Horoscope: ದೂರ ಪ್ರಯಾಣ ಮಾಡುವ ಸಾಧ್ಯತೆ, ವಾಹನ ಚಲಾಯಿಸುವಾಗ ಎಚ್ಚರ ಅಗತ್ಯ!
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 05 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಏಪ್ರಿಲ್ 05) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸಾಧ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03ರಿಂದ ಮಧ್ಯಾಹ್ನ 12:35ರ ವರೆಗೆ, ಯಮಘಂಡ ಕಾಲ 15:40 ರಿಂದ 17:12 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:59 ರಿಂದ ಬೆಳಗ್ಗೆ 09:31ರ ವರೆಗೆ.
ಸಿಂಹ ರಾಶಿ: ಇಂದು ಯಾರದೋ ಜೊತೆ ವ್ಯಾಪಾರದ ಕಾರಣಕ್ಕೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ನೀವು ವಾಹನವನ್ನು ಚಾಲನೆ ಮಾಡುವುದು ಬೇಡ. ಪರರ ದೃಷ್ಟಿ ನಿಮ್ಮ ಮೇಲೆ ಬೀಳಲಿದೆ. ಎಲ್ಲ ಸೋಲುಗಳನ್ನು ಪಾಠವನ್ನಾಗಿ ಸ್ವೀಕರಿಸಿ, ಸಂತೋಷವೂ ಸಿಗುವುದು. ಪುತ್ರೋತ್ಸವದ ಆನಂದ ನಿಮ್ಮ ಪಾಲಿಗಿದೆ. ನೆರೆ-ಹೊರೆಯವರ ಜೊತೆ ಜಗಳಕ್ಕೆ ಹೋಗಬೇಡಿ. ನೀವು ಕೊಟ್ಟ ಹಣವು ಬರಬೇಕಾದ ಕಡೆಯಿಂದ ಬಾರದೇ ಇರಬಹುದು. ಮರೆವಿನ ಶಕ್ತಿ ಅತಿಯಾದಂತೆ ತೋರುವುದು. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ.
ಕನ್ಯಾ ರಾಶಿ: ನೀವು ಹೊಸ ವಸ್ತುಗಳನ್ನು ಖರೀದಿಸುವಿರಿ. ಇದರಿಂದ ಮನೆಯಲ್ಲಿ ಕಿರಿಕಿರಿಯ ವಾತಾವರಣವೂ ನಿರ್ಮಾಣವಾಗುವುದು. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ಔಷಧೀಯ ವಸ್ತುಗಳಿಂದ ಹೆಚ್ಚು ಲಾಭವಿರಲಿದೆ. ಯಾವ ಮಾತನ್ನೂ ಯೋಚಿಸದೇ ಕೊಡಬೇಡಿ. ಅದೇ ಮುಳುವಾದೀತು. ಸಂಗಾತಿಯ ಸೌಂದರ್ಯಕ್ಕೆ ಮಾರುಹೋಗಬೇಡಿ. ಎಲ್ಲರ ಜೊತೆ ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಆಪತ್ತು ಎದುರಾದಾಗ ಅಂಬಿಕೆಯನ್ನು ಆರಾಧಿಸಿ. ಯಾವ ಕಾರ್ಯವನ್ನೂ ಪೂರ್ಣವಾದ ಮನಸ್ಸಿನಿಂದ ಮಾಡಲಾರಿರಿ. ನಿಮ್ಮ ಬಗ್ಗೆ ನಂಬಿಕೆ ಕಡಿಮೆ ಆಗಬಹುದು. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವಿನಾಕಾರಣ ವಾಗ್ವಾದದಿಂದ ನೀವು ಬೇಸರವಾಗಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ.
ತುಲಾ ರಾಶಿ: ಇಂದು ಮಂದಗತಿಯಲ್ಲಿ ಸಾಗುತ್ತಿದ್ದ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳು ವೇಗವನ್ನು ಪಡೆಯುವುವು. ವ್ಯರ್ಥ ಓಡಾಟಗಳು ಆಗುತ್ತವೆ. ಆ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಸಂಗಾತಿಯೊಡನೆ ಸಂತೋಷದಿಂದ ಸಲ್ಲಾಪಮಾಡುತ್ತ ಸಮಯ ಸರಿಯುವುದು. ಭೂಮಿಯನ್ನು ಮಾರಾಟ ಮಾಡಲು ಪ್ರಯತ್ನಿಸಿದರೆ ನಿಮ್ಮ ಬೆಲೆಗೆ ಸರಿಹೊಂದುವಂತೆ ಖರೀದಿಯಾಗುವುದು. ಅತಿಯಾದ ಮಾಧುರ್ಯವು ದೇಹವನ್ನು ಹಾಳುಮಾಡುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮ್ಮ ಮಾತುಗಳಿಗೆ ಪ್ರಾಶಸ್ತ್ಯ ಸಿಗಬಹುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.
ವೃಶ್ಚಿಕ ರಾಶಿ: ಇಂದು ನಿಮ್ಮವರ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವತ್ತ ನಿಮ್ಮ ಗಮನವಿರಲಿದೆ. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಬಹಳ ದಿನಗಳಿಂದ ಹೋಗಬೇಕು ಎಂದುಕೊಂಡ ಸ್ಥಳಗಳಿಗೆ ಹೋಗಿ ಬರುತ್ತೀರಿ. ನಿಮ್ಮ ಬಗ್ಗೆ ಪೂರ್ವಾಗ್ರಹದಿಂದ ಕೂಡಿರುವವರಿಗೆ ನಿಮ್ಮ ನಿಜಸ್ಥಿತಿಯನ್ನು ತಿಳಿಸುವಿರಿ. ಸಂಪಾದನೆ ಹೆಚ್ಚಾಗುವುದು. ಮನೋರಂಜನೆಯ ಕಾರ್ಯಕ್ರಮಗಳಿಗೆ ಭಾಗವಹಿಸಬಹುದು. ಇಂದಿನ ನಿಮ್ಮ ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಯಾವುದನ್ನೂ ಸಡಿಲ ಮಾಡಿಕೊಳ್ಳದೇ ಮುಗಿಸಿ. ಚರಾಸ್ತಿಯನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯಬಹುದು. ವೃತ್ತಿಯ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ಸಜ್ಜನರ ಕೂಟದಲ್ಲಿ ಭಾಗವಹಿಸುವಿರಿ. ಸಂಜೆಯ ವೇಳೆಗೆ ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ.




