AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮ್ಮ ತಪ್ಪಿನಿಂದ ಮಕ್ಕಳಿಗೆ ತೊಂದರೆಯಾದೀತು, ವಿವಾಹದ ಚಿಂತೆ ಕಾಡಬಹುದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 09, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ನಿಮ್ಮ ತಪ್ಪಿನಿಂದ ಮಕ್ಕಳಿಗೆ ತೊಂದರೆಯಾದೀತು, ವಿವಾಹದ ಚಿಂತೆ ಕಾಡಬಹುದು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 09, 2024 | 12:10 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 09) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ವೃದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:29 ರಿಂದ 04:53 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:50 ರಿಂದ 11:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:40 ರಿಂದ 02:04ರ ವರೆಗೆ.

ಮೇಷ ರಾಶಿ: ಅಪರೂಪದ ಬಂಧುಗಳು ನಿಮ್ಮನ್ನು ಭೇಟಿಯಾಗಲು ಬರಬಹುದು.‌ ಅತಿಥಿಗಳಿಗೆ ಸತ್ಕಾರವನ್ನು ಮಾಡಿ ಸಂತೋಷಪಡಿಸುವಿರಿ.‌ ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ.

ವೃಷಭ ರಾಶಿ: ಸಾಲವನ್ನು ಪಡೆದು ಅವರ ಜೊತೆ ವಾಗ್ವಾದವನ್ನು ಮಾಡುವುದು ಬೇಡ.‌ ಸುಂದರವಾದ ಸ್ಥಳಕ್ಕೆ ಹೋಗಬೇಕು ಎನಿಸುವುದು. ಅನಾರೋಗ್ಯವನ್ನು ನಿರ್ಲಕ್ಷಿಸುವುದು ಬೇಡ. ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ನೀವು ಹಾಳುಮಾಡಿಕೊಳ್ಳುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸುಮ್ಮನೆ ಕಾಲಹರಣವಾಗುವುದು ನಿಮಗೆ ಗೊತ್ತಾಗದು.

ಮಿಥುನ ರಾಶಿ: ಮಕ್ಕಳ ವಿವಾಹದ ಚಿಂತೆ ಕಾಡಬಹುದು. ನಿಮ್ಮ ತಪ್ಪಿನಿಂದ ಮಕ್ಕಳಿಗೆ ತೊಂದರೆಯಾದೀತು. ನಿಮ್ಮ ಬಗ್ಗೆ ಸ್ಪಷ್ಟತೆ ಇರಲಿ. ಉಸಿರಿಗೆ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ವಾಹನ ಸವಾರರು ಜಾಗರೂಕತೆ ಅವಶ್ಯಕ.

ಕಟಕ ರಾಶಿ: ಆರೋಗ್ಯದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳುವುದು ಸಾಹಸವಾದೀತು. ಭೂಮಿಯನ್ನು ಖರೀದಿಸುವ ಬಗ್ಗೆ ಸಮಾಲೋಚನೆ ಮಾಡುವಿರಿ. ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗ ಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಸಂಗಾತಿಯಿಂದ ಉಡುಗೊರೆಯು ಅನಿರೀಕ್ಷಿತವಾಗಿ ಸಿಗಬಹುದು.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ