Horoscope Today 10 April: ಈ ರಾಶಿಯವರು ತಾವಾಗಿಯೇ ಕಲಹಕ್ಕೆ ಆಹ್ವಾನ ಕೊಡುವರು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ, ಗುರುವಾರ ಮಕ್ಕಳ ವರ್ತನೆಯಿಂದ ತಲ್ಲಣ, ಸ್ಥಾನ ಮಾನಕ್ಕೆ ಪ್ರಯತ್ನ, ಯೋಗದ ಬಳಕೆ ಇವೆಲ್ಲ ಈ ದಿನ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ: ಗಂಡ, ಕರಣ : ವಣಿಜ, ಸೂರ್ಯೋದಯ – 06:23 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:07 – 15:39, ಯಮಘಂಡ ಕಾಲ 06:23 – 07:56, ಗುಳಿಕ ಕಾಲ 09:29 – 11:01
ಮೇಷ ರಾಶಿ: ಸಂಶೋಧನೆಗೆ ಮಾರ್ಗದರ್ಶನ ಸಿಗಲಿದೆ. ತಪ್ಪುಗಳನ್ನು ನೀವೇ ಅರ್ಥಮಾಡಿಕೊಂಡರೆ ನಿಮಗೇ ಉತ್ತಮ. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ತೆರಿಗೆಯನ್ನು ನೀವು ಸರಿಯಾಗಿ ಕೊಡುವ ಬಗ್ಗೆ ಆಲೋಚನೆ ಇರುವುದು. ನೌಕರರ ಬಗ್ಗೆ ನಿಮಗೆ ಖುಷಿ ಇರುವುದು. ಬಂದಿದ್ದರಲ್ಲಿ ಸುಖವಾಗಿರಲು ಪ್ರಯತ್ನಿಸುವಿರಿ. ಅಧ್ಯಾತ್ಮದಲ್ಲಿ ಮನಸ್ಸು ಇರಲಿದೆ. ಬಂಧುಗಳ ಒಡನಾಟದಿಂದ ನೋವನ್ನು ಕಳೆಯುವಿರಿ. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದ್ಸು ದ್ವೇಷಿಸುವವರನ್ನು ಇಷ್ಟಪಡುವಿರಿ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೆ ಮಾಡಬೇಕಾದ ದಿನವಾಗುವುದು.
ವೃಷಭ ರಾಶಿ: ಯಾರನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ಇನ್ನೊಬ್ಬರ ಬಗ್ಗೆ ನಿಮಗೆ ಸಹಜವಾದ ಕರುಣೆ ಇರುವುದು. ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಪ್ರತಿಕೂಲ ಪರಿಸ್ಥಿತಿಯಲ್ಲಿ ನೀವು ಧೈರ್ಯವನ್ನು ಕಾಪಾಡಿಕೊಳ್ಳುವಿರಿ. ನಿಮ್ಮ ಮಕ್ಕಳ ಜೊತೆ ನೀವು ಯಾವುದಕ್ಕಾದರೂ ಕೋಪಗೊಳ್ಳುವಿರಿ. ರಾಜಕೀಯದಲ್ಲಿ ಡೋಲಾಯಮಾನವಾಗಿ ಇರಲಿದ್ದು ಆತಂಕವೂ ಇರಲಿದೆ. ಇಂದು ಎಲ್ಲ ಕಾರ್ಯಗಳಲ್ಲಿ ಸಾವಧಾನತೆ ಇರದು. ಕೆಲಸವೊಂದು ಯೋಚಿಸುವುದು ಮತ್ತೊಂದು ಆಗಬಹುದು. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ಇಂದು ನೀವು ಮಾಡಲು ಹೊರಟ ಕಾರ್ಯವು ನಿರ್ವಿಘ್ನವಾಗಿ ಮುಗಿಯುವುದು.
ಮಿಥುನ ರಾಶಿ: ಸಾಹಿತ್ಯಾಸಕ್ತರಿಗೆ ಗೌರವ, ಸಮ್ಮಾನ. ನಿಮಗೆ ಯಾರಾದರೂ ಇಂದು ಆಮಿಷವನ್ನು ತೋರಿಸಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಕೌಟುಂಬಿಕ ಭಿನ್ನಾಭಿಪ್ರಾಯಕ್ಕೆ ನೀವೇ ಪರಿಹಾರ ಕಂಡುಕೊಳ್ಳಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು. ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ನಿಮಗೆ ಉತ್ತಮವಾಗಿರುತ್ತದೆ. ನೂತನ ಮನೆಯ ನಿರೀಕ್ಷೆಯಲ್ಲಿ ನೀವು ಇರುವಿರಿ. ಸಾಮಾಜಿಕ ಜಾಲತಾಣದಲ್ಲಿ ಕ್ರಿಯಾಶೀಲರಾಗಿರುವಿರಿ. ನಿಮ್ಮ ಹವ್ಯಾಸವು ಬದಲಾಗಬಹುದು. ಪ್ರವಾಸಕ್ಕೆ ಹೋಗಲು ಉತ್ಸಾಹವು ಇರಲಿದೆ. ಎಲ್ಲರೂ ನಿಮ್ಮ ಬಗ್ಗೆ ಹೇಳಿ ಸಾಕಾದೀತು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಜಾಣತನದಿಂದ ಮಾಡಿಸಿಕೊಳ್ಳುವಿರಿ. ಸೌಂದರ್ಯಪ್ರಜ್ಞೆ ಅಧಿಕವಾಗುವುದು. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನಿಮ್ಮ ಬಗ್ಗೆ ಅತಿಯಾದ ವಿಶ್ವಾಸವು ಕೊನೆಯ ಕ್ಷಣದಲ್ಲಿ ಕಾರ್ಯವನ್ನು ಮಾಡುವಂತೆ ಮಾಡುವುದು.
ಕರ್ಕಾಟಕ ರಾಶಿ: ಪ್ರಶಸ್ತಿಗಳು ನಿಮ್ಮ ಮುಡಿಗೇರಲಿವೆ. ನಿಮ್ಮ ವರ್ತನೆಯಿಂದ ಅಧಿಕಾರವು ಸಿಗಬಹುದು. ಆಸ್ತಿಯ ಬಗ್ಗೆ ಸರಿಯಾದ ದಾಖಲೆಗಳು ಇರಲಿ. ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಅಶುಭಕರ ಸೂಚನೆಯನ್ನು ನಿರ್ಲಕ್ಷಿಸುವಿರಿ. ಅನುಮಾನದ ನಿಮ್ಮ ಸ್ವಭಾವವು ಅಧಿಕವಾಗುದು. ಎಲ್ಲವನ್ನೂ ಸಮಾನವಾಗಿ ನೋಡಲು ಕಷ್ಟವಾಗಬಹುದು. ಕಲಹಕ್ಕೆ ಏನಾದರೂ ವಿಷಯವನ್ನು ಹುಡುಕಿಕೊಳ್ಳುವಿರಿ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ಪರರ ಸೇವೆಗೆ ನಿಮ್ಮ ಮನಸ್ಸು ಒಪ್ಪದು. ಮಕ್ಕಳ ಕಡೆಯಿಂದ ಆರ್ಥಿಕ ಸಹಾಯವನ್ನು ನಿರೀಕ್ಷಿಸಿ ಹತಭಾಗ್ಯರಾಗುವಿರಿ. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ಪ್ರೀತಿಪಾತ್ರರನ್ನು ಕೈಬಿಡಲಾರಿರಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಸಂಗಾತಿಯ ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು.
ಸಿಂಹ ರಾಶಿ: ಆಹಾರದ ವ್ಯತ್ಯಾಸದಿಂದ ಅನಾರೋಗ್ಯ. ಕೂಡಿಟ್ಟ ಹಣಕಾಸಿನಲ್ಲಿ ಖರ್ಚು. ಭೂಮಿಯ ಲಾಭವು ಆಗುವುದಾದರೂ ಅದನ್ನು ಪರಿಶೀಲಿಸಿ ಒಪ್ಪಿಕೊಳ್ಳಿ. ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ವಿದ್ಯಾರ್ಥಿಗಳು ಯಾವುದಾದರೂ ಸ್ಪರ್ಧೆಯಲ್ಲಿ ಭಾಗವಹಿಸಿದರೂ ಸ್ಥಾನವು ಸಿಗಲಿದೆ. ನಿಮ್ಮ ಆರೋಗ್ಯದಲ್ಲಿ ಸಮಸ್ಯೆಗಳನ್ನು ನೀವು ಅಲಕ್ಷ್ಯ ಮಾಡುವುದು ಸರಿಯಾಗದು. ನಿಮಗೆ ಕೊಟ್ಟ ಕೆಲಸಕ್ಕೆ ಏನಾದರೂ ನೆಪವನ್ನು ಹೇಳಿ ತಪ್ಪಿಸಿಕೊಳ್ಳುವಿರಿ. ಕನಸನ್ನು ನೀವು ನೆನಪಿನಲ್ಲಿ ಇಡುವಿರಿ. ಕೆಲವರ ಮೇಲೆ ನಂಬಿಕೆಯನ್ನು ಇಡಲಾರಿರಿ. ಕೆಲವು ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಲು ಸಾಧ್ಯವಾಗದೇ ಹೋಗಬಹುದು. ನಿಮ್ಮ ಬಹುದಿನದ ವಿದೇಶ ಪ್ರಯಾಣದ ಕನಸು ಇಂದು ನನಸಾಗುವುದು. ಹೂಡಿಕೆಯ ವಿಷಯದಲ್ಲಿ ಸ್ವಲ್ಪ ಹಿಂದೇಡು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ.
ಕನ್ಯಾ ರಾಶಿ: ಪ್ರಕೃತಿ ವಿಕೋಪದಿಂದ ಆಕಸ್ಮಿಕ ಅವಗಡ ಸಂಭವಿಸಬಹುದು. ನಿಮಗೆ ಯೋಗ್ಯ ಸಂಗಾತಿಯ ಮಾಹಿತಿಗಳು ಸಿಗಲಿದೆ. ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವುದನ್ನು ತಪ್ಪಿಸಿ. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಗೆಲುವನ್ನು ಕಾಣಲು ಸೂಕ್ತ ಮಾಹಿತಿಯ ಕೊರತೆ ಕಾಣಿಸುವುದು. ನಕಲಿ ದಾಖಲೆಗಳ ಅನಾವರಣ. ಅಪಮಾನವನ್ನು ಸಹಿಸಲಾಗದು. ಏಕಾಂತದಲ್ಲಿ ಇಂದು ನೆಮ್ಮದಿಯನ್ನು ಕಾಣಬಯಸುವಿರಿ. ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಇರುವುದು. ಮಕ್ಕಳ ವಿವಾಹದ ಕುರಿತು ಅತಿಯಾದ ಚಿಂತೆ ಇರುವುದು. ನಿರುದ್ಯೋಗಿಗಳಿಗೆ ಎಲ್ಲರಿಂದ ಮಾನಸಿಕ ಹಿಂಸೆ ಆಗಬಹುದು. ಕಾನೂನನ್ನು ಗೌರವುಸಿ ಅದಕ್ಕೆ ಯೋಗ್ಯ ರೀತಿಯಲ್ಲಿ ನಡೆದುಕೊಳ್ಳಿ. ಮನೆಗೆ ಅತಿಥಿಗಳ ಆಗಮನ. ನಿಮಗೆ ಸಂತೋಷವಾಗುವುದು. ಕಳೆದುಕೊಂಡ ವಸ್ತುವಿನ ಬಗ್ಗೆ ಮೋಹವು ಹೆಚ್ಚಾಗುವುದು. ಹೊಸತನ್ನು ಏನನ್ನಾದರೂ ಮಾಡಬೇಕೆಂಬ ಬಯಕೆ ಬರುವುದು.
ತುಲಾ ರಾಶಿ: ನಿಮ್ಮ ಫಲವತ್ತಾದ ಭೂಮಿಯನ್ನು ಸರಿಯಾಗಿ ರಕ್ಷಿಸಿ. ಅನ್ಯರ ಪ್ರವೇಶವಾಗಬಹುದು. ಇಂದು ನೀವು ಮಾಡುವ ಕಾರ್ಯವನ್ನು ಬಹಳ ಗೊಂದಲದಿಂದ ಅಲಕ್ಷ್ಯದಿಂದ ಮಾಡುವಿರಿ. ಎಲ್ಲದೂ ಗೊತ್ತು ಎಂಬ ಗತ್ತು ಎದ್ದು ತೋರುತ್ತದೆ. ಶ್ರಮದ ಸಾಧನೆಗೆ ತೃಪ್ತಿ ಇರುವುದು. ಇಂದು ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಉತ್ತಮ ಕಾರ್ಯವು ಸಿಗಲಿದೆ. ಗುರಿಯ ನಿರ್ಧಾರವಾಗದೇ ಇದ್ದರೆ ಇಂದು ನಿರ್ಧರಿಸಿ. ನಿಮ್ಮ ಬಹುಕಾಲ ಬಾಕಿಯಿರುವ ಕೆಲಸಗಳ ಬಗ್ಗೆ ನೆಮ್ಮದಿ ಇರದು. ಸಣ್ಣ ವಿಚಾರಕ್ಕೆ ಯಾರದ್ದಾದರೂ ವಿರೋಧ ಮಾಡುವಿರಿ. ಅವಕಾಶಗಳು ಮತ್ತೆ ಬಾರದು. ಇರುವುದನ್ನು ಸದುಪಯೋಗ ಮಾಡಿಕೊಳ್ಳಬೇಕು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣ ಬಂದರೂ ಸಂತೋಷ ಇರುವುದಿಲ್ಲ. ಬಹಳ ಕಾರ್ಯವೂ ಇದರಿಂದ ಅನಾಯಸವೆನಿಸಬಹುದು. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಎಲ್ಲರದ್ದೂ ಒಂದಾದರೆ ನಿಮ್ಮದೇ ಒಂದು ದಾರಿಯಾಗಲಿದೆ. ಬಿಟ್ಟು ಬಿಟ್ಟು ಬರುವ ಅನಾರೋಗ್ಯದಿಂದ ನಿಮಗೆ ಮಾನಸಿಕ ಹಿಂಸೆ ಆಗುವುದು.
ವೃಶ್ಚಿಕ ರಾಶಿ: ಆರ್ಥಿಕ ವ್ಯವಹಾರದಲ್ಲಿ ವ್ಯತ್ಯಾಸ. ಅಧಿಕಾರಿಗಳ ಮಧ್ಯಪ್ರವೇಶದಿಂದ ಜವಾಬ್ದಾರಿ ಸ್ಥಾನದಿಂದ ಉಚ್ಚಾಟನೆ ಸಾಧ್ಯತೆ. ನಿಮ್ಮ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ಬಗ್ಗೆ ಆಪ್ತರ ಸಲಹೆಗಳು ಅವಶ್ಯವಾಗಿ ಬೇಕಾಗವುದು. ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಇಂದಿನ ನಿಮ್ಮ ಘಟನೆಯು ಯಾರನ್ನೂ ಇಷ್ಟಪಡಲು ಆಗದು. ನಿಮ್ಮ ಸ್ವಭಾವವು ಇತರರಿಗೆ ಕಿರಿಕಿರಿಯನ್ನು ತಂದೀತು. ಹೊಸ ಆವಿಷ್ಕಾರಗಳ ಕಡೆ ನಿಮ್ಮ ಮನಸ್ಸಿರುವುದು. ಸಂಸಾರದಲ್ಲಿ ಯಾವುದೋ ವಿಚಾರಕ್ಕೆ ಜಗಳಕ್ಕೆ ಇಳಿಯಬೇಡಿ. ದೃಢವಾದ ಮನಸ್ಸಿನಿಂದ ಮುಂದುವರಿಯಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳೇ ಹೆಚ್ಚು ಕೇಳಿಬರಬಹುದು. ವಿದ್ಯಾರ್ಥಿಗಳು ಮನೆಯಿಂದ ದೂರ ಇರಬೇಕಾದ ಸ್ಥಿತಿ ಬರಬಹುದು. ಶ್ರಮ ವಹಿಸಿ ಮಾಡಿದ ಕಾರ್ಯಕ್ಕೆ ಉತ್ತಮ ಫಲವು ಸಿಗಲಿದೆ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ.
ಧನು ರಾಶಿ: ಕಾಮಗಾರಿ ವಹಿಸಿಕೊಂಡು ಅನಂತರ ಸುಮ್ಮನಾಗುವಿರಿ. ಜನರಿಂದ ಆಕ್ರೋಶ ಬರಲಿದೆ. ನೀವು ಇನ್ನೊಬ್ಬರ ತಪ್ಪಿನಿಂದ ಕಲಿಯುವಿರಿ. ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ಮನಸ್ಸಿನೊಳಗೆ ಹಲವು ಗೊಂದಲಗಳನ್ನು ಇಟ್ಟುಕೊಂಡು ಚಡಪಡಿಸುವಿರಿ. ಬಂಗಾರದ ಉದ್ಯಮದ ವಿಸ್ತರಣೆ ಸಾಧ್ಯವಾಗಲಿದೆ. ಇಂದು ನಿಮಗೆ ಏನಾದರೂ ವಿಶೇಷವಾದ ವಸ್ತುವು ಸಿಗಬಹುದು. ಪ್ರೇಮದಿಂದ ವಂಚನೆಯಾಗಬಹುದು. ಹಣವನ್ನು ಸಾಲವಾಗಿ ಯಾರಿಂದಲೂ ಪಡೆಯಲು ಹೋಗುವುದು ಬೇಡ. ನಿಮ್ಮ ಸಂಕಷ್ಟಕ್ಕೆ ಯಾರಿಂದಲಾದರೂ ಪರಿಹಾರ ಲಭ್ಯ. ಸರ್ಕಾರದ ಮುಖವನ್ನು ನೋಡದೇ ನಿಮ್ಮ ಕೆಲಸವನ್ನು ನೀವು ಮಾಡಿ. ಚಂಚಲವಾದ ಮನಸ್ಸನ್ನು ನೀವು ಒಂದೇ ಕಡೆ ನಿಲ್ಲಿಸುವುದು ಕಷ್ಡವಾದೀತು. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು.
ಮಕರ ರಾಶಿ: ಸ್ನೇಹಿತರಿಂದಲೇ ನಿಮಗೆ ಆಪತ್ತು ಬರಬಹುದು. ಭೂವಿಚಾರಕ್ಕೆ ಯಾರದೂ ಹಸ್ತಕ್ಷೇಪವನ್ನು ಬಯಸಬೇಡಿ. ಹಳೆಯ ದಾಯಾದಿ ಕಲಹವು ಪುನಃ ಆರಂಭವಾಗಬಹುದು. ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ಕಳ್ಳರ ಭೀತಿಯಿಂದ ನಿಮಗೆ ಚಿಂತೆಯಾಗಬಹುದು. ಕ್ಷಣಕಾಲದ ಕೋಪವನ್ನು ನೀವು ನಿಯಂತ್ರಣವನ್ನು ಇಟ್ಟುಕೊಳ್ಳುವುದು ಅನಿವಾರ್ಯ. ನೀವು ನಿಮ್ಮದೇ ಕಲ್ಪನಾ ಲೋಕದಲ್ಲಿ ಹೆಚ್ಚು ಇರುವಿರಿ. ವ್ಯಾಪಾರದಲ್ಲಿ ಹೊಸ ಹೂಡಿಕೆ ಮಾಡಲು ಮನಸ್ಸಿರುವುದು. ನಿಮ್ಮ ಖಾಸಗಿ ಬದುಕು ಸಮಾಜಕ್ಕೆ ಗೊತ್ತಾಗುವುದು. ಸ್ಥಿರಾಸ್ತಿಯನ್ನು ಹೆಚ್ಚು ಮಾಡಿಕೊಳ್ಳುವ ಬಯಕೆ ಅತಿಯಾದೀತು. ಹಿರಿಯರ ಮಾತನ್ನು ಧಿಕ್ಕರಿಸಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು. ಆಹಾರಕ್ಕಾಗಿ ಅಧಿಕ ಖರ್ಚು.
ಕುಂಭ ರಾಶಿ: ವಿವಾಹದಲ್ಲಿ ವಂಚನೆಯಾಗುವ ಸಂಭವವಿದೆ. ಪೂರ್ವಾಪರ ಜ್ಞಾನವಿಲ್ಲದೇ ವ್ಯವಹಾರ ಬೇಡ. ಇಂದು ಅಧಿಕಾರಗಳ ಜೊತೆ ವಾಗ್ವಾದ ಮಾಡುವ ಸ್ಥಿತಿ ಬರಬಹುದು. ಇಂದಿನ ಹಣಕಾಸಿನ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ವಾಹನ ದಟ್ಟಣೆಯಲ್ಲಿ ಸಿಕ್ಕಿಹಾಕಿಕೊಳ್ಳುವಿರಿ. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ನೀವು ಭಾವೋದ್ವೇಗದಲ್ಲಿ ನಿರ್ಧಾರ ತೆಗೆದುಕೊಂಡು ಅನಂತರ ಪಶ್ಚಾತ್ತಾಪಪಡುವಿರಿ. ನಿಮ್ಮ ಸಂಗಾತಿಯಿಂದ ಇಂದು ಹಲವು ವಿಚಾರಕ್ಕೆ ಬೆಂಬಲವನ್ನು ಪಡೆಯುವಿರಿ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಪ್ರಗತಿಯು ಆಗಬೇಕಾಗಿದೆ. ಸಹೋದ್ಯೋಗಿಗಳ ಜೊತೆ ನಿಮ್ಮ ಅಸಹಜ ಪ್ರವೃತ್ತಿಯನ್ನು ತೋರಿಸುವಿರಿ. ಅಮೂಲ್ಯ ವಸ್ತುಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ಪ್ರಯೋಜನವಿಲ್ಲದೇ ನೀವು ಯಾರನ್ನೂ ಇಂದು ಮಾತನಾಡಿಸಲಾರಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ತಂದೆಯ ಜೊತೆ ಸಂಬಂಧವು ಚೆನ್ನಾಗಿರುವುದು.
ಮೀನ ರಾಶಿ: ಮಹಿಳೆಯರಿಗೆ ಶ್ರಮದಿಂದ ಆತ್ಮತೃಪ್ತಿ. ಸ್ಪರ್ಧೆಯಲ್ಲಿ ಜಯ. ಇಂದು ನೀವೊಬ್ಬರೇ ಯತ್ನಿಸುವ ಕಾರ್ಯಗಳಲ್ಲಿ ಜಯವು ಪೂರ್ಣ ಪ್ರಮಾಣದಲ್ಲಿ ಸಿಗದು. ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ಇಂದು ಅಧಿಕ ಬಾಯಾರಿಕೆ ನಿಮಗಾಗಲಿದೆ. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಇಂದು ನೀವು ನಿಮ್ಮವರಿಗೆ ಹೆಚ್ಚು ಖರ್ಚನ್ನು ಮಾಡಬೇಕಾದೀತು. ನಿಮ್ಮ ಅನಗತ್ಯ ಖರ್ಚುಗಳನ್ನು ನೀವು ನಿಗ್ರಹಿಸಬೇಕು. ವ್ಯಾಪಾರ ಮಾಡುವವರು ಬಯಸಿದ ಅನುಕೂಲಗಳು ಸಿಗದಿದ್ದರೆ ಸ್ವಲ್ಪ ಕಸಿವಿಸಿಗೊಳ್ಳಬಹುದು. ಕುಟುಂಬದ ಯಾವುದಾದರೂ ಸದಸ್ಯರಿಂದ ನೀವು ಮನ ನೋಯುವ ಸಾಧ್ಯತೆ ಇದೆ. ಹಿರಿಯ ವ್ಯಕ್ತಿಗಳ ಜೊತೆ ಇಂದು ಪ್ರಯಾಣ ಮಾಡುವಿರಿ. ಯಾರದೋ ಕಾರ್ಯಕ್ಕೆ ನೀವು ಶ್ರಮಿಸಬೇಕಾದೀತು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು.