Horoscope: ದಿನಭವಿಷ್ಯ: ಕಲಾವಿದರಿಗೆ ಇಂದು ಶುಭ ದಿನ ಅವಕಾಶಗಳು ಸಿಗಲಿವೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 30 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಕಲಾವಿದರಿಗೆ ಇಂದು ಶುಭ ದಿನ ಅವಕಾಶಗಳು ಸಿಗಲಿವೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 30, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಸಾಧ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ 15:39 ರಿಂದ 17:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 9:21 ರಿಂದ 10:55 ರ ವರೆಗೆ, ಗುಳಿಕ ಕಾಲ 12:30 ರಿಂದ 14:05ರ ವರೆಗೆ.

ಧನು ರಾಶಿ: ಇಂದು ನೀವು ಆಲಂಕಾರಿಕ ವಸ್ತುಗಳನ್ನು ಖರೀದಿಸುವ ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ಸಂಗಾತಿಯ ಆರೋಗ್ಯದ ಸಮಸ್ಯೆಯನ್ನು ನೀವು ಬಗೆಹರಿಸುವುದು ಕಷ್ಟವಾದೀತು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸಲಾರಿರಿ. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಅನಬಾರದ್ದನ್ನು ಬಾಯ್ತಪ್ಪಿನಿಂದ ಹೇಳಿ ಬೇಸರ ಮಾಡಿಸುವಿರಿ.

ಮಕರ ರಾಶಿ: ಇಂದು ನೀವು ಮಾನಸಿಕವಾಗಿ ಹಿಂಸೆಯನ್ನು ಅನುಭವಿಸಬೇಕಾಗಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಯಾರಾದರೂ ಚುಚ್ಚಿ ಮಾತನಾಡಬಹುದು. ಅದನ್ನು ಮನಸ್ಸಿ ತೆಗದುಕೊಳ್ಳುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ.

ಕುಂಭ ರಾಶಿ: ಇಂದು ನೀವು ಎಲ್ಲವನ್ನೂ ಶಕ್ತಿಮೀರಿ ಪ್ರಯತ್ನಿಸುವಿರಿ. ಆಲಸ್ಯವು ಒಳ್ಳೆಯದಲ್ಲ‌. ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ಕಲಾವಿದರು ಉತ್ತಮವಾದ ಅವಕಾಶವನ್ನು ಪಡೆಯಲಿದ್ದಾರೆ. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಹಣಕಾಸಿನಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ. ಕಾರ್ಯದಲ್ಲಿ ಸಾವಧಾನತೆ ಇರಲಿದೆ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೂಡಿಕೆಯಲ್ಲಿ ಮಿತಿ ಇರಲಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು.

ಮೀನ ರಾಶಿ: ಇಂದು ನಿಮ್ಮ ಕುರಿತು ಸಲ್ಲದ ಮಾತುಗಳನ್ನು ಕೇಳಬೇಕಾಬಹುದು. ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಆಪ್ತರ ಭೇಟಿಯಾಗಬಹುದು. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಆಪ್ತಸಮಾಲೋಚನೆ ನಡೆಯಲಿದೆ. ನೌಕರರ ಬಗ್ಗೆಯೂ ಪ್ರೀತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್