
ಹಳೆಯ ಪ್ರೇಮಿ ವಿವಾಹಸಮಾರಂಭದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಉಪಸ್ಥಿತಿಯು ಇರಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ವ್ಯವಸ್ಥಿತ ಕೆಲಸದಿಂದ ಬೆಲೆ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ಹೊಸ ಒಡನಾಡಿಗಳ ಪರಿಚಯ. ಭವಿಷ್ಯದ ಯೋಜನೆಗಳಿಗೆ ಸ್ಪಷ್ಟತೆ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ.
ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಸಮಸ್ಯೆಗಳು ಬಗೆಹರಿಯುತ್ತವೆ. ಲೌಕಿಕ ಸಂತೋಷವನ್ನು ಅನುಭವಿಸುವಿರಿ. ಶತ್ರುಗಳು ಸೋಲುತ್ತಾರೆ, ಇದರಿಂದ ಯೋಜನೆಗಳು ಯಶಸ್ವಿಯಾಗುತ್ತವೆ. ಕೆಲಸದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹಿರಿಯರಿಂದ ನಿಮಗೆ ಬೆಂಬಲ ಸಿಗುತ್ತದೆ. ಸಣ್ಣ ಅಂತರದಲ್ಲಿ ಅಪಾಯದಿಂದ ಹೊರಬರುವಿರಿ. ನೀವು ಹನಿಮ್ಮ ಆವಿಷ್ಕಾರಕ್ಕೆ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳಬಹುದು.
ಯಾರ ಮಾತ್ಸರ್ಯಕೋ ನೀವು ಗುರಿಯಾಗಬೇಕಾದೀತು. ಆತ್ಮವಿಶ್ವಾಸದಿಂದ ಕಾರ್ಯ ಯಶಸ್ವಿಯಾಗುವುದು. ವೈಯಕ್ತಿಕ ಬದುಕಿನಲ್ಲಿ ನೆಮ್ಮದಿ ಕಾಣಬಹುದು. ಸ್ನೇಹಿತರಿಂದ ಬೆಂಬಲ ಮತ್ತು ನ್ಯಾಯಾಲಯದ ಪ್ರಕರಣಗಳಲ್ಲಿ ಯಶಸ್ಸು ಸಿಗುತ್ತದೆ. ಕಛೇರಿಯಲ್ಲಿ ನಿಮ್ಮ ಯೋಜನೆಗಳನ್ನು ಮೆಚ್ಚಿಕೊಂಡು ಅದನ್ನು ಕಾರ್ಯರೂಪಕ್ಕೆ ತರಲಿದ್ದಾರೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ನಿಮ್ಮ ದ್ವಂದ್ವ ನೀತಿಯು ಮನೆಯವರಿಗೆ ಕಷ್ಟವಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ.
ಹಿರಿಯರ ಜೊತೆ ಮಾತನಾಡುವಾಗ ಪದಗಳ ಮೇಲೆ ಗಮನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಶ್ರಮಕ್ಕೆ ಫಲ ಬೇಕಾದರೆ, ಸಹೋದ್ಯೋಗಿಗಳಿಂದ ಸಹಕಾರವೂ ಅಗತ್ಯ. ಮಾತಿನಲ್ಲಿ ಧೈರ್ಯ ಹಾಗೂ ಮಿತವ್ಯಯ ಇರಲಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮಗೆ ತಪ್ಪಿತಸ್ಥ ಭಾವವು ಮೂಡುವುದು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ.
ಇನ್ನೊಬ್ಬರಿಂದ ನಿಮ್ಮ ವಾಹನಕ್ಕೆ ಅಪಘಾತವಾಗಬಹುದು. ಭಯದ ವಾತಾವರಣದಲ್ಲಿ ಇಂದು ಇರಲಿದ್ದೀರಿ. ವೈದ್ಯಕೀಯ ಕ್ಷೇತ್ರಕ್ಕೆ ಹೋಗಲು ಬಯಸುವವರು ತಮ್ಮ ನಿರ್ಧಾರವನ್ನು ಗಟ್ಟಿ ಮಾಡಳ್ಳಬೇಕಿದೆ. ಅರೆಬೆಂದವರ ಜೊತೆ ಅಪಕ್ವವಾದ ಮಾತುಗಳನ್ನೇ ಆಡಬೇಕು. ಬೇಡದ ವಿಚಾರಕ್ಕೆ ತಲೆ ಹಾಕುವುದು ಬೇಡ. ಈ ದಿನ ನೀವು ಆಲಸ್ಯದಿಂದ ಇರುವಿರಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ.
ಅತಿಯಾದ ಸಲುಗೆಯು ದ್ವೇಷಕ್ಕೆ ಕಾರಣವಾಗಬಹುದು. ನಿಮ್ಮ ದಾಂಪತ್ಯದ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ್ದು ಅದಕ್ಕಾಗಿ ನಿಮ್ಮ ಹಣವನ್ನು ಖರ್ಚು ಮಾಡಬೇಕಾಗಿ ಬರಬಹುದು. ಮಾನಸಿಕ ಒತ್ತಡದ ಕಾರಣ ವಾಹನದಿಂದ ತೊಂದರೆ ಉಂಟಾಗಬಹುದು. ಮೋಸ ಹೋಗುವ ಸಾಧ್ಯತೆಯು ಇರಲಿದೆ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಇನ್ನೊಬ್ಬರ ಬಗ್ಗೆ ತೋರುವ ಸಹಾನುಭೂತಿಯು ಬೇರೆಯವರಿಗೆ ಇಷ್ಟವಾಗುವುದು.
ನಮ್ಮನ್ನು ಇಷ್ಟಪಡುವವರ ಜೊತೆ ನೀವು ಕೆಲವು ಸಮಯವಿರಬೇಕಾಗುತ್ತದೆ. ರಾಜಕೀಯ ವ್ಯಕ್ತಿಗಳಿಂದ ಪ್ರೇರಿತರಾಗಿ ಕಾರ್ಯವನ್ನು ಮಾಡುವಿರಿ. ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಇರಲಾಗದು. ನಿಮಗೆ ಇಂದು ಆದರ್ಶವ್ಯಕ್ತಿತ್ವವು ಸಿಗಲಿದ್ದು ಅವರನ್ನು ಅನುಸರಿಸುವ ಸಾಧ್ಯತೆ ಇದೆ. ನಿಮ್ಮ ಅವಕಾಶವನ್ನು ಬೇರೆಯವರು ಉಪಯೋಗಸಿಕೊಳ್ಳುವರು. ಪ್ರೀತಿಯಲ್ಲಿ ನೀವು ಮೋಸಹೋಗುವ ಸಾಧ್ಯತೆ ಇದೆ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ.
ಇಂದು ಅಪರಿಚಿತ ಕರೆಗಳು ನಿಮ್ಮನ್ನು ಕೆಲಸಕ್ಕೆ ತೊಂದರೆಕೊಡಬಹುದು. ಯಾರದೋ ಕಾರಣಕ್ಕೆ ನಿಮಗೆ ಅಪಮಾನ. ಸಂಪೂರ್ಣ ಮಾಹಿತಿಯ ಜೊತೆ ಅನ್ವೇಷಣೆಗೆ ಮುಂದುವರಿಯಿರಿ. ವ್ಯಕ್ತಿಗಳ ನಿಂದನೆಯನ್ನು ಮಾಡುವ ಕೆಲಸಕ್ಕೆ ವಿರಾಮವನ್ನು ಹೇಳಿ. ಇಲ್ಲವಾದರೆ ನಿಮಗೇ ಕಂಟಕವಾದೀತು. ಮಕ್ಕಳ ವಿದ್ಯಾಭ್ಯಾಸದಲ್ಲಿ ತೃಪ್ತಿ ಕಾಣುವಿರಿ. ನಿಮ್ಮ ಬಂಧುಗಳಿಗೆ ನಿಮ್ಮ ಬಗ್ಗೆ ಕೆಲವು ವಿಚಾರಗಳು ತಿಳಿಯಲಿವೆ. ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ.
ಸೋಲುಂಡು ಅಧರ್ಮ ಮಾರ್ಗದಲ್ಲಿ ನಡೆಯುವ ಮನಸ್ಸು ಮಾಡುವಿರಿ. ಅವಸರದ ನಿರ್ಧಾರದಿಂದ ಅನಂತರ ನಿಮಗೆ ಕಷ್ಟವಾಗಲಿದೆ. ನಿಮ್ಮ ಶ್ರಮದ ಫಲ ಇಂದು ಸಿಗಬಹುದು. ಪೋಷಕರ ಆರೋಗ್ಯದ ಬಗ್ಗೆ ಚಿಂತೆಯಿರಬಹುದು. ಹೊಸ ಕೆಲಸಕ್ಕೆ ಅವಕಾಶಗಳು ಲಭ್ಯವಾಗುತ್ತವೆ. ಕುಟುಂಬದೊಂದಿಗೆ ಪ್ರಯಾಣಿಸಲು ನಿಮಗೆ ಅವಕಾಶ ಸಿಗುತ್ತದೆ. ಭವಿಷ್ಯದ ಕುರಿತು ಯೋಚನೆಯನ್ನು ಮಾಡಲಿದ್ದೀರಿ. ಯಾರನ್ನೋ ನೋಡಿ ನೀವು ಅಸೂಯೆ ಪಡೆಯುವುದು ಬೇಡ. ಯಾವ ಸಂದರ್ಭದಲ್ಲೊಯೂ ಉದ್ವೇಗಕ್ಕೆ ಒಳಗಾಗುವುದು ಬೇಡ.
ಮಾನಸಿಕ ಒತ್ತಡವು ನಿಮ್ಮ ನಿದ್ರಾಭಂಗಕ್ಕೆ ಕಾರಣವಾಗಲಿದೆ. ನಿಮಗೆ ಬರಬೇಕಾದ ಹಣವು ಬರಲಿದೆ. ಮನಸ್ಸಿನಲ್ಲಿ ತುಂಬಾ ಗೊಂದಲವು ಇರಲಿದೆ. ಹಿರಿಯರ ಸಲಹೆಯನ್ನು ಪಡೆಯಿರಿ. ನಿಮ್ಮ ಹಳೆಯ ಸಮಸ್ಯೆಗೆ ಸಹಚರರಿಂದ ಪರಿಹಾರ ಸಿಗುತ್ತದೆ. ಪ್ರಸ್ತುತ ಕೆಲಸಗಳ ಮೇಲೆ ಮಾತ್ರ ಗಮನಹರಿಸಿ. ಶಿಸ್ತನ್ನು ಕಾಪಾಡಿಕೊಳ್ಳಲು ಬಯಸುವಿರಿ. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು.
ಇಂದು ಸಹೋದ್ಯೋಗಿಗಳು ನಿಮಗೆ ಸಿಗುವ ಜವಾಬ್ದಾರಿಯನ್ನು ಸಿಗದಂತೆ ಮಾಡುವರು. ಉದ್ಯೋಗಕ್ಕೆ ಸಂಬಂಧಿಸಿದಂತೆ ಕೆಲವು ಅಡಚಣೆಗಳು ಇರಲಿವೆ. ವಾಹನದಲ್ಲಿ ಸಂಚಾರವನ್ನು ಮಾಡುವುದರಿಂದ ನಿಮಗೆ ಕೆಲವು ಅನಾನುಕೂಲತೆಗಳು ಆಗಬಹುದು. ಬಹಳ ದಿನಗಳಿಂದ ಬಾರದೇ ಇರುವ ಹಣಕ್ಕೆ ಚಿಂತೆ ಮಾಡಿಕೊಳ್ಳುವಿರಿ. ಮೇಲಧಿಕಾರಿಗಳ ಪ್ರಶಂಸೆಯು ನಿಮಗೆ ಮಾಡುವ ಕೆಲಸದಲ್ಲಿ ಉತ್ಸಾಹ ಹೆಚ್ಚಿಸುವುದು. ನ್ಯಾಯ ಸಮ್ಮತವಾಗಿ ಇರಿ.
ಸಂತೋಷದಲ್ಲಿ ಇರುವಾಗಲೇ ನಿಮಗೆ ಒತ್ತಡವನ್ನು ಸೃಷ್ಟಿಮಾಡಬಹುದು. ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿ. ನಿಮ್ಮ ಬುದ್ಧಿಯಿಂದ ನಿಮಗೆ ಆಗಬೇಕಾದ ಕೆಲಸಗಳನ್ನು ಮಾಡಿಕೊಳ್ಳುವಿರಿ. ಮನೆಯಲ್ಲಿ ನಿಮ್ಮ ಮಾತಿಗೆ ಮಹತ್ತ್ವ ಸಿಗಲಿದೆ. ಹಳೆಯ ಸ್ನೇಹಿತರಿಂದ ಪರಿಹಾರ ಬರುವ ಸಾಧ್ಯತೆ ಇದೆ. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿರದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಸಿದ್ಧಿ, ಕರಣ : ಕೌಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:58 – 15:34, ಯಮಗಂಡ ಕಾಲ 05:56 – 07:33, ಗುಳಿಕ ಕಾಲ 09:09 – 10:45
-ಲೋಹಿತ ಹೆಬ್ಬಾರ್-8762924271 (what’s app only)