Horoscope: ಸಂಗಾತಿಯ ಮೇಲಿನ ಮುನಿಸನ್ನು ಇನ್ನೊಬ್ಬರ ಮೇಲೆ ತೋರಿಸುವಿರಿ
ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 11, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 11) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: : ಗುರು, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ವ್ಯಾಘಾತ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 14:05 ರಿಂದ 15:30ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:02 ರಿಂದ 08:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:51 ರಿಂದ 11:16ರ ವರೆಗೆ.
ಮೇಷ ರಾಶಿ: ಎಷ್ಟೋ ವರ್ಷದ ಸಂಬಂಧವು ಮಾಸಿಹೋಗಲಿದ್ದು ಅದನ್ನು ಬಿಡಿಸಿಕೊಳ್ಳುವುದು ಆಗದು. ದೀರ್ಘಕಾಲದ ಅನುಮಾನಕ್ಕೆ ಇಂದು ತೆರೆ ಬೀಳಬಹುದು. ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮಗೆ ನೀವೇ ನಿರ್ಬಂಧಗಳನ್ನು ಹಾಕಿಕೊಳ್ಳುವಿರಿ.
ವೃಷಭ ರಾಶಿ: ಸರಳವಾದ ವಿಚಾರವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಹೊಸತನ್ನು ಕಲಿಯುವ ಬಗ್ಗೆ ಆಸಕ್ತಿಯು ಹೋಗುವುದು. ಆಲಸ್ಯವನ್ನು ಬಿಡುವುದು ಇಷ್ಟವಾಗದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸುವಿರಿ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ.
ಮಿಥುನ ರಾಶಿ: ದುಬಾರಿಯಾದ ಹೊಸ ವಸ್ತುಗಳನ್ನು ಖರೀದಿಸುವುದು ಇಷ್ಟವಾದೀತು. ಅನಿರೀಕ್ಷಿತವಾಗಿ ಸಂಬಂಧವೊಂದು ಬೆಳೆಯಬಹುದು. ವೈವಾಹಿಕ ಮಾತುಕತೆಗೆ ನಿಮ್ಮ ಕಡೆಯಿಂದ ಸ್ಪಂದನೆ ಅಗತ್ಯವಾಗಿರುವುದು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ. ಉತ್ತಮ ಆಹಾರವನ್ನು ಪಡೆಯಲು ಯತ್ನಿಸಿ. ಅಪರಿಚಿತರಿಂದ ಎಲ್ಲವನ್ನೂ ತಿಳಿಯುವವರೆಗೂ ಮುಂದುವರಿಯುವುದು ಬೇಡ.
ಕಟಕ ರಾಶಿ: ಸ್ವೇಚ್ಛೆಯಿಂದ ವರ್ತಿಸುವುದನ್ನು ಯಾರಾದರೂ ತಡೆಯಬಹುದು. ಕಳಂಕವನ್ನು ತೊಡೆದುಕೊಳ್ಳುವುದು ಕಷ್ಟವಾದೀತು. ಸಂಗಾತಿಯ ಮೇಲಿನ ಮುನಿಸನ್ನು ಇನ್ನೊಬ್ಬರ ಮೇಲೆ ತೋರಿಸುವಿರಿ. ಅಪ್ರಾಮಾಣಿಕತೆಯು ನಿಮಗೆ ಇಷ್ಟವಾಗದೇ ಹೋಗಬಹುದು. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಲಕುವರು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಸಾಲ ಮಾಡುವ ಬಗ್ಗೆ ಆಪ್ತರನ್ನು ಕೇಳುವಿರಿ.