AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಕನಸನ್ನು ಸಾಕಾರ ಮಾಡಿಕೊಳ್ಳಲು ಪುಟ್ಟ ಹೆಜ್ಜೆ ಇಡುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ, ಗುರುವಾರ ಕಳವಳ, ಜಿಗುಪ್ಸೆ, ವೈಷಮ್ಯ, ವಿವಾದ, ಸಂಧಾನಗಳು ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಈ ರಾಶಿಯವರು ಕನಸನ್ನು ಸಾಕಾರ ಮಾಡಿಕೊಳ್ಳಲು ಪುಟ್ಟ ಹೆಜ್ಜೆ ಇಡುವಿರಿ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 03, 2025 | 1:10 AM

ತುಲಾ ರಾಶಿ: ಸಾಮಾಜಿಕ ಕಾರ್ಯಕ್ಕೆ ಪ್ರಭಾವಿಗಳಿಂದ ಆಹ್ವಾನ ಬರಲಿದೆ. ಇಂದು ವಿದ್ಯಾರ್ಥಿಗಳು ಪ್ರೀತಿಯಲ್ಲಿ ನಿರತರಾಗಿರುತ್ತಾರೆ. ಇದು ಅವರ ಬಹಳಷ್ಟು ಸಮಯವನ್ನು ವ್ಯರ್ಥ ಮಾಡಬಹುದು. ಸಂಗಾತಿಯ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ದೀರ್ಘಕಾಲದ ನಿಮ್ಮ ಸಂಬಂಧಕ್ಕೆ ವಿರಾಮ‌ವು ಸಿಗಬಹುದು. ಪಡೆದುಕೊಳ್ಳಬೇಕಾದ ಸ್ಥಿರಾಸ್ತಿ ನಿಮಗೆ ಬರುವುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡೀತು. ನಿಮ್ಮ ಪ್ರೀತಿಯನ್ನು ಇತರರಿಗೆ ವ್ಯಕ್ತಪಡಿಸಲು ಸುಲಭವಾದ ಮಾರ್ಗ ಸಿಗಲಿದೆ. ಹೂಡಿಕೆಯನ್ನು ಅಲ್ಪಪ್ರಮಾಣದಲ್ಲಿ ಇರಿಸಿಕೊಂಡರೆ ಒಳ್ಳೆಯದು. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಭೂಮಿಯ ವ್ಯವಹಾರವು ಸಾಕೆನಿಸಬಹುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು.

ವೃಶ್ಚಿಕ ರಾಶಿ: ಕನಸನ್ನು ಸಾಕಾರ ಮಾಡಿಕೊಳ್ಳಲು ಪುಟ್ಟ ಹೆಜ್ಜೆ ಇಡುವಿರಿ. ಇಂದು ಬಗೆಹರಿಯದ ಸಮಸ್ಯೆಗಳ ಬಗ್ಗೆ ನಿಮ್ಮ ಕುಟುಂಬದ ಜೊತೆಗೆ ಮಾತನಾಡಲು ನೀವು ಬಯಸಬಹುದು. ನೀವು ಚೆನ್ನಾಗಿ ಯೋಚಿಸಿದ ಯಾವುದಾದರೂ ವಿಧಾನವನ್ನು ಬಳಸುತ್ತೀರೆಂದು ಖಚಿತಪಡಿಸಿಕೊಳ್ಳಿ. ಕೆಲಸದಲ್ಲಿ ಹೊಸತನ ಬಹಳ ಮುಖ್ಯವಾಗುತ್ತದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮ್ಮ ಸಂಬಂಧಿಕರೊಂದಿಗೆ ಸಮಯ ಕಳೆಯಬಹುದು. ವಿದ್ಯಾರ್ಥಿಗಳ ಅಭ್ಯಾಸ ಉನ್ನತ ಅಧ್ಯಯನಕ್ಕೆ ಸಹಕಾರಿ. ಕುಟುಂಬಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ಸುದ್ದಿಗಳನ್ನು ಪಡೆಯುತ್ತೀರಿ. ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬೇಡ.‌ ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು.

ಧನು ರಾಶಿ: ನಿಮ್ಮ ಪ್ರಯತ್ನ ಪೂರ್ಣವಾಗಿದ್ದರೂ ಕಾರ್ಯ ಮಾತ್ರ ಅಪೂರ್ಣವಾಗಲಿದೆ. ಇಂದು ನೀವು ದೈಹಿಕ ಪ್ರಯೋಜನಗಳಿಗಾಗಿ, ಮಾನಸಿಕ ಶಕ್ತಿಗಾಗಿ, ಧ್ಯಾನ ಮತ್ತು ಯೋಗವನ್ನು ಪ್ರಾರಂಭಿಸಬೇಕಾಗಬಹುದು. ವ್ಯಾಪಾರದಲ್ಲಿ ಚಾತುರ್ಯದಿಂದ ಲಾಭ. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷ ಇರುವುದು. ನಿಮ್ಮವರ ಮೇಲಿರುವ ಅನುಮಾನ ನಿವಾರಣೆ ಮಾಡಿಕೊಳ್ಳುವಿರಿ.‌ ಸಂಗಾತಿಯ ಪ್ರೀತಿಯನ್ನು ಪಡೆಯುವಿರಿ. ನೀವು ಪ್ರವಾಸಕ್ಕೆ ಹೋಗುವ ದಿನ ಇದು. ನಿಮ್ಮ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ನೀವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಚಂಚಲ ಮನಃಸ್ಥಿತಿಯು ನಿಮ್ಮ ಕಛೇರಿಯ ಕಾರ್ಯವನ್ನು ಮಾಡಲು ಬಿಡದು. ಸಹನೆ ನಿಮ್ಮ ಜೊತೆ ದಿನಪೂರ್ತಿ ಇರಲಿ. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು.

ಮಕರ ರಾಶಿ: ಇಂದಿನ ಕೆಲಸಕ್ಕೆ ನಿಮಗೆ ದಂಡಬೀಳುವ ಸಾಧ್ಯತೆ ಇದೆ. ಇಂದು ಮೋಜು ಮಾಡಲು ಹೊರಡುವವರಿಗೆ ಮುನ್ನೆಚ್ಚರಿಕೆ ಇರಲಿ. ಜಾಡ್ಯದಿಂದ ನೀವು ಇಂದಿನ ಕಾರ್ಯವನ್ನು ಮುಂದೂಡುವಿರಿ. ಯಾರಿಂದಲಾದರೂ ಹಣವನ್ನು ಎರವಲು ಪಡೆದ ಜನರಿಗೆ ಯಾವುದೇ ಪರಿಸ್ಥಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಬೇಕಾಗಬಹುದು. ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ಇಂದು ನಿಮ್ಮ ಪ್ರೀತಿಪಾತ್ರರು ನಿಮ್ಮ ಮಾತನ್ನು ಕೇಳಲು ಬಯಸುವುದಿಲ್ಲ. ಉದ್ಯೋಗಸ್ಥ ಸ್ಥಳಿಯರು ಇಂದು ಕೆಲಸದ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಕುಲವೃತ್ತಿಯನ್ನು ಮುನ್ನಡೆಸುವುದು ಸೂಕ್ತ. ದೂರವಾಣಿ ಕರೆಗಳಿಂದ ನಿಮಗೆ ತೊಂದರೆ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.‌

ಕುಂಭ ರಾಶಿ: ಪ್ರೀತಿಯಲ್ಲಿ ನಂಬಿಕೆ ಕಳೆದುಕೊಳ್ಳುವಿರಿ. ಇಷ್ಟವಾದವರು ಬಿಟ್ಟುಹೋಗಬಹುದು. ಇಂದು ನಿಮ್ಮವರಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುವಿರಿ. ನೀವು ಯಾರೊಂದಿಗೆ ಅರ್ಥಪೂರ್ಣ ಸಂಬಂಧವನ್ನು ಹೊಂದಲು ಬಯಸುತ್ತೀರಿ ಎಂಬ ವಿಚಾರದಲದಲಿ ಸ್ಪಷ್ಟತೆ ಇರಲಿ. ಆಹಾರ ಸೇವನೆಯ ಅನಂತರ ಅನಾರೋಗ್ಯ ಕಾಡಬಹುದು. ಇಂದು ಹೊಸ ಸಂಪರ್ಕಗಳನ್ನು ಬೆಳೆಸಿಕೊಳ್ಳಲು ಉತ್ತಮ ಸಮಯ. ವೃತ್ತಿಜೀವನದ ಕೌಶಲ್ಯಗಳನ್ನು ಹೆಚ್ಚಿಸಲು ಸಮಯವನ್ನು ಬಳಸಿಕೊಳ್ಳುವಿರಿ. ಹೂಡಿಕೆ ಮಾಡಲು ಹೊಸ ಮಾರ್ಗಗಳನ್ನು ತೆರೆಯಬಹುದು. ಹಾಸ್ಯಯುಕ್ತವಾದ ಮಾತಿನಿಂದ ಗೌರವವನ್ನು ಕಳೆದುಕೊಳ್ಳುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ‌ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಜೊತೆಗಾರರು ಮಾಡುವರು.

ಮೀನ ರಾಶಿ: ಕಛೇರಿಯಲ್ಲಿ ಕೆಲಸದಲ್ಲಿ ತನ್ಮಯತೆ ಕಡಿಮೆಯಾಗಿ, ಬೇರೆಯದನ್ನು ಮಾಡುವಿರಿ. ಇಂದು ವೃತ್ತಿಪರರಾಗಿರಿ ನಿಮ್ಮ ವಹಿವಾಟು ಉತ್ತಮವಾಗಿದೆ ನೋಡಿಕೊಳ್ಳಿ. ನೀವು ಅಪಾಯಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ನಿಮ್ಮ ಬಗ್ಗೆ ಸಲ್ಲದ ಮಾತುಗಳು ನಿಮಗೆ ಗೊತ್ತಾಗದಂತೆ ನಡೆಯಲಿವೆ. ಆರ್ಥಿಕತೆಯ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಬೇಕಾಗಬಹುದು. ಇಂದು ಬದಲಾವಣೆಯ ದಿನವಾಗಿದ್ದರೂ, ಆಶ್ಚರ್ಯವು ಕಾಣಿಸಿಕೊಳ್ಳಬಹುದು. ನಿಮ್ಮನ್ನು ಯಾರಾದರೂ ಆರ್ಥಿಕ ತೊಂದರೆಗೆ ಸಿಲುಕಿಸಬಹುದು. ಒಡೆದ ಬಾಂಧವ್ಯ ಮತ್ತೆ ಕೂಡಲಿದೆ. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ನಿಮ್ಮ ಸಹಾಯಕ್ಕೆ ಯಾರೂ ಬರದಿರುವುದು ಬೇಸರವಾಗುವುದು. ಸ್ಥಿರಾಸ್ತಿಯನ್ನು ಉಳಿಸಿಕೊಳ್ಳಲು ಶತಪ್ರಯತ್ನ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇಡಿ.

ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?