Horoscope: ಉಪಕಾರ ಮಾಡಲು ಹಿಂಜರಿಯುವಿರಿ, ವೃತ್ತಿಯು ಬೇಸರ ತರಿಸಬಹುದು
ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 04, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 04) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಅತಿಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:02 ರಿಂದ 03:26ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:59 ರಿಂದ 08:24ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:49 ರಿಂದ 11:13ರ ವರೆಗೆ.
ಮೇಷ ರಾಶಿ: ನಿಮ್ಮ ಮನಸ್ಸಿನ ಮಾತನ್ನು ಕೇಳದೇ ಬುದ್ಧಿಯಿಂದ ಸರಿಯಾದ ತೀರ್ಮಾನವನ್ನು ಮಾಡಿ. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ದೂರಪ್ರಯಾಣವನ್ನು ಇಂದು ಇಷ್ಟಪಡುವಿರಿ. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಕಾರಾತ್ಮಕತೆಯನ್ನು ಬುದ್ಧಿಪೂರ್ವಕವಾಗಿ ಹಿಮ್ಮೆಟ್ಟಿಸಿ. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ನಿಮ್ಮ ತಾಳ್ಮೆಯನ್ನು ಪರೀಕ್ಷಿಸಲು ಸಂದರ್ಭವು ಬರಬಹುದು.
ವೃಷಭ ರಾಶಿ: ಅದೃಷ್ಟವನ್ನು ನಂಬಿ ಸುಮ್ಮನೆ ಕುಳಿತರೆ ಪ್ರಯೋಜನವಾಗದು. ಕಾರ್ಯೋನ್ಮುಖರಾಗುವ ಅವಶ್ಯಕತೆ ಬಹಳ ಇರಲಿದೆ. ನಿರುದ್ಯೋಗಿಗಳು ಮಾನಸಿಕ ಖಿನ್ನತೆಯನ್ನು ಅನುಭವಿಸಬೇಕಾಗಬಹುದು. ಜೀವನೋತ್ಸಾಹಕ್ಕೆ ನಿಮ್ಮದಾದ ಚಿಂತನೆಗಳು ಇರಲಿ. ಸತ್ಪಾತ್ರರಿಗೆ ಸುವಸ್ತುವನ್ನು ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆ ಬರುವುದು. ಇಲ್ಲದೆ ಸಮಸ್ಯೆಯನ್ನು ಸೃಷ್ಟಿಸಿಕೊಳ್ಳಲಿದ್ದೀರಿ. ಭೂಮಿಯ ವ್ಯವಹಾರದಲ್ಲಿ ನೀವು ಜಯಶಾಲಿಯಾಗುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ. ಯಾರದೋ ಮಾತಿನಿಂದ ಹೂಡಿಕೆ ಮಾಡುವಿರಿ. ಹೃದ್ಯವಾದ ವಿಚಾರಗಳ ಕಡೆ ಗಮನವಿರಲಿ.
ಮಿಥುನ ರಾಶಿ: ಮಕ್ಕಳ ವಿವಾಹಕ್ಕೆ ಕುಟುಂಬದ ಹಿನ್ನೆಲೆಯಲ್ಲಿ ತಿಳಿದುಕೊಳ್ಳಲು ಆಸಕ್ತಿಯು ಇರುವುದು. ಮಕ್ಕಳಿಂದ ನಿಮಗೆ ಆಗಬೇಕಾದ ಸಹಾಯವು ಆಗಬಹುದು. ನೌಕರರ ವಿಚಾರದಲ್ಲಿ ಗಟ್ಟಿಯಾದ ನಿಲುವು ಅಗತ್ಯ. ಸಂಗಾತಿಯನ್ನು ವಿಧವಾಗಿ ಪರೀಕ್ಷಿಸುವಿರಿ. ಸುಮ್ಮನೇ ದೇಹಾಯಾಸವನ್ನು ಮಾಡಿಕೊಳ್ಳುವಿರಿ. ನೆರೆಯವರ ಜೊತೆ ಕಲಹವು ಬೇಡ. ನಂಬಿಕೆಯನ್ನು ಕಳೆದುಕೊಳ್ಳಬೇಕಾಗುವುದು. ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಯಾವುದೇ ಪೂರ್ವಾಪರ ವಿಚಾರವಿಲ್ಲದೇ ಪೂರೈಸಿಕೊಳ್ಳುವಿರಿ. ಕುಟುಂಬ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೇ ಅಕ್ಕರೆ ಇರುವುದು. ಹೇಗಾದರೂ ಮಾಡಿ ಬೆಳೆಯಬೇಕು ಎನ್ನುವ ಬಯಕೆ ಅತಿಯಾಗಿರುವುದು. ಅಸಹಾಯಕತೆಯು ಸಿಟ್ಟಾಗಿ ಪರಿಣಮಿಸಬಹುದು. ಮಕ್ಕಳ ವಿದ್ಯಾಭ್ಯಾಸದಿಂದ ನಿಮಗೆ ಸಂತೃಪ್ತಿ ಸಿಗುವುದು.
ಕಟಕ ರಾಶಿ: ಇಂದು ನಿಮ್ಮ ಸಮಯವನ್ನಷ್ಟೇ ಅಲ್ಲದೇ ಇತರರ ಸಮಯವನ್ನೂ ಹಾಳುಮಾಡುವಿರಿ. ನಿಶ್ಚಿತ ಕೆಲಸದಲ್ಲಿ ಆಲಸ್ಯದಿಂದ ಇದ್ದು ಎಲ್ಲರಿಂದ ಹೇಳಿಸಿಕೊಳ್ಳಬೇಕಾಗುವುದು. ಯಾರಿಗಾದರೂ ನಿಜವನ್ನು ತಿಳಿಸಬೇಕಾದರೆ ಮನಸ್ಸಿಗೆ ನೋವಾಗದಂತೆ ತಿಳಿಸಿ. ಉಪಕಾರದ ವಿಚಾರದಲ್ಲಿ ನೀವು ಹಿಂದಿರುವಿರಿ. ವೃತ್ತಿಯು ಬೇಸರ ತರಿಸಬಹುದು. ಇಂದು ಸರ್ಕಾರಿ ನೌಕರರು ಅಧಿಕ ಕಾರ್ಯಗಳ ಕಡೆ ಗಮನ ಹರಿಸಬೇಕಾದೀತು. ಎಂದೋ ಆದ ಘಟನೆಯನ್ನು ಮತ್ತೆ ನೆನಪಿಸಿಕೊಂಡು ಮನಸ್ತಾಪವನ್ನು ತಂದುಕೊಳ್ಳುವಿರಿ. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ ಮಾಡಿ. ಯಾರ ಮಾತನ್ನೂ ನಂಬದ ಸ್ಥಿತಿಯನ್ನು ನೀವೇ ತಂದುಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯ ಸಾಲದು.