Horoscope: ಈ ರಾಶಿಯವರು ಇಂದು ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವುದು ಬೇಡ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಇಂದು ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವುದು ಬೇಡ
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 05, 2024 | 12:14 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶುಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:40 ಗಂಟೆ, ರಾಹು ಕಾಲ ಮಧ್ಯಾಹ್ನ 02:03 ರಿಂದ ಸಂಜೆ 03:36, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:27 ರಿಂದ 10:59ರ ವರೆಗೆ.

ಮೇಷ ರಾಶಿ : ನಿಮ್ಮ ಪಾಲಿಗೆ ಬರಬೇಕಾದುದು ಬಂದೇಬರುತ್ತದೆ. ಇಂದು ನೀವು ವಿವಾದಗಳಿಗೆ ಆತಂಕಪಡುವಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ನಿರೀಕ್ಷಿತ ಗುರಿಯನ್ನು ತಲುಪಲು‌ ನೀವು ವಿಳಂಬ ಆಗಬಹುದು. ತಾಳ್ಮೆಯ ಕೊರತೆ ಇದ್ದಂತೆ ಕಾಣುತ್ತದೆ. ಸಂತೋಷವು ಇಂದು ಹೆಚ್ಚಾಗಬಹುದು.‌ ಬಂಧುಗಳು ನಿಮ್ಮನ್ನು ಬೇಕೆಂದೇ ತಪ್ಪು ದಾರಿ ತೋರಿಸುವರು. ನಿಮ್ಮ‌ ವಿವೇಚನಾ ಶಕ್ತಿಯು ಕೆಲಸ ಮಾಡಲಿ. ದಾರಿಯನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಪರೀಕ್ಷೆಗಳನ್ನು ಎದುರಿಸುವುದು ನಿಮಗೆ ಸಹಜ ಕೆಲಸವಾಗಿದೆ. ಸಣ್ಣ ಕಾರ್ಯವನ್ನು ಮಾಡಲು ನಿಮಗೆ ಬಾರದು.‌ ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಹೆಚ್ಚಿನ ಆದಾಯದ ಬಗದಗೆ ಚಿಂತನೆ ಮಾಡುವಿರಿ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ವಿಚಲಿತವಾಗುವ ಮನಸ್ಸನ್ನು ಒಂದೆಡೆ ಕೇಂದ್ರೀಕರಿಸಿ.

ವೃಷಭ ರಾಶಿ : ದುಡುಕಿ ಮಾತನಾಡಿ ಬರಬೇಕಾದುದನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಒಂದು ಮಟ್ಟಿನ ಸೌಖ್ಯವು ಇರಲಿದೆ. ಇಷ್ಟಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಕ್ಷೇಮಸಮಾಚಾರವನ್ನು ಹಂಚಿಕೊಳ್ಳುವರು. ನಿಮ್ಮ ಕೆಲಸಗಳಿಗೇ ನೀವು ಇಂದು ಹೆಚ್ಚು ಪ್ರಾಮುಖ್ಯ ನೀಡಿ. ಹೂಡಿಕೆಯ ಚಿಂತನೆಯಲ್ಲಿ ನೀವು ಇರುವಿರಿ. ಸಂತಾನದ ಸುಖವನ್ನು ನೀವುಬಪಡೆಯುವಿರಿ. ಸಾಹಸ ಮಾಡಲು ಹೋಗುವಾಗ ಎಚ್ಚರವಿರಲಿ. ‌ಮುಖಭಂಗ ಮಾಡಿಕೊಂಡು ಬರಬೇಕಾದೀತು. ಆಪ್ತರಿಂದ ಧನವನ್ನು ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ವಿದ್ಯಾಭ್ಯಾಸವನ್ನು ನೀವು ಅನ್ಯರ ಒತ್ತಾಯಕ್ಕೆ ಮಾಡುವಿರಿ. ಅನಾರೋಗ್ಯದ ಲಕ್ಷಣವು ನಿಮ್ಮಲ್ಲಿ ಕಾಣಿಸಿಕೊಳ್ಳಬಹುದು. ಅತಿಯಾದ ಮರೆವು ಉಂಟಾಗಲಿದೆ ಇಂದು. ವಾಹನವನ್ನು ಚಲಿಸುವಾಗ ಬಹಳ ಎಚ್ಚರಿಕೆ ಅಗತ್ಯ. ಪರೋಪಕಾರಕ್ಕೆ ಸಮಯವನ್ನು ಕೊಡುವಿರಿ. ಅತಿಯಾದ ವೇಗದಲ್ಲಿ ವಾಹನ ಚಾಲನೆ ಬೇಡ. ವಿಳಂಬವಾದರೂ ಏನೂ ತೊಂದರೆಯಾಗದು.

ಮಿಥುನ ರಾಶಿ : ಭೂಮಿಯ ವ್ಯವಹಾರವನ್ನು ಯಾವುದೋ ತೊಂದರೆಯಿಲ್ಲದೇ ಮಾಡಲಾಗದು ಎಂಬ ಮನೋಭಾವ ಬದಲಾಗುವುದು. ನಿಮಗೆ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಹೆಚ್ಚಾಗುವುದು. ಸರ್ಕಾರದಲ್ಲಿ ಆಗಬೇಕಾದ ನಿಮ್ಮ ಕೆಲಸವು ಸ್ವಲ್ಪ ವೇಗವನ್ನು ಪಡೆಯವುದು. ಅಧಿಕಾರಿಗಳ ಭೇಟಿಯಿಂದ ನಿಮ್ಮ ಉದ್ಯೋಗದಲ್ಲಿ ಪ್ರಭಾವವು ಹೆಚ್ಚಾಗಬಹುದು. ನಿಶ್ಚಿತ ಗುರಿಯನ್ನು ನೀವು ತಲುಪುವ ಕಡೆ ಹೆಜ್ಜೆಹಾಕುವಿರಿ. ಆದಾಯವು ಚಿಂತಿಸಿದ ಮಟ್ಟದಲ್ಲಿದ್ದರೂ ಖರ್ಚು ಅದಕ್ಕಿಂತಲೂ ಹೆಚ್ಚಾಗಲಿದೆ. ಸಂಸಾರದಲ್ಲಿ ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವುದು ಬೇಡ. ಮನೆಯಲ್ಲಿ ಯಾರಾದರೂ ತಟಸ್ಥರಾದರೆ ಕಲಹವು ಶಾಂತವಾಗಬಹುದು. ಶಾಂತವಾದ ಮನಸ್ಸಿನಿಂದ ನೆಮ್ಮದಿ ಕಾಣುವುದು. ಸ್ವಲ್ಪ ಮಾನಸಿಕ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ಇನ್ನೊಬ್ಬರ ಮೇಲೆ ಬಲಪ್ರಯೋಗ ಬೇಡ. ಪರಿಹಾರವನ್ನು ಕಂಡುಕೊಳ್ಳಬಹುದು. ಪರೋಪಕಾರದ ಬಗ್ಗೆ ನಿಮಗೆ ಹೆಚ್ಚು ಒಲವು.

ಕರ್ಕಾಟಕ ರಾಶಿ : ಒಳ್ಳೆಯ ಸಂಬಂಧಗಳು ನಿಮಗೆ ಪಥ್ಯವಾಗದೇ ಇರಬಹುದು. ನಿಮ್ಮ ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದನ್ನು ಸಾಧಿಸುವಿರಿ. ಆದರೆ ಅದಕ್ಕೆ ಬೇಕಾದ ಸರಳ ಮಾರ್ಗವನ್ನು ಮರೆಯುವಿರಿ. ಇಂದು ನೀವು ಮಾಡುವ ಕೆಲಸಗಳು ಲಾಭದಾಯಕ ಆಗಿದ್ದರೂ ಪರಿಶ್ರಮವೂ ಹೆಚ್ಚಿರಲಿದೆ. ಚಂಚಲವಾದ ಮನಸ್ಸನ್ನು ನೀವು ನಿಯಂತ್ರಿಸಲು ಬೇಕಾದ ಕ್ರಮವನ್ನು ಅನುಸರಿಸಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಕೇಳಿಯಾರು. ಕೊಟ್ಟರೂ ಕೊಡದಿದ್ದರೂ ಮನಸ್ತಾಪ ಏಳಬಹುದು. ಬಂಧುಗಳ ಜೊತೆಗಿನ ಕಲಹವು ನಿಮ್ಮ‌ ಪ್ರತಿಷ್ಠೆಯ ಪ್ರಶ್ನೆಯಾಗಲಿದೆ. ಬೆಳವಣಿಗೆಗೆ ಬೇಕಾದ ಸಾಮರ್ಥ್ಯ ಕೊರತೆ ಇದ್ದು ಅದನ್ನು ಸರಿ‌ಮಾಡಿಲೊಳ್ಳಬೇಕಿದೆ. ಯೋಗ್ಯ ವಿವಾಹಸಂಬಂಧವು ಬರಬಹುದು‌. ನಿಮ್ಮ ಕ್ಷುಲ್ಲಕ ಕಾರಣದಿಂದ ಅದನ್ನು ಬಿಟ್ಟ ಬಿಡುವುದು ಬೇಡ. ಮನಸ್ಸನ್ನು ಸಂಗಾತಿಯ ಜೊತೆ ಹಂಚಿಕೊಳ್ಳಿ. ಒಬ್ಬರಮೇಲೆ ಒಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತ ಇಂದು ಇರಬಹುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ