AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ಸೆಪ್ಟೆಂಬರ್​ 10,​ 2024ರ​​ ನಿಮ್ಮ ರಾಶಿಭವಿಷ್ಯ:ವ್ಯಾಪಾರವು ಅಭಿವೃದ್ಧಿಯಾಗಿ ಒಂದೊಂದೇ ಹಂತವನ್ನು ಏರುವಿರಿ. ಕುಟುಂಬವೂ ನಿರಾತಂಕವಾಗಿ ಜೀವನ ನಡೆಸುವುದು. ವಿದ್ಯಾರ್ಥಿಗಳಿಗೆ ಅವಶ್ಯಕವಾದ ಪ್ರೋತ್ಸಾಹದಿಂದ ಒಳ್ಳೆಯ ಫಲವನ್ನು ನಿರೀಕ್ಷಿಸಬಹುದು. ನಿಮ್ಮ ನಿರೀಕ್ಷೆಯ ಮಟ್ಟ ಕಡಿಮೆಯಾಗಲಿದೆ. ಹಾಗಾದರೆ ಸೆಪ್ಟೆಂಬರ್​ 10ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
TV9 Web
| Edited By: |

Updated on: Sep 10, 2024 | 12:05 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:36 ಗಂಟೆ, ರಾಹು ಕಾಲ ಮಧ್ಯಾಹ್ನ 03:33 ರಿಂದ ಸಂಜೆ 05:05, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.

ಮೇಷ ರಾಶಿ: ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳು ಪ್ರಭಾವ ಬೀರಬಹುದು. ಅಸ್ತಿಯ ಹಂಚಿಕೆಯ ವಿಚಾರದಲ್ಲಿ ಚರ್ಚೆಗಳು ಆಗಲಿದೆ. ನಿಮ್ಮ ಕೆಲಸಗಳಿಗೆ ವಿಘ್ನಗಳು ಬರಬಹುದು. ಸ್ವ ಉದ್ಯೋಗವು ಕೈ ಹಿಡಿಯುವುವುದು. ವ್ಯಾಪಾರವು ಅಭಿವೃದ್ಧಿಯಾಗಿ ಒಂದೊಂದೇ ಹಂತವನ್ನು ಏರುವಿರಿ. ಕುಟುಂಬವೂ ನಿರಾತಂಕವಾಗಿ ಜೀವನ ನಡೆಸುವುದು. ವಿದ್ಯಾರ್ಥಿಗಳಿಗೆ ಅವಶ್ಯಕವಾದ ಪ್ರೋತ್ಸಾಹದಿಂದ ಒಳ್ಳೆಯ ಫಲವನ್ನು ನಿರೀಕ್ಷಿಸಬಹುದು. ನಿಮ್ಮ ನಿರೀಕ್ಷೆಯ ಮಟ್ಟ ಕಡಿಮೆಯಾಗಲಿದೆ. ನಂಬಿಕೆಯ ಜೊತೆ ಪ್ರೀತಿಯನ್ನೂ ಕಳೆದುಕೊಳ್ಳಬಹುದು. ನಿಮ್ಮ‌ ಬಗ್ಗೆ ಆಡಿಕೊಳ್ಳಲು ಏನಾದರೂ ಸಿಗಲಿದೆ. ಇದು ನಿಮಗೆ ಬೇಸರವನ್ನು ತರಿಸುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ಮನಸ್ಸಿಗೆ ಬಾರದ ಕಾರ್ಯವನ್ನು ಮಾಡಲು ಧೈರ್ಯ ಸಾಲದು.

ವೃಷಭ ರಾಶಿ: ಯಾವುದನ್ನು ನಿಮ್ಮದೆಂದುಕೊಂಡಿದ್ದೀರೋ ಅದು ಉಳಿಯದು. ನೀವು ಕುಟುಂಬ ಮತ್ತು ನಿಮ್ಮ ಆಪ್ತರ ಜೊತೆ ಸಮಯ ಕಳೆಯುವುದರಿಂದ ಬಾಂಧವ್ಯ ಬೆಳೆಯುವುದು. ಬಂಧುಗಳ ಭೇಟಿಯಿಂದ ಚಿತ್ತವು ಉತ್ಸಾಹದಿಂದ ಇರವುದು. ಮಾಡಬೇಕಾದ ಕೆಲಸಗಳನ್ನು ವೇಗವಾಗಿ, ಎಚ್ಚರಿಕೆಯಿಂದ ಮಾಡಿ. ಸಹೋದರನ ಅನಿರೀಕ್ಷಿತ ಸಹಾಯವು ಸಂತಸವನ್ನು ತರುವುದು. ಉಪಕಾರಕ್ಕೆ ಪ್ರತ್ಯುಪಕಾರದ ಮನೋಭಾವ ಇರಲಿ. ನೀವು ಇಂದು ಚಿಂತೆಯಲ್ಲಿ ಇರುವ ಕಾರಣ ಎಲ್ಲರ ಮೇಲೂ ಸಿಟ್ಟುಮಡಿಕೊಳ್ಳುವಿರಿ. ನಿಮ್ಮ ಬಗ್ಗೆ ಹೇಳಿಕೊಳ್ಳುವುದನ್ನು ಕಡಿಮೆ‌ ಮಾಡಿ. ನಿಮ್ಮ ವಸ್ತುವನ್ನು ಇನ್ನೊಬ್ಬರು ಬಳಸಿಕೊಳ್ಳುವರು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಸಹವಾಸದಿಂದ ನಿಮ್ಮ ಸ್ವಭಾವವು ಗೊತ್ತಾಗದೇ ಬದಲಾಗುವುದು. ನಿಮ್ಮ ಹೇಳಿಕೆಗಳು ಮಹತ್ತ್ವದ್ದಾಗಿರದು.

ಮಿಥುನ ರಾಶಿ: ನಿಮ್ಮ ಮಾತನ್ನು ಯಾರೂ ಕೇಳರು ಎಂದು ಬೇಸರವಾಗುವುದು. ನೀವು ಇಂದು ಯಾರ ಸಹಾಯವನ್ನೂ ಪಡೆಯಲು ಇಚ್ಛಿಸುವುದಿಲ್ಲ. ಆಲಸ್ಯದಿಂದ ಕಛೇರಿಯ ಕೆಲಸವನ್ನು ಮಾಡಲು ಆಸಕ್ತಿ ತೋರಿಸುವುದಿಲ್ಲ. ಒಳ್ಳೆಯ ಅಭ್ಯಾಸಗಳು ನಿಮ್ಮನ್ನು ಆರೋಗ್ಯವಾಗಿ ಇಡುವುದು. ಹಿತಶತ್ರುಗಳನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ಜೀವನ ಸಂಗಾತಿಯ ಜೊತೆ ಹೆಚ್ಚು ಮಾತನಾಡುವಿರಿ. ಸಾಮಾಜಿಕ ಕೆಲಸಗಳಿಂದ ಗೌರವಪ್ರಾಪ್ತಿಯಾಗಲಿದೆ. ಪ್ರಯೋಜನವಿಲ್ಲ ಎಂದು ತೆಗೆದಿಟ್ಟ ವಸ್ತುವಿನ ಅಥವಾ ವ್ಯಕ್ತಿಯ ಮರುಬಳಕೆ ಇಂದಾಗಲಿದೆ. ಹೊಸ ಮನೆಯ ಖರೀದಿಗೆ ಯೋಜನೆ ಸಿದ್ಧವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು. ಕರೆಗಳನ್ನು ನಿರ್ಲಕ್ಷಿಸಿ. ಮನೆಗೆ ಅತಿಥಿಗಳ ಆಗಮನವಾಗಲಿದೆ. ನಿಮ್ಮ ಸಮಯವನ್ನು ಯಾರಾದರೂ ವ್ಯರ್ಥಮಾಡಬಹುದು.

ಕರ್ಕಾಟಕ ರಾಶಿ: ಇಂದು ವೈಯಕ್ತಿಕ ಕಾರಣದಿಂದ ನಿಮ್ಮ ಉದ್ಯೋಗವನ್ನು ಬದಲಿಸಬೇಕಾಗುವುದು. ಪಡೆದ ಸಾಲವನ್ನು ತೀರಿಸುವಿರಿ. ಬಾಂಧವ್ಯವನ್ನು ಉಳಿಸಿಕೊಳ್ಳುವುದು ನಿಮಗೆ ಹಿಡಿಸದು. ಹೂಡಿಕೆ ಮಾಡಿದ ಹಣವನ್ನು ಪಡೆಯಲು ಓಡಾಟ ಮಾಡಬೇಕಾದೀತು. ಸಹೋದ್ಯೋಗಿಗಳ ಹಾದಿಯನ್ನು ಸೇರಿ ಮೇಲಧಿಕಾರಿಗಳಿಂದ ಬೈಗುಳ ತಿನ್ನುವಿರಿ. ಭಯವು ಅವಕಾಶಗಳಿಂದ ವಂಚಿನೆಯಾಗುವಂತೆ ಮಾಡುವುದು. ಇಂದು ದುಸ್ಸಾಹಸಕ್ಕೆ ತೊಡಗುವುದುಬೇಡ. ಪ್ರಯಾಣವನ್ನು ಅನಾರೋಗ್ಯದ ಕಾರಣ ಕಡಿಮೆ ಮಾಡುವಿರಿ. ಏಕಾಂತವನ್ನು ಇಷ್ಟಪಟ್ಟರು ಇರಲಾಗದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ಕಳೆದುಹೋದುದನ್ನು ಮರಳಿ ಪಡೆಯುವುದು ಕಷ್ಟ. ವಾಹನದಿಂದ ಆರ್ಥಿಕ ಮುಗ್ಗಟ್ಟು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್