ಈ ರಾಶಿಯವರು ಕಚೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು ಪ್ರಶಂಸಿಸುವರು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ನವಮೀ ತಿಥಿ, ಭಾನುವಾರ ಬಂಧುಗಳ ಸಹಕಾರ, ಕಲ್ಪನೆಯ ಸಾಕಾರ, ಮಕ್ಕಳ ಮೇಲೆ ಮಮಕಾರ, ತಾನೇ ಎಂಬ ಅಹಂಕಾರ ಕಾಣಿಸಿಕೊಳ್ಳುವ ದಿನ.ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ: ಪುನರ್ವಸು, ಯೋಗ : ಅತಿಗಂಡ, ಕರಣ : ಗರಜ, ಸೂರ್ಯೋದಯ – 06: 24 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:12 – 18:44, ಯಮಘಂಡ ಕಾಲ 12:35 – 14:07, ಗುಳಿಕ ಕಾಲ 15:40 – 17:12
ಮೇಷ ರಾಶಿ: ನಿಮ್ಮ ಮಾತಿಗೆ ಅಪಾರ್ಥ ಕೊಡುವರು. ಸ್ಪಷ್ಟತೆಯನ್ನು ಕೊಡುವ ಮನಸ್ಸು ಇರದು. ಕಳೆದುಹೋದ ಬಗ್ಗೆ ನೆನೆನೆನೆದು ಕೊರಗಿ ಕಣ್ಣೀರಾಗುವುದಕ್ಕಿಂತ ಉತ್ತಮ ಆಲೋಚನೆಗಳಿಂದ ಮುಂದಿನದನ್ನು ಚಿಂತಿಸಿ. ನಿಮ್ಮ ಕುಟುಂಬದ ವಾತಾವರಣವು ಸ್ವಲ್ಪ ಆತಂಕದಿಂದ ಕೂಡಿರಬಹುದು. ಕೆಲಸದಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಲಹೆಯನ್ನು ಕೊಡಲು ಹೋಗಬೇಡಿ. ನೀವು ಸುಲಭವಾಗಿ ಜನರ ವಿಶ್ವಾಸವನ್ನು ಗಳಿಸುವಿರಿ. ನಿಮ್ಮ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನೀವು ವಹಿಸಿಕೊಂಡ ಕಾಮಗಾರಿಯ ವೇಗ ಹೆಚ್ಚಳ. ಆದರೆ ಅದರ ಬಗ್ಗೆ ಸಾಕಷ್ಟು ಯೋಚಿಸಿ ಮುಂದುವರಿಯಿರಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು. ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ಮಾನಸಿಕವಾಗಿ ಉತ್ಸಾಹವು ಕಡಿಮೆ ಇರುವುದು.
ವೃಷಭ ರಾಶಿ: ನಿಮ್ಮನ್ನು ಅರ್ಥಮಾಡಿಕೊಂಡವರ ಜೊತೆ ಸಲುಗೆ ಹೆಚ್ಚು. ಅದೃಷ್ಟವನ್ನು ಹುಡುಕುತ್ತಿದ್ದರೆ ಇಂದು ಸ್ವಾಗತಿಸಿ. ಅತಿಯಾದ ಪ್ರಯಾಣದಿಂದ ಆಯಾಸ ಮತ್ತು ಒತ್ತಡಗಳು ನಿರ್ಮಾಣವಾಗುವುದು. ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು ಪ್ರಶಂಸಿಸುವರು. ಹೊಸ ಕೆಲಸವನ್ನು ಆರಂಭಿಸುವ ಹುನ್ನಾರ ನಡೆಸುವಿರಿ. ನಿಮ್ಮ ಒತ್ತಡವನ್ನು ಅನ್ಯರ ಮೇಲೆ ಹಾಕುವಿರಿ. ನಿಮ್ಮನ್ನು ಇಷ್ಟಪಟ್ಟವರೊಡನೆ ಸಮಯವನ್ನು ಕಳೆಯಿರಿ. ನಿಮ್ಮ ಕೆಲಸದ ಮೇಲೆ ನೀವು ಸಂಪೂರ್ಣ ಗಮನವಿಲ್ಲದೇ ಯಾವುದೋ ಯೋಚನೆಯಲ್ಲಿ ಎಡವಟ್ಟು ಮಾಡಿಕೊಳ್ಳುವಿರಿ. ನಿಮ್ಮ ಸೌಕರ್ಯವು ಹೆಚ್ಚಾಗುತ್ತದೆ ಎಂದು ಖುಷಿ ಪಡುವ ಬದಲು ಆಲಸ್ಯದತ್ತ ನಿಮ್ಮ ನಡೆ ಇರಲಿದೆ. ಆಲಸ್ಯದಿಂದ ಎದ್ದಾಗ ಮಾತ್ರ ನೀವು ನಿಮ್ಮ ಅನೇಕ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ಸದಸ್ಯರ ಅಗತ್ಯತೆಗಳ ಬಗ್ಗೆ ನೀವು ಗಮನ ಹರಿಸಬೇಕು. ನಿಮ್ಮ ಪ್ರತಿಭೆಗೆ ಯೋಗ್ಯವಾದ ಕಾರ್ಯವು ಸಿಗುವುದು. ಭೂಮಿಯ ವ್ಯವಹಾರವನ್ನು ಒಂಟಿಯಾಗಿ ನಿರ್ವಹಿಸುವಿರಿ.
ಮಿಥುನ ರಾಶಿ: ಇಂದು ನೀವು ನಿಚ್ಚಲ ಮನಸ್ಸಿನಿಂದ ವಿಚಲಿತರಾಗುವುದು ಬೇಡ. ಶೈಕ್ಷಣಿಕವಾದ ಪ್ರಗತಿಯನ್ನು ಸಾಧಿಸಬೇಕಾಗಬಹಿದು. ನಿಮ್ಮ ಕಿವಿ ಮಾತುಗಳು ಅನೇಕರಿಗೆ ಸ್ಫೂರ್ತಿಯಾಗಬಹುದು. ಒಂದಿಲ್ಲೊಂದು ವಿಷಯಗಳಿಂದ ಸುಖವನ್ನು ಪಡೆಯುವ ನಿಮಗೆ ಮುಂಬರುವ ವಿಷಯಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಸ್ಪಷ್ಟತೆಯನ್ನು ಇಟ್ಟುಕೊಂಡಿರುತ್ತೀರಿ. ಶತ್ರುಗಳಿಂದ ಎಚ್ಚರವಾಗಿರಿ. ಇಂದು ನಿಮ್ಮ ಪ್ರಮುಖ ಕೆಲಸಗಳು ವೇಗದಿಂದ ಸಾಗುವುದು. ನಿಮಗೆ ಅಯಾಚಿತವಾಗಿ ಬರುವ ಶುಭಸಂದರ್ಭವನ್ನು ಸಂತೋಷಿಸುವಿರಿ. ಸಕಾರಾತ್ಮಕ ವಿಷಯಗಳು ವೇಗವನ್ನು ಪಡೆಯುತ್ತವೆ. ಮಕ್ಕಳಿಗಾಗಿ ನೀವು ಹೊಸ ವಾಹನವನ್ನು ಖರೀದಿಸಬಹುದು. ನಿಮ್ಮ ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಲು ನೀವು ಯೋಚಿಸುತ್ತಿದ್ದರೆ, ಈಡೇರುತ್ತದೆ. ಹಳೆಯ ಯೋಜನೆಗಳಿಗೆ ಪುನಶ್ಚೇತನವನ್ನು ನೀಡುವಿರಿ. ಪ್ರಭಾವೀ ಶತ್ರುಗಳನ್ನು ನೀವು ಸೋಲಿಸುವಿರಿ.
ಕರ್ಕಾಟಕ ರಾಶಿ: ಇಂದು ನಿಮ್ಮೊಳಗಿದ್ದ ಮೋಡಗಟ್ಟಿದ ವಾತಾವರಣ, ಕರಗಿ, ನೀರಾಗಿ ಹನಿ ನೀರ ಸುರಿಸುವುದು. ಮಕ್ಕಳಿಂದ ಮಾನಸಿಕ ಹಿಂಸೆ ಎದುರಾದೀತು. ಖರ್ಚು ಹೆಚ್ಚಾಯಿತು ಎನ್ನುವ ಭಯವಿರುವುದು. ಉದ್ಯಮಿಗಳಿಗೆ ವ್ಯಾಪಾರಕ್ಕೆ ಸಂಬಂಧಿಸಿದ ಅನಿರೀಕ್ಷಿತ ಪ್ರಯಾಣವು ಬರಲಿದೆ. ಯಾರಿಗಾದರೂ ಕಾದು ಸಮಯವು ಹಾಳಾಗುವುದು. ನಿಮಗೆ ಸಂಬಂಧಗಳಲ್ಲಿ ಗೌರವವನ್ನು ಕಾಪಾಡಿಕೊಳ್ಳುವುದು ಕಷ್ಟವಾದೀತು. ನ್ಯಾಯಾಂಗದ ವಿಷಯಗಳಲ್ಲಿ ನೀವು ತಾಳ್ಮೆಯನ್ನು ಕಾಪಾಡಿಕೊಳ್ಳಬೇಕು. ಶುದ್ಧ ಮನಸ್ಸಿನಂತೆ ತೋರಿದರೂ ಅಂತರಂಗದಲ್ಲಿ ಕಲ್ಮಶವು ಹೆಚ್ಚಿರುವುದು. ವಿವಾಹದ ಮಾತುಕತೆಗಳನ್ನು ನಡೆಸಲು ದೂರದ ಊರಿಗೆ ಪ್ರಯಾಣ ಮಾಡುವಿರಿ. ಜಾಣ್ಮೆಯಿಂದ ನಿಮ್ಮ ಕೆಲಸವನ್ನು ಬೇಗ ಪೂರ್ಣಮಾಡುವಿರಿ. ಉದ್ಯೋಗದಲ್ಲಿ ಹೊಸ ವಿಚಾರಗಳನ್ನು ನೀವು ಕಲಿಯಬೇಕಾಗುವುದು. ಕಳೆದುಕೊಂಡಷ್ಟು ವೇಗವಾಗಿ ಉಳಿಸಿಕೊಳ್ಳುವುದು ಕಷ್ಟವೆನಿಸುವುದು.
ಸಿಂಹ ರಾಶಿ: ಇನ್ನೊಬ್ಬರ ಸುಖವನ್ನು ಕಸಿದುಕೊಂಡು ಯಾವ ಸುಖವನ್ನು ಅನುಭವಿಸುವಿರಿ? ನಿಮ್ಮ ಬಗೆಗಿನ ಸದ್ಭಾವಗಳು ಬದಲಾದಾವು. ರಸಿಕತೆಯಲ್ಲಿ ಸ್ಥಾನವನ್ನೂ, ಬುದ್ಧಿಯನ್ನೂ ಸ್ಥಳವನ್ನೂ ಸಂದರ್ಭವನ್ನೂ ವ್ಯಕ್ತಿಯನ್ನೂ ನಗಣ್ಯಗೊಳಿಸಬೇಡಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ನಿಮ್ಮವರನ್ನಾಗಿ ಮಾಡಿಕೊಳ್ಳುವ ಕಲೆ ನಿಮಗೆ ತಿಳಿದುಬರುವುದು. ನಿಮ್ಮ ಕುಟುಂಬದ ಬಗ್ಗೆ ಹೆಮ್ಮೆಯ ಭಾವ ಮೂಡುತ್ತದೆ. ನೀವು ಆರಾಮಾಗಿದ್ದೀರಿ ಎಂದು ತೋರಿಸಲು ಹೋಗಬೇಡಿ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕುಟುಂಬದಲ್ಲಿ ಜಗಳ ನಿಮಗಾಗುವಂತಹ ಕಾರ್ಯವನ್ನು ಒಪ್ಪಿಕೊಳ್ಳಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಅತಿಯಾದ ಕಾರ್ಯದಿಂದ ನಿಮಗೆ ತೊಂದರೆಯಾದೀತು. ಮನೆಯಲ್ಲಿಯೇ ವಾಸಿಸುವವರು ಸಣ್ಣ ಆದಾಯದ ಬಗ್ಗೆ ಆಲೋಚಿಸುವಿರಿ. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು. ಮುಜುಗರವೂ ನಿಮಗೆ ಆದೀತು. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು.
ಕನ್ಯಾ ರಾಶಿ: ನಿಮಗೆ ಯಾರಾದರೂ ಪಾಠ ಕಲಿಸಿದರೆ ಖುಷಿಪಡಿ. ಬೇಸರಿಸಿ ಸಿಟ್ಟಾಗುವುದು ಬೇಡ. ಇಂದು ಮನೆಯ ಸಣ್ಣ ಖರ್ಚುಗಳೂ ದೊಡ್ಡದಾದ ಮೊತ್ತವನ್ನು ಕಳೆಯುವುದು. ನಿಮ್ಮ ಜೀವನವನ್ನು ನೀವೇ ಲಘುವಾಗಿ ಕಾಣುವುದು ಬೇಡ. ನಿಮ್ಮ ಮಾನಸಿಕ ಸ್ಥಿತಿ ಬಲಾಢ್ಯವಾಗಿರಲಿ. ಅಲ್ಲಿಯ ತನಕ ತಾಳ್ಮೆಯಿಂದ ಇರಬೇಕಾದ ಕರ್ತವ್ಯವಿದೆ. ಒಳ್ಳೆಯವರ ಸಂಗ ಸಿಗಬಹುದು. ಸಿಗದಿದ್ದರೆ ನೀವೇ ಹೋಗಿ. ಒಳ್ಳೆಯ ಪುಸ್ತಕವನ್ನು ತಂದು ಓದಿ. ಸ್ನೇಹಿತನ ಕೆಲಸವನ್ನು ಅದು ಮಾಡುವುದು. ಇಂದು ನಿಮ್ಮ ಭಾವನೆಗಳನ್ನು ನಿಯಂತ್ರಿಸಲಾಗದೇ ಎಲ್ಲವನ್ನೂ ಹೊರಹಾಕುವಿರಿ. ನೀವು ಮನೆಯ ಸೌಂದರ್ಯದ ಬಗ್ಗೆ ಹೆಚ್ಚು ಗಮನ ಇರಲಿದೆ. ನಿಮ್ಮ ಆದಾಯವು ಮೊದಲಿಗಿಂತ ಉತ್ತಮವಾಗಿದ್ದು ಅದನ್ನು ಒಂದು ಕಡೆ ಸ್ಥಿರವಾಗಿಸಿಕೊಳ್ಳಿ. ಹಿರಿಯರು ನಿಮ್ಮ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ರಾಜಕೀಯವಾಗಿ ಹಿನ್ನಡೆಯಾಗಬಹುದು. ನಿಮ್ಮದಾದ ದ್ವೀಪವನ್ನು ಮಾಡಿಕೊಂಡು ನೀವಿರುವಿರಿ.