AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ನೀವು ಅದೃಷ್ಟದ ನಿರೀಕ್ಷೆಯಲ್ಲಿ ಇರುವಿರಿ, ಅಪರಿಚಿತರ ಬಗ್ಗೆ ಭಯ

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 10 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ನೀವು ಅದೃಷ್ಟದ ನಿರೀಕ್ಷೆಯಲ್ಲಿ ಇರುವಿರಿ, ಅಪರಿಚಿತರ ಬಗ್ಗೆ ಭಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Mar 10, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಾಧ್ಯ, ಕರಣ : ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 44 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 06:41ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:43 ರಿಂದ 02:12ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:12ರ ವರೆಗೆ.

ಮೇಷ ರಾಶಿ: ನಿಮ್ಮ ಆರ್ಥಿಕ ಚೇತರಿಕೆಯ ಕಾರಣ ದುರ್ಬಲವಾದ ಮನಸ್ಸು ಸಬಲವಾಗುವುದು. ನಿಮಗೆ ಯಾರಿಂದಲಾದರೂ ವಂಚನೆಯಾಗಬಹುದು. ಮನೆಯಲ್ಲಿಯೇ ಇದ್ದು ಆಗಬೇಕಾದ ಕಾರ್ಯವನ್ನು ಮಾಡುವಿರಿ. ವಿದ್ಯಾರ್ಥಿಗಳ ಗುಣಮಟ್ಟವು ಕ್ಷೀಣಿಸುವುದು ನಿಮ್ಮ‌ ಅರಿವಿಗೆ ಬರಲಿದೆ. ಸಾಮಾಜಿಕ ಗೌರವವನ್ನು ಪಡೆಯುವುದರಿಂದ ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ದೂರ ಪ್ರಯಾಣಕ್ಕೆ ವೈದ್ಯರು ನಿರ್ಬಂಧ ಹಾಕಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಬಂಧುಗಳ ನಡುವೆ ಆರ್ಥಿಕ ವ್ಯವಹಾರಕ್ಕೆ ವಾಗ್ವಾದವಾಗಬಹುದು.

ವೃಷಭ ರಾಶಿ: ನೀವು ಅದೃಷ್ಟದ ನಿರೀಕ್ಷೆಯಲ್ಲಿ ಇರುವಿರಿ. ನೀವು ಯಾರನ್ನಾದರೂ ಮೆಚ್ಚಿಸಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳಬೇಕಾಗುವುದು. ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ನಿಮ್ಮ ಕುಟುಂಬ ಸದಸ್ಯರಿಗೆ ನೀವು ವಿಶ್ವಾಸದ್ರೋಹಿ ಆಗುವ ಸಾಧ್ಯತೆಯಿದೆ. ಹಳೆಯ ಸ್ನೇಹಿತನನ್ನು ಯಾವುದಾದರೂ ರೀತಿಯಲ್ಲಿ ಭೇಟಿಯಾಗುವಿರಿ. ಕುಟುಂಬ ವ್ಯವಸ್ಥೆ ಸರಿಯಾಗಲು ಕೆಲವನ್ನು ಬಿಟ್ಟುಕೊಡಬೇಕಾದೀತು. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಶಾರೀರಿಕ ಆಯಾಸದಿಂದ ಆರೋಗ್ಯವು ಕುಗ್ಗೀತು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು.

ಮಿಥುನ ರಾಶಿ: ನಿಮಗೆ ಅಪರಿಚಿತರ ಬಗ್ಗೆ ಭಯವಿರುವುದು. ನೀವು ವಿದ್ಯಾರ್ಥಿಯಾಗಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗಲಿದೆ. ಮಕ್ಕಳ ಸ್ವಾಸ್ಥ್ಯದ ಬಗ್ಗೆ ಜಾಗರೂಕತೆ ಇರಲಿ. ಹಲವು ಕಾರ್ಯಗಳನ್ನು ಮಾಡುವ ಸನ್ನಿವೇಶವು ಬರುವ ಕಾರಣ ಸಮಯವನ್ನು ಸರಿಯಾಗಿ ಮಾಡಿಕೊಳ್ಳಿ. ನಿಮ್ಮ ವ್ಯವಹಾರದಲ್ಲಿಯೂ ಸಹ ನೀವು ಭಾಗವಹಿಸುವಿರಿ ಮತ್ತು ಕೆಲಸ ಪೂರ್ಣಗೊಳ್ಳುತ್ತದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಅವಿವಾಹಿತರು ತಮ್ಮ ದುಃಖವನ್ನು ಹೇಳಿಕೊಂಡು ಸಮಾಧಾನವಾಗುವುದು.

ಕಟಕ ರಾಶಿ: ನಿಮಗೆ ಅಪರಿಚಿತ ಕರೆಗಳು ಕೆಲವು ಗೊಂದಲವನ್ನು ಸೃಷ್ಟಿಸುವುದು. ವಿಶ್ವಾಸವನ್ನು ನೀವು ಉಳಿಸಿಕೊಳ್ಳದೇ ಇರುವ ಕಾರಣ ಎಲ್ಲವೂ ಅಸ್ತವ್ಯಸ್ತವಾಗಬಹುದು. ಯಾರನ್ನೋ ನೋಯಿಸಿ ಖುಷಿಯಾಗಿರುವುದು. ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಸೂಕ್ತ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹೊಟ್ಟೆಯ ಸ್ವಾಸ್ಥ್ಯವು ಕೆಡುವ ಸಾಧ್ಯತೆಯಿದೆ. ಹಿರಿಯರ ವಿಚಾರದಲ್ಲಿ ಅನಾದರ ತೋರಿದಂತೆ ಕಾಣಿಸುವುದು. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಖರೀದಿಸಿದ ಹೊಸ ಯಂತ್ರಗಳೂ ಕೆಡಬಹುದು.

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?