AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ನಿದ್ರೆಯಲ್ಲಿ ಕಂಡ ಕನಸುಗಳೆಲ್ಲ ಸತ್ಯವಾಗದು, ಹೂಡಿಕೆಯಲ್ಲಿ ಲಾಭ ಪಡೆಯುವಿರಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 05 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ನಿದ್ರೆಯಲ್ಲಿ ಕಂಡ ಕನಸುಗಳೆಲ್ಲ ಸತ್ಯವಾಗದು, ಹೂಡಿಕೆಯಲ್ಲಿ ಲಾಭ ಪಡೆಯುವಿರಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 05, 2024 | 12:12 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಏಪ್ರಿಲ್ 05) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸಾಧ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03ರಿಂದ ಮಧ್ಯಾಹ್ನ 12:35ರ ವರೆಗೆ, ಯಮಘಂಡ ಕಾಲ 15:40 ರಿಂದ 17:12 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:59 ರಿಂದ ಬೆಳಗ್ಗೆ 09:31ರ ವರೆಗೆ.

ಧನು ರಾಶಿ: ಬಹಳ ದಿನಗಳ ಅನಂತರ ನಿಮ್ಮ ವ್ಯಾಪಾರದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುವುದು. ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ಕುಟುಂಬಕ್ಕೆ ಸ್ವಲ್ಪ ಸಮಯವನ್ನು ಕೊಡಿ. ಅವರಿಗೆ ಏನು ಬೇಕು? ಏನು ಮಾಡಬೇಕು ಎಂಬುದನ್ನು ಅರಿತು ಕಾರ್ಯಪ್ರವೃತ್ತರಾಗಿ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡಬೇಡಿ.‌ ಇಂದು ನಿಮ್ಮ ಜವಾಬ್ದಾರಿಗಳ ಬಗ್ಗೆ ಕೂಲಂಕಷದ ಅಧ್ಯಯನವನ್ನು ಮೇಲಧಿಕಾರಿಗಳು ಮಾಡಿಯಾರು. ನಂಬಿಕೆಯನ್ನು ಉಳಿಸಿಕೊಳ್ಳುವತ್ತ ನಿಮ್ಮ ಯೋಚನೆ ಇರಲಿದೆ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ.

ಮಕರ ರಾಶಿ: ನಿಮ್ಮಲ್ಲಿ ಹತಾಶೆಯ ಭಾವವು ಮೂಡುವುದು. ಅದನ್ನು ದೂರ ಮಾಡಿಕೊಳ್ಳಲು ಏನಾದರೂ ಇಷ್ಟವಾಗುವ ಚಟುವಟಿಕೆಯಲ್ಲಿ ಭಾಗವಹಿಸಿ. ಋಣಾತ್ಮಕ ಭಾವನೆಗಳೂ ದೂರವಾಗುವವು. ಮಾನಸಿಕ ನೆಮ್ಮದಿಯೂ ಸಿಗುವುದು. ಜೀವನೂ ಸರಳ ಎನಿಸಬಹುದು. ಕುಟುಂಬದವರ ಜೊತೆ ನಗುತ್ತಾ ಇರಿ. ಕಲಾವಿದರಿಗೆ ದೊಡ್ಡ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನ ಬರಬಹುದು. ಇಂದು ನಿಮ್ಮ ದೇಹಕ್ಕೆ ಪೀಡೆಯು ಅಧಿಕವಾದಂತೆ ತೋರುವುದು. ಏನನ್ನೂ ಮಾಡಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಬಾಕಿ ಇರುವ ಕೆಲಸದ ಕಡೆ ನಿಮ್ಮ ಗಮನ ಅವಶ್ಯಕ. ಗುರಿಯನ್ನು ಆದಷ್ಟು ಬೇಗ ಮುಟ್ಟಿ. ನಿಮ್ಮ ತಪ್ಪನ್ನು ಯಾರ ಮೇಲೋ ಹಾಕುವಿರಿ.

ಕುಂಭ ರಾಶಿ: ಇಂದು ನೀವು ಯಾರಮೇಲೋ ದ್ವೇಷವನ್ನು ಸಾಧಿಸುತ್ತ ಕೂರಬೇಡಿ. ಮನಸ್ಸು ಹಾಳಾಗುವುದು ಬಿಟ್ಟರೆ ಮತ್ತೇನೂ ಆಗದು. ಸಾಧ್ಯಾವಾದರೆ ಪ್ರೀತಿಸಿ, ಇಲ್ಲವೇ ತಟಸ್ಥವಾಗಿರಿ. ಬರುವ ಹಣವನ್ನು ನಿರೀಕ್ಷಿಸಬಹುದು. ಸಂಗಾತಿಯೊಂದಿಗೆ ಮನಸ್ತಾಪಗಳು ಏಳಬಹುದು. ಪ್ರೇಮನಿವೇದನೆಯನ್ನು ಮಾಡಲು ಹೋಗಬೇಡಿ. ತಿರಸ್ಕಾರಿಸಬಹುದು. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಉದ್ಯೋಗದಲ್ಲಿ ಕೆಲವು ಸವಾಲುಗಳು ಬರಬಹುದು. ಇಂದಿನ ಹಣದ ಅಗತ್ಯತೆಯನ್ನು ಸ್ನೇಹಿತರ ಮೂಲಕ ಪಡೆದುಕೊಳ್ಳುವಿರಿ. ಆಹಾರದಲ್ಲಿ ಕ್ರಮವನ್ನು ಇಟ್ಟುಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.

ಮೀನ ರಾಶಿ: ಇಂದು ನೀವು ಸುಮ್ಮನೇ ಕೆಲಸವಿಲ್ಲದೇ ಕುಳಿತಿರುವ ಬದಲು ಏನನ್ನಾದರೂ ಮಾಡಿ. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಿರಿ. ಕೊಟ್ಟಿರುವ ಜವಾಬ್ದಾರಿಯನ್ನು ಯೋಗ್ಯರೀತಿಯಲ್ಲಿ ಮಾಡಿ ಮುಗಿಸುವಿರಿ. ಸಂಪತ್ತನ್ನು ಉಳಿಸಲು ಯತ್ನಿಸಿದಷ್ಟೂ ಯಾವುದಾದರೂ ಒಂದು ರೀತಿಯಲ್ಲಿ ಖರ್ಚಾಗುವುದು. ನಿದ್ರೆಯಲ್ಲಿ ಕಂಡ ಕನಸುಗಳೆಲ್ಲ ಸತ್ಯವಾಗದು. ನಿಮ್ಮ ಮಾತಿಗೆ ಅಪರಿಚಿತರೂ ಮೂಕವಿಸ್ಮತರಾದಾರು. ಮಕ್ಕಳ ವ್ಯವಹಾರಕ್ಕೆ ಬೇಕಾದ ಹಣಕಾಸು ನೆರವನ್ನು ನಿಜವು ನೀಡುವಿರಿ. ಹೂಡಿಕೆಯಲ್ಲಿ ಆದ ಲಾಭವನ್ನು ನೀವು ಪಡೆಯುವಿರಿ. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು.