ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮವರಿಂದ ದೂರಾಗುವ ಭೀತಿ…
Horoscope Today June 03: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ತೃತೀಯಾ ತಿಥಿಯ ಬುಧವಾರದಂದು ನಿಷ್ಪ್ರಯೋಜಕ ಸಲಹೆ, ಲೌಕಿಕ ಅನುಭವದ ಆಸೆ, ಅಸಂಗತ ವಿಚಾರದ ಮಾತು, ನೇರ ಮಾತಿನಿಂದ ದ್ವೇಷ, ಅನ್ಯರ ತಪ್ಪಿನ ಮೇಲೆ ಗಮನ ಇವೆಲ್ಲ ಈ ದಿನದ ವಿಶೇಷ.

ಮೇಷ ರಾಶಿ:
ನಿಮ್ಮ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಸ್ನೇಹಿತನ ಸಹಾಯದಿಂದ ಸಮಸ್ಯೆ ಬಗೆಹರಿಸಬಹುದು. ಆರೋಗ್ಯ ಚೆನ್ನಾಗಿರಲು ನಿಗಾ ಇಡಿ. ಶುಭ ಸಂಕೇತಗಳು ಅಚ್ಚರಿಯನ್ನು ಉಂಟುಮಾಡಬಹುದು. ಇಟ್ಟ ಹೆಜ್ಜೆಯನ್ನು ಹಿಡೆಯುವ ಯಾವ ವಿಚಾರವನ್ನೂ ಮಾಡಲಾರಿರಿ. ಅಡೆತಡೆಗಳು ಕೊನೆಗೊಳ್ಳುತ್ತವೆ. ಯೋಜನೆಯ ಪ್ರಕಾರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಚೌಕಟ್ಟಿನಲ್ಲಿ ಎಲ್ಲವೂ ಇರಬೇಕು ಎನ್ನುವುದು ಅಸಾಧ್ಯದ ಮಾತು.
ವೃಷಭ ರಾಶಿ :
ಕೆಲಸದ ಒತ್ತಡ ಹೆಚ್ಚಾದರೂ, ನಿಮಗೆ ನಿರ್ವಹಣಾ ಶಕ್ತಿ ಇದೆ. ಹಣಕಾಸಿನಲ್ಲಿ ಖರ್ಚುಗಳಿಂದ ದೂರವಿರಿ. ಎಷ್ಟೇ ಹಣವಿದ್ದರೂ ಸಾಲದಂತೆ ಕಾಣಿಸುವುದು. ಕುಟುಂಬದ ಜೊತೆ ಸಮಯ ಕಳೆಯುವುದು ಸಂತೋಷ ತರಲಿದೆ. ಸ್ನೇಹಿತರೊಂದಿಗೆ ಉತ್ತಮ ಮಾತುಕತೆ ಸಾಧ್ಯ. ಹೊಸ ಯೋಜನೆ ನಿಮ್ಮ ದಿಕ್ಕು ಬದಲಾಯಿಸಬಹುದು. ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ.
ಮಿಥುನ ರಾಶಿ :
ಬಹಳ ದಿನಗಳಿಂದ ಉಳಿದ ಕಾರ್ಯಕ್ಕೆ ನಿಮ್ಮ ಪೂರ್ಣ ಪರಿಶ್ರಮ ಬೇಕಾಗಲಿದೆ. ನಿಮ್ಮ ಮಾತುಕತೆಗಳು ಪ್ರಾಮಾಣಿಕರಾಗಿರಲಿ. ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸುವಿರಿ. ಹಣಕಾಸಿನಲ್ಲಿ ಬದಲಾವಣೆ ಬೇಕಾದರೆ ಹೊಸ ಯೋಚನೆ ಮಾಡಿ. ಕುಟುಂಬದ ವಿಷಯದಲ್ಲಿ ನಿಮ್ಮ ಮಾತಿಗೆ ಬೆಲೆ ಇರುತ್ತದೆ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ.
ಕರ್ಕಾಟಕ ರಾಶಿ :
ಸಂಗಾತಿಯ ಪ್ರೀತಿ ಇಂದು ನಿಮಗೆ ಸಂತೋಷವನ್ನು ತರಬಹುದು. ಕೆಲಸದಲ್ಲಿ ಉತ್ಪಾದಕ ದಿನವನ್ನು ನಿರೀಕ್ಷಿಸಿ. ಹೊಸ ಕೆಲಸ ಮಾಡಲು ಅವಕಾಶಗಳು ಸಿಗಲಿವೆ. ಸಮಯ ಸ್ವಲ್ಪ ತೊಂದರೆ ಉಂಟುಮಾಡುತ್ತದೆ. ಆದರೆ ನಿಮಗೆ ಅವಕಾಶ ಸಿಗುತ್ತದೆ ಮತ್ತು ಆರ್ಥಿಕ ಲಾಭವು ತೃಪ್ತಿಕರವಾಗಿರುತ್ತದೆ. ದಿನದ ಅಂತ್ಯವನ್ನು ನಿಮ್ಮ ಮಕ್ಕಳೊಂದಿಗೆ ಕಳೆಯುತ್ತೀರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು.
ಸಿಂಹ ರಾಶಿ :
ಹಣವನ್ನು ಉಳಿಸುವ ನಿಮ್ಮ ಪ್ರಯತ್ನಕ್ಕೆ ಇಂದು ಅಡೆತಡೆಗಳನ್ನು ಬರಬಹುದು. ಹೊಸ ವ್ಯವಹಾರ ಒಪ್ಪಂದಗಳು ಮತ್ತು ನಿರುದ್ಯೋಗಿಗಳಿಗೆ ಯಶಸ್ಸು ಸಿಗುತ್ತದೆ. ಲಾಭದ ಸ್ಥಿತಿ ಉಳಿಯುತ್ತದೆ. ನಿಮ್ಮ ಮಾತನ್ನು ನಿಯಂತ್ರಿಸಿ, ಕೋಪವು ವಿವಾದಗಳಿಗೆ ಕಾರಣವಾಗಬಹುದು. ವೈವಾಹಿಕ ಜೀವನವು ಆಹ್ಲಾದಕರವಾಗಿರುವುದು. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಷ್ಠೆಯನ್ನು ಉಳಿಸಿಕೊಳ್ಳುವುದು ಕಷ್ಟವಾದೀತು.
ಕನ್ಯಾ ರಾಶಿ :
ನಿಮ್ಮ ದೌರ್ಬಲ್ಯಗಳನ್ನು ಹತೋಟಿ ತರುವುದು ಕಷ್ಟವಾಗುವುದು. ಇದೇ ಕಾರಣಕ್ಕೆ ಅಪಮಾನವನ್ನು ಎದುರಿಸಬೇಕಾಗುವುದು. ಭೂಮಿ ಮಾರಾಟದ ಬಗ್ಗೆ ಯೋಚಿಸುತ್ತಿದ್ದರೆ ಇಂದು ಉತ್ತಮವಾಗಿರುವುದು. ಯಾವುದೇ ರೀತಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದಿಲ್ಲ. ಮನಸ್ಸು ಸಂತೋಷವಾಗಿರುತ್ತದೆ ಮತ್ತು ಕುಟುಂಬದೊಂದಿಗೆ ಸಮಯ ಕಳೆಯುತ್ತೀರಿ. ಸಾಮರಸ್ಯದ ಕೊರತೆ ಎದ್ದು ಕಾಣಿಸುವುದು. ಅತಿಯಾದ ಕೋಪದಿಂದ ನಿಮ್ಮ ವ್ಯವಹಾರವು ಬುಡಮೇಲಾದೀತು.
ತುಲಾ ರಾಶಿ :
ನಿಮ್ಮ ನಿರ್ಧಾರಗಳು ಇಂದು ಹೆಚ್ಚುವರಿ ಹಣಕಾಸಿನ ಲಾಭವನ್ನು ತರಬಹುದು. ನಿಮ್ಮ ಸಂಗಾತಿಯ ಜೊತೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಭಾವನೆಗಳನ್ನು ವ್ಯಕ್ತಪಡಿಸಲು ಅವಕಾಶ ದೊರೆಯಲಿದೆ. ಕೆಲಸದಲ್ಲಿ ನಿಮಗೆ ಮುಖ್ಯ ಪಾತ್ರ ಲಭ್ಯವಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ನಿಯಂತ್ರಣ ಕಾಪಾಡಿ. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಮಕ್ಕಳಿಗಾಗಿ ಹಣವನ್ನು ಇಡುವಿರಿ.
ವೃಶ್ಚಿಕ ರಾಶಿ :
ನಿಮ್ಮ ಸಂಗಾತಿಯಿಂದ ನಿಮಗೆ ಸಂತೋಷವು ಬೇಕೆನಿಸುವುದು. ಇಂದು ಎದುರಾಗುವ ಸವಾಲುಗಳು ನಿಮಗೆ ಉದ್ಯೋಗದಲ್ಲಿ ಸ್ಥಿರತೆಯನ್ನು ತೋರಿಸುತ್ತದೆ. ನಿರೀಕ್ಷೆಗಿಂತ ಹೆಚ್ಚಾಗಿ ಇತರರು ಸಹಾಯ ಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಜೊತೆ ಹೆಚ್ಚು ಸಮಯ ಕಳೆಯುವುದು ನಿಮ್ಮ ಮನಸ್ಸಿಗೆ ನೆಮ್ಮದಿ ತರಲಿದೆ. ಅವಶ್ಯಕವಿರುವದನ್ನು ಇಟ್ಟುಕೊಂಡು ಇನ್ನೊಬ್ಬರಿಗೂ ಕೊಡಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು.
ಧನು ರಾಶಿ :
ನಿಮ್ಮವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವೆಚ್ಚಗಳು ಹೆಚ್ಚಾಗಬಹುದು. ಇದು ನಿಮ್ಮ ಹಣಕಾಸಿನ ಸ್ಥಿತಿಯ ಮೇಲೆ ಪರಿಣಾಮವನ್ನು ಬೀರಬಹುದು. ಸಮಯವು ಹಣದ ಕೊರತೆಯನ್ನು ನಿವಾರಿಸುತ್ತದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ಕೊನೆಗೊಳ್ಳುತ್ತವೆ. ಉದ್ವೇಗದಿಂದ ಏನನ್ನಾದರೂ ಮಾಡಲು ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಕೋಪದಿಂದ ಕೆಲವು ಸುಂದರ ಕ್ಷಣವನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು.
ಮಕರ ರಾಶಿ :
ಕೆಲಸ ಮೇಲೆ ನಿಮ್ಮ ಗಮನವಿದೆಯೇ ಎಂದು ಖಚಿತಪಡಿಸಿಕೊಳ್ಳಿ. ವ್ಯಾಪಾರದ ಆದ ಸ್ವಲ್ಪ ಅಜಾಗರೂಕತೆಯೂ ಭಾರೀ ನಷ್ಟವನ್ನು ಉಂಟುಮಾಡಬಹುದು. ಕೆಲವರ ಮಾತುಗಳಿಂದ ಮನಸ್ಸಿಗೆ ದುಃಖಿತವಾಗಬಹುದು, ಆದರೆ ಉತ್ತರ ಸೌಮ್ಯವಾಗಿರಲಿ. ಅನಗತ್ಯ ಸಮಸ್ಯೆಗಳು ಮತ್ತು ತೊಡಕುಗಳು ಉಂಟಾಗುತ್ತವೆ. ಎಂತಹ ಒತ್ತಡವಿದ್ದರೂ ತಾಳ್ಮೆಯಿಂದ ಕೆಲಸ ಮಾಡಿ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ.
ಕುಂಭ ರಾಶಿ :
ನಿಮ್ಮ ಸ್ನೇಹಿತರು ಸಹಾಯಕ್ಕೆ ಬರಬಹುದೆಂಬ ನಿರೀಕ್ಷೆ. ತೀರ್ಮಾನಗಳ ಹಿಂದೆ ತಾಳ್ಮೆ ಇರಲಿ. ಹಣದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಜವಾಬ್ದಾರಿಯುತರಾಗಿರಿ. ಕುಟುಂಬದಲ್ಲಿ ಹಿರಿಯರ ಸಲಹೆ ನಿಮ್ಮ ಸಮಸ್ಯೆಗೆ ಪರಿಹಾರವಾಗಬಹುದು. ಯಶಸ್ಸಿನ ಹಾದಿಯನ್ನು ತೆರೆಯುವ ಹೊಸ ಅವಕಾಶಗಳು ನಿಮಗೆ ಸಿಗುತ್ತವೆ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ.
ಮೀನ ರಾಶಿ :
ನೀವು ಜನರ ಆಸೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದು, ವ್ಯವಹಾರದಲ್ಲಿ ಅದನ್ನು ಪ್ರಯೋಗಿಸುವಿರಿ. ಇಂದು ಅತಿಯಾಗಿ ಖರ್ಚು ಮಾಡದಿರುವುದು ಒಳ್ಳೆಯದು. ಹೊಸ ಅವಕಾಶಗಳು ಕಾಣಿಸುತ್ತವೆ. ಆದರೆ ಎಲ್ಲವನ್ನೂ ತಕ್ಷಣ ಸ್ವೀಕರಿಸದಿರಿ. ಕೆಲಸದ ಕಡೆ ಕೆಲ ಒತ್ತಡಗಳು ಬರಬಹುದು. ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಸರಕಾರದಿಂದ ಅರ್ಥಿಕ ಬೆಂಬಲ ದೊರೆಯಬಹುದು. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಸಾಧ್ಯ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:23 – 13:59, ಯಮಗಂಡ ಕಾಲ 07:33 – 09:09, ಗುಳಿಕ ಕಾಲ 10:46 – 12:23
-ಲೋಹಿತ್ ಹೆಬ್ಬಾರ್ – 8762924271 (what’s app only)




