Horoscope: ದಿನಭವಿಷ್ಯ, ಈ ರಾಶಿಯವರ ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 10, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ದಿನಭವಿಷ್ಯ, ಈ ರಾಶಿಯವರ ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌
ಇಂದಿನ ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Jan 10, 2024 | 12:15 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 10) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಧ್ರುವ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:40 ರಿಂದ 02:05ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:26 ರಿಂದ 09:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:15 ರಿಂದ 12:40ರ ವರೆಗೆ.

ಮೇಷ ರಾಶಿ: ಯಾರ ಮೇಲಾದರೂ ದ್ವೇಷವನ್ನು ಸಾಧಿಸುವ ಮನಸ್ಸಾದೀತು. ಸಂಬಂಧಗಳನ್ನು ಸರಿ ಮಾಡಿಕೊಳ್ಳುವುದು ಮುಖ್ಯ ಕೆಲಸವಾಗಬಹುದು. ವಿದ್ಯಾರ್ಥಿಗಳ ಗುಣಮಟ್ಟವು ಕ್ಷೀಣಿಸುವುದು ನಿಮ್ಮ‌ ಅರಿವಿಗೆ ಬರಲಿದೆ. ಸಾಮಾಜಿಕ ಗೌರವವನ್ನು ಪಡೆಯುವುದರಿಂದ ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ದೂರ ಪ್ರಯಾಣಕ್ಕೆ ವೈದ್ಯರು ನಿರ್ಬಂಧ ಹಾಕಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕಾಗುವುದು.

ವೃಷಭ ರಾಶಿ: ಪುಣ್ಯಕ್ಷೇತ್ರಕ್ಕೆ ಹೋಗುವ ಉತ್ತಮ ಅವಕಾಶವು ನಿಮಗೆ ಅನಿವಾರ್ಯವಾಗಿ ಒದಗಬಹುದು. ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ನಿಮ್ಮ ಕುಟುಂಬ ಸದಸ್ಯರಿಗೆ ನೀವು ವಿಶ್ವಾಸದ್ರೋಹಿ ಆಗುವ ಸಾಧ್ಯತೆಯಿದೆ. ಹಳೆಯ ಸ್ನೇಹಿತನನ್ನು ಯಾವುದಾದರೂ ರೀತಿಯಲ್ಲಿ ಭೇಟಿಯಾಗುವಿರಿ. ಕುಟುಂಬ ವ್ಯವಸ್ಥೆ ಸರಿಯಾಗಲು ಕೆಲವನ್ನು ಬಿಟ್ಟುಕೊಡಬೇಕಾದೀತು. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಸ್ವಾಭಿಮಾನವು ನಿಮ್ಮ ಏಳಿಗೆಗೆ ತಡೆಯನ್ನು ಉಂಟು ಮಾಡಬಹುದು.

ಮಿಥುನ ರಾಶಿ: ಜೀವನದ ದೃಷ್ಟಿಯನ್ನು ನೀವು ಬದಲಿಸಿಕೊಳ್ಳುವಿರಿ. ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಅನಿವಾರ್ಯವಾದೀತು. ಹಲವು ಕಾರ್ಯಗಳನ್ನು ಮಾಡುವ ಸನ್ನಿವೇಶವು ಬರುವ ಕಾರಣ ಸಮಯವನ್ನು ಸರಿಯಾಗಿ ಮಾಡಿಕೊಳ್ಳಿ. ಇಂದು ಅಮೂಲ್ಯವಾದ ವಸ್ತುವು ನಿಮ್ಮ ಪಾಲಾಗಬಹುದು. ಆದರೆ ಅನಗತ್ಯ ವೆಚ್ಚಗಳು ಸಹ ಬರಲಿವೆ. ನಿಮ್ಮ ವ್ಯವಹಾರದಲ್ಲಿಯೂ ಸಹ ನೀವು ಭಾಗವಹಿಸುವಿರಿ ಮತ್ತು ಕೆಲಸ ಪೂರ್ಣಗೊಳ್ಳುತ್ತದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಈ ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಕಲಾಕಾರರಿಗೆ ಉತ್ತಮ ಲಾಭವು ಆಗಬಹುದು. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ.

ಕಟಕ ರಾಶಿ: ಅಹಂಕಾರದಿಂದ ವರ್ತಿಸುವುದು ಬೇಡ. ಅನಪೇಕ್ಷಿತ ವಿಚಾರದಲ್ಲಿ ಚರ್ಚಿಸುವುದು ಬೇಡ. ವೃತ್ತಿಯನ್ನು ಕರ್ತವ್ಯದಂತೆ ಮಾಡುವಿರಿ. ಯಾರನ್ನೋ ನೋಯಿಸಿ ಖುಷಿಯಾಗಿರುವುದು. ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಸೂಕ್ತ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹೊಟ್ಟೆಯ ಸ್ವಾಸ್ಥ್ಯವು ಕೆಡುವ ಸಾಧ್ಯತೆಯಿದೆ. ಜಾಗರೂಕರಾಗಿರಿ ಮತ್ತು ಆಹಾರದ ಮೇಲೆ ಸಂಯಮವಿರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಇನ್ನೊಬ್ಬರ ಮಾತಿನಿಂದ ಸಿಟ್ಟಾಗಬಹುದು. ಕೆಲವು ವಿಷಯಕ್ಕೆ ಕುಟುಂಬದಿಂದ ವಿರೋಧವಿರುವುದು. ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ