AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರ, ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 12, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರ, ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 12, 2024 | 12:02 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 12) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಶ್ರವಣಾ, ಯೋಗ: ಹರ್ಷಣ, ಕರಣ: ಬವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:16 ರಿಂದ 12:41ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:30 ರಿಂದ 04:55ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:27 ರಿಂದ 09:51ರ ವರೆಗೆ.

ಮೇಷ ರಾಶಿ: ಇಂದು ನಿದ್ರಾಭಂಗದ ಬಹಳ‌ ಕಷ್ಟಪಡಬೇಕಾದೀತು. ಗುರುಸೇವೆಯನ್ನು ಮಾಡುವ ಅವಕಾಶದಿಂದ ವಂಚಿತರಾಗುವುದು ಬೇಡ. ನಿಮ್ಮ ಪ್ರಾಮಾಣಿಕತೆಗೆ ಪ್ರಶಂಸೆಯು ಸಿಗುವುದು. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ಅನಿರೀಕ್ಷಿತ ಘಟನೆಯಿಂದ‌ ಸ್ತಬ್ಧವಾಗುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಸಹೋದರನ ಪ್ರೀತಿಯಿಂದ ಸಂತೋಷಪಡುವಿರಿ.

ವೃಷಭ ರಾಶಿ: ಮಾತನ್ನು ಉಳಿಸಿಕೊಳ್ಳಲು ಸೋಲುಬಹುದು. ಚೋರ ಭಯವು ನೀವು ಹೊರಗೆ ಹೋದಾಗ‌ಕಾಡಬಹುದು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲು ಸಾಧ್ಯವಾಗದೇ ಹೋಗಬಹುದು. ಪತ್ನಿಯ ಬಗ್ಗೆ ದಾಮದೃಷ್ಟಿಯು ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ಹೂಡಿಕೆಯಿಂದ‌ ಲಾಭವು ಸಿಗಲಿದೆ.

ಮಿಥುನ ರಾಶಿ: ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ ಹೆಚ್ಚಿದ್ದು, ಬೇಕಾದ ಕಾರ್ಯವನ್ನು ಮಾಡುವಿರಿ. ಅತಿಯಾದ ಮಾತು ನಿಮಗೆ ತೊಂದರೆಯನ್ನು ಕೊಟ್ಟೀತು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಕಲಾವಿದರು ಅವಕಾಶದ ನಿರೀಕ್ಷೆಯಲ್ಲಿ ಇರುವರು. ಹಳೆಯ ಪ್ರೇಮಿಯ ಭೇಟಿಯಾಗಿ ಮುಜುಗರಕ್ಕೆ ಸಿಕ್ಕಿಕೊಳ್ಳಬಹುದು.

ಕಟಕ ರಾಶಿ: ವಿದ್ಯಾಭ್ಯಾಸಕ್ಕೆ ಪ್ರೇಮವು ತೊಂದರೆ ಕೊಟ್ಟೀತು. ಬಂಧುಗಳ ಆಗಮನದಿಂದ ಸಂತೋಷಗೊಳ್ಳುವಿರಿ.‌ ಹಣಕಾಸಿನ ಹರಿವು ಸರಿಯಾದ ಮಾರ್ಗದಲ್ಲಿ ಬರವಂತೆ ನೋಡಿಕೊಳ್ಳಿ. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಸಹೋದರನಿಂದ ಉಡುಗೊರೆಯು ಸಿಗಬಹುದು.‌ ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಮೇಲಧಿಕಾರಿಗಳ ಬಗ್ಗೆ ಸದ್ಭಾವವು ಇರದು.‌