Horoscope: ದಿನಭವಿಷ್ಯ: ಸಂಗಾತಿಯ ಜೊತೆ ಭಿನ್ನಮತವು ಬರಬಹುದು
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 26 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ವರಿಯಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:56 ರಿಂದ 12:31ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:13 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:48 ರಿಂದ 09:22ರ ವರೆಗೆ.
ಧನು ರಾಶಿ : ಇಂದಿನ ನಿಮ್ಮ ಯತ್ನದಿಂದ ಅಂದುಕೊಂಡ ಕಾರ್ಯವು ಸುಲಲಿತವಾಗುವುದು. ಪರರ ಕಷ್ಟಗಳಗೆ ಸ್ಪಂದಿಸಲು ಆಗದೇ ಇರಬಹುದು. ವಿವಾಹ ಯೋಗವನ್ನು ನೀವು ಒಪ್ಪಿಕೊಳ್ಳವುದು ಅನಿವಾರ್ಯ. ಯಾರಿಂದಲೂ ಧನಸಹಾಯವನ್ನು ಪಡೆಯಬಾರದು ಎಂಬ ಸಂಕಲ್ಪ ನಿಮ್ಮದಾಗಿರುವುದು. ಪ್ರಾಮಾಣಿಕತೆಯಿಂದ ನೀವು ಗೆಲ್ಲುವಿರಿ. ಉತ್ತಮ ಕೆಲಸವನ್ನು ಅಜ್ಞಾನದಿಂದ ನಷ್ಟ ಮಾಡಿಕೊಳ್ಳುವಿರಿ. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳಯ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಸಾಮಾಜಿಕವಾದ ಗೌರವವನ್ನು ನೀವು ಅನಾಯಾಸವಾಗಿ ಪಡೆದುಕೊಳ್ಳುವಿರಿ.
ಮಕರ ರಾಶಿ : ನಿಮಗೆ ಆಪ್ತರ ಹಿತ ನುಡಿಯನ್ನು ಕೇಳುವ ಅನಿವಾರ್ಯತೆ ಸೃಷ್ಟಿಯಾಗಲಿದೆ. ವೃತ್ತಿಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ತೊಂದರೆ ಬರಬಹುದು. ಸಲ್ಲದ ಅಪವಾದವನ್ನು ಒಪ್ಪಿಕೊಳ್ಳಲಾರಿರಿ. ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ. ನಿಮ್ಮ ಹಠದ ಸ್ವಭಾವವು ಇತರರಿಗೆ ನೋವನ್ನು ಕೊಡಬಹುದು. ಸಹೋದ್ಯೋಗಿಗಳ ಜೊತೆ ನಿಮ್ಮ ಮಾತು ಅಸಹವಾಗಿರುವುದು. ವಿವಾದದಲ್ಲಿರುವ ಆಸ್ತಿಯಿಂದ ಮಾರಾಟವು ನಿಧಾನವಾಗುವುದು. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶದಲ್ಲಿ ಪ್ರೀತಿಯಿರಲಿ.
ಕುಂಭ ರಾಶಿ : ನಿಮ್ಮ ಉದ್ಯಮದ ಅಭಿವೃದ್ಧಿಗೆ ಕುಂಠಿತವಾಗುವ ಕೆಲವು ಸಂಗತಿಗಳು ಬರಬಹುದು. ಹಿತಶತ್ರುಗಳಿಂದ ನಿಮಗೆ ಹಿನ್ನಡೆಯಾಗಲಿದೆ. ನಿಮ್ಮ ವಸ್ತುಗಳ ಕಳ್ಳತನ ಆಗಬಹುದು. ಐತಿಹಾಸಿಕ ಸ್ಥಳಗಳ ಭೇಟಿ ಮಾಡುವ ಅವಕಾಶ ಸಿಗಲಿದೆ. ನಿಮ್ಮ ಭೂಮಿಯ ವಿವಾದವು ದೊಡ್ಡದಾಗಬಹುದು. ನಿಮಗೆ ಬೇಕಾದುದನ್ನು ಹಠ ಮಾಡಿ ಪಡೆದುಕೊಳ್ಳುವಿರಿ. ನಿಮ್ಮನ್ನು ಪ್ರೀತಿಸುವವರಿಗೆ ಸಮಯವನ್ನು ಕೊಡಿ. ಹಣವನ್ನು ಅನ್ಯ ಕಾರ್ಯಕ್ಕೆ ಬಳಸುವಿರಿ. ಕಲಾವಿದರು ಅವಕಾಶದಿಂದ ವಂಚಿತರಾಗಬೇಕಾಗುವುದು. ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು.
ಮೀನ ರಾಶಿ : ಇಂದು ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ನೌಕರರಿಂದ ತೊಂದರೆ ಬರಬಹುದು. ವಿಶೇಷ ದ್ರವ್ಯ ಲಾಭದಿಂದ ಸಂತಸವು ಇರಲಿದೆ. ಗೊಂದಲಗಳಿಂದ ನಿಮ್ಮ ಕಾರ್ಯವು ವೇಗವನ್ನು ಕಳೆದುಕೊಳ್ಳುವುದು. ಕಛೇರಿ ಕೆಲಸದಿಂದ ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯಾಗಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಬಂಧುಗಳ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಇಂದು ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು.
-ಲೋಹಿತ ಹೆಬ್ಬಾರ್ – 8762924271 (what’s app only)




