Horoscope: ದುಂದುವೆಚ್ಚದ ಕಡೆ ಗಮನವಿರಲಿ, ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 08, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ದುಂದುವೆಚ್ಚದ ಕಡೆ ಗಮನವಿರಲಿ, ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು
ರಾಶಿ ಭವಿಷ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 08, 2024 | 12:10 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 08) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07-00 ಗಂಟೆಗೆ, ಸೂರ್ಯಾಸ್ತ ಸಂಜೆ 06-17 ಕ್ಕೆ, ರಾಹು ಕಾಲ ಬೆಳಗ್ಗೆ 08:26 ರಿಂದ 09:50ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:15 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:28ರ ವರೆಗೆ.

ಮೇಷ ರಾಶಿ: ಆರೋಗ್ಯದಲ್ಲಿ ಸುಧಾರಣೆ ಕಂಡರೂ ಮಿತಿಯಲ್ಲಿ ಎಲ್ಲವೂ ಇರಲಿ. ದೇಹಾಯಾಸದ ಕಡೆಗೆ ಅಧಿಕ ಗಮನ ಅಗತ್ಯ.‌ ಹೋರಾಟದ ಮನೋಭಾವವು ಇಂದು ಎದ್ದು ತೋರುವುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವುದು ಅವಶ್ಯಕ. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಬಂಧುಗಳ ಅನಿರೀಕ್ಷಿತ ಭೇಟಿಯಾಗಬಹುದು.

ವೃಷಭ ರಾಶಿ: ಇಂದು ಅನಿವಾರ್ಯತೆಯನ್ನು ಅವಶ್ಯಕತೆಯನ್ನಾಗಿಸಿಕೊಳ್ಳುವಿರಿ. ನಿಮ್ಮವರ ಮೇಲೆ ಕಾಳಜಿಯು ಅಧಿಕಾದೀತು. ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ನಿರೀಕ್ಷಿತ ಲಾಭವು ಆಗದಿದ್ದರೂ ನೆಮ್ಮದಿಗೆ ಕೊರತೆ ಕಾಣದು. ಯಾರನ್ನೋ ಹಿಂದಿಕ್ಕಿ ಮುಂಬರುವ ಯೋಚನೆ ಸಾಧುವಾಗದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು. ಅನಪೇಕ್ಷಿತ ವಿಚಾರದಲ್ಲಿ ಮೂಗುತೂರಿಸುವುದು ಬೇಡ.‌ ನಿಮ್ಮ‌ ಮಾತನಿಂದ ಇನ್ನೊಬ್ಬರನ್ನು ಘಾಸಿ ಮಾಡುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ.

ಮಿಥುನ ರಾಶಿ: ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಏಕಾಂಗಿಯಾಗಬಹುದು.‌ ಕ್ರೀಡೆಯ ವಿಚಾರದಲ್ಲಿ ಸಹೋದರರ ನಡುವೆ ಮನಸ್ತಾಪವು ಉಂಟಾಗಬಹುದು. ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ವೃತ್ತಿಯನ್ನು ಬಿಟ್ಟು ಹೆಚ್ಚಿನ ಆದಾಯದ ಕಡೆಗೆ ಗಮನಹರಿಸುವಿರಿ. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಮರಣಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಸಂಗಾತಿಗೆ ಸಮಯವನ್ನು ಕೊಡುತ್ತೇನೆಂದರೂ ಆಗದು. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ.

ಕಟಕ ರಾಶಿ: ನಿಮ್ಮ ಮೇಲೆ ನಿಮಗೆ ನಂಬಿಕೆಯು ಕಡಿಮೆ ಆದಂತೆ ತೋರುವುದು. ನಿಮ್ಮ ತಾಯಿ ಆರೋಗ್ಯಕ್ಕಾಗಿ ನೀವು ಹಣವನ್ನು ಖರ್ಚು ಮಾಡಬೇಕಾಗಬಹುದು. ದುಂದುವೆಚ್ಚದ ಕಡೆ ಗಮನವಿರಲಿ. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭೌತಿಕ ವಸ್ತುಗಳು ನಿಮಗೆ ಅಲ್ಪಸಂತೋಷವನ್ನು ಕೊಟ್ಟೀತು. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಬೇಡವೆಂದು ಯಾವುದನ್ನಾದರೂ ಕೊಡುವ ಮೊದಲು ಯೋಚಿಸಿ.