AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 19 April: ಈ ರಾಶಿಯವರಿಗೆ ಕೆಲವು ಸೂಕ್ಷ್ಮ ವಿಚಾರಗಳು ಅರ್ಥವಾಗದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ, ಶನಿವಾರ ಬಹುದಿನದ ಕಲಹ ಮುಕ್ತಾಯ, ಸಾಮಾಜಿಕ ಕಾರ್ಯಕ್ಕೆ ಸಮ್ಮಾನ, ವಿವಾಹಕ್ಕೆ ಸಿದ್ಧತೆ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 19 April: ಈ ರಾಶಿಯವರಿಗೆ ಕೆಲವು ಸೂಕ್ಷ್ಮ ವಿಚಾರಗಳು ಅರ್ಥವಾಗದು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 19, 2025 | 1:06 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಶಿವ, ಕರಣ: ವಣಿಜ, ಸೂರ್ಯೋದಯ – 06:17 am, ಸೂರ್ಯಾಸ್ತ – 06:45 pm, ಇಂದಿನ ಶುಭಾಶುಭಕಾಲ: ರಾಹು ಕಾಲ 09:25 – 10:58, ಯಮಘಂಡ ಕಾಲ 14:05 – 15:39, ಗುಳಿಕ ಕಾಲ 06:18 – 07:51

ಮೇಷ ರಾಶಿ: ಚರಾಸ್ತಿಯ ರಕ್ಷಣೆ ಕಷ್ಟ. ಆರ್ಥಿಕವಾಗಿ ನಿಮ್ಮನ್ನು ಯಾರಾದರೂ ಕೆಣಕಬಹುದು. ಸಿಕ್ಕಿದ್ದನ್ನು ಸದುಪಯೋಗ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡಿ. ಚಿಕ್ಕಚಿಕ್ಕ ವಿಷಯಗಳಲ್ಲಿಯೇ ಹೆಚ್ಚು ಶ್ರಮ ವಹಿಸುವಿರಿ. ಬಾಂಧವ್ಯದಲ್ಲಿ ಅಭಿಪ್ರಾಯ ಭೇದದಿಂದ ಕಲಹವಾಗಬಹುದು. ಹಣದ ನಷ್ಟದ ಸಂಭವವಿದೆ. ದೂರದ ಬಂಧುಗಳಿಂದ‌ ಕಾರ್ಯ ಮಾಡಬಹುದು. ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ವಿಚಾರವೊರುವುದು. ದೂರಪ್ರಯಾಣದಿಂದ ಆತಂಕ ಸೃಷ್ಟಯಾಗಬಹುದು. ಮನದಲ್ಲಿ ಆತಂಕವಿದ್ದರೂ ಶಾಂತಿಯಿಂದ ವರ್ತಿಸುವಿರಿ. ಅವಶ್ಯಕವೆನಿಸಿದ ಹೂಡಕೆಗಳನ್ನು ಮಾಡಿ. ಸಂಧಾನದಲ್ಲಿ ಔಚಿತ್ಯ ಮಾತುಗಳನ್ನು ಆಡುವಿರಿ. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ಯಾರಾದರೂ ಸುಮ್ಮನೆ ನಿಮ್ಮ ಜೊತೆ ಕಲಹಕ್ಕಾಗಿ ಬರಬಹುದು.

ವೃಷಭ ರಾಶಿ: ನಕಾರಾತ್ಮಕ ವಿಚಾರಗಳು ನಿಮ್ಮ ಗಮನವನ್ನು ಹೆಚ್ಚು ಸೆಳೆಯುವುದು. ಕರಕುಶಲಗಳಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುವುದು ಇಂದು. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಹಣಕಾಸನ್ನು ಹೊಂದಿಸುವುದು ಇಂದು ಕಷ್ಟವಾಗುವುದು. ಹೊಸ ಪರಿಚಯಗಳಿಗೆ ದೂರವಿರಲು ಪ್ರಯತ್ನಿಸಿ. ತಮ್ಮಂದಿರು ಮತ್ತು ಅಣ್ಣಂದಿರೊಡನೆ ಜಗಳ ಆಗದಂತೆ ನೋಡಿಕೊಳ್ಳಿ. ಕೆಲ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆತು ವಿದೇಶಕ್ಕೆ ತೆರಳಬಹುದು. ಮಕ್ಕಳಿಗೆ ಪ್ರಸಿದ್ಧ ಸಂಸ್ಥೆಯ ಅಧಿಕಾರವು ಸಿಗಬಹುದು. ನಿಮ್ಮ ಮನಸ್ಸಿಗೆ ಒಪ್ಪುವಂತಹ ಕೆಲಸಗಳನ್ನು ಮಾತ್ರ ಮಾಡಿ. ನಿರ್ಧಾರವನ್ನು ಬದಲಿಸುವುದು ಸರಿಕಾಣದು. ಆಸ್ತಿಯ ವಿಚಾರದಲ್ಲಿ ನೀವು ಆಸಕ್ತಿಯನ್ನು ಕಳೆದುಕೊಳ್ಳುವಿರಿ. ಯಾರಾದರೂ ನಿಮ್ಮ ಕಿವಿಚುಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಲಾರಿರಿ. ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಅಹಂಕಾರವಾದೀತು.

ಮಿಥುನ ರಾಶಿ: ಕೆಟ್ಟ ನಿರ್ಧಾರಗಳನ್ನು ಮಾಡಿದ್ದು ಕಾಲ ಕಳೆದ ಅನಂತರ ಗೊತ್ತಾಗಲಿದೆ. ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ವ್ಯಾಪಾರದಲ್ಲಿ ಹಣದ ಲಾಭಉಂಟಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ನಿಮ್ಮ ಯೋಜನೆಗಳು ನೆರವೇರಲಿವೆ. ಮನೆಯಲ್ಲಿನ ಬದಲಾವಣೆಗಳು ಸಂತೋಷ ತಂದಿಡುತ್ತವೆ. ಸ್ನೇಹಿತರೊಂದಿಗೆ ಭೆಟ್ಟಿಯಾಗುವ ಅವಕಾಶ ಸಿಗುತ್ತದೆ. ನಿಮ್ಮ ಶ್ರಮ ಯಶಸ್ಸಿನ ಮಾರ್ಗವನ್ನೇ ತೋರಿಸುತ್ತದೆ. ಪ್ರಯಾಣವೊಂದನ್ನು ಮುಂದೂಡಿ. ಗೃಹನಿರ್ಮಾಣದ ವಸ್ತುಗಳನ್ನು ಮಾರಾಟ ಮಾಡುವವರು ಅಧಿಕ ಲಾಭವನ್ನು ಪಡೆಯುವರು. ಹೊಸ ಉದ್ಯಮದ ಸಲುವಾಗಿ ಉದ್ಯಮಿಗಳನ್ನು ಭೇಟಿ ಮಾಡುವಿರಿ. ಸಾಲವನ್ನು ಮಾಡಬೇಕಾಗಿಬರಬಹುದು. ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು. ಅಕಸ್ಮಾತ್ ಹಣವು ಸಿಗುವುದು.

ಕರ್ಕಾಟಕ ರಾಶಿ: ಉದ್ಯೋಗದಲ್ಲಿ ಹೊಂದಲ ಸೃಷ್ಟಿಯಾಗಲಿದೆ. ಎರಡು ಕಾರ್ಯವನ್ನೂ ಒಟ್ಟಿಗೆ‌ ಮಾಡಲಾಗದು. ಮನೆಯ ಕೆಲಸದಲ್ಲಿ ಆಸಕ್ತಿ ಹೆಚ್ಚಿರುವುದು. ಮಂಗಳ ಕಾರ್ಯಗಳಿಗಾಗಿ ಸಿದ್ಧತೆಗಳು ಸುಲಭವಾಗಿ ನಡೆಯುತ್ತವೆ. ಶುಭಸುದ್ದಿ ಸಿಗುವ ಸಾಧ್ಯತೆ ಇದೆ. ಸ್ನೇಹಿತರೊಂದಿಗೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಹಣದ ಲಾಭವೂ ಲಭ್ಯವಾಗಬಹುದು. ಇಂದು ಖರ್ಚು ಮಾಡುತ್ತಿದ್ದರೂ ಸಂತೋಷದಲ್ಲಿ ಅದರ ಅರಿವೇ ಆಗದು. ಸಂತಾನದ ಲಾಭವು ನಿಮ್ಮ ಸಂತೋಷವನ್ನು ಅಧಿಕ ಮಾಡುವುದು. ಕುಟುಂಬ ಹಿರಿಯರಿಗೆ ಸೇರಿದ ಆಸ್ತಿಯಲ್ಲಿನ ಪಾಲು ಪಡೆಯುವಿರಿ. ಅವಶ್ಯಕತೆ ಇದ್ದಲ್ಲಿ ಉದ್ಯೋಗ ಬದಲಿಸಬಹುದು. ಹಣಕಾಸಿನ ವಿಚಾರದಲ್ಲಿ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ನೀವು ಎಲ್ಲವನ್ನು ತಿಳಿದವರಂತೆ ನಿಮ್ಮ ನಡವಳಿಕೆ ಇರುವುದು. ಯಾರದೋ ತಪ್ಪಿನ ಕಾರಣ ವಾಹನದಿಂದ ಬೀಳುವ ಸಾಧ್ಯತೆ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು.

ಸಿಂಹ ರಾಶಿ: ನಿಮ್ಮ ಕಾರಣದಿಂದ ತಂದೆಗೆ ಧನಾಗಮನವಾಗಲಿದೆ. ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ‌ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ಮಕ್ಕಳ ಸಂತೋಷಕ್ಕಾಗಿ ಕೆಲಸಮಾಡುವಿರಿ. ಉದ್ಯೋಗ ಅಥವಾ ವ್ಯವಹಾರದಲ್ಲಿ ಉತ್ತೇಜನಕಾರಿ ಬೆಳವಣಿಗೆ ಕಂಡುಬರುತ್ತದೆ. ಹಣದ ಸುಲಭ ಲಾಭ ಸಿಗಲಿದೆ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುತ್ತೀರಿ. ಇಂದು ಅನಾಯಾಸವಾಗಿ ಆದಾಯ ದೊರೆಯುತ್ತದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟ ತಲುಪುವುದು ನಿಮಗೆ ಖುಷಿ ಕೊಡುವುದು.‌ ಸಂಗಾತಿಯ ಸಹಕಾರದಿಂದ ನೀವು ಗೆಲುವಾಗಿ ಇರುವಿರಿ. ಗೌರವವಿಲ್ಲದೆ ಕಡೆ ಹೋಗಲು ನೀವು ಬಯಸುವುದಿಲ್ಲ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ಕಳೆದ ಸಮಯವನ್ನು ಮೆಲುಕು ಹಾಕುವಿರಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ನೀವು ಕುಟುಂಬದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಬಯಸುವಿರಿ. ಇನ್ನೊಬ್ಬರ ಬಗ್ಗೆ ಏನೇನೋ ಕಲ್ಪನೆಗಳು ಇರಬಹುದು.

ಕನ್ಯಾ ರಾಶಿ: ಯಾವುದೋ ಕಾರಣಕ್ಕೆ ಕಾರ್ಯದ ಸ್ಥಳ ಬದಲಾವಣೆಯಾದರೂ ನಿಮಗೆ ಅನುಕೂಲವೇ. ನಿಮಗೆ ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಆದರೆ ಯಾವುದು? ಹೇಗೆ ಎನ್ನುವ ಬಗ್ಗೆ ಚಿತ್ರಣವಿಲ್ಲ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಸಾಲದ ವಿಷಯದಲ್ಲಿ ಯಶಸ್ಸು ದೊರಕುತ್ತದೆ. ಮನೆಯವರ ಆರೋಗ್ಯದತ್ತ ಎಚ್ಚರಿಕೆಯಿಂದ ಗಮನ ಹರಿಸಿ. ಸ್ನೇಹಿತರೊಂದಿಗೆ ವಿರೋಧ ಉಂಟಾಗದಂತೆ ಮಾತನಾಡುವುದು ಅಗತ್ಯ. ಕೆಲಸಗಳಲ್ಲಿ ವಿಘ್ನಗಳ ಸಾಧ್ಯತೆ ಇದೆ. ಕೆಲಸ ಕಾರ್ಯದಿಂದ ಸಮಾಜದಲ್ಲಿ ಗುರುತಿಸುವಿರಿ. ವಿದ್ಯಾರ್ಥಿಗಳ ಬಗ್ಗೆ ಯೋಚಿಸದೆ ಕರ್ತವ್ಯದಲ್ಲಿ ಭ್ರಷ್ಟರಾಗುವಿರಿ. ಸಂತೃಪ್ತಿಯ ಜೀವನವು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಅಶಿಸ್ತಿನಿಂದ ನಿಮಗೆ ಕೆಟ್ಟ ಹೆಸರು ಬರಬಹುದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ನಿದ್ರೆಯು ಸರಿಯಾಗದೇ ಮನಸ್ಸು ಭಾರವಾಗಬಹುದು. ಇಷ್ಟವಿಲ್ಲದ ವೃತ್ತಿಯನ್ನು ಅವಲಂಬಿಸಿ ಕಷ್ಟಪಡುವಿರಿ.

ತುಲಾ ರಾಶಿ: ಭೂಮಿಯಿಂದ ಆದಾಯ ಮೂಲವನ್ನು ಹೆಚ್ಚಿಸಿಕೊಳ್ಳಲು ಯೋಜನೆ. ಬೇಗನೆ ಯಶಸ್ಸು ಸಿಗುವುದೆಂದು ದಾರಿ ಬದಲಿಸಬಾರದು. ಪ್ರಯತ್ನಗಳು ಬದಲಾಗಬೇಕು. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರ ಕಂಡುಕೊಳ್ಳಬಹುದು. ಕಲೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿಮ್ಮ ಶಿಷ್ಟ ನಡವಳಿಕೆ ಇತರರಿಗೆ ಪ್ರೇರಣೆ ಆಗುತ್ತದೆ. ಎಲ್ಲ ಕಾರ್ಯಗಳಲ್ಲಿ ಯಶಸ್ಸು ದೊರಕುವ ಸಂಭವ. ಸ್ವತಂತ್ರವಾಗಿ ಇಂದಿನ ಕಾರ್ಯವನ್ನು ನೀವು ನಿರ್ವಹಿಸುವಿರಿ. ನೂತನ ವಾಹನವನ್ನು ಖರೀದಿಸುವಿರಿ. ಕುಟುಂಬದಲ್ಲಿ ಸಾಮರಸ್ಯವು ಕಾಣಿಸುವುದು. ಮನಸಿಗೆ ಹಿತವಾದ ಕೆಲಸವನ್ನು ಬಹಳ ಶ್ರದ್ಧೆಯಿಂದ ಮಾಡುವಿರಿ. ಉದ್ಯೋಗಕ್ಕಾಗಿ ಪರದಾಡುತ್ತಿರುವವರು ಉತ್ತಮ ಉದ್ಯೋಗವನ್ನು ಪಡೆದುಕೊಳ್ಳುವಿರಿ. ವ್ಯಾಪಾರಸ್ಥರು ಹೊಸತನ್ನು ಮಾಡಲು ಇಚ್ಛಿಸುವಿರಿ. ಈಗಿನ ಪರಿಸ್ಥಿತಿಯಲ್ಲಿ ಬದಲಾವಣೆ ಬೇಕೆನಿಸುವುದು. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ. ವೇಗದಲ್ಲಿ ವಾಹನವನ್ನು ಚಲಾಯಿಸುವುದು ಬೇಡ.

ವೃಶ್ಚಿಕ ರಾಶಿ: ದಾಂಪತ್ಯದಲ್ಲಿ ಒಡಕು ಬರುವ ಸಾಧ್ಯತೆ ಇದೆ. ನೇರ ಮಾತಿನಿಂದ ಕಲಹ. ದುಡುಕಿ ಅಪಯಶಸ್ಸನ್ನು ತಂದುಕೊಳ್ಳಬೇಡಿ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಫಲ ದೊರಕುತ್ತದೆ. ಹಣದ ವಿಚಾರದಲ್ಲಿ ಆತಂಕವಿಲ್ಲ. ಸಮಾಜದಲ್ಲಿ ಗೌರವ ಪಡೆಯುವಿರಿ. ಶುಭಕಾರ್ಯಗಳ ಯತ್ನಗಳು ಯಶಸ್ವಿಯಾಗುತ್ತವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗುತ್ತದೆ. ಇಂದು ನಿಮ್ಮ ಆತ್ಮವಿಶ್ವಾಸ ಇನ್ನಷ್ಟು ಬೆಳೆಯುತ್ತದೆ. ಅಗಲವು ದಿನಗಳ ಭೂವಿವಾದಕ್ಕೆ ಅಂತ್ಯ ಸಿಗಲಿದೆ. ಮಕ್ಕಳ ಜೊತೆಯಲ್ಲಿ ಸಂತಸದಿಂದ ಕಾಲಕಳೆಯುವಿರಿ. ಕುಟುಂಬದ ಹಿರಿಯರ ಜೊತೆಯಲ್ಲಿ ವಾಗ್ವಾದ ಇರುತ್ತದೆ. ಆತ್ಮೀಯರಿಗೆ ಆರ್ಥಿಕ ಸಹಾಯ ಮಾಡುವಿರಿ. ಬಹಳ ದಿನಗಳಿಂದ ಸ್ಥಗಿತಗೊಂಡ ಕೆಲಸಗಳೂ ಪೂರ್ಣಗೊಳ್ಳುತ್ತವೆ. ಸಣ್ಣ ವ್ಯಾಪಾರಿಗಳು ವ್ಯವಹಾರ ಹೆಚ್ಚಳದ ಬಗ್ಗೆ ಗಮನಹರಿಸಬೇಕು. ನೌಕರರ ಜೊತೆ ಆಪ್ತ ಸಮಾಲೋಚನೆ ಮಾಡುವಿರಿ. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಚಿಂತಿತ ಕಾರ್ಯವನ್ನು ಪೂರೈಸಲು ನಿಮಗೆ ಬುದ್ಧಿಯು ಸೂಚಿಸದು. ಆಸ್ತಿಯನ್ನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ಹೋಗಬೇಕಾದೀತು.

ಧನು ರಾಶಿ: ಸಣ್ಣವರ ತಪ್ಪನ್ನು ಕ್ಷಮಿಸುವುದು ದೊಡ್ಡವರ ದೊಡ್ಡ ಗುಣ. ಮನೆಗೆ ಖರ್ಚು ಮಾಡುವಾಗ ನಿಮ್ಮ ಆರ್ಥಿಕ‌ಸ್ಥಿತಿಯನ್ನೂ ಗಮನಿಸಿ. ನೆರೆಹೊರೆಯವರ ಜೊತೆ ಸಣ್ಣ ವಿಚಾರಕ್ಕೆ ಜಗಳ ಆಗಬಹುದು. ಅನಿರೀಕ್ಷಿತ ವಾಗ್ವಾದಗಳಿಗೆ ಸಾಧ್ಯತೆ ಇದೆ. ಹಣದ ಕೊರತೆ ನಿವಾರಣೆಗೆ ಸಾಲದ ಪ್ರಯತ್ನ ಮಾಡಬಹುದು. ಕುಟುಂಬದಲ್ಲಿ ಹೊಸ ಬದಲಾವಣೆಗಳು ಕಾಣಿಸಬಹುದು. ಯೋಜಿತ ಕಾರ್ಯಗಳಲ್ಲಿ ವಿಳಂಬ ಉಂಟಾಗಬಹುದು. ನಿಮ್ಮ ನಿಶ್ಯಬ್ದತೆ ಹಲವಾರು ಬಿಕ್ಕಟ್ಟಿಗೆ ಪರಿಹಾರವಾಗಬಹುದು. ಭವಿಷ್ಯದ ಬಗ್ಗೆ ಕಾಳಜಿಯೂ ಗೊಂದಲೂ ಇರುತ್ತದೆ. ನಿಮ್ಮ ಮನೆಯ ನಿರ್ಮಾಣಕ್ಕೆ ಸೂಕ್ತ ಭೂಮಿಯನ್ನು ಆಯ್ಕೆ ಮಾಡುವಿರಿ. ಸಂಗಾತಿಯ ಬಗ್ಗೆ ಇದ್ದ ಬೇಸರವು ಮಾಯವಾಗಲಿದೆ. ಕೆಲಸದ ಬಗ್ಗೆ ಉತ್ಸಾಹದಿಂದ ಇರಬೇಕು. ಆತ್ಮವಿಶ್ವಾಸದ ಕೊರತೆಯಿಂದ ನಿಮ್ಮ ಕಾರ್ಯವು ವಿಳಂಬವಾಗಬಹುದು. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು. ನಿಮ್ಮ ಶ್ರಮವು ನಿಷ್ಪ್ರಯೋಜಕ ಎನಿಸುವುದು. ದೂರಪ್ರಯಾಣದಿಂದ ನಿಮಗೆ ಖರ್ಚಾಗುವುದು ಗೊತ್ತಾಗದೇ ಹೋಗಬಹುದು.

ಮಕರ ರಾಶಿ: ಗೃಹನಿರ್ಮಾಣಕ್ಕೆ ಮಾಡಿದ ಸಾಲವು ಹೊರೆಯಾಗಬಹುದು. ಇನ್ನೊಬ್ಬರನ್ನು ನಿಂದಿಸುವುದು ಬೇಡ. ಅವರೇ ಅವರ ಕರ್ಮದ ಫಲವನ್ನು ಉಣ್ಣುವರು. ವ್ಯಾಪಾರಕ್ಕೆ ಸಂಬಂಧಿಸಿದಂತೆ ನಿಮ್ಮ ಯೋಜನೆಗಳನ್ನು ಕೈಗೊಳ್ಳಬೇಡಿ. ಗೆಳೆಯರ ಒಡನಾಟದಿಂದ ದೂರವಿರುವುದು ಉತ್ತಮ. ತಾತ್ಕಾಲಿಕ ಕೋಪದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಮನೆಯಲ್ಲಿ ಒತ್ತಡದ ಪರಿಸ್ಥಿತಿ ಉಂಟಾಗಬಹುದು. ಸಂಬಂಧಗಳ ಎಚ್ಚರಿಕೆಯಿಂದ ಮುನ್ನಡೆಯಿರಿ. ತಾಳ್ಮೆಯ ನಡವಳಿಕೆ ಇಂದಿನ ದಿನ ಸುಗಮವಾಗಿಸುತ್ತದೆ. ಯಾರಿಂದಲೂ ಕೂಡಲೇ ಬದಲಾವಣೆಯನ್ನು ಬಯಸುವುದು ಬೇಡ. ಮನಸ್ಸು ಒಳ್ಳೆಯದಾದರೂ ದುಡುಕಿ ಮಾತನಾಡಿದರೆ ಕೆಟ್ಟದ್ದಾದೀತು. ಸಾಲದ ವ್ಯವಹಾರದಿಂದ ದೂರವಿರಿ. ಮಕ್ಕಳು ಉತ್ಸಾಹದಿಂದ ದಿನವನ್ನು ಪ್ರಾರಂಭಿಸಲಿದ್ದು ಅವರಿಗೆ ಕೊಡಬೇಕಾದ ತಿಳಿವಳಿಕೆಯನ್ನು ಆಗಲೇ ಕೊಡುವುದು ಉತ್ತಮ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ. ಸ್ತ್ರೀಯರಿಗೆ ಪ್ರಯಾಣದಲ್ಲಿ ತೊಂದರೆ ಬರಬಹುದು.

ಕುಂಭ ರಾಶಿ:  ಸ್ವಯಂ ಅಪರಾಧವಾದರೂ ಅದನ್ನು ತಿಳಿದುಕೊಳ್ಳುವ ಮನಸ್ಸೂ ಬೇಕು.‌ ನಿಮ್ಮ ಗುರಿಯನ್ನು ಯಾರಾದರೂ ಬದಲಿಸಬಹುದು. ಗುರಿಯತ್ತ ನಿಮ್ಮ ಗಮನವನ್ನು ಇಟ್ಟುಕೊಳ್ಳಿ. ಹಿರಿಯರ ಆದೇಶದಂತೆ ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಅನಿರೀಕ್ಷಿತ ಹಣನಷ್ಟಕ್ಕೆ ತಯಾರಿ ಇಟ್ಟುಕೊಳ್ಳಿ. ಕೆಲ ಪ್ರಮುಖ ಯೋಜನೆಗಳನ್ನು ಮುಂದೂಡಬೇಕಾಗಬಹುದು. ಸಣ್ಣ ಮಟ್ಟದ ಆರೋಗ್ಯ ಸಮಸ್ಯೆ ತೊಂದರೆ ನೀಡಬಹುದು. ಪ್ರಯಾಣಗಳಲ್ಲಿ ಅಸಹಜ ತೊಂದರೆಗಳು ಎದುರಾಗಬಹುದು. ಸ್ವಭಾವದ ಕಾರಣ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಪ್ರವಾಸ ಮಾಡಲು ಸಾದ್ಯವಾಗುವುದಿಲ್ಲ. ಉದ್ಯಮಿಗಳು ಹೂಡಿಕೆಯ ಬಗ್ಗೆ ಚಿಂತಾಮಗ್ನರಾಗುವರು. ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ತೊಡಗಿರುವವರಿಗೆ ಆದಾಯವು ಹೆಚ್ಚು ಇರಲಿದೆ. ಕುಟುಂಬದ ಪೋಷಣೆಯಲ್ಲಿ ಇಂದು ಸಹಭಾಗಿತ್ವ ಇರುವುದು.

ಮೀನ ರಾಶಿ: ಮಾತಿನಿಂದಾದ ಸಣ್ಣ ತಪ್ಪೂ ದೊಡ್ಡದಾಗಿರುತ್ತದೆ. ಇಂದು ನೀವು ಬಯಸಿದ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂತೋಷ ಇರುತ್ತದೆ. ಕೊಡಬೇಕಾದ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಇಂದು ಮನಸ್ಸು ಅಸ್ಥಿರವಾಗಿರುವ ಸಾಧ್ಯತೆ ಇದೆ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಸಂಘರ್ಷ ಉಂಟಾಗದಂತೆ ಎಚ್ಚರಿಕೆ ವಹಿಸುವುದು ಉತ್ತಮ. ಮಾತಿನಿಂದಲೂ ಕಲಹಗಳು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಈ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳುಬೇಕು. ಉದ್ಯೋಗದಲ್ಲಿ ಸಣ್ಣ ಪುಟ್ಟ ಬದಲಾವಣೆಗಳು ಎದುರಾಗುತ್ತವೆ. ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ.‌ ಸಮಾನ ಚಿಂತನಶೀಲರ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ