AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಆರ್ಥಿಕ ಸ್ಥಿತಿ ಚೇತರಿಕೆ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 13 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಆರ್ಥಿಕ ಸ್ಥಿತಿ ಚೇತರಿಕೆ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 13, 2024 | 12:15 AM

Share

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ಇಲ್ಲಿ ತಿಳಿಯಿರಿ. ನಿಮ್ಮ ಇಂದಿನ (ಜನವರಿ 13) ದಿನ ಭವಿಷ್ಯ (Horoscope) ಹೀಗಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವಜ್ರ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 9:52 ರಿಂದ 11:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:06 ರಿಂದ 03:31ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:02 ರಿಂದ 08:27ರ ವರೆಗೆ.

ಧನು ರಾಶಿ: ಇಂದು ನಿಮ್ಮ ಕೆಲಸಕ್ಕೆ ಇತರರ ಹಸ್ತಕ್ಷೇಪವು ಇರಲಿದ್ದು ಅದನ್ನು ಸಹಿಸುವುದು ಆಗದು. ನಿಮ್ಮ ಸ್ವಾಭಿಮಾನವನ್ನು ಎಲ್ಲ ಕಡೆಗಳಲ್ಲಿ ಪ್ರದರ್ಶಿಸಿ ತೊಂದರೆಗೆ ಸಿಕ್ಕಿಕೊಳ್ಳುವಿರಿ. ಕಬ್ಬಿಣ ಮುಂತಾದ ವ್ಯಾಪಾರವನ್ನು ಮಾಡುವವರಿಗೆ ಆದಾಯವು ಹೆಚ್ಚಾಗುವುದು. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಣಕಾಸಿನ ವ್ಯವಹಾರದ ಪ್ರತಿನಿಧಿಗಳು ಅಂದುಕೊಂಡ ಕೆಲಸವನ್ನು ಸಾಧಿಸಿಕೊಳ್ಳುವರು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪರಿಗಳಿಗೆ ಉತ್ತಮ ಲಾಭವಿರಲುದೆ. ಇಂದು ನಿಮ್ಮ ಕಾರ್ಯಗಳನ್ನು ಇನ್ನೊಬ್ಬರು ಮಾಡಬಹುದು.

ಮಕರ ರಾಶಿ: ನಿಮ್ಮ ದ್ವಂದ್ವ ಯೋಚನೆಯಿಂದ ಇಂದು ನಿಮ್ಮ‌ ಕೆಲಸಗಳು ಹಾದಿ ತಪ್ಪಬಹುದು.‌ ಕಾರ್ಯದ ಕಾರಣ ಸಂಭ್ರಮವನ್ನು ಕಳೆದುಕೊಳ್ಳಬೇಕಾಗುವುದು. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಯೋಚಿಸುವುದು ಉತ್ತಮ. ಧಾರ್ಮಿಕ‌ಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ಒಗ್ಗಟ್ಟಿನಿಂದ ಕಾರ್ಯವನ್ನು ಸಾಧಿಸುವುದು ಇಂದಿನ ಅಗತ್ಯವೂ ಇದೆ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ.

ಕುಂಭ ರಾಶಿ: ಶತ್ರುಗಳು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಇಚ್ಛಿಸುವರು. ಕಳೆದುಕೊಂಡ ವಸ್ತುವಿನ ಚಿಂತೆಯನ್ನು ನೀವು ಬಿಡುವುದು ಕಷ್ಟವಾದೀತು. ಅನಗತ್ಯ ಖರ್ಚುಗಳು ಒಂದಾದಮೇಲೆ ಒಂದು ಬರಲಿದ್ದು ಕಷ್ಟವಾದೀತು. ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಔಷಧಗಳ ವ್ಯತ್ಯಾಸದಿಂದ ಮತ್ತೇನಾದರೂ ಆದೀತು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ‌ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ಪ್ರೀತಿಯಿಂದ ಸಿಗುವುದು.

ಮೀನ ರಾಶಿ: ದೈವದತ್ತವಾದ ವಿಶೇಷತೆಗಳನ್ನು ಕಳೆದುಕೊಳ್ಳುವುದು ಬೇಡ.‌ ರೂಢಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯು ಚೇತರಿಕೆಯಾಗಬಹುದು. ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಕಷ್ಟವಾದೀತು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಇಂದಿನ‌ ಬಹುಪಾಲು ಸಮಯವನ್ನು ಅನ್ಯ ಚಿಂತನೆಯಲ್ಲಿ ಕಳೆಯುವಿರಿ.‌ ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ಒಂದೇ ಸಾರಿ ಖರ್ಚಿನ ಎಲ್ಲ ಅವಕಾಶಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಬಂಧುಗಳ‌ ಮನೊಲಿಸುವುದು ವ್ಯರ್ಥವೆನಿಸಬಹುದು.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್