Horoscope: ಬೇಡದ ವಿಚಾರಗಳನ್ನು ಅತಿಯಾಗಿ ಆಲೋಚಿಸಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 07, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಬೇಡದ ವಿಚಾರಗಳನ್ನು ಅತಿಯಾಗಿ ಆಲೋಚಿಸಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ
ರಾಶಿ ಭವಿಷ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jan 07, 2024 | 12:15 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 07) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಶೂಲ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 16 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:52 ರಿಂದ 06:17ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:39 ರಿಂದ 02:03ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:28 ರಿಂದ 04:52ರ ವರೆಗೆ.

ಮೇಷ ರಾಶಿ : ಮನಸ್ಸನ್ನು ನಿಯಂತ್ರಿಸುವ ಕಡೆಗೆ ಗಮನವಿರಲಿ.‌ ಧಾರ್ಮಿಕ ಕರ್ಮವು ನಿಮ್ಮ ಇಷ್ಟಾರ್ಥದ ಸಿದ್ಧಿಗಾಗಿ ಮಾಡುವಿರಿ. ದೇಹಕ್ಕೆ ವಿಶ್ರಾಂತಿಯ ಅವಶ್ಯಕತೆ ಇದ್ದರೂ ಸಮಯವು ಮಾತ್ರ ಸಿಗದೇಹೋದೀತು. ಆಪ್ತರನ್ನು ಅಸೂಯೆಯಿಂದ ಕಾಣುವುದು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ. ಅನಿರೀಕ್ಷಿತ ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ. ಪಾಲುದಾರಿಕೆಯಲ್ಲಿ ನಿಮಗೆ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ಎಲ್ಲವನ್ನೂ ತಿಳಿದು ಸುಮ್ಮನಿರುವುದೇ ಲೇಸು ಎಂದೆನಿಸುವುದು.

ವೃಷಭ ರಾಶಿ : ಒಂದರ‌ಮೇಲೆ‌ ಒಂದರಂತೆ ಆನಾರೋಗ್ಯವು ನಿಮ್ಮನ್ನು ಪೀಡಿಸಬಹುದು‌. ಸಂಗಾತಿಯ ಮಾತಿಗೆ ವಿರೋಧವನ್ನು ವ್ಯಕ್ತಪಡಿಸುವಿರಿ. ಆದಾಯಕ್ಕೆ ಅನ್ಯ ಮಾರ್ಗಗಳನ್ನು ಹುಡುಕಬೇಕು ಎಂದೆನಿಸುವುದು. ಇನ್ನೊಬ್ಬರ ಮಾತುಗಳನ್ನು ನೀವು ಸಹನೆಯಿಂದ ಆಲಿಸುವಿರಿ. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ.‌ ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಆರೋಗ್ಯದ ಬಗ್ಗೆ ಆತಂಕ ಬೇಡ. ವಿನೀತಭಾವವು ನಿಮ್ಮನ್ನು ಇಷ್ಟಪಡುವಂತೆ ಮಾಡಬಹುದು. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ. ಪಶ್ಚಾತ್ತಾಪವು ನಿಮ್ಮ ನೋವನ್ನು ಪರಿಹರಿಸೀತು. ನಿಮ್ಮ‌ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು.‌ ಬದುಕು‌ ಬಂಧನದಂತೆ ಅನ್ನಿಸಬಹುದು. ಮನಸ್ಸೂ ಸಂಕುಚಿತವಾಗಬಹುದು.

ಮಿಥುನ ರಾಶಿ : ವಿವಾಹದ ನಿಶ್ಚಯಕ್ಕೆ ಇಂದು ನೀವು ತೆರಳುವಿರಿ. ಸಾಲದ ಮರುಪಾವತಿಗೆ ಸ್ನೇಹಿತರ‌ ಸಹಕಾರವನ್ನು ಪಡೆಯುವಿರಿ. ದೂರ ಪ್ರಯಾಣ ಹೊರಟ ನಿಮಗೆ ಅಡೆತಡೆಗಳು ಬರಬಹುದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ‌ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಸ್ತ್ರೀಯರಲ್ಲಿ ಸಹಾಯವನ್ನು ಕೇಳಲು ಹಿಂಜರಿಯುವಿರಿ. ನಿಮಗೆ ಇಷ್ಟವಾದದನ್ನು ಪಡೆಯುವ ಕಡೆಗೆ ಗಮನ ಇರಲಿ. ನೀವು ವೃತ್ತಿಯನ್ನು ಮಾಡುತ್ತಲೇ ಉನ್ನತ ಪದವಿಯನ್ನು ಪಡೆಯುವಿರಿ. ಯಶಸ್ಸು ನಿಮ್ಮ ಹಿಂದೆ ತಾನಾಗಿಯೇ ಬರುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಬೇಡ ವಿಚಾರಗಳನ್ನು ಅತಿಯಾಗಿ ಆಲೋಚಿಸಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ.

ಕಟಕ ರಾಶಿ : ಸಂಸ್ಥೆಯ ಮುಖ್ಯಸ್ಥರಾಗಿ ನಿಮ್ಮನ್ನು ಆಯ್ಕೆ ಮಾಡಬಹುದು. ಆಕಸ್ಮಿಕ ಸುದ್ದಿಯಿಂದ ವಿಚಲಿತರಾಗುವಿರಿ. ಹೂಡಿಕೆಯ ಬಗ್ಗೆ ನಿಮಗೆ ಸರಿಯಾದ ಮಾಹಿತಿಯ ಕೊರತೆ ಇರುವುದು.‌ ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ನಿಮ್ಮ ಸಂತೋಷವನ್ನು ವ್ಯಕ್ತಪಡಿಸುವ ವಿಧಾನವು ವಿಭಿನ್ನವಾಗಿರಲಿದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ನಿಮ್ಮ ಮನಸ್ಸಿನಲ್ಲಿ ತಳಮಳವಾಗುವುದು. ಅಧಿಕಾರಿಗಳಾಗಿದ್ದರೆ ನೀವೇ ಇಂದು ಆಗಬೇಕಾದ ಕಾರ್ಯಗಳ ಪರಿಶೀಲನೆ ಮಾಡುವಿರಿ. ಉತ್ತಮ ಸ್ನೇಹವನ್ನು ನೀವು ಕಳೆದುಕೊಳ್ಳುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು. ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ಮಿತವಾದ ಮಾತಿನಿಂದ ನಿಮಗೇ ಒಳ್ಳೆಯದು.

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!