುಷಿಯಾಗುವುದು. ಸಾಹಿತ್ಯ ಆಸಕ್ತರಿಗೆ ಉತ್ತಮ ಅವಕಾಶಗಳು ಸಿಗುವುದು. ಸ್ವಂತ ವಾಹನದ ದುರಸ್ತಿಯಿಂದ ಧನ ನಷ್ಟ. ನಿಮ್ಮ ಸಲಹೆಯನ್ನು ಕೇಳದಿರುವುದು ಇಷ್ಟವಾಗದು. ಸುತ್ತಾಡದಿಂದ ಆಯಾಸವಾಗುವಚುದು. ನೌಕರರು ನಿಮ್ಮ ಮೇಲೆ‌ ಸಿಟ್ಟಾಗಬಹುದು. ಸೌಕರ್ಯಕ್ಕೆ ತಕ್ಕ ಹಾಗೆ ದಿನಚರಿಯನ್ನು ಬದಲಿಸಿ. ಪ್ರಭಾವೀ ವ್ಯಕ್ತಿಗಳಿಂದ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ.

ಮಿಥುನ ರಾಶಿ : ನಿಮ್ಮ ಇಂದಿನ ಕಾರ್ಯಗಳು ಮಿಂಚಿನ ವೇಗದ ಮುಕ್ತಾಯವಾಗಿ ಆರಾಮಾಗಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಕೆಲವರ ಬಗ್ಗೆ ಹರಟುವ ಮನಸ್ಸಾದೀತು. ಜವಾಬ್ದಾರಿಯ ಕೆಲಸವನ್ನು ಜಾಗರೂಕತೆಯಿಂದ ಮಾಡಿ. ದಾಂಪತ್ಯದ ಕಲಹವು ಮುಕ್ತಾಯವಾಗುವುದು. ಹೊಸ ಕೆಲಸಗಳನ್ನು ನಿರ್ವಹಿಸಲು ಧೈರ್ಯ ಸಾಲದು. ವಿದೇಶದ ವ್ಯವಹಾರವನ್ನು ಯಾರದೋ ಮೂಲಕ ನಿಮ್ಮದಾಗಿಸಿಕೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮ‌ಫಲಿತಾಂಶವನ್ನು ಪಡೆಯುವರು. ಆಕಸ್ಮಿಕ ಧನಲಾಭದಿಂದ ನಿಮಗೆ ಖುಷಿಯಾಗುವುದು. ಹಿರಿಯರ ಬಗ್ಗೆ ನಿಮಗೆ ಪೂಜ್ಯ ಭಾವವು ಬರಬಹುದು. ಸರ್ಕಾರದ ಕೆಲಸದಲ್ಲಿ ಇಂದು ವಿಳಂಬವಾಗಲಿದೆ.‌ನಿಮ್ಮವರ ಧನ ಸಹಾಯವನ್ನು ಕೇಳಲು ಮುಜುಗರವಾದೀತು. ಅನ್ಯ ಚಿಂತೆಯಿಂದ ನಿದ್ರೆಗೆ ಭಂಗ. ಅನವಶ್ಯಕ ಮಾತುಗಳಿಂದ ವಿವಾದವಾಗುವುದು. ಆಸ್ತಿಯನ್ನು ಕೆಲವು ಶರತ್ತಿನ ಜೊತೆ ಹೊಂದಾಣಿಕೆ ಮಾಡಿಕೊಂಡು ಹಂಚಿಕೊಳ್ಳಲಿದ್ದೀರಿ.

ಕಟಕ ರಾಶಿ : ನೀವು ದೃಢವಾಗಿ ಮಾತನಾಡಿದರೆ ಮಾತ್ರ ನಿಮ್ಮ ಮೇಲೆ ನಂಬಿಕೆ ಸಾಧ್ಯ. ಸ್ನೇಹಿತರನ್ನು ಕುಟುಂಬದ ಸದ್ಯರಂತೆ ಭಾವಿಸುವಿರಿ. ನೀವು ಸರಿಯಾದ ಗುರಿಯನ್ನು ಇಟ್ಟುಕೊಂಡು ಮುಂದುವರಿದರೆ ಗುರಿಯನ್ನು ಸಾಧಿಸಲು ಸಾಧ್ಯವಾಗುವುದು. ಮನಶ್ಚಾಂಚಲ್ಯವನ್ನು ದೂರಮಾಡಿಕೊಳ್ಳುವುದು ಅನಿವಾರ್ಯವಾಗುವುದು. ನೀವಾಡುವ ಸುಳ್ಳು ಎಲ್ಲರಿಗೂ ಗೊತ್ತಾದೀತು. ನಿದ್ರೆಯಿಂದ ಆಲಸ್ಯವು ಹೆಚ್ಚಾಗುವುದು. ಹಣಕಾಸಿನ ವ್ಯವಹಾರದಲ್ಲಿ ಮಿತ್ರರ ಜೊತೆ ಕಲಹವಾಗಬಹುದು. ಸಂಗಾತಿಯಿಂದ ಬಲವಂತವಾಗಿ ಉಡುಗೊರೆ ಪಡೆಯುವಿರಿ. ಸ್ತ್ರೀಯರಿಗೆ ಇಂದು ಸಂತೋಷದ ದಿನ. ಉದರ ಸಂಬಂಧವಾದ ನೋವನ್ನು ಕಡಿಮೆಮಾಡಿಕೊಳ್ಳಲಾಗದು. ಎಲ್ಲರೆದುರೂ ಸಿಟ್ಟಿನಿಂದ ಕೂಗಾಡುವುದು ಬೇಡ.‌ ಪೋಷಕರು ವಿದ್ಯಾಭ್ಯಾಸದ ಪ್ರಗತಿಯನ್ನು ಪರಿಶೀಲಿಸುವುದು ಅವಶ್ಯ. ನೆರಮನೆಯರ ಜೊತೆ ಮಾತಿಗೆ ಮಾತು ಬೆಳೆದು ಕಲಹವಾಗಬಹುದು.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ