Horoscope: ರಾಶಿ ಭವಿಷ್ಯ; ವಾಹನವನ್ನು ನಿಧಾನವಾಗಿ ಚಲಾಯಿಸಿ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜುಲೈ. 01 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ವಾಹನವನ್ನು ನಿಧಾನವಾಗಿ ಚಲಾಯಿಸಿ
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 01, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜುಲೈ.01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 07:46 ರಿಂದ ರಾತ್ರಿ 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:59 ರಿಂದ 12:37ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:51ರ ವರೆಗೆ.

ಧನು ರಾಶಿ: ಇಂದು ನಿಮಗೆ ಹಣದ ಅಗತ್ಯತೆಗಳು ತುಂಬಾ ಎದುರಾಗಬಹುದು. ನಿಮ್ಮ ಹಣವೂ ಖಾಲಿಯಾಗಿ ಸಂಗಾತಿಯಿಂದ ಹಣವನ್ನು ಪಡೆಯುವಿರಿ. ಖರ್ಚನ್ನು ಕಡಿಮೆಮಾಡಿಕೊಳ್ಳುವ ವಿಚಾರದಲ್ಲಿ ಚಿಂತಿಸುವುದು ಉತ್ತಮ. ನೀವಿಂದು ಸುಳ್ಳಾಡುವಿರೆಂದು ಅನ್ನಿಸಬಹುದು. ನಿಮ್ಮ ಮೇಲೆ ನಂಬಿಕೆಯನ್ನು ಕಳೆದುಕೊಳ್ಳುವವರಿದ್ದಾರೆ. ಮಕ್ಕಳಿಂದ ಧನಸಹಾಯವನ್ನು ಪಡೆಯುವಿರಿ. ದೇವರಲ್ಲಿ ದೃಢವಾದ ಭಕ್ತಿಯನ್ನು ಇಟ್ಟುಕೊಳ್ಳುವುದು ಒಳ್ಳೆಯದು. ನಿಮ್ಮ ಆಲೋಚನೆಗಳು ಕಾರ್ಯರೂಪಕ್ಕೆ ಬರಬಹುದು. ವಾಹನ ಖರೀದಿಯನ್ನು ಮಾಡಲೇಬೇಕು ಎಂಬ ಗಟ್ಟಿ ನಿರ್ಧಾರವನ್ನು ಮಾಡಿಕೊಳ್ಳುವಿರಿ. ಮನಸ್ಸು ಸಂಕೋಚಗೊಂಡಿದ್ದು ಅದರ ವಿಕಾಸಕ್ಕೆ ಹೊರಗಡೆ ಸುತ್ತಾಟ ಮಾಡುವಿರಿ. ಇಂದು ಹೆಚ್ಚಿನ ಸಮಯವನ್ನು ನಿದ್ರೆಯಿಂದ ಕಳೆಯುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ. ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು.

ಮಕರ ರಾಶಿ: ಇಂದು ನಿಮ್ಮ ದುಡಿಮೆಯನ್ನು ಸರಿಯಾದ ಕಡೆ ವಿನಿಯೋಗಿಸುವಿರಿ. ಉಪಕಾರ ಮಾಡುವುದು ನಿಮಗೆ ಖುಷಿ ಕೊಡುವುದು. ಮಕ್ಕಳಿಂದ ನಿಮಗೆ ಖುಷಿಯಾಗಲಿದೆ. ನಿಮ್ಮ ಮಾತಿಗೆ ವಿರೋಧ ಉಂಟಾಗಬಹುದು. ಹೇಳಬೇಕಾದುದನ್ನು ಸ್ಪಷ್ಟವಾಗಿ ಹೇಳಿ. ಕೆಲಸಗಳಿಂದ ಒತ್ತಡವು ಅತಿಯಾಗಬಹುದು, ಸಮಾಧಾನಚಿತ್ತದಿಂದ ಸ್ವೀಕರಿಸಿರಿ. ತಪ್ಪುಗಳಿಂದ ಪಶ್ಚಾತ್ತಾಪ ಆಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸಬೇಕಾಗಬಹುದು. ಕೆಲಸವು ಕಷ್ಟವೆಂದು ಕೈಬಿಡಬಹುದು. ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಕೆಲಸವನ್ನು ಮಾಡಿ. ಅದನ್ನು ಹಾಗೇ ಸುಮ್ಮನೇ ಕಳೆಯಬೇಡಿ. ಉನ್ನತವಾದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆದಂತೆ ಅನಿಸುವುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು. ವ್ಯಾವಹಾರಿಕ ವಿಭಾಗದಲ್ಲಿ ನಿಮಗೆ ಹಿನ್ನಡೆಯಾಗಲಿದೆ.

ಕುಂಭ ರಾಶಿ: ಕಷ್ಟಗಳು ನಮ್ಮ ಕರ್ಮದ್ದು ಎನ್ನುವ ವಿಚಾರ ನೆನಪಿರಲಿ. ಅದನ್ನು ಸಹಿಸುವ ಎದುರಿಸುವ ಶಕ್ತಿಯನ್ನು ಕೊಡು ಎಂದು ಕೇಳಿಕೊಳ್ಳಿ. ಸಂಪಾದನೆಗೆ ನೂರು ದಾರಿಗಳಿದ್ದರೂ ನಿಮ್ಮ ಆಯ್ಕೆ ಸ್ಪಷ್ಟವೂ ಯೋಗ್ಯವೂ ಆಗಿರಬೇಕು. ನಿಮ್ಮ ಸಾಮರ್ಥ್ಯದ ಬಗ್ಗೆ ಅಪನಂಬಿಕೆ ಇರಲಿದೆ. ನಿಮ್ಮ ಬಗ್ಗೆ ಋಣಾತ್ಮಕವಾದ ಮಾತುಗಳು ಕೇಳಿ ಬರಬಹುದು. ಅದನ್ನು ಧನಾತ್ಮಕವಾಗಿ ಮಾಡುವ ಛಲವು ನಿಮಗೆ ಇರಬೇಕಿದೆ. ಪರಿಸ್ಥಿತಿಗಳು ನಮ್ಮ‌ಅನುಕೂಲಕ್ಕೆ ತಕ್ಕಂತೆ ಇರದು. ನೀವು ಭವಿಷ್ಯಕ್ಕೆಂದು ರೂಪಿಸಿಕೊಂಡ ಯೋಜನೆಗೆ ಇನ್ನಷ್ಟು ಸ್ಪಷ್ಟತೆ ಬೇಕಿದೆ. ನೀವು ಸ್ನೇಹಿತರ ಸಲಹೆಯನ್ನೂ ಪಡೆದರೆ ಒಳ್ಳೆಯದು‌. ಜ್ವರ ಬರುವ ಹಾಗಿದ್ದು ಬೇಕಾದ ಔಷಧವನ್ನು ಸ್ವೀಕರಿಸಿ. ಸುತ್ತಾಡುವ ಮನಃಸ್ಥಿತಿ ಇದ್ದರೂ ದೇಹವು ಸಹಕರಿಸದೇ ಹೋಗಬಹುದು. ವಾಹನವನ್ನು ನಿಧಾನವಾಗಿ ಚಲಾಯಿಸಿ. ಮನೆಯವರ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ನಿಮ್ಮ ಅನನುಕೂಲತೆಯನ್ನು ಹೇಳಬೇಡಿ. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು.

ಮೀನ ರಾಶಿ: ಸ್ವಂತಿಕೆಯನ್ನು ಸಂಪಾದಿಸಬೇಕು ಎನ್ನುವ ನಿಮ್ಮ ತೀವ್ರತರವಾದ ಪ್ರಯತ್ನಕ್ಕೆ ಇಂದು ಕೆಲವು ಅಡ್ಡಿಗಳು ಬರಬಹುದು. ಇರುವುದರಲ್ಲಿ ಖುಷಿಪಡುವುದು ಉತ್ತಮ. ಸಂಗಾತಿಯನ್ನು ಮುಚ್ಚಿಡಲು ಹೋಗಿ ಸೋಲುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾದ ಹಾಗೆ ದಿನವನ್ನು ರೂಪಿಸಿಕೊಳ್ಳಿ. ದುಸ್ಸಾಹಸವು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಓದಿನ ಕಡೆ ಗಮನಕೊಟ್ಟರೂ ತಲೆಯ ಒಳಗೆ ಹೋಗದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಸಂಪತ್ತು ವ್ಯಯವಾಗುವ ಸಾಧ್ಯತೆ ಇದೆ. ಒಂದೇ ಕಡೆಯಲ್ಲಿ ಗಮನಹರಿಸಿದ ಕೆಲಸವು ಸರಿಯಾಗಿ ಹೋಗುವುದು.‌ ಸಮಯ ಮಿತಿಯನ್ನು ಇಟ್ಟುಕೊಂಡು ಕೆಲಸವನ್ನು ಮಾಡಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು.

ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ