Horoscope: ರಾಶಿಭವಿಷ್ಯ, ಇಂದಿನ ಸೋಲು ನಿಮಗೆ ಪಾಠವಾಗುವುದು, ಮುನ್ನುಗ್ಗುವ ಅಭ್ಯಾಸ ಬೆಳೆಸಿಕೊಳ್ಳಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 20, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ರಾಶಿಭವಿಷ್ಯ, ಇಂದಿನ ಸೋಲು ನಿಮಗೆ ಪಾಠವಾಗುವುದು, ಮುನ್ನುಗ್ಗುವ ಅಭ್ಯಾಸ ಬೆಳೆಸಿಕೊಳ್ಳಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 20, 2024 | 12:02 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 20) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶುಭ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 24 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:53 ರಿಂದ 11:18ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:09 ರಿಂದ 03:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:03 ರಿಂದ 08:28ರ ವರೆಗೆ.

ಮೇಷ ರಾಶಿ: ಬಹಳದ ದಿನದಿಂದ ನಿರೀಕ್ಷೆಯಲ್ಲಿ ಇರುವ ನಿಮಗೆ ಕೊನೆಗೂ ಉದ್ಯೋಗಕ್ಕಾಗಿ ಅವಕಾಶವು ಪ್ರಾಪ್ತವಾಗಲಿದೆ. ಆಪ್ತರ ಜೊತೆಗಿನ ಮಾತಿನಿಂದ‌ ಮನಸ್ಸು ಹಗುರಾಗುವುದು. ಪ್ರೀತಿಯಲ್ಲಿ ಅಂತರವು ಬಂದಂತೆ ತೋರಿದ್ದು ಮಾತುಕತೆಯಿಂದ ಅದನ್ನು ಸರಿ ಮಾಡಿಕೊಳ್ಳುವಿರಿ. ದ್ವೇಷವನ್ನು ಬೆಳೆಸಿಕೊಳ್ಳುವುದು ಯೋಗ್ಯವೆನಿಸದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ಇಂದಿನ ಕೆಲವು ಸಮಯವನ್ನು ಇನ್ನೊಬ್ಬರಿಗೆ ಮೀಸಲಿಡಬೇಕಾದೀತು. ಸಂಗಾತಿಯ ನೋವಿಗೂ ಸ್ಪಂದಿಸಲು ಕಷ್ಟವಾದೀತು. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮಗೆ ಆತಂಕವಾಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವ ಚಿಂತೆಯಲ್ಲಿ ಇರುವಿರಿ.

ವೃಷಭ ರಾಶಿ: ಇಂದು ಹಣಕಾಸಿನ ವಹಿವಾಟನ್ನು ಆಪ್ತರಿಗೆ ಕೊಟ್ಟು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ. ಭೂ ವ್ಯವಹಾರದಲ್ಲಿ ಇಂದು ಪೂರ್ಣ‌ಪ್ರಗತಿ ಇರದು. ಹೊಸ ಮನೆಯ ಪ್ರವೇಶದಲ್ಲಿ‌ ನೀವು ಭಾಗಿಯಾಗುವಿರಿ. ಕೆಲವು ಸಮಸ್ಯೆಗಳನ್ನು ನೀವು ಪರಿಹಾರ ಮಾಡಿಕೊಳ್ಳುವಿರಿ. ಸಂಬಂಧಗಳನ್ನು ನೀವು ಬೇಕಾದುದಕ್ಕೆ ಬಳಸಿಕೊಳ್ಳುವಿರಿ. ರಾಜಕಾರಣಿಗಳು ಅಸ್ಥಿರ ಮನಸ್ಸಿನಲ್ಲಿ ಇರುವರು. ಅಧಿಕವಾಗಿರುವುದು. ಇಂದಿನ ಸೋಲು ನಿಮಗೆ ಪಾಠವಾಗುವುದು. ಮುನ್ನುಗ್ಗುವ ಅಭ್ಯಾಸವನ್ನು ಬೆಳೆಸಿಕೊಂಡು ನಿಮಗೆ ಇಷ್ಟವಾದ ಆಯ್ಕೆಯನ್ನು ಮಾಡಿಕೊಳ್ಳುವಿರಿ. ಪ್ರಪಂಚಜ್ಞಾನದ ಅಗತ್ಯತೆ ಹೆಚ್ಚಿವಿರುವಂತೆ ತೋರುತ್ತದೆ. ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ.

ಮಿಥುನ ರಾಶಿ: ಯಾರದೋ ಅಧೀನರಾಗಿ ಇರುವುದು ನಿಮಗೆ ಇಷ್ಟವಾಗದು. ವ್ಯವಹಾರವು ಹಳಿ ತಪ್ಪಬಹುದು. ಅನಾರೋಗ್ಯದಿಂದ ನೀವು ಬಹಳಷ್ಟು ಸುಧಾರಿಸುವಿರಿ.‌ ಯಾವ ಕೆಲಸವನ್ನೂ ನೀವು ಪೂರ್ಣ ಮಾಡದೇ ಇರಲು ಮನಸ್ಸು ಬಾರದು. ನಿಮ್ಮ ವ್ಯವಹಾರದಲ್ಲಿ ಪೈಪೋಟಿಯು ಅಧಿಕವಾಗಿ ಇರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು. ನಕಾರಾತ್ಮಕ ಆಲೋಚನೆಗಳು ಬೆನ್ನು ಹತ್ತಬಹುದು. ಹಣಕಾಸಿನ ವ್ಯವಹಾರದಲ್ಲಿ ಇಂದು ಎಲ್ಲರಿಂದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಸಂಗಾತಿಯ ಜೊತೆ ಒಡನಾಟವು ಹೆಚ್ಚಿರಲಿದೆ. ತಂದೆಯ ಶ್ರಮವನ್ನು ಕಂಡು ಮಕ್ಕಳಿಗೆ ನೋವಾಗಬಹುದು. ನಿಮ್ಮವರ ಪ್ರೀತಿಯಿಂದ ನೀವು ಮನಸೋಲುವಿರಿ. ನೀವು ಎಲ್ಲರ‌ ನಡುವೆ ಅಂತರವನ್ನು ಕಾಯ್ದುಕೊಂಡು ವ್ಯವಹಾರ ಮಾಡುವಿರಿ. ಆಹಾರ ಉದ್ಯಮದಲ್ಲಿರುವವರು ಅಧಿಕ ಆದಾಯವನ್ನು ಕಾಣಬಹುದು.

ಕಟಕ ರಾಶಿ: ಇಂದು ನೀವು ಇತರರ ಭಾವನೆಗೆ ಸ್ಪಂದಿಸುವಿರಿ. ಹಸ್ತಕ್ಷೇಪವನ್ನು ಮಾಡಲು ಹಿಂದೇಟು ಹಾಕುವುದು ಉತ್ತಮ. ಸಂಬಂಧಿಕರು ನಿಮ್ಮನ್ನು ಕ್ಷುಲ್ಲಕ ವಿಚಾರಕ್ಕೆ ಟೀಕಿಸಬಹುದು. ಇಂದು ನಿಮ್ಮ ಸಂಗಾತಿಗೆ ಅಪರೂಪದ ಉಡುಗೊರೆಯನ್ನು ಕೊಡಿಸುವಿರಿ. ಇಂದು ನಿಮ್ಮ ಮನೆಗೆ ಅತಿಥಿ ಆಗಮಿಸುವ ಸಾಧ್ಯತೆ ಇದೆ. ನೀವು ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ಕೆಲವು ಮಾಹಿತಿಯನ್ನು ಪಡೆದುಕೊಳ್ಳುವಿರಿ.‌ ಏನನ್ನಾದರೂ ಸಾಧಿಸಬೇಕು ಎಂಬ ಹಂಬಲವು ಹುಟ್ಟಿಕೊಂಡೀತು. ಕೋಪಕ್ಕೆ ಮಿತಿ‌ ಇರಲಿ. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ. ಜಾಡ್ಯವನ್ನು ಬಿಡಬೇಕಾದೀತು. ನಿಮ್ಮ ವೃತ್ತಿಯು ನಿಮಗೆ ಸಂತೋಷವನ್ನು ಕೊಡದೇ ಇರುವುದು. ಕೆಲಸವನ್ನು ನೀವು ಸರಳವಾಗಿ ಮಾಡಿಕೊಳ್ಳುವುದು ಉತ್ತಮ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ