AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿ ಭವಿಷ್ಯ; ಅಪರಿಚಿತ ಸ್ನೇಹಿತರ ಜೊತೆ ಹೆಚ್ಚು ಹತ್ತಿರವಾಗಬೇಡಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 19 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಅಪರಿಚಿತ ಸ್ನೇಹಿತರ ಜೊತೆ ಹೆಚ್ಚು ಹತ್ತಿರವಾಗಬೇಡಿ
ದಿನಭವಿಷ್ಯ: ಅನಾರೋಗ್ಯಕ್ಕೆ ಒಳಗಾಗಬಹುದು, ಆದಷ್ಟು ಹೊರಗಡೆ ತಿನ್ನುವುದನ್ನು ತಪ್ಪಿಸಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 19, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಸಂಜೆ 05:17 ರಿಂದ 06:53ರ ವರೆಗೆ, ಯಮಘಂಡ ಕಾಲ 12:29 ರಿಂದ ಮಧ್ಯಾಹ್ನ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:41 ರಿಂದ ಸಂಜೆ 05:17ರ ವರೆಗೆ.

ಸಿಂಹ ರಾಶಿ: ನೀವು ಮನಸ್ಸಿಗೆ ಹಿಡಿಸದ ಸಂಗತಿಗಳ ವಿರುದ್ಧ ಧೈರ್ಯವಾಗಿ ನಿಲ್ಲುವ ಸಾಮರ್ಥ್ಯ ಇರುವುದು. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ಫಲ ನೀಡುತ್ತವೆ. ಸಮೀಪದ ಸಂಬಂಧಿಗಳ ಆರೋಗ್ಯದಲ್ಲಿ ಸುಧಾರಣೆಯು ಕಾಣಬಹುದು. ಭಾವೋದ್ವೇಗಕ್ಕೆ ಒಳಗಾಗಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಡಿ. ಸಮಯದ ಅಭಾವದಿಂದ ನೀವು ಅದನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ. ರಾಜಕೀಯ ಪ್ರೇರಿತದಿಂದ ನಿಮ್ಮ ಬಗ್ಗೆ ಸುಳ್ಳು ಸುದ್ದಿಗಳು ಬರಬಹುದು. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ಮಕ್ಕಳ ಏಳಿಗೆಯಲ್ಲಿ ನಿಮಗೆ ಸಂತೋಷ ಇರುವುದು. ನಿಂದನೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳಲು ಮಾರ್ಗವು ಸಿಗದೇ ಹೋಗಬಹುದು.

ಕನ್ಯಾ ರಾಶಿ: ಇಂದು ಕುಟುಂಬವನ್ನು ಆರ್ಥಿಕವಾಗಿ ಗಟ್ಟಿ ಮಾಡುವ ಬಗ್ಗೆ ಯೋಚನೆ ಇರುವುದು. ಸಮಯದಲ್ಲಿ ನೀವು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ. ಇಂದು ಸಮಯವನ್ನು ವ್ಯರ್ಥ ಮಾಡಬೇಡಿ. ನಿಮ್ಮ ಆಲೋಚನೆಗಳಿಗೆ ಆದ್ಯತೆ ನೀಡಿ. ಈ ಸಮಯದಲ್ಲಿ ವ್ಯಾಪಾರದಲ್ಲಿ ಕೆಲವು ಹೊಸ ಕೊಡುಗೆಗಳು ಇರಬಹುದು. ಹೆಚ್ಚು ಯೋಚಿಸಿ ಸಮಯ ವ್ಯರ್ಥ ಮಾಡಬೇಡಿ. ವಾತಾವರಣದ ಬದಲಾವಣೆಯಿಂದ ಆರೋಗ್ಯವು ಹಾಳಾಗಬಹುದು. ನಾನಾ ರೀತಿಯಲ್ಲಿ ಹೂಡಿಕೆಯನ್ನು ಮಾಡುವ ಮನಸ್ಸಾಗುವುದು. ಸ್ವಾಭಿಮಾನವನ್ನು ಬಿಟ್ಟು ಇರುವುದು ಅಸಾಧ್ಯ ಎನಿಸಬಹುದು. ಕೆಲವರಿಂದ ತಪ್ಪಿಸಿಕೊಳ್ಳಲು ನೋಡುವಿರಿ. ಅನಾರೋಗ್ಯವು ನೆಪವಾಗಬಹುದು. ಯಾವುದೋ ಕಾರ್ಯಕ್ಕೆ ಸಹಾಯವು ಸಿಗದೇ ಕಷ್ಟವಾಗುವುದು. ಸ್ತ್ರೀಯರಿಗೆ ಸಹಾಯ ಮಾಡಲು ಹೋಗಿ ಹಾಸ್ಯಕ್ಕೆ ಒಳಗಾಗುವಿರಿ. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು.

ತುಲಾ ರಾಶಿ: ಇಂದು ನೀವು ಹಿಂದೆ ಪಡೆದ ಸಾಲವನ್ನು ಬೇರೆ ರೀತಿಯಲ್ಲಿ ಹಿಂದಿರುಗಿಸುವಿರಿ. ಸಮಯದಲ್ಲಿ ಅಹಿತಕರ ಸುದ್ದಿಗಳ ಸೂಚನೆಗಳೂ ಇವೆ. ಇಂದು ಮನಸ್ಸಿನಲ್ಲಿ ಭಯ ಮತ್ತು ಖಿನ್ನತೆಯಂತಹ ವಿಷಯಗಳಿಗೆ ಕಾರಣವಾಗಬಹುದು. ಸ್ನೇಹಿತರೊಂದಿಗೆ ಯಾವುದೇ ರೀತಿಯ ಸಹಯೋಗವನ್ನು ನಿರೀಕ್ಷಿಸಬೇಡಿ. ಸಂಗಾತಿಯ ಮತ್ತು ಕುಟುಂಬದ ಸದಸ್ಯರ ಸಹಕಾರವು ಇರಲಿದೆ. ಹೊಸತನ್ನು ಕಲಿಯುವ ಉತ್ಸಾಹವಿರಲಿದೆ. ನಿಮಗೆ ಧನಾತ್ಮಕ ಶಕ್ತಿಯನ್ನು ಪಡೆಯುವ ತಂತ್ರವು ತಿಳಿದಿರುತ್ತದೆ. ಭೂಮಿಯನ್ನು ಖರೀದಿಸುವ ಸಂದರ್ಭ ಬಂದರೂ ಪೂರ್ತಿ ಹಣವನ್ನು ಸೇರಿಸಲು ಆಗದು. ಯಾರ ಬಳಿಯೂ ಕೆಲಸವಿಲ್ಲ ಎಂದು ಹೇಳಬೇಡಿ. ಯಾರ ತಪ್ಪನ್ನೂ ನೇರವಾಗಿ ಹೇಳದೇ ಅರ್ಥ ಮಾಡಿಸಿ, ತಿದ್ದಿ. ನಿಮ್ಮ ಘನತೆಗೆ ಧಕ್ಕೆ ಬರುವುದು. ಸಹೋದ್ಯೋಗಿಗಳ ಜೊತೆ ಎಲ್ಲಿಗಾದರೂ ಪ್ರಯಾಣ ಮಾಡುವಿರಿ. ಸಮಯಪಾಲನೆಗೆ ಪ್ರಶಂಸೆಯು ಸಿಗುವುದು.

ವೃಶ್ಚಿಕ ರಾಶಿ: ಇಂದು ಭೇಟಿಯಾಗುವ ವ್ಯಕ್ತಿಗಳು ನಿಮ್ಮೊಳಗೆ ಧನಾತ್ಮಕ ಶಕ್ತಿಯನ್ನು ತುಂಬಿಸುವರು. ಕೆಲವು ವೈಫಲ್ಯಗಳು ನಿಮಗೆ ಪಾಠವಾಗಿ‌ ಕಲಿಯಬೇಕು. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ಅಪರಿಚಿತ ಸ್ನೇಹಿತರ ಜೊತೆ ಹೆಚ್ಚು ಹತ್ತಿರವಾಗಬೇಡಿ. ನಿಮ್ಮ ವೈಯಕ್ತಿಕ ಕಾರ್ಯಗಳ ಮೇಲೆ ಗಮನವಿರಲಿ. ಪುಣ್ಯಕ್ಷೇತ್ರಗಳಿಗಾಗಿ ದೂರ ಪ್ರಯಾಣ ಮಾಡಬಹುದು. ಉದ್ಯೋಗವು ಅನುಕೂಲಕರವಾಗಿರುತ್ತದೆ. ಉದ್ಯಮದಲ್ಲಿ ಚಿಂತಿತ ಲಾಭ ಕಾಣದೇ ಚಿಂತೆಯಾಗುವುದು. ಉತ್ಸಾಹದಿಂದ ಇರಲು ನಿಮಗೆ ಮಾರ್ಗಗಳೂ ಕಡಿಮೆ‌ ಇರಬಹುದು. ಇಷ್ಟವಿಲ್ಲದಿದ್ದರೂ ಉದ್ಯೋಗಕ್ಕೆ ತೆರಳಬೇಕಾದೀತು. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಸಣ್ಣ ಕೆಲಸವಾದರೂ ಶ್ರದ್ಧೆಯಿಂದ ಮಾಡುವಿರಿ. ನಿಮ್ಮ ಹೆಚ್ಚಿನವರ ಭೇಟಿಯಾಗುವುದು. ಸಣ್ಣ ಉದ್ಯಮಿಗಳು ಬಂದ ಕೆಲಸವನ್ನು ಬಿಡದೇ ಮಾಡಬೇಕು.

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!