Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ

Daily Horoscope Mach 30: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ದ್ವಾದಶೀ ತಿಥಿಯ ಸೋಮವಾರದಂದು ಭಾವದ ಮೇಲೆ ಬುದ್ಧಿಯ ಪ್ರಯೋಗ, ಆಸೆಗೆ ಕೌಟುಂಬಿಕ ವಿವಾದ, ಅಪರೂಪದ ವ್ಯಕ್ತಿಗಳ ಭೇಟಿ, ಹೂಡಿಕೆ ನಷ್ಟ, ಅಧಿಕ ಕೋಪ ಇವೆಲ್ಲ ಈ ದಿನದಲ್ಲಿ ಇರಲಿದೆ.

Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ
Horoscope
Image Credit source: istockphoto
Edited By:

Updated on: Mar 30, 2026 | 12:02 AM

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಸೋಮ ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಧೃತಿ, ಕರಣ : ಭದ್ರ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:54 – 09:26, ಯಮಗಂಡ ಕಾಲ 10:57 – 12:29, ಗುಳಿಕ ಕಾಲ 14:00 – 15:32

ಮೇಷ ರಾಶಿ: ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು ಎಂದಿದ್ದರೂ ಆಗದು. ಸಂಸಾರವನ್ನು ಮುನ್ನಡೆಸುವ ಚಾತುರ್ಯವನ್ನು ನೀವು ತಿಳಿದುಕೊಳ್ಳುವಿರಿ. ಸಂಗಾತಿಯ ಜೊತೆ ಮಾತು ಮಿತಿಮೀರಬಹುದು.‌ ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನೀವು ಕೆಲವು ಹೊಸ ಒಪ್ಪಂದಗಳ ಲಾಭವನ್ನು ಪಡೆಯುತ್ತೀರಿ. ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆತಂಕ ಪಡುವಿರಿ. ಕುಟುಂಬದ ಸದಸ್ಯರ ಪ್ರೀತಿಯು ಸಿಕ್ಕಿ ಹರ್ಷಿಸುವಿರಿ.

ವೃಷಭ ರಾಶಿ: ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸುತ್ತೀರಿ. ವ್ಯಾಪಾರ ಯೋಜನೆಯನ್ನು ಪೂರ್ಣಗೊಳಿಸಲು ನೀವು ಹೆಚ್ಚು ಗಮನ ಹರಿಸಬೇಕು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ಪರಸ್ಪರ ಸಹಕಾರದ ಭಾವನೆ ನಿಮ್ಮೊಳಗೆ ಉಳಿಯುತ್ತದೆ. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ. ಇನ್ನೊಬ್ಬರನ್ನು ಸರಿ ಮಾಡಲು ಹೋಗಿ ನೀವೇ ಹಾಳಾಗಬಹುದು.

ಮಿಥುನ ರಾಶಿ: ಜೀವನದ ಗುರಿಯೊಂದನ್ನು ಸಾಧನೆಯಾಗಲಿದೆ. ಹಳೆಯ ಕೆಲಸಗಳು ಅತಿ ವೇಗವಾಗಿ ನೆರವೇರಲಿವೆ. ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಯಾವುದೇ ಹೊರಗಿನವರಿಗೆ ಬಹಿರಂಗಪಡಿಸುವುದು ಬೇಡ. ಯಾರಾದರೂ ಲಾಭ ಪಡೆಯಲು ಪ್ರಯತ್ನಿಸಬಹುದು. ನೀವು ಶುಭ ಸಮಾರಂಭಗಳಲ್ಲಿ ಭಾಗವಹಿಸಬಹುದು. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ಕೊಡುವುದು. ನಿಮಗೆ ಅಭದ್ರತೆಯು ಕಾಡಬಹುದು. ಸಂಗಾತಿಯು ನಿಮಗೆ ಬೇಕಾದ ಹಣವನ್ನು ನೀಡುವರು. ಸಂಶೋಧನೆಯು ನಿಮಗೆ ಖುಷಿ ಕೊಡುವುದು.

ಕರ್ಕಾಟಕ ರಾಶಿ: ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗುವುದು. ಕೆಲವು ಪ್ರಮುಖ ಚರ್ಚೆಯಲ್ಲಿ ಭಾಗವಹಿಸಬಹುದು. ವ್ಯವಹಾರದಲ್ಲಿ ಕೆಲವು ಹಳೆಯ ಯೋಜನೆಗಳಿಂದ ನೀವು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು. ಇದ್ದ ನಿಮ್ಮ ಸ್ವಭಾವದಲ್ಲಿ ಪರಿವರ್ತನೆ ಕಾಣಿಸಿಕೊಳ್ಳುವುದು. ನಿಮ್ಮ ವಸ್ತುಗಳ ಉಪಯೋಗವನ್ನು ನೀವು ಬಹಳ ನಿರ್ಲಕ್ಷ್ಯದಿಂದ ಮಾಡುವಿರಿ.

ಸಿಂಹ ರಾಶಿ: ವ್ಯಾಪಾರ ವ್ಯವಹಾರಗಳು ಚೇತರಿಕೆ ಕಾಣಲಿವೆ ಹಾಗೂ ಆದಾಯ ವೃದ್ಧಿಸಲಿವೆ. ನೀವು ಕೆಲಸಕ್ಕೆ ಯೋಗ್ಯವಾದ ಗೌರವವನ್ನೂ ಪಡೆಯಬಹುದು. ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವುದು. ನಿಮ್ಮ ವಿರೋಧಿಗಳು ನಿಮಗೆ ತೊಂದರೆ ನೀಡಲು ಪ್ರಯತ್ನಿಸುತ್ತಾರೆ. ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಸೋಲಿಸಲು ಸಾಧ್ಯವಾಗುತ್ತದೆ. ಅಪರೂಪದ ವ್ಯಕ್ತಿಗಳ ಭೇಟಿಯಾಗಲಿದೆ. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಶಗಳಿಗೆ ಕಾರಣವಾಗುವುದು. ಯಾರ ಮೇಲಾದರೂ ಮುನಿಸು ತಾತ್ಕಾಲಿಕವಾಗಿ ಇರುವುದು.

ಕನ್ಯಾ ರಾಶಿ: ನೀವು ಚಿಂತನಶೀಲವಾಗಿ ಕೆಲಸ ಮಾಡಿದರೆ, ಅದು ನಿಮಗೆ ಉತ್ತಮ. ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸಿದ್ದರೆ, ನಿಮ್ಮ ಆಸೆಯೂ ಈಡೇರಬಹುದು. ನಿಮ್ಮ ಮಗುವಿಗೆ ನೀವು ಹೊಸ ವಾಹನವನ್ನು ಮನೆಗೆ ತರಬಹುದು. ನೀವು ಸ್ನೇಹಿತನ ಜೊತೆ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು. ನಿಮ್ಮ ಆಲೋಚನೆಯನ್ನು ಕೆಲವಷ್ಟಕ್ಕೆ ಸೀಮಿತಗೊಳಿಸಿಕೊಳ್ಳುವಿರಿ. ಉತ್ತಮ ವಸ್ತುಗಳು ಸಿಕ್ಕರೂ ಅದನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ.

ತುಲಾ ರಾಶಿ; ಯಾವುದೇ ವ್ಯತಿರೇಕ ಸನ್ನಿವೇಶಗಳನ್ನು ನಿಭಾಯಿಸಲು ಪ್ರಯತ್ನಿಸಬೇಕಾಗುತ್ತದೆ. ಮನೆಯ ಅಲಂಕಾರದ ಬಗ್ಗೆಯೂ ನೀವು ಸಂಪೂರ್ಣ ಗಮನ ಹರಿಸುವಿರಿ. ಕುಟುಂಬದ ಸದಸ್ಯರಿಂದ ನೀವು ಆಚ್ಚರಿಯ ಉಡುಗೊರೆಯನ್ನು ಪಡೆಯಬಹುದು. ಹೆತ್ತವರ ಆಶೀರ್ವಾದವು ನಿಮಗೆ ಉತ್ಸಾಹವನ್ನು ಕೊಡಬಹುದು. ನಿಮ್ಮ ನಿರ್ಧಾರವನ್ನು ಮತ್ತೋಬ್ಬರಿಗೆ ಹೇರುವುದು ಬೇಡ. ಅನುಭವಿಗಳ ಮಾರ್ಗದರ್ಶನದಲ್ಲಿ ಮುನ್ನಡೆಯುವಿರಿ. ಆದಷ್ಟು ಸಮಾಧಾನದಿಂದ ಶತ್ರುಗಳನ್ನು ಗೆಲ್ಲಲು ಪ್ರಯತ್ನಿಸಿ.

ವೃಶ್ಚಿಕ ರಾಶಿ: ನೀವು ಕುಟುಂಬದ ಜೊತೆ ಹೊರಗೆ ಹೋಗಲು ಯೋಜಿಸಬಹುದು. ಆದರೆ ಕುಟುಂಬದ ಸಮಸ್ಯೆಗಳನ್ನು ಒಟ್ಟಿಗೆ ಪರಿಹರಿಸಲೂ ನೀವು ಪ್ರಯತ್ನಿಸಬೇಕು. ಇಲ್ಲದಿದ್ದರೆ ಅದು ನಿಮ್ಮ ಸಂಬಂಧಗಳಲ್ಲಿ ಬಿರುಕು ಉಂಟುಮಾಡಬಹುದು. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ನಿಮ್ಮ ಉದ್ಯಮದ ಅಭಿವೃದ್ಧಿಗೆ ತುರ್ತು ಸಭೆಯನ್ನು ಮಾಡಬೇಕಾದೀತು. ಹೊಸ ವಾಹನ ಖರೀದಿಯ ಪ್ರಸ್ತಾಪವನ್ನು ಸದ್ಯ ತಳ್ಳಿಹಾಕುವಿರಿ. ಆರ್ಥಿಕ ಬಲವನ್ನು ನೋಡಿ ಖರ್ಚಿನ ನಿರ್ಧಾರವನ್ನು ಮಾಡಿ.

ಧನು ರಾಶಿ: ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ನಿಮ್ಮ ಕೆಲಸದಲ್ಲಿ ನೀವು ಅನಿರೀಕ್ಷಿತ ಭಡ್ತಿಯನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಮಕ್ಕಳ ವೃತ್ತಿಜೀವನದ ಬಗ್ಗೆ ನೀವು ಪ್ರಮುಖ ನಿರ್ಧಾರವನ್ನು ಹಿರಿಯರು ವಿಚಾರಿಸುವರು. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಇನ್ನೂ ಉತ್ತಮವಾಗಿರುತ್ತದೆ. ಅಗ್ನಿಯ ಭೀತಿಯು ನಿಮಗೆ ಅಧಿಕವಾಗಿ ಕಾಡುವುದು. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡಾಡುವುದು.

ಮಕರ ರಾಶಿ: ಇಂದು ಮುಖ್ಯವಾಗಿ ಯಾವುದೇ ಕಾರ್ಯಕ್ಕೆ ಆರ್ಥಿಕ ಮುಗ್ಗಟ್ಟು ಬಂದು ಅರ್ಧಕ್ಕೆ ನಿಲ್ಲಿಸುವ ಸಾಧ್ಯತೆ ಇದೆ. ಆದರೆ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಕೈಲಾದಷ್ಟು ಪ್ರಯತ್ನಿಸುತ್ತೀರಿ. ನಿಮ್ಮ ಸಹೋದರನ ಜೊತೆ ನಿಮ್ಮ ಆಪ್ತತೆಯು ಹೆಚ್ಚಾಗುತ್ತದೆ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳಬಹುದು. ಆಹಾರವು ಸರಿಯಾಗಿ ಸಿಗದೇ ನಿಮಗೆ ಸಂಕಟವಾಗಬಹುದು. ದುಡಿಮೆಯ ಬೆನ್ನೇರಿ ಸಂಬಂಧಗಳನ್ನು ಸಡಿಲಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಒಮ್ಮನಸ್ಸು ಬರುವುದು ಕಷ್ಟವಾಗುವುದು.

ಕುಂಭ ರಾಶಿ: ಯಾರ ಹೊಗಳಿಕೆಗೂ ಮರುಳಾಗದಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನೀವು ವೈಯಕ್ತಿಕ ವಿಷಯಗಳ ಮೇಲೆ ಸಂಪೂರ್ಣ ಗಮನವನ್ನು ಹೊಂದಿದ್ದರೆ ನಿಮಗೆ ಒಳ್ಳೆಯದು. ಬಂಧುಗಳಿಂದ ಕೆಲಸವು ಹಾಳಾಗಬಹುದು. ಕಾನೂನಿಗೆ ವಿದ್ಧವಾದ ಕಾರ್ಯವನ್ನು ಸಮರ್ಥಿಸಿಕೊಳ್ಳದಿರಿ. ಸಂಗಾತಿಯ ಮಾತುಗಳು ನಿಮಗೆ ಬೇಸರ ತರಿಸಬಹುದು.

ಮೀನ ರಾಶಿ: ನೀವು ಇಂದು ಹೊರಗಿನವರಿಗೆ ಯಾವುದೇ ನಿಮ್ಮ ಆಂತರಿಕ ಮಾಹಿತಿಯನ್ನು ಬಹಿರಂಗಪಡಿಸಬಾರದು. ರಕ್ತ ಸಂಬಂಧಿಗಳು ಮೊದಲಿಗಿಂತ ಉತ್ತಮವಾಗಿರುತ್ತಾರೆ. ನಿಮ್ಮ ಯೋಜನೆಗಳನ್ನು ನೀವು ವೇಗವಾಗಕಸುವಿರಿ. ಇಂದು ನೀವು ದೇವರ ಆರಾಧನೆಯಲ್ಲಿ ಮಗ್ನರಾಗುವಿರಿ. ಸಿಟ್ಟಾಗುವ ಸ್ಥಿತಿಯಲ್ಲಿಯೂ ನೀವು ಶಾಂತರಾಗುವಿರಿ. ಮನೆಯ ಕೆಲಸವೆಲ್ಲವೂ ಹಾಗೆಯೇ ಇರಿಸಿಕೊಂಡು ಬಂಧುಗಳ ಮನೆಗೆ ಹೋಗಲಿದ್ದೀರಿ.

ಲೋಹಿತ ಹೆಬ್ಬಾರ್-8762924271 (what’s app only)

Published On - 12:02 am, Mon, 30 March 26

Follow Us