ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ, ಗುರುವಾರ ಕಳವಳ, ಜಿಗುಪ್ಸೆ, ವೈಷಮ್ಯ, ವಿವಾದ, ಸಂಧಾನಗಳು ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಷಷ್ಠೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 06:28 am, ಸೂರ್ಯಾಸ್ತ – 06:43 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:08 – 15:40, ಯಮಘಂಡ ಕಾಲ 06:28 – 08:00, ಗುಳಿಕ ಕಾಲ 09:32 – 11:04
ಮೇಷ ರಾಶಿ: ನಿಮ್ಮ ಮಾತಿಗೆ ವೇದಿಕೆ ಸಿಗಲಿದೆ. ಇಂದು ದೈಹಿಕ ಶಕ್ತಿ ಕಡಿಮೆಯಾಗಬಹುದು. ಪರರ ಅಸಹಾಯಕತೆಯನ್ನು ಅರ್ಥಮಾಡಿಕೊಳ್ಳುವಿರಿ. ನಿದ್ರಾಹೀನತೆಯಿಂದ ಸ್ವಲ್ಪ ಆಲಸ್ಯವೂ ಬರಲಿದೆ. ನಿಮ್ಮ ಮನಸ್ಸನ್ನು ಒಂದು ಕಡೆ ಕೇಂದ್ರೀಕರಿಸಲು ಆಗದು. ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಪ್ರಯತ್ನಪೂರ್ವಕವಾಗಿ ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಸಂಗಾತಿಯ ಜೊತೆ ಆರ್ಥಿಕತೆಯ ಬಗ್ಗೆ ವಾಗ್ವಾದ ಮಾಡುವಿರಿ. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಸಾಲದು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ.
ವೃಷಭ ರಾಶಿ: ಇಂದು ಕುಟುಂಬವು ಕ್ಷೋಭೆಯಿಂದ ಸಮಾಧಾನಗೊಳ್ಳಲಿದೆ. ನಿಮಗೆ ಹೊಸ ಅವಕಾಶಗಳು ಉದ್ಭವಿಸಲಿದ್ದು, ನೀವು ಅವುಗಳನ್ನು ವೇಗವಾಗಿ ವಶಪಡಿಸಿಕೊಳ್ಳಿ. ಆ ವೇಗವನ್ನು ಮುಂದುವರಿಸಲು ಫಲದ ಅಪೇಕ್ಷೆಯೂ ಇರಲಿದೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಅಪನಂಬಿಕೆಗಳು ದೂರಾಗಬೇಕಿದೆ. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು. ಅನಪೇಕ್ಷಿತ ಸಹಕಾರದಿಂದ ಆರ್ಥಿಕ ಚಿಂತೆ. ಮನಸ್ಸಿನಲ್ಲಿ ಯಾವುದಾದರೂ ಭೀತಿಯು ಕಾಡಬಹುದು. ಖರ್ಚು ಮಾಡುವುದಕ್ಕಿಂತ ಹೆಚ್ಚಿನದನ್ನು ಉಳಿಸಿ, ಸುರಕ್ಷತೆ ಬಗ್ಗೆ ಲಕ್ಷ್ಯವಿರಲಿ. ಸ್ವಲ್ಪ ನಿದ್ದೆ ಮಾಡಿ ಮತ್ತು ವಿಶ್ರಾಂತಿ ಪಡೆಯಿರಿ. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಸ್ವತಃ ಉದ್ಯೋಗವನ್ನು ಮಾಡುವ ಆಲೋಚನೆಯು ಬರಬಹುದು. ಅಪರಿಚಿತರ ಜೊತೆ ಸಲುಗೆಯಿಂದ ಇರುವಿರಿ. ಅಧಿಕ ಬೆಲೆ ಉತ್ತಮ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ.
ಮಿಥುನ ರಾಶಿ: ಪ್ರಗತಿಯ ಪರಿಶೀಲನೆ ಮಾಡಿಕೊಳ್ಳುವಿರಿ. ನಿಮ್ಮ ವಿಶೇಷ ವ್ಯಕ್ತಿ ಇಂದು ನಿಮ್ಮ ಜೀವನಕ್ಕೆ ಉತ್ಸಾಹವನ್ನು ತರುತ್ತಾರೆ. ಮುನ್ನೋಟವಿಲ್ಲದೇ ಯಾವುದನ್ನೂ ಮಾಡುವುದು ಬೇಡ. ಒಬ್ಬಂಟಿಯಾಗಿದ್ದರೆ, ನಿಮ್ಮ ಕಣ್ಣುಗಳನ್ನು ತೆರೆದು ಸುತ್ತಲ ಜಗತ್ತನ್ನು ನೋಡಿ. ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು. ನಿಮ್ಮ ಪ್ರೀತಿಗೆ ಅಡ್ಡಿ ಆತಂಕಗಳು ಬರಬಹುದು. ಇಂದಿನ ಕಾರ್ಯವನ್ನು ಸರಿಯಾಗಿ ಯೋಜಿಸಿಕೊಂಡು. ನೀವು ಮಾಡಿದ ಕಠಿಣ ಪರಿಶ್ರಮ ಅಂತಿಮವಾಗಿ ಫಲ ನೀಡುತ್ತದೆ. ನಿಮ್ಮ ಹಣದ ಮೇಲೆ ನಿಗಾ ಇರಿಸಿ, ಯಾವುದೇ ಅಪಾಯಗಳನ್ನು ತೆಗೆದುಕೊಳ್ಳದಂತೆ ದೂರವಿರಿ. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ಯಶಸ್ಸಿನ ಗುಟ್ಟನ್ನು ಬಯಲುಮಾಡುಬಿರಿ. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ತಮ್ಮ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಿಯಾರು.
ಕರ್ಕಾಟಕ ರಾಶಿ: ನಿಮ್ಮ ಪ್ರೀತಿಯ ಮಾತಿಗೆ ಯಾರೂ ದನಿ ಸೇರಿಸುವುದಿಲ್ಲ. ಒತ್ತಡದ ಮಟ್ಟವನ್ನು ಕಡಿಮೆ ಮಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಸಂಗಾತಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ. ಅವಕಾಶಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಏಕೆಂದರೆ ನಿಮ್ಮ ಕನಸುಗಳನ್ನು ನನಸಾಗಿಸಲು ಒಂದು ಮಾರ್ಗವನ್ನು ಹೊಂದಿರುತ್ತೀರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಕೃಷಿಯು ಕಡೆಗೆ ಗಮನ ಹೆಚ್ಚಾಗಿ ನೀಡುವಿರಿ. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಹೋಗಬಹುದು. ನಿಮಗೆ ಕೆಲವು ವಿಚಾರದಲ್ಲಿ ಕಾನೂನಿನ ತೊಂದರೆ ಕಾಡಬಹುದು.
ಸಿಂಹ ರಾಶಿ: ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ಪ್ರಯತ್ನ ನಡೆಯುವುದು. ನಿಮ್ಮ ಸಂಬಂಧಗಳಲ್ಲಿ ನೀವು ಇಂದು ಸವಾಲಿನ ದಿನವನ್ನು ಎದುರಿಸಬೇಕಾಗಬಹುದು. ತಪ್ಪುಗ್ರಹಿಕೆಗಳು ಮತ್ತು ಭಿನ್ನಾಭಿಪ್ರಾಯಗಳ ಸಂದರ್ಭದಲ್ಲಿ, ತಪ್ಪುಗಳನ್ನು ಒಪ್ಪಿಕೊಳ್ಳಿ. ನಿಮಗೆ ಸಿಗುವ ಜನರ ಪ್ರೀತಿಗೆ ಪ್ರತಿಯಾಗಿ ಸಮಯವನ್ನಾದರೂ ಕೊಡಿ. ಮುಕ್ತವಾಗಿ ಸಂವಾದ ಮಾಡಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಿ. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು. ಕೆಲವು ಹೆಜ್ಜೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ಪ್ರಯೋಜನವಾಗಲಿದೆ. ಅತಿಯಾದ ಚಿಂತೆಯಿಂದ ನೋವುಗಳು ದೇಹದಲ್ಲಿ ಕಾಣಿಸುವುದು. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಾರ್ಯದಲ್ಲಿ ಸಕ್ರಿಯರಾಗಿ. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ ಮೇಲೆ ಆಗದು.
ಕನ್ಯಾ ರಾಶಿ: ಅನಿರೀಕ್ಷಿತ ಬದಲಾವಣೆಯಿಂದ ಎಲ್ಲರ ಮೇಲೆ ಸಿಟ್ಟಾಗುವಿರಿ. ನಿಮ್ಮ ವೃತ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಲಾಭದ ಲಕ್ಷಣವಿರುವುದು. ನಿಮ್ಮನ್ನು ನೀವು ಧನಾತ್ಮಕವಾಗಿ ಪ್ರಸ್ತುತಪಡಿಸುವತ್ತ ಗಮನಹರಿಸಿ. ಋಣಶೇಣವನ್ನು ಉಳಿಸಿಕೊಳ್ಳದೇ ತೀರಿಸಿಕೊಂಡು ಮುಂದಿನ ಯೋಜನೆಗೆ ಸಿದ್ಧತೆ ನಡೆಸುವಿರಿ. ಅಂತಸ್ಸಾಕ್ಷಿಯನ್ನು ಬಿಟ್ಟು ನೀವು ದೂರಾಗಬಹುದು. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ. ನಿಮಗೆ ಇನ್ನೊಬ್ಬರ ಬಗ್ಗೆಯೇ ಅಧಿಕ ಆಲೋಚನೆ ಇರುವುದು. ಅಪರಾಧಿ ಪ್ರಜ್ಞೆ ನಿಮ್ಮನ್ನು ಕಾಡುವುದು. ಹೆಚ್ಚಿದ ಭಾವನಾತ್ಮಕ ಅರಿವಿನ ಮೂಲಕ ನೀವು ನಿಮ್ಮವರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವಿರಿ. ನೀವು ಹೊಂದಿರುವ ಅಪಾರ ಶಕ್ತಿ ಮತ್ತು ಧೈರ್ಯವು ಎಂತಹ ಸಂದರ್ಭದಲ್ಲಿಯೂ ಹಿಡಿದು ನಿಲ್ಲಿಸುವುದು. ಕಾಲಾತ್ಮಕ ಕೆಲಸದಲ್ಲಿ ಆಸಕ್ತಿ ಹೆಚ್ಚಾಗುವುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು. ಕೆಲವು ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ.