AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಭೂಮಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಲಾಭವನ್ನು ಕಾಣಬಹುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ, ಗುರುವಾರ ಪ್ರಭಾವದ ಬಳಕೆ, ಅಪವಾದದ ಹೇಳಿಕೆ, ಪರರ ಮೇಲೆ ಕಳಕಳಿ ಇದು ಇಂದಿನ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಕೃಷಿ ಭೂಮಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಲಾಭವನ್ನು ಕಾಣಬಹುದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 01, 2025 | 1:51 AM

Share

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಚತುರ್ಥೀ ನಿತ್ಯನಕ್ಷತ್ರ: ಮೃಹಶಿರಾ, ಯೋಗ: ಅತಿಗಂಡ ಕರಣ: ಗರಜ, ಸೂರ್ಯೋದಯ – 06 : 11 am, ಸೂರ್ಯಾಸ್ತ – 06 : 48 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:04 – 15:39, ಯಮಘಂಡ ಕಾಲ 06:11 – 07:46, ಗುಳಿಕ ಕಾಲ 09:21 – 10:55

ತುಲಾ ರಾಶಿ: ಉದ್ಯೋಗ ಬದಲಾವಣೆಗೆ ಕರೆ ಬರಲಿದೆ. ಇಂದು ಮಕ್ಕಳ ವಿಚಾರದಲ್ಲಿ ವಾಗ್ವಾದವು ದಾಂಪತ್ಯದಲ್ಲಿ ನಡೆದು ಇಬ್ಬರೂ ವೈಮನಸ್ಸಿನಿಂದ ಇರಬೇಕಾದೀತು. ಎಲ್ಲರ ಜೊತೆ ಸಲುಗೆಯಿಂದ ಇರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ನಿಮ್ಮನ್ನು ನೀವೇ ಆತ್ಮಾವಲೋಕನ ಮಾಡಿಕೊಳ್ಳಿ. ಮುಂದಿನ ಹೆಜ್ಜೆಯನ್ನು ಇಡುವಾಗ ಜಾಗರೂಕರಾಗಿರಿ. ಕೃಷಿಯಲ್ಲಿ ಹೊಸ ಯೋಜನೆ ಮಾಡಲಿದೆ. ಸೋಲಬಾರದು ಎಂಬ ಛಲವು ಇದ್ದು ಕಾರ್ಯವನ್ನು ಮಾಡುವಿರಿ. ಮಾನಸಿಕ ಸ್ಥಿತಿಯು ಶಾಂತವಾಗುವ ತನಕ ವಿರಾಮವನ್ನೂ ಪಡೆದು ಸ್ವಲ್ಪ ಆರಾಮದಾಯಕವಾದ ಸ್ಥಳಕ್ಕೆ ಹೋಗಿ ಬನ್ನಿ. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುವುದು. ‌ನಂಬಿಕೆಯನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು.

ವೃಶ್ಚಿಕ ರಾಶಿ: ಭೂ ವ್ಯವಹಾರದಲ್ಲಿ ಬಂಧುಗಳಿಂದ ಬೇಸರ. ನೀವಿಂದು ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಲು ಯಾರಾದರೂ ಸಹಾಯ ಮಾಡುವರು. ನಿಮ್ಮೊಳಗೆ ಇಂದು ವಿಚಿತ್ರವಾದ ಕೆಲವು ಆಲೋಚನೆಗಳು ಬರಲಿದ್ದು, ನಿಮಗೇ ಆಶ್ಚರ್ಯವೆನಿಸುವಂತೆ ಮಾಡುವುದು. ಕ್ರೀಡೆಯಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ. ತಂದೆ ಮತ್ತು ತಾಯಿಯರು ನಿಮಗೆ ಹಿತವಚನವನ್ನು ಹೇಳುವರು. ಆಲಿಸಿ ಮುಂದಿನ ಕ್ರಮವನ್ನು ಕೈಗೊಳ್ಳಿ. ರಕ್ಷಣೆಗೆ ಸಂಬಂಧಿಸಿದ ಯಾವುದಾದರೂ ಉದ್ಯೋಗವು ಸಿಗಬಹುದು. ವ್ಯವಹಾರವನ್ನು ಬಂಧುಗಳ ಜೊತೆ ಮಾಡಬೇಡಿ. ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ನಿಮ್ಮ ನೆಮ್ಮದಿಯನ್ನು ನೀವೇ ಕಂಡುಕೊಳ್ಳಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಹೊಸ ವಸ್ತುಗಳನ್ನು ನೀವು ಯಾರದೋ ಮೂಲಕ ಪಡೆದುಕೊಳ್ಳುವಿರಿ. ಅಶ್ರದ್ಧೆಯನ್ನು ತೋರಿಸುವುದು ಬೇಡ.

ಧನು ರಾಶಿ: ನಿಮ್ಮ ಯೋಜನೆಗಳು ಮೇಲಧಿಕಾರಿಗಳ ವಿರುದ್ಧ ಇರಲಿದೆ. ನಿಮಗೆ ಅನ್ನಿಸಿದ್ದನ್ನು ಹೇಳುವ ಮೊದಲು ಯೋಚಿಸಿ. ಇಂದು ಹಣದ ಅಗತ್ಯತೆಗಳು ತುಂಬಾ ಇರಲಿವೆ. ನಿಮ್ಮ ಹಣವೂ ಖಾಲಿಯಾಗಿ ಸಂಗಾತಿಯಿಂದ ಹಣವನ್ನು ಪಡೆಯುವಿರಿ. ಖರ್ಚನ್ನು ಕಡಿಮೆಮಾಡಿಕೊಳ್ಳುವ ವಿಚಾರದಲ್ಲಿ ಚಿಂತಿಸುವುದು ಉತ್ತಮ. ಬಂಧುಗಳಿಂದ ನಿಮಗೆ ಬೇಕಾದುದು ಸಿಗದೇಹೋಗಬಹುದು. ಅದಕ್ಕೋಸ್ಕರ ಸಿಟ್ಟಾಗುವುದು ಬೇಡ. ಅನಗತ್ಯವಾದ ಖರ್ಚು ಅಗತ್ಯದ ವಸ್ತುಗಳನ್ನು ತೆಗೆದುಕೊಳ್ಳಲು ಬಿಡುವುದಿಲ್ಲ. ಬಂಧುಗಳು ನಿಮ್ಮ ನಡೆತೆಯಿಂದ ದೂರವೂ ಹೋಗಬಹುದು ಅಥವಾ ನಿಮ್ಮಿಬ್ಬರ ನಡುವೆ ಕಲಹವೂ ಆಗಬಹುದು. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ. ನೀವು ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು.

ಮಕರ ರಾಶಿ: ಭವಿಷ್ಯದ ಆಸೆಗಾದರೂ ನಿಮ್ಮನ್ನು ದೃಢವಾಗಿ ಉಳಿಸಿಕೊಳ್ಳುವ ಅವಶ್ಯಕತೆ ಇದೆ. ಇಂದಿನ‌ ನಿಮ್ಮ ದುಡಿಮೆಯನ್ನು ಸರಿಯಾದ ಕ್ರಮದಲ್ಲಿ ವಿನಿಯೋಗಿಸುವಿರಿ. ಉಪಕಾರ ಮಾಡುವುದು ನಿಮಗೆ ಖುಷಿ ಕೊಡುವುದು. ಮಕ್ಕಳಿಂದ ನಿಮಗೆ ಖುಷಿಯಾಗಲಿದೆ. ಸ್ವಾವಲಂಬಿಯಾಗಲು ನಿಮ್ಮವರೇ ಬಿಡಲಾರರು. ಕುಟುಂಬವು ಯಾವತ್ತೂ ಇರುವಂತೆ ನಿಮ್ಮ ಬೆಂಬಲಕ್ಕೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಪ್ರತ್ಯುತ್ತರವನ್ನೂ ಬಯಸದೇ ಮಾತನಾಡುವ ನಿಮ್ಮ ವಾಚಾಳಿತನವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಿಕೊಳ್ಳಿ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಉನ್ನತವಾದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆದಂತೆ ಅನಿಸುವುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು. ವ್ಯಾವಹಾರಿಕ ವಿಭಾಗದಲ್ಲಿ ನಿಮಗೆ ಹಿನ್ನಡೆಯಾಗಲಿದೆ.

ಕುಂಭ ರಾಶಿ: ರಚನಾತ್ಮಕ ಕ್ರಿಯೆಯನ್ನು ಬಹಳ ಅಚ್ಚುಕಟ್ಟಾಗಿ ನೆರವೇರಿಸುವಿರಿ. ಕಷ್ಟಗಳು ನಮ್ಮ ಕರ್ಮದ್ದು ಎನ್ನುವ ವಿಚಾರ ನೆನಪಿರಲಿ. ಅದನ್ನು ಸಹಿಸುವ ಎದುರಿಸುವ ಶಕ್ತಿಯನ್ನು ಕೊಡು ಎಂದು ಕೇಳಿಕೊಳ್ಳಿ. ಅಶುಭದ ಸೂಚನೆಯನ್ನು ನಿರ್ಲಕ್ಷಿಸುವುದು ಬೇಡ. ಸಂಪಾದನೆಗೆ ನೂರು ದಾರಿಗಳಿದ್ದರೂ ನಿಮ್ಮ ಆಯ್ಕೆ ಸ್ಪಷ್ಟವೂ ಯೋಗ್ಯವೂ ಆಗಿರುತ್ತದೆ. ದುಡುಕಿ ಯಾವ ನಿರ್ಧಾರಗಳನ್ನೂ ತೆಗೆದುಕೊಳ್ಳಬೇಡಿ. ನಿಮಗೆ ಕೊಡುವ ಭರವಸೆಯು ನಿಮ್ಮಲ್ಲಿ ಬಲವನ್ನು ತರುವುದು. ಸಹೋದರರು ನಿಮಗೆ ಬೇಕಾದ ಸಲಹೆಗಳನ್ನು ಕೊಡುವರು. ಇಷ್ಟವಿಲ್ಲದಿದ್ದರೂ‌ ಅನಿವಾರ್ಯವಾಗಿ ಕೇಳಬೇಕಾದೀತು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು. ನಿಮ್ಮ ಅನನುಕೂಲತೆಯನ್ನು ಹೇಳಬೇಡಿ. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು.

ಮೀನ ರಾಶಿ: ನಿಮ್ಮ ಪ್ರಯತ್ನಕ್ಕೆ ದೈವಬಲಕ್ಕೂ ಬೇಕಾಗಿದ್ದು, ಅದನ್ನು ಬುದ್ಧಿಪೂರ್ವಕ ಅದನ್ನು ಮಾಡಿಕೊಳ್ಳಿಬೇಕು. ನಿಮ್ಮದಾದುದನ್ನು ಸಂಪಾದಿಸಬೇಕು ಎನ್ನುವ ನಿಮ್ಮ ತೀವ್ರತರವಾದ ಪ್ರಯತ್ನಕ್ಕೆ ಇಂದು ಕೆಲವು ಅಡ್ಡಿಗಳು ಇರಲಿವೆ. ಇರುವುದರಲ್ಲಿ ಖುಷಿಪಡುವುದು ಉತ್ತಮ. ಭೂಮಿಯ ಕ್ರಯ ಹಾಗೂ ವಿಕ್ರಯದ ವಿಚಾರದಲ್ಲಿ ನಿಮಗೆ ಲಾಭವಂತೂ ಸಿಗಲಿದೆ. ಕೃಷಿ ಭೂಮಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಲಾಭವನ್ನು ಕಾಣಬಹುದು. ಸಂಗಾತಿಯ ಜೊತೆ ಖುಷಿಯಿಂದ ಇರಲಿದ್ದೀರಿ. ಯಾರೋ ಬಂದು ನಿಮ್ಮ ದಾಂಪತ್ಯದಲ್ಲಿ ಹುಳಿಯನ್ನು ಹಿಂಡುವ ಸಾಧ್ಯತೆ ಇದೆ. ನಂಬಿಕೆಯು ಶುದ್ಧವಾಗಿರಲಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು.

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ