Horoscope 29 Nov: ದಿನಭವಿಷ್ಯ, ಇಂದು ಈ ರಾಶಿಯವರ ದಿನವು ಆತ್ಮವಿಶ್ವಾಸದಿಂದ ಇರಲಿದೆ, ಕಾರ್ಯಗಳು ಅಂದುಕೊಂಡಂತೆ ಪೂರ್ಣವಾಗುವುದು

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 29 Nov: ದಿನಭವಿಷ್ಯ, ಇಂದು ಈ ರಾಶಿಯವರ ದಿನವು ಆತ್ಮವಿಶ್ವಾಸದಿಂದ ಇರಲಿದೆ, ಕಾರ್ಯಗಳು ಅಂದುಕೊಂಡಂತೆ ಪೂರ್ಣವಾಗುವುದು
ರಾಶಿಭವಿಷ್ಯImage Credit source: iStock Photo
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Nov 29, 2023 | 12:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 29 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣರಾಜ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಸಾಧ್ಯ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:21 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:06 ಗಂಟೆ 09:31 ನಿಮಿಷಕ್ಕೆ, ಗುಳಿಕ ಕಾಲ ಬೆಳಗ್ಗೆ 10:56 ರಿಂದ ಮಧ್ಯಾಹ್ನ 12:21ರ ವರೆಗೆ.

ಮೇಷ ರಾಶಿ: ಸೌಂದರ್ಯದ ವಿಚಾರಕ್ಕೆ ಹೆಚ್ಚು ಆಸಕ್ತಿ ಇರುವುದು. ಮಿತ್ರರ ವಿಷಯದಲ್ಲಿ ಅಸಮಾಧಾನವಿರುವುದು. ವ್ಯಾಪಾರಸ್ಥರು ಯಾವುದಾರೂ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬಹುದು. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ದಾಂಪತ್ಯದಲ್ಲಿ ಪರಸ್ಪರ ಅಭಿಪ್ರಾಯ ಭೇದವು ಕಾಣಿಸಿಕೊಂಡೀತು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ಗೊತ್ತಿಲ್ಲದ ಕೆಲಸವನ್ನು ಒಪ್ಪಿಕೊಂಡು ಸಂಕಷ್ಟದಲ್ಲಿ ಸಿಕ್ಕಿಕೊಳ್ಳುವಿರಿ. ಆಪ್ತರನ್ನು ನೀವು ದೂರ ಮಾಡಿಕೊಳ್ಳುವುದು ಕಷ್ಟವಾಗಬಹುದು. ಕುಟುಂಬದವರನ್ನು ನೀವು ಕಳೆದುಕೊಳ್ಳಬೇಕಾದೀತು. ಪರೀಕ್ಷೆಯ ಸಿದ್ಧತೆಯಲ್ಲಿ ನಿಮ್ಮ ಸಮಯವನ್ನು ಕಳೆಯುವಿರಿ. ಇಂದು ನೀವು ಅಗತ್ಯ ಸೌಲಭ್ಯಗಳನ್ನು ಪಡೆದುಕೊಳ್ಳುವಿರಿ. ಬಾಡಿಗೆ ಮನೆಯ ಬದಲಾವಣೆಯು ಅನಿವಾರ್ಯವಾದೀತು.

ವೃಷಭ ರಾಶಿ: ಬೇಡವೆಂಬ ವಿಷಯಕ್ಕೆ ಮನಸ್ಸು ಮತ್ತೆ ಮತ್ತೆ ಹೋಗುವುದು. ಅನೇಕ ವಿಚಾರಗಳ ಬಗ್ಗೆ ಒಟ್ಟಿಗೇ‌ ಚಿಂತಿಸುವುದು ಕಷ್ಟವಾದೀತು. ಬಂಧುಗಳ ಆಗಮನದಿಂದ ಹೆಚ್ಚು ಸಂತೋಷವು ಇರುವುದು. ನಿಮ್ಮ ಪ್ರೀತಿಪಾತ್ರರ ಜೊತೆ ಆಪ್ತವಾದ ಸಮಯವನ್ನು ಕಳೆಯುವಿರಿ.‌ ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳ ಜೊತೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ವಿದ್ಯೆಯ ಕಾರಣ ಉತ್ತಮ ಆದಾಯದ ಕೆಲಸವೂ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಆರೋಗ್ಯದ ಕಡೆ ಸ್ವಲ್ಪ ಹೆಚ್ಚು ಗಮನವಿರಲಿ. ನಿಮ್ಮ‌ ಕೆಲಸವು ಕೇವಲ ಸುತ್ತಾಟದಲ್ಲಿಯೇ ಮುಕ್ತಾಯವಾಗುವುದು. ಅಪ್ರಯೋಜಕ ವಿಚಾರದ ಬಗ್ಗೆ ಚಿಂತೆ‌ ಮಾಡುವಿರಿ. ಆಲಂಕಾರಿಕ ವಸ್ತುಗಳ ಬಗ್ಗೆ ಅತಿಯಾದ ಅಸೆ ಇರುವುದು. ಬಂಧುಗಳು ನಿಮ್ಮ ಬಗ್ಗೆ ಹಗುರವಾದ ಭಾವವನ್ನು ಇಟ್ಟುಕೊಳ್ಳುವರು. ಸಂಗಾತಿಯ ಜೊತೆ ಪ್ರೀತಿಯನ್ನು ಹಂಚಕೊಳ್ಳುವಿರಿ.

ಮಿಥುನ ರಾಶಿ: ಮಹಿಳೆಯರು ಸ್ವಂತ ಉದ್ಯಮವನ್ನು ಆರಂಭಿಸುವ ನಿರ್ಧಾರಕ್ಕೆ ಬರಬಹುದು. ನಿಮ್ಮ ಬೆಳವಣಿಗೆಯು ನಿಮಗೆ ಸಮಾಧಾನ ತರದೇ ಇದ್ದೀತು. ಇಂದಿನ ನಿಮ್ಮ ದಿನವು ಆತ್ಮವಿಶ್ವಾಸದಿಂದ ಇರಲಿದೆ. ನಿಮ್ಮ ಕಾರ್ಯಗಳು ಅಂದುಕೊಂಡಂತೆ ಪೂರ್ಣವಾಗುವುದು. ಹಳೆಯ ವಿಚಾರವನ್ನು ಇಂದು ವಿರೋಧಿಗಳು‌ ಪುನಃ ಮೇಲಕ್ಕೆ ತಂದು ಕಲಹ ಮಾಡಬಹುದು. ನಿಮ್ಮ‌ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಎಡವಿ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಛಾತಿ ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ‌. ನಿರಂತರ ಕ್ರಿಯಾಶೀಲತೆಯು ನಿಮ್ಮ ಮಾನಸಿಕ ಒತ್ತಡವನ್ನು ನಿವಾರಿಸುವುರು‌. ದುರ್ಜನರ ಸಹವಾಸದಿಂದ ದೂರವಿರಲು ಪ್ರಯತ್ನಿಸಿ. ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಆತಂಕವಿರಲಿದೆ.

ಕಟಕ ರಾಶಿ: ನಿಮ್ಮ ಇಂದಿನ ಎಲ್ಲ ಕೆಲಸಗಳೂ ಬಹಳ‌ ವಿಳಂಬವಾಗಿ ಆಗುವುದು. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ಕಾನೂನಿನ ಮಾರ್ಗದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಪ್ರಯೋಜನವನ್ನು ಪಡೆಯುವಿರಿ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಇಂದು ನಿಮ್ಮ ಕೆಲಸಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿಯು ಇರಲಿದೆ. ಮನೆಯಿಂದ ದೂರ ಇರಬೇಕಾದೀತು. ಸಜ್ಜನರ ಸಹವಾಸವನ್ನು ಹೆಚ್ಚು ಇಷ್ಟಪಡುವಿರಿ. ನಿಮ್ಮ ನೋವನ್ನು ಸೂಕ್ತ ಸ್ಥಳದಲ್ಲಿ ಪ್ರಕಟಪಡಿಸಿ. ಭೋಗವಸ್ತುಗಳನ್ನು ಖರೀದಿಸುವಿರಿ. ನಿಮ್ಮ ಗೌರವಕ್ಕೆ ಸರಿಯಾದ ಕಾರ್ಯವನ್ನು ಮಾಡಿ. ಹಿರಿಯ ಹಿತವಚನವು ನಿಮಗೆ ಕಿರಿಕಿರಿಯಂತೆ ತೋರುವುದು. ಎಲ್ಲ ವಿಚಾರಕ್ಕೂ ಮೂಗನ್ನು ತೂರಿಸುವುದು ಬೇಡ. ಆಹಾರದಿಂದ ಇಂದು ಅನಾರೋಗ್ಯವು ಬರಬಹುದು.

ಸಿಂಹ ರಾಶಿ: ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು‌ ಸಾಲಬಾಧೆಯಿಂದ ಮುಕ್ತಿಪಡೆಯುವಿರಿ. ಕಛೇರಿಯಲ್ಲಿ ಕಾರ್ಯಗಳು ಒತ್ತಡದಿಂದ ಇದ್ದು ಕೆಲವು ತಪ್ಪು ಆಗಬಹುದು.‌ ಅಧಿಕಾರಿಗಳಿಂದ ಕ್ರಮ ತೆಗೆದುಕೊಳ್ಳಬಹುದು. ವಾಹನ‌ಸಂಚಾರದಿಂದ ಆಯಾಸವಾಗುವುದು.‌ ನಿಮ್ಮನ್ನು ಇತರರು ನೋಡುವರು. ಪ್ರೇಮದಲ್ಲಿ ಅಹಂ ನುಸುಳುವ ಸಾಧ್ಯತೆ ಇದೆ. ರಾಜಕಾರಣಿಗಳು ಕಾರ್ಯಕ್ರಮದ ಒತ್ತಡದಲ್ಲಿ ಇರುವರು. ಮಾನಸಿಕ ಒತ್ತಡದಿಂದ ಬೇರೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ನಿಮಗೆ ಇಷ್ಟವಾಗದವರ ಭೇಟಿಯಾಗಲಿದೆ. ಮನಸ್ಸು ಅನ್ಯ ಆಲೋಚನೆಯಲ್ಲಿ ಮಗ್ನವಾಗಿರುವುದು. ಆಪ್ತರ ಸಲಹೆಯು ನಿಮ್ಮ ಉದ್ಯೋಗಕ್ಕೆ ಸಹಕಾರಿಯಾಗಲಿದೆ. ನಿಮಗೆ ಪದವಿಯನ್ನು ಪಡೆದುಕೊಳ್ಳುವ ಬಯಕೆ ಹೆಚ್ಚಾದೀತು.

ಕನ್ಯಾ ರಾಶಿ: ಅಪರಿಚಿತರಿಂದ ನಿಮ್ನ ಸಂಪತ್ತು ನಷ್ಟವಾಗುವುದು. ಕೆಲವರ ಮೇಲಿನ ದ್ವೇಷವು ಹೋಗದು. ಆಪ್ತರು ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ. ಸಹೋದ್ಯೋಗಿಗಳ ಜೊತೆ ವೈಮನಸ್ಯ ಉಂಟಾಗಬಹುದು‌‌. ಬೇಡ ಮಾತುಗಳನ್ನು ನೀವು ಎಲ್ಲರೆದುರು ಪ್ರಸ್ತಾಪಿಸುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳಲು ಓಡಾಡಬೇಕಾದೀತು. ನಿಮಗೆ ಆಗುವ ಸಹಾಯವನ್ನು ಮಾಡಿ.‌ ನೂತನ ದಾಂಪತ್ಯವು ಮಂದಗತಿಯಲ್ಲಿ ಸಾಗುವುದು. ನಿಮ್ಮ ರೋಗಕ್ಕೆ ವೈದ್ಯಕೀಯ ಚಿಕಿತ್ಸೆಯನ್ನು ಮಾಡಿಕೊಳ್ಳಿ. ಧಾರ್ಮಿಕ ಆಚರಣೆಗೆ‌ ಮನಸ್ಸಿದ್ದರೂ ಸಮಯದ ಅಭಾವದಿಂದ ಸಾಧ್ಯಬಾಗದು. ನಿಮ್ಮ ಭಾವನೆಗಳನ್ನು ಆಪ್ತರ ಜೊತೆ ಹಂಚಿಕೊಳ್ಳುವಿರಿ.

ತುಲಾ ರಾಶಿ: ಬಹಳ‌ ದಿನಗಳಲ್ಲಿ ಕೆಲಸಕ್ಕಾಗಿ ಪ್ರಯತ್ನಿಸಿ ನೀವು ಕೊನೆಗೂ ಕೆಲಸಕ್ಕೆ ಸೇರಿಕೊಳ್ಳುವಿರಿ. ಆಪ್ತರು ನಿಮಗೆ ಆತಿಥ್ಯವನ್ನು ಕೊಡಿಸುವರು. ಇಂದು ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗುವುದು. ಪರೀಕ್ಷೆಯ ಫಲಿತಾಂಶವು ನಿಮಗೆ ಸಂತೋಷವನ್ನು ಕೊಡುವುದು. ನೀವು ಉದ್ಯೋಗವನ್ನು ಬದಲಾಯಿಸಲು ಕಷ್ಟವಾದೀತು. ನಿಮ್ಮ ಅಸಂಬದ್ಧ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ. ಮನಸ್ಸಿನ ನಿಯಂತ್ರಣದಲ್ಲಿ ನಿಮಗೆ ಕಷ್ಟವಾದೀತು. ಹಣದ ದುರ್ಬಳಕೆಯನ್ನು ತಪ್ಪಿಸಿಕೊಳ್ಳಿ. ಕುಟುಂಬದ ತೊಡಕುಗಳನ್ನು ಸೂಕ್ಷ್ಮವಾಗಿ ಪರಿಹರಿಸಿಕೊಳ್ಳಿ. ಕಲಾವಿದರು ಗೌರವವನ್ನು ಪಡೆದುಕೊಳ್ಳುವರು. ಇನ್ನೊಬ್ಬರಿಗೆ ಸಹಾಯವನ್ನು ಮಾಡುವ ಆಸೆಯು ಇರುವುದು. ನಿಮ್ಮ ಅಮೂಲ್ಯ ವಸ್ತುನ್ನು ಕಳೆದುಕೊಳ್ಳುವಿರಿ. ಇಂದಿನ ವ್ಯವಹಾರವನ್ನು ಸಂಗಾತಿಗೆ ಬಿಟ್ಟುಕೊಡುವಿರಿ. ಹಣದ ಉಳಿತಾಯದಿಂದ ಖುಷಿಯಾಗುವುದು.

ವೃಶ್ಚಿಕ ರಾಶಿ: ಅಧಿಕಾರವು ಸಿಕ್ಕಿ‌ ಮನಸ್ಸಿನಲ್ಲಿ ಆಹ್ಲಾದವೂ ಇರುವುದು. ಕೆಲವರಿಂದ ಬರಬೇಕಾದ ಹಣವು ಬರಲಿದೆ. ಇಂದಿನ ನಿಮ್ಮ ಕಾರ್ಯವೇ ಗೌರವವನ್ನು ಹೆಚ್ಚು ಮಾಡುವುದು. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಗಟ್ಟಿಯಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ವಿದ್ಯಾಭ್ಯಾಸದ ಕಾರಣಕ್ಕೆ ಮನೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಸಾಲ ಕೊಟ್ಟ ಹಣವು ನಿಮಗೆ ಮರಳಿಬರುವುದು. ನಿಮಗೆ ಸಂಸ್ಥೆಯನ್ನು ಮುನ್ನಡೆಸುವ ಹೊಣೆಗಾರಿಕೆ ಸಿಗಲಿದೆ. ಇಂದು ಇನ್ನೊಬ್ಬರ ನೋವಿಗೆ ಸ್ಪಂದಿಸಲು ಆಗದು. ಹಳೆಯ ವಾಹನದ ಮಾರಾಟವನ್ನು ಮಾಡುವಿರಿ. ನೀವು ತೆಗೆದುಕೊಂಡ ತೀರ್ಮಾನವನ್ನು ಇತರರು ಬದಲಿಸಿದ್ದು ನಿಮ್ಮ ಕೋಪ ಬರುವುದು. ನಿಮ್ಮ ಕೆಲಸಕ್ಕೆ ಕುಟುಂಬ ಬೆಂಬಲವು ಪೂರ್ಣವಾಗಿ ಸಿಗದು. ವ್ಯಾಪಾರದಲ್ಲಿ ಅಲ್ಪ ಲಾಭಕ್ಕೆ ತೃಪ್ತಿ. ಇಂದು ಎಲ್ಲರ ಜೊತೆ ಬೆರೆಯಬೇಕಾದೀತು.

ಧನು ರಾಶಿ: ನಿಮ್ಮ ನಂಬಿಕೆಗಳು ಹುಸಿಯಾಗಿ ಜೀವನವೇ ಸಾಕೆನಿಸಬಹುದು. ವಿವಾಹದ ಜೀವನವನ್ನು ಸಂತೋಷದಿಂದ ಅನುಭವಿಸುವಿರಿ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಬಾಂಧವರ ಜೊತೆ ಸ್ನೇಹದಿಂದ ಇರುವಿರಿ. ನಿಮಗೆ ಪ್ರೇಮ ವಿವಾಹವನ್ನು ಮಾಡಿಕೊಳ್ಳಲು ಮನಸ್ಸು ಇರುವುದು. ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದೆ. ಕಛೇರಿಯಲ್ಲಿ ನಿಮ್ಮ ದಾಖಲೆಗಳು ಕಾಣಿಸದೇ ಹೋಗಬಹುದು. ಒರಟು ಮಾತುಗಳಿಂದ ಸಂಬಂಧವನ್ನು ಕಳೆದುಕೊಳ್ಳಬೇಕಾದೀತು. ನಿಮಗೆ ಬೇಡದ ವಸ್ತುವಾದರೂ ಇಂದು ಯಾರಿಗೂ ಕೊಡುವುದು ಬೇಡ. ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವ ಪ್ರಯತ್ನ ಮಾಡುವ ಅನಿವಾರ್ಯತೆ ಸೃಷ್ಟಿಯಾಗುವುದು.

ಮಕರ ರಾಶಿ: ಸ್ಥಿರಾಸ್ತಿಯ ಬಗ್ಗೆ ಸರಿಯಾದ ಮಾಹಿತಿಯನ್ನು ಇಟ್ಟುಕೊಳ್ಳಿ. ಆದಾಯವು ಇಂದಿನ ಖರ್ಚನ್ನು ಸರಿದೂಗಿಸುವುದು. ಇಂದು ಕಛೇರಿಯಲ್ಲಿ ಕೊಡುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಮಾಡಬೇಕಾದೀತು. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ಇದರಿಂದ ನೀವು ಸರಿಯಾದ ಫಲಿತಾಂಶವನ್ನು ಪಡೆಯುವಿರಿ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು. ಮನೆಯಲ್ಲಿ ವಾತಾವರಣ ಚೆನ್ನಾಗಿರುವುದಿಲ್ಲ. ಆರ್ಥಿಕತೆಯನ್ನು ಸರಿದೂಗಿಸುವ ಮಾರ್ಗೋಪಾಯವನ್ನು ಕಂಡುಕೊಳ್ಳಿ. ಸರ್ಕಾರದ ಕೆಲಸಕ್ಕೆ ತೊಂದರೆಯಾಗುವುದು. ಯಾರದೋ ಒತ್ತಾಯಕ್ಕಾಗಿ ಪ್ರಯಾಣ ಮಾಡಬೇಕಾದೀತು. ಮಿತಿ ಮೀರಿದ ಕಾರ್ಯದಿಂದ ಆಯಾಸವಾಗಲಿದೆ. ಪತ್ನಿಯು ನಿಮ್ಮನ್ನು ದೂಷಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಫಲವು ಲಭಿಸಿ, ಸಂತಸವಾಗುವುದು. ಖಾಸಗಿಯ ಸಮಾರಂಭದಲ್ಲಿ ಭಾಗವಹಿಸುವಿರಿ.

ಕುಂಭ ರಾಶಿ: ಪ್ರವಾಸ ವಿಚಾರದಲ್ಲಿ ಬಹಳ ಗೊಂದಲವಿರುವುದು. ಮಕ್ಕಳ‌ ಆರೋಗ್ಯದ ಸುಧಾರಣೆಗೆ ನೀವು ಓಡಾಟ ಮಾಡಬೇಕಾಗುವುದು. ಇಂದು ನಿಮ್ಮ ನಿರ್ಧಾರಗಳನ್ನು ನೀವು ಸಾವಧಾನವಾಗಿ ಆಲೋಚಿಸಿ ತೆಗೆದುಕೊಂಡರೆ ಉತ್ತಮ. ಕೆಲಸದ ವಿಷಯದಲ್ಲಿ ನೀವು ಯಾರ ಮಾತನ್ನೂ ನೀವು ಕೇಳುವುದಿಲ್ಲ. ನಿಮ್ಮ ಕುಟುಂಬದ ಜೊತೆ ಇಂದು ಸಮಯವನ್ನು ಕಳೆಯಲು ಸಾಧ್ಯವಾಗುವುದು. ನಿಮ್ಮ ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಚಂಚಲ ಮನಸ್ಸು ಸಹಜವಾದುದನ್ನು ಗುರುತಿಸಲಾರದು.‌ ಶತ್ರುಗಳ ಚಿಂತೆಯಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮಷ್ಟಕ್ಕೆ ನೀವಿರಲು ಸಾಧ್ಯವಾಗದು. ಎಲ್ಲ ವಿಚಾರಕ್ಕೂ ಕಾರಣವನ್ನು ಕೇಳುವಿರಿ. ಹಿಂದಿನಿಂದ ಮಾತನಾಡಿಕೊಳ್ಳುವರಿಗೆ ಬೆಲೆಯನ್ನು ಕೊಡುವುದಿಲ್ಲ. ಇಂದು ನಿಮಗಾದ ವಿಶ್ವಾಸದ್ರೋಹದಿಂದ ಎಲ್ಲರ ಮೇಲೆ ಅಸಮಾಧಾನ ತೋರುವಿರಿ. ನಿಮ್ಮದಲ್ಲದ ವಸ್ತುವಿನ ಮೇಲೇ ಮೋಹವು ನಿಮಗೆ ಗೊತ್ತಿಲ್ಲದೇ ಬರುವುದು.

ಮೀನ ರಾಶಿ: ವಿದ್ಯಾಭ್ಯಾಸದಲ್ಲಿ ಚುರುಕುತನ ಅವಶ್ಯಕ.‌ ಆಲಸ್ಯದಿಂದ ಎಲ್ಲವನ್ನೂ ಹಾಳುಮಾಡಿಕೊಳ್ಳುವ ಸಾಧ್ಯತೆ ಇದೆ. ಇಂದು ದಾಂಪತ್ಯದಲ್ಲಿ ಮನಸ್ತಾಪಗಳು ದೂರವಾಗಿ ಪರಸ್ಪರ ಸಂಬಂಧವು ಸರಿಯಾಗುವುದು. ನಿಮ್ಮ ವರ್ತನೆಯನ್ನು ಬೇರೆಯವರ ಮೂಲಕದಿಂದ ತಿದ್ದಿಕೊಳ್ಳುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಗುಂಪಿನಿಂದ ತಪ್ಪಾಗದಂತೆ ಪರೀಕ್ಷಿಸಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ಸ್ತ್ರೀಯರಿಗೆ ಕೆಲವು ಲಾಭಗಳು ಆಗಬಹುದು. ವಾಹನ ಖರೀದಿಗೆ ದಾಖಲೆಗಳನ್ನು ತಯಾರಿಸಿಕೊಳ್ಳುವಿರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ಕಾರ್ಯಗಳೇ ತುಂಬಿರುವುದು. ಉತ್ತಮ ಕೆಲಸದ ಅನ್ವೇಷಣೆಯನ್ನು ಮಾಡುವಿರಿ. ನಿಮ್ಮ ಮಗನ ಮೇಲೆ ಸಂಪತ್ತಿನ‌ ದೂರುವಿರಿ. ತುರ್ತು ಕಾರ್ಯಕ್ಕಾಗಿ ಮನೆಯಿಂದ ಬೇಗ ಹೊರಡಬೇಕಾಗುವುದು.

-ಲೋಹಿತಶರ್ಮಾ – 8762924271 (what’s app only)

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್