ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್. 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವೈಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ 15:50 ರಿಂದ 17:27ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:21 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 14:13ರ ವರೆಗೆ.
ಧನು ರಾಶಿ :ಇಂದು ಕಛೇರಿಯಲ್ಲಾಗಲಿ ನಿಮ್ಮ ಮಾತನ್ನು ಬೆಂಬಲಿಸತ್ತಾರೆ. ಅನಿರೀಕ್ಷಿತ ಸಂಪತ್ತು ಸಿಗುವ ಸಾಧ್ಯತೆ ಇದೆ. ಇಂದು ಬಂದ ಅತಿಥಿಯ ಜೊತೆ ಹರಟೆಯನ್ನು ಹೊಡೆಯುತ್ತೀರಿ. ಕಛೇರಿಯ ಕೆಲಸದ ನಡುವೆ ಕುಟುಂಬದ ಜೊತೆ ಸಮಯವನ್ನು ಕಳೆಯುವುದು ಕಷ್ಡವಾದೀತು. ಸ್ತ್ರೀಯರ ಜೊತೆಗಿನ ಸಂಬಂಧ ಹಾಳಾಗುವುದು. ಮನೆಯಲ್ಲಿ ನಡೆದ ಕಲಹದಿಂದ ಕಛೇರಿಯಲ್ಲಿ ಕೆಲಸ ಮಾಡಲು ಅಸಾಧ್ಯವಾದೀತು. ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪಬಹುದು. ಬಂಧುಗಳು ತಾವು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು. ಕೆಲಸವಿಲ್ಲದೇ ಮನೆಯಲ್ಲಿ ಕುಳಿತಿರುವುದು ಹಿಂಸೆಯಾದೀತು. ಆತುರಾತುರದಿಂದ ನೀವು ಮಾಡುವ ನಿರ್ಧಾರಗಳು ಮುಜುಗರ ಉಂಟುಮಾಡಲಿದೆ. ನಿಮಗೆ ಪ್ರಶಂಸೆಯು ಬಲವನ್ನು ಕೊಡುವುದು. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು.
ಮಕರ ರಾಶಿ :ಇಂದು ನಿಮಗೆ ಸೇವೆಯಲ್ಲಿ ಸಂತೋಷ ಸಿಗಲಿದೆ. ನೀವು ತೊಂದರೆಗೆ ಸಿಲುಕದಂತೆ ದಾಟಲು ನಿಮಗೆ ಯಾರಿಂದಲಾದರೂ ಸೂಚನೆ ಬರಬಹುದು. ಇಂದು ನಿಮ್ಮ ಕೆಲಸವನ್ನು ಕೇಳಿ ಸಲಹೆಗಳನ್ನು ಕೊಡಲು ಯಾರಾದರೂ ಬರಬಹುದು. ರಾಜಕೀಯ ವ್ಯಕ್ತಿಗಳಿಗೆ ಓಡಾಟ ಹೆಚ್ಚಾಗಿ, ಹೆಚ್ಚು ಜನಸಂಪರ್ಕ ಮಾಡಬೇಕಾದ ಅನಿವಾರ್ಯವಿರುತ್ತದೆ. ಬರಬೇಕಾದ ಹಣವು ಮಧ್ಯವರ್ತಿಗಳ ಕೈಯ್ಯಲ್ಲಿರುತ್ತದೆ. ಕೆಲವನ್ನು ಕೇಳಿ ಪಡೆಯಬೇಕಾಗುವುದು. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ಮಕ್ಕಳು ನಿಮ್ಮನ್ನು ವಿಧವಿಧವಾಗಿ ಪ್ರಶ್ನಿಸಬಹುದು. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ.
ಕುಂಭ ರಾಶಿ :ಆತುರದಲ್ಲಿ ಏನಾದರೂ ನಿರ್ಧಾರವನ್ನು ತೆಗದುಕೊಳ್ಳಬೇಡಿ. ಪ್ರತ್ಯಕ್ಷವಾಗಿ ಕಂಡಿದ್ದು ಮಾತ್ರ ಸತ್ಯವಲ್ಲವೆಂಬುದನ್ನು ನೀವು ಅರಿತುಕೊಳ್ಳಬೇಕು. ಎಷ್ಟೋ ದಿನದ ಸಾಲಗಳು ಇಂದು ಮುಕ್ತಾಯಗೊಳ್ಳುವುವು. ಕಛೇರಿಯಿಂದ ಬಂದ ಊಹಾಪೋಹ ಸುದ್ದಿಗಳಿಂದ ವಿಕ್ಷಿಪ್ತಗೊಳ್ಳಬೇಡಿ. ಆರೋಗ್ಯದ ವಿಚಾರದಲ್ಲಿ ನೆಮ್ಮದಿ ಇರಲಿದೆ. ಹತ್ತಿರದ ವ್ಯಕ್ತಿಗಳು ಕಾರಣಾಂತರಗಳಿಂದ ದೂರಾಗಬಹುದು. ಸ್ವಂತ ವ್ಯವಹಾರಗಳಿಗೆ ಮಧ್ಯವರ್ತಿಗಳನ್ನು ಬಳಸಿಕೊಳ್ಳಬೇಡಿ. ನಿಮ್ಮ ಮೇಲಿನ ನಂಬಿಕೆಯಿಂದ ಸುಳ್ಳನ್ನೂ ನಂಬುವ ಸಾಧ್ಯತೆ ಇದೆ. ಒತ್ತಡವುಂಟು ಮಾಡುವ ಕೆಲಸಗಳನ್ನು ಕೈಬಿಡಿ. ಸಮಯ ಸಂದರ್ಭಗಳನ್ನು ನೋಡಿಕೊಂಡು ಮಾತನಾಡಿ. ಅಪಹಾಸ್ಯಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆಬಿದೆ. ನಿಮಗೆ ಸಿಗುವ ಸೂಚನೆಗಳನ್ನು ಗಮನಿಸಿಕೊಂಡು ವ್ಯವಹಾರಾದಿಗಳನ್ನು ಮಾಡಿ. ಸ್ನೇಹವು ಬೇರೆಯಾಗಲಿದೆ. ಯಾರ ಮೇಲಾದರೂ ದೋಷಾರೋಪ ಮಾಡುವ ಸಂಭವವಿದೆ.
ಮೀನ ರಾಶಿ :ಇಂದು ಧಾರ್ಮಿಕ ಕಾರ್ಯಗಳಿಂದ ನಿಮ್ಮ ಹಣದ ಸಂಪಾದನೆಯಾಗಲಿದೆ. ಇದು ನಿಮ್ಮ ಮನಸ್ಸಿಗೆ ಶಾಂತಿಯನ್ನೂ ನೆಮ್ಮದಿಯನ್ನೂ ನೀಡುತ್ತದೆ. ಹಾಸ್ಯದಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ತಾಳ್ಮೆಯನ್ನು ಇಟ್ಟುಕೊಂಡು ಮಾತನಾಡಿ. ಏನಾದರೂ ಪ್ರಯೋಜನವಾದೀತು. ಸಂಬಂಧದಲ್ಲಿ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಬೇಕಿದೆ. ಸಿಟ್ಟನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಆಪ್ತರ ನಡುವಿನ ಸಂಬಂಧವು ಹಾಳಾಗಲಿದೆ. ಸಂಗಾತಿಯ ಆದಾಯವು ಹೆಚ್ಚಾಗಲಿದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಪ್ರಯಾಣ ಮಾಡಲಿರುವಿರಿ. ವಸ್ತುಗಳು ಕಾಣೆಯಾಗಬಹುದು. ಎಲ್ಲವನ್ನೂ ನಿಮ್ಮ ಮೇಲೆ ಹೇರಬಹುದು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ.