AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಅನ್ಯ ಮನಃಸ್ಥಿತಿಯಿಂದ ಉದ್ಯಮ ನಷ್ಟ

Horoscope Today June 01: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಗುರುವಾರದಂದು ಏಕಾಗ್ರತೆ ಭಂಗ, ಸಮಾರಂಭದಲ್ಲಿ ಸ್ಥಾನ, ಅಜ್ಞಾತ ಸ್ಥಳದಲ್ಲಿ ಸಂಚಾರ, ಚಿಂತೆಯಿಂದ ರಕ್ತದೊತ್ತಡ ಇವೆಲ್ಲ ಇರಲಿದೆ.

ದಿನ ಭವಿಷ್ಯ: ಇಂದು ಈ ರಾಶಿಯವರ ಅನ್ಯ ಮನಃಸ್ಥಿತಿಯಿಂದ ಉದ್ಯಮ ನಷ್ಟ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 11, 2026 | 12:19 AM

Share

ಮೇಷ ರಾಶಿ:

ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕಾಗಬಹುದು. ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ.

ವೃಷಭ ರಾಶಿ:

ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಬರಬೇಕಾದ ಹಣವು ಮಧ್ಯದಲ್ಲೇ ನಿಲ್ಲಬಹುದು. ಧನಾತ್ಮಕ ಅಂಶಗಳನ್ನು ಹುಡುಕಿ ಮುನ್ನಡೆಯಿರಿ. ದಾರಿ ತಾನಾಗಿಯೇ ತೆರದುಕೊಳ್ಳುವುದು. ಮಕ್ಕಳಿಗೆ ಜವಾಬ್ದಾರಿ ಕೊಡಲು ಭಯ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ಖುಷಿ ಕೊಡಲಿದೆ.

ಮಿಥುನ ರಾಶಿ:

ದೇಹ ಸೌಂದರ್ಯವನ್ನು ಬೆಳೆಸಿಕೊಳ್ಳಲು ಸಮಯವನ್ನು ಮೀಸಲಿಡುವಿರಿ. ವಿಧಿಯನ್ನು ಹಳಿದು ನಿಮಗೆ ಸಮಾಧಾನವನ್ನು ತಂದುಕೊಳ್ಳುವಿರಿ. ನಿಮ್ಮ ಮಾತುಗಳಿಂದ ಕೆಲವರು ಪ್ರೇರಣೆ ಪಡೆದರೆ, ಕೆಲವರು ನಿಮ್ಮ ಮಾತನ್ನೇ ಆಡಿಕೊಳ್ಳುವರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತಲ್ಲೀನರಾಗಿ ಹೊರ ಜಗತ್ತನ್ನು ಮರೆಯುವರು. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು.

ಕರ್ಕಾಟಕ ರಾಶಿ:

ಅನಾರೋಗ್ಯದಿಂದ ಚೇತರಿಕಯನ್ನು ಕಂಡುಕೊಳ್ಳಬಹುದಾಗಿದೆ. ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಒತ್ತಾಯ ಪೂರ್ವಕವಾಗಿ ನಿಮಗೆ ಇಚ್ಛೆಯಿರುವ ವಿಷಯವನ್ನು ಹೇರಬೇಡಿ. ಹಂಚಿಕೆಯ ವಿಚಾರದಲ್ಲಿ ನಿಮಗೆ ಪೂರ್ಣವಾದ ಮನಸ್ಸಿರದು. ಆಯ್ಕೆ ಮಾಡಲು ಅವರಿಗೆ ಸ್ವಾತಂತ್ರ್ಯವಿರಲಿ. ಇದರಿಂದ ನಿಮಗೆ ನಿರಾಸೆಯಾಗಲಿದೆ. ಆಸ್ತಿಯ ವಿಚಾರಕ್ಕೆ ನೆರೆಹೊರೆಯ ನಡುವೆ ಕಲಹವಾದೀತು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಅನ್ಯರಿಮಂದ ಕಿರಿಕಿರಿ.

ಸಿಂಹ ರಾಶಿ:

ವಿದೇಶಕ್ಕೆ ಹೋಗಲು ಆಲೋಚನೆ ಮಾಡದಿದ್ದರೂ ಹೋಗುವ ಅನಿವಾರ್ಯ ಬರಲಿದೆ. ಆನಾರೋಗ್ಯದಿಂದ ಮುಕ್ತಿಸಿಗಲಿದೆ. ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ಆಪ್ತರ ಚಿಕಿತ್ಸೆಗೆ ಧನಸಹಾಯ ಮಾಡಬೇಕಾಗುವುದು. ರಾಜಕಾರಣಿಗಳು ಗೆಲ್ಲುವ ತಂತ್ರವನ್ನು ಹೂಡುವರು. ದೈಹಿಕ ಶ್ರಮವು ಇಂದು ಅಧಿಕವಾಗುವುದು. ನಿಮ್ಮ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಲಿದೆ.

ಕನ್ಯಾ ರಾಶಿ:

ಆಪ್ತರ ಜೊತೆ‌ ಮನಸ್ಸು ಬಿಚ್ಚಿ ಮಾತನಾಡಿ. ಸರ್ಕಾರದ ಕೆಲಸಗಳು ನಿಧಾನವಾಗಲಿದೆ. ಮತ್ತೆ ಮತ್ತೆ ಬರುವ ಸಂಕಷ್ಟಕ್ಕೆ ದೈವಕ್ಕೆ ಮೊರೆ ಹೋಗಬೇಕಾಗುವುದು. ಭಾರವಾದುದನ್ನು ಎತ್ತಿ ಅಪಾಯ ತಂದುಕೊಳ್ಳುವಿರಿ. ಪ್ರತಿಕೂಲ ವಾತಾವರಣದಲ್ಲಿಯೂ ನಿಮಗೆ ಅನುಕೂಲಕರ ವಾತಾವರಣ ಇರಲಿದೆ. ಕುಟುಂಬದಲ್ಲಿ ನಿಮ್ಮನ್ನು ಸರಿಯಾಗಿ ಆದರಿಸದೇ ಇರಬಹುದು. ಸುತ್ತಾಟದಿಂದ ಆಯಾಸವಿದೆ. ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇರಲಿದೆ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು.

ತುಲಾ ರಾಶಿ:

ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಪ್ರವಾಹದ ವಿರದ್ಧ ಈಜಲು ಸಾಧ್ಯವಾಗದು. ವಾಹನ ಅಪಘಾತವು ಆಗಬಹುದು, ಜಾಗರೂಕತೆಯಿಂದ ಇರಿ. ಕೃಷಿಕರು ತಾವು ಬೆಳೆದ ಬೆಳೆಯಿಂದ ನಷ್ಟವನ್ನು ಅನುಭವಿಸುವಿರಿ. ನಿಮ್ಮನ್ನು ಹಾದಿ ತಪ್ಪಿಸಲು ಪ್ರಯತ್ನಿಸಿದ ವ್ಯಕ್ತಿಗಳು ನಿಮ್ಮ ಸಾಧನೆಯನ್ನು ಕಂಡು ಕೊರಗಬಹುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ಆದಾಯದ ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಹೇಳಲಾರಿರಿ.

ವೃಶ್ಚಿಕ ರಾಶಿ:

ನಡೆ, ನುಡಿಗಳಲ್ಲಿ ಬಹಳ ಜಾಗರೂಕರಾಗಿರಿ. ಧನವು ಕೈಗೆಟುಕದ ದ್ರಾಕ್ಷಿಯಂತೆ ಅನ್ನಿಸಬಹುದು. ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು. ಅನಾರೋಗ್ಯವು ನಿರ್ಲಕ್ಷ್ಯದಿಂದ ಹೆಚ್ಚಾಗುವುದು. ನಿಮಗೆ ಬರಬೇಕಾದ ಹಣದ ಕುರಿತು ಲೆಕ್ಕವಿರಲಿ. ಕೆಲಸದಲ್ಲಿ ಆಲಸ್ಯ ಮಾಡಿ ಬರಬೇಕಾದುದನ್ನು ಕಳೆದುಕೊಳ್ಳುವಿರಿ. ಮನಸ್ಸಿನ ನೆಮ್ಮದಿಯು ಕೆಡಬಹುದು. ಆಗದೇ ಇರುವ ಕೆಲಸಕ್ಕೆ ಬೇಸರ ಬೇಡ. ವೃತ್ತಿಯಲ್ಲಿ ಆತಂಕವು ಇರಲಿದೆ.

ಧನು ರಾಶಿ:

ಅನಿರೀಕ್ಷಿತ ಎದುರಾದ ಖರ್ಚಿನಿಂದಾಗಿ ಸ್ನೇಹಿತರಲ್ಲಿ ಹಣವನ್ನು ಕೇಳುವಿರಿ. ನಿಮ್ಮ ಬಳಿ ಅತಿಯಾದ ಕೆಲಸವನ್ನು ಪಡೆಯಬಹುದು. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ಅತಿಯಾದ ಸೌಖ್ಯವನ್ನು ಪಡೆಯಲು ಹೋಗಿ ಅನಾಹುತವನ್ನು ಮಾಡಿಕೊಳ್ಳಬಹುದು. ತಪ್ಪಿನಿಂದ ಹೊಬರಲಾಗದು. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು. ಸಮಸ್ಯೆಯನ್ನು ದೊಡ್ಡ ಮಾಡಿಕೊಳ್ಳಲಿದ್ದೀರಿ.

ಮಕರ ರಾಶಿ:

ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ಹಣಕಾಸಿನ ವಿಚಾರವಾಗಿ ದಾಂಪತ್ಯದಲ್ಲಿ ಸಣ್ಣ ಕಲಹವಾಗಬಹುದು. ತಾತ್ಕಾಲಿಕ ಜವಬ್ದಾರಿಯೇ ಪೂರ್ಣಾವಧಿಯಾಗಿ ಮಾಡಬೇಕಾಗುವುದು. ಯಾರದೋ ಮಾತಿನ ಆಧಾರದ ಮೇಲೆ ನೀವು ನಿಮ್ಮವರನ್ನು ದ್ವೇಷಿಸಬಹುದು. ಉದ್ಯೋಗದಲ್ಲಿ ಒತ್ತಡವಿದ್ದು ಅದನ್ನು ನಿಭಾಯಿಸುವ ಕ್ರಮವನ್ನು ಕಲಿತುಕೊಳ್ಳಿ. ನಿಮ್ಮೊಳಗೆ ಸಿಟ್ಟಿನಿಂದ ಕುದಿಯುವಿರಿ. ಆಪ್ತರ ಜೊತೆ ಒಂದಿಷ್ಟು ಸಮಯವನ್ನು ಕಳೆಯಬಹುದು.

ಕುಂಭ ರಾಶಿ:

ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯವಾಗುತ್ತವೆ. ಬಡ್ತಿಯನ್ನು ಪಡೆಯಲು ನಾನಾ ಪ್ರಯತ್ನ ನಡೆಯಲಿದೆ. ಇಂದು ನ್ಯಾಯಾಲಯದಲ್ಲಿ ತೀರ್ಪು ಬರಲಿದೆ. ಎಂತಹದೇ ತೀರ್ಮಾನ ಬಂದರೂ ಸ್ವೀಕರಿಸಿ‌. ಹಿರಿಯರಿಂದ ಆಶೀರ್ವಾದವು ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ನೀವು ಲಾಭಗಳಿಸಬಹುದಾಗಿದೆ‌. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡುವರು.

ಮೀನ ರಾಶಿ:

ಸ್ವಬುದ್ಧಿಯನ್ನು ಬಳಸಿಯೇ ಕಾರ್ಯಗಳನ್ನು ಮಾಡಿ. ನಿಮ್ಮ ಪ್ರೇಮವು ಸನ್ಮಾರ್ಗದಲ್ಲಿ ಕರೆದುಕೊಂಡು ಹೋಗದು. ಜಾಗೃತಿ ಮೊದಲಾದ ಸಾಮಾಜಿಕ ಕಾರ್ಯಗಳಿಗೆ ತೆರಳಿ ಒಂಟಿತನವನ್ನು ದೂರಮಾಡಿಕೊಳ್ಳುವಿರಿ. ಇಂದು ನಿಮಗೆ ಹೊಸತನ್ನೇನಾದರೂ ಮಾಡುವ ಮನಸ್ಸಿದ್ದರೂ ಬೇಕಾದ ವ್ಯವಸ್ಥೆ, ಪರಿಸ್ಥಿತಿಗಳು ಇಲ್ಲದೇ ನಿಲ್ಲಿಸಬೇಕಾದೀತು. ಅನುಭವಿಗಳ ಮಾರ್ಗದರ್ಶನ ಪಡೆಯಿರಿ. ಮಾತನ್ನು ಹಿತವೂ ಮಿತವೂ ಆಗುವಂತೆ ಮಾಡಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಆಯುಷ್ಮಾನ್, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:01 – 15:38, ಯಮಗಂಡ ಕಾಲ 05:57 – 07:34, ಗುಳಿಕ ಕಾಲ 09:10 – 10:47

-ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More