AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ವಿನಾಕಾರಣ ಬೆದರಿಕೆಗೆ ಒಳಗಾಗುವರು..

Horoscope Today June 05: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಶುಕ್ರವಾರದಂದು ಆಪತ್ತಿನ ಅಂಜಿಕೆ, ಉದ್ಯಮದ ವಿಸ್ತಾರ, ವಿದೇಶದಿಂದ‌ ಆಗಮನ, ರಹಸ್ಯ ಕಾರ್ಯ, ಪ್ರಲೋಭ.. ಇವೆಲ್ಲ ಈ ದಿನ‌ ಇರಲಿದೆ.

ದಿನ ಭವಿಷ್ಯ: ಇಂದು ಈ ರಾಶಿಯವರು ವಿನಾಕಾರಣ ಬೆದರಿಕೆಗೆ ಒಳಗಾಗುವರು..
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 05, 2026 | 12:32 AM

Share

ಮೇಷ ರಾಶಿ:

ಆದಷ್ಟು ಬೇಗ ಸ್ವಾವಲಂಬಿಯಾಗುವ ನಿರ್ಧಾರ ಮಾಡುವಿರಿ. ಸಂಗಾತಿಯೊಂದಿಗೆ ನೀವು ಮಾತುಗಳನ್ನು ಸರಿಯಾಗಿ ಬಳಸುವುದು ಉತ್ತಮ. ವಿದ್ಯುತ್ ಉಪಕರಣಗಳು ನಿಮ್ಮ ಸಮಯವನ್ನು ಹಾಳು ಮಾಡಬೇಡಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಹೊಸ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

ವೃಷಭ ರಾಶಿ:

ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗವಾಗಬಹುದು. ತಂದೆಯ ಸಲಹೆಯಿಂದ ಹಣದ ಲಾಭಸಾಧಿಸಬಹುದು. ಪ್ರೀತಿಯ ಕಥೆಯಲ್ಲಿ ಹೊಸ ತಿರುವು ಹಾಗೂ ಸಂಗಾತಿಯೊಂದಿಗೆ ಮದುವೆಯ ಕುರಿತು ಚರ್ಚೆ ನಡೆಯುತ್ತದೆ, ಆದ್ದರಿಂದ ಯಾವುದೇ ನಿರ್ಧಾರವನ್ನು ತಾಳ್ಮೆಯಿಂದಿರಿ. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು.

ಮಿಥುನ ರಾಶಿ:

ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ಅವಕಾಶವಿದೆ ಮತ್ತು ಪೋಷಕರ ಸಲಹೆ ನಿಮ್ಮ ನಿರ್ಧಾರಗಳಲ್ಲಿ ಸಹಾಯ ಮಾಡುತ್ತದೆ. ಸಂಬಂಧಗಳಲ್ಲಿ ಅನುಮಾನಗಳನ್ನು ತೊಡೆದುಹಾಕಿ, ಮನಸ್ಸಿನ ವಿಷಯಗಳನ್ನು ಸ್ಪಷ್ಟವಾಗಿ ಚರ್ಚಿಸಿ. ಉದ್ಯಮಿಯು ವ್ಯವಹಾರದ ವಿಷಯಗಳಲ್ಲಿ ಚಿಂತನಶೀಲವಾಗಿ ಮುಂದುವರಿಯಬೇಕು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.

ಕರ್ಕಾಟಕ ರಾಶಿ:

ಎಲ್ಲ ಗೊತ್ತಿದ್ದೂ ಉದ್ವೇಗಕ್ಕೆ ಒಳಗಾಗಬೇಡಿ. ಅಭಿನಂದನೆ ನಿಮ್ಮ ಮನಸ್ಸಿಗೆ ಸಂತೋಷ ತರುತ್ತದೆ. ವಾಹನದ ಬದಲಾವಣೆಯನ್ನು ಒಮ್ಮೆಲೇ ಮಾಡಲಾರಿರಿ. ವ್ಯಾಪಾರಿಗಳಿಗೆ ನಷ್ಟವಾಗುವ ಸಂಭವವಿದ್ದು, ವ್ಯಾಪಾರ ಸುಧಾರಣೆಗೆ ಹೆಚ್ಚುವರಿ ಹಣ ಖರ್ಚಾಗುತ್ತದೆ. ಸಂಗಾತಿಯೊಂದಿಗೆ ಸರಿಯಾದ ಸಂಭಾಷಣೆ ಮತ್ತು ಸಹಕಾರದಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಸಿಂಹ ರಾಶಿ:

ನೀಡಿದ ಸಾಲವನ್ನು ಮರಳಿ ಪಡೆಯುವ ಅವಕಾಶ ಸಿಗಲಿದೆ. ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳಿರಬಹುದು. ಆದರೆ ಅವರ ಅನಗತ್ಯ ಬೇಡಿಕೆಗಳಿಗೆ ಒಪ್ಪಿಕೊಳ್ಳಬೇಡಿ. ದಿನದ ಯೋಜನೆಗಳು ಒಳ್ಳೆಯದಾಗುವುದು. ಒತ್ತಡಕ್ಕೆ ಮಣಿದು ತಾತ್ಕಾಲಿಕ ಬದಲಾವಣೆ ತರಬಹುದು. ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ಧಾವಂತದಲ್ಲಿ ಏನನ್ನಾದರೂ ಮಾಡಿಕೊಳ್ಳುವಿರಿ. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ.

ಕನ್ಯಾ ರಾಶಿ:

ಕುಟುಂಬದಲ್ಲಿ ಹಣಕಾಸಿನ ವಿಚಾರಕ್ಕೆ ಸಣ್ಣ ಮಟ್ಟಿನ ಕಲಹವೂ ಆದೀತು. ಆರೋಗ್ಯಕ್ಕಾಗಿ ಮಾಡಿದ ಖರ್ಚು ನಿಮ್ಮ ಹಣಕಾಸು ಸ್ಥಿತಿಯನ್ನು ಹದಗೆಡಿಸಬಹುದು. ಹೇಳದೇ ಮಾಡಿದ ಕೆಲಸದಿಂದ ಸಂಗಾತಿಗೆ ಅಪನಂಬಿಕೆ ಸಾಧದಯತೆ. ವ್ಯಾಸಂಗವನ್ನು ನಿರ್ಲಕ್ಷಿಸುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗುತ್ತದೆ, ಆದ್ದರಿಂದ ಸಮತೋಲನ ಅವಶ್ಯಕ. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ.

ತುಲಾ ರಾಶಿ:

ಸಾಲಕ್ಕಾಗಿ ವ್ಯರ್ಥ ಓಡಾಟಗಳು ಆಗುತ್ತವೆ. ಆ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಹಣ ಮಹತ್ವದ್ದಾದರೂ, ಸಂಬಂಧಗಳಿಗಿಂತ ಹೆಚ್ಚಿನ ಪ್ರಾಮುಖ್ಯವಾಗಬಾರದು. ಪ್ರೀತಿಪಾತ್ರರಿಂದ ವಿಶೇಷ ಆಶ್ಚರ್ಯ ಸಿಗಬಹುದು. ವಿವಾಹಕ್ಕೆ ಅಪೇಕ್ಷಿತ ರೀತಿಯ ಸಂಬಂಧ ಕೂಡಿಬರಲಿದೆ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ:

ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಸಂಶಯಾಸ್ಪದ ವ್ಯವಹಾರಗಳಿಂದ ದೂರವಿರಿ. ಸಾರ್ವಜನಿಕವಾಗಿ ಹಣಸಂಗ್ರಹ ಮಾಡುವ ಅನಿವಾರ್ಯತೆ ಬರಬಹುದು. ಪ್ರೀತಿಯನ್ನು ಹೊಸ ರೀತಿಯಲ್ಲಿ ಅನುಭವಿಸಲು ಆಪ್ತರ ಭೇಟಿಯ ಅವಕಾಶ ದೊರೆಯುತ್ತದೆ. ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥವಾಗಬಹುದು. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ.

ಧನು ರಾಶಿ:

ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ಸಮರಸದ ಸ್ವಭಾವವನ್ನು ಬೆಳೆಸಿ, ದ್ವೇಷವನ್ನು ಮೀರಿ ಶಾಂತಿ ಹೊಂದಿ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಖರ್ಚುಗಳ ಮೇಲೆ ನಿಯಂತ್ರಣ ಅಗತ್ಯ. ಪ್ರೇಮಜೀವನದಲ್ಲಿ ಹೊಸ ಉತ್ಸಾಹ ದೊರೆಯುತ್ತಿದ್ದು, ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಅನುಭವಿಸುವ ಅವಕಾಶ ಸಿಗಲಿದೆ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು.

ಮಕರ ರಾಶಿ:

ಮನೆಯ ಸಣ್ಣ ವಿವಾದಗಳು ಉದ್ವೇಗ ತರಬಹುದು, ಆದರೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ ಮತ್ತು ತಜ್ಞರ ಸಲಹೆ ಪಡೆಯಿರಿ. ಉದ್ಯೋಗದ ಶತ್ರುವನ್ನು ತಂತ್ರದಿಂದ ಗೆಲ್ಲುವಿರಿ. ವ್ಯಾಪಾರಸ್ಥರು ಮುಖ್ಯವಾಗಿ ವ್ಯವಹಾರದಲ್ಲಿ ಜಾಗರೂಕರಾಗಿರಬೇಕು. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ.

ಕುಂಭ ರಾಶಿ:

ಮನಸ್ಸು ಹಾಳಾಗುವುದು ಬಿಟ್ಟರೆ ಮತ್ತೇನೂ ಆಗದು. ಸಹಾಯ ಮಾಡುವ ಮೂಲಕ ನಿಮ್ಮ ಚೈತನ್ಯವನ್ನು ಸದ್ವಿನಿಯೋಗಿಸಿ. ಖರ್ಚುಗಳನ್ನು ನಿಯಂತ್ರಿಸಿ ಮತ್ತು ಮನೆಯ ಸುಧಾರಣೆಯ ಬಗ್ಗೆ ಯೋಚಿಸಿ. ವೈವಾಹಿಕ ಜೀವನ ಅಪೂರ್ವ ಕ್ಷಣಗಳಾಗಲಿದ್ದು, ಪ್ರೀತಿಪಾತ್ರರಿಗೆ ಅಗತ್ಯವಾದ ಸಮಯವನ್ನು ನೀಡಿ. ಕಲಾತ್ಮಕತೆಯು ನಿಮಗೆ ಇಷ್ಟವಾಗುವುದು. ವಿದ್ಯಾರ್ಥಿಗಳಿಗೆ ಅಧ್ಯಯನ ಸಂಬಂಧಿತ ಸಮಸ್ಯೆಗಳು ಕಾಡಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ.

ಮೀನ ರಾಶಿ:

ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ಸ್ವಲ್ಪ ಕಾಲ ಕಳೆಯಿರಿ. ಗಂಭೀರ ವರ್ತೆನೆಯಿಂದ ಸಹೋದ್ಯೋಗಿಗಳಿಗೆ ಆತಂಕ. ಧಾರ್ಮಿಕ ಕಾರ್ಯಗಳು ಶಾಂತಿ ತರುತ್ತವೆ. ಆದರೆ ಖರ್ಚುಗಳನ್ನು ನಿಯಂತ್ರಿಸುವುದು ಮುಖ್ಯ. ಸ್ನೇಹಿತರ ಭೇಟಿ ಉತ್ಸಾಹಭರಿತವಾಗಿದ್ದು, ಯುವಕರು ಶೈಕ್ಷಣಿಕ ಸಲಹೆ ಪಡೆಯಬಹುದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಾಗ ಗೊಂದಲಗಳು ತಲೆದೋರುವ ಸಾಧ್ಯತೆ ಇದೆ. ಅತಿಯಾದ ಓಡಾಟವನ್ನು ನಿಲ್ಲಿಸಬೇಕಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶುಕ್ಲ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:46 – 12:23, ಯಮಗಂಡ ಕಾಲ 15:36 – 17:13, ಗುಳಿಕ ಕಾಲ 07:33 – 09:10

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್