AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರ ದುರಭ್ಯಾಸಗಳು ಇತರರಿಗೆ ಗೊತ್ತಾಗುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಗುರುವಾರ ಸಕಾರಾತ್ಮಕ ನಿರೀಕ್ಷೆ, ಅಪೂರ್ಣ ಪ್ರೇಮ, ಚಿಕಿತ್ಸೆಯಿಂದ ಕಷ್ಟ, ಒತ್ತಡದಿಂದ ಕಾರ್ಯ ನಾಶ, ಸ್ಪರ್ಧಾತ್ಮಕತೆಗೆ ನಿರುತ್ಸಾಹ, ಅಲ್ಪ ಆದಾಯ, ಕಾನೂನು ಸಮರ ಇವು ದಿ‌ನ ವಿಶೇಷ.

Horoscope: ಈ ರಾಶಿಯವರ ದುರಭ್ಯಾಸಗಳು ಇತರರಿಗೆ ಗೊತ್ತಾಗುವುದು
ನಿತ್ಯ ಭವಿಷ್ಯ
ಗಂಗಾಧರ​ ಬ. ಸಾಬೋಜಿ
|

Updated on: Sep 04, 2025 | 5:05 AM

Share

ಬೆಂಗಳೂರು, ಸೆಪ್ಟೆಂಬರ್​ 03, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರ ಮಾಸ : ಭಾದ್ರಪದ, ಸೌರ ಮಾಸ : ಸಿಂಹ, ಮಹಾನಕ್ಷತ್ರ : ಪೂರ್ವಾಫಲ್ಗುಣೀ, ವಾರ : ಗುರುವಾರ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ವಿಷ್ಕಂಭ, ಕರಣ : ಬವ, ಸೂರ್ಯೋದಯ – 06 – 21 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:04 – 15:36, ಗುಳಿಕ ಕಾಲ 09:27 – 10:59, ಯಮಗಂಡ ಕಾಲ 06:22 – 08:54

ಮೇಷ ರಾಶಿ: ಎಂತಹ ಹೊಸ ಪ್ರಯತ್ನದ ಕಡೆ ಹೋದರೂ ಅರ್ಧಕ್ಕೆ ಮನಸ್ಸು ಹಿಂದಿರುಗುವುದು. ಬಂಡವಾಳದ ವಿಚಾರದಲ್ಲಿ ಯಾರ ಮಾತೂ ಪಥ್ಯವಾಗದು. ಇಂದು ನಿಮ್ಮ ನಿರೀಕ್ಷೆಯಂತೆ ಬರಬೇಕಾದ ಹಣವು ಬರಬಹುದು. ಪರಿಶ್ರಮವು ಎಂದಿಗಿಂತ ಅಧಿಕವಾಗಿದ್ದು, ಅದಕ್ಕೆ ಯೋಗ್ಯವಾದ ಫಲವು ಸಿಗುವುದು. ನಿಮ್ಮ ಸರ್ಕಾರಿ ಕೆಲಸಗಳಿಗೆ ಹೆಚ್ಚು ಓಡಾಟ ಆಗಬಹುದು. ಸಂಗಾತಿಯ ಜೊತೆ ಉದ್ಯಮದ ಕುರಿತು ಚರ್ಚಿಸಿ, ಕಲಹದಲ್ಲಿ ಅಂತ್ಯವಾಗಲಿದೆ. ಇಂದಿನ ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ಮನೆಯಿಂದ ಹೊರಡುವಾಗ ಶುಭ ಸೂಚನೆಗಳನ್ನು ಗಮನಿಸಿ, ಕಾರ್ಯದ ಸಾಧ್ಯಾಸಾಧ್ಯತೆಗಳ ಬಗ್ಗೆ ತಿಳಿಯುವಿರಿ. ಮಕ್ಕಳ ಸಂತೋಷಕ್ಕಾಗಿ ಹಣವನ್ನು ಖಾಲಿ ಮಾಡುವಿರಿ. ಅದೃಷ್ಟವನ್ನು ನಂಬಿ ಕೆಲಸವನ್ನು ಮಾಡುವಿರಿ. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಕುಟುಂಬಕ್ಕೆ ಕಿಂಚಿತ್ ಸಹಾಯವನ್ನು ಯಾವುದೋ ಒಂದು ರೀತಿಯಲ್ಲಿ ಮಾಡುವಿರಿ. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿ ಬರಬಹುದು.

ವೃಷಭ ರಾಶಿ: ಹಣ ಹೊಂದಿಸಲು ಅನ್ಯರ ಸಹಾಯವನ್ನೂ ಪಡೆಯುವಿರಿ. ಸಿಟ್ಟನ್ನು ಯಾವುದಾದರೂ ಒಂದು ದಾರಿಯಲ್ಲಿ ಹೊರಹಾಕದೆ ಸಮಾಧಾನ ಪಟ್ಟುಕೊಳ್ಳುವಿರಿ. ಇಂದು ನಿಮ್ಮ ಮುಂದೆ ಸಾಲದ ವಿಚಾರ ಬಂದರೆ ಮೌನವಹಿಸುವಿರಿ. ನಿಮ್ಮ‌ ಪ್ರಾಮಾಣಿಕ ಕೆಲಸಕ್ಕೆ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ನ್ಯಾಯಾಲಯದ ಓಡಾಟವು ನಿಮಗೆ ಬೇಸರ ತರಿಸಬಹುದು. ದಾನವಾಗಿ ಬಂದಿದ್ದರ ಬಗ್ಗೆ ಹಗುರವಾದ ಮಾತು ಬೇಡ. ಮಿತ್ರರೆಂದು ಬಂದವರ ವಿಚಾರದಲ್ಲಿ ಜಾಗರೂಕತೆ ಇರಲಿ. ಮಾನಸಿಕವಾಗಿ ನಿಮಗೆ ಇಂದು ಅವರು ತೊಂದರೆ ಕೊಡಬಹುದು. ಕುಟುಂಬದ‌ ಚರ ಆಸ್ತಿಯನ್ನು ನಯವಾಗಿ ಪಡೆಯಲು ಯತ್ನಿಸುವಿರಿ. ಬರಬೇಕಾದ ಹಣವು ಬಾರದೇ ಸಾಲವನ್ನು ಮಾಡಬೇಕಾಗಬಹುದು. ಕುಟುಂಬ ನಿರ್ವಹಣೆಯ ವಿಚಾರದಲ್ಲಿ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಬರಬಹುದು. ಚಂಚಲವಾದ ಮನಸ್ಸಿನ ಕಾರಣ ಕೆಲವಕಳೆದುಕೊಳ್ಳುವಿರಿ. ಕೈಲಾಗದ್ದನ್ನು ಮಾಡುವ ಉತ್ಸಾಹ ಬೇಡ. ಆಸೆಯಿಂದ ಕಳೆದುಕೊಳ್ಳುವುದು ಹೆಚ್ಚಾಗಬಹುದು.

ಮಿಥುನ ರಾಶಿ: ಕಲಹದ ಕಾರಣಕ್ಕೆ ಮನೆಯಿಂದ ಹಾಗೂ ಎಲ್ಲಿಂದ ದೂರ ಇರುವ, ಅನುಬಂಧವನ್ನು ಕಳೆದುಕೊಳ್ಳುವ ಯೋಚನೆ ಬರಲಿದೆ.‌ ಎಲ್ಲ ಸಮಯದಲ್ಲಿಯೂ ಇನ್ನೊಬ್ಬರಿಗೆ ಪ್ರಶಂಸೆ ಕೊಡಲಾರಿರಿ.‌ ಇಂದು ಹಳೆಯ ಪ್ರಣಯವು ಆರಂಭದ ಸೂಚನೆ ಸಿಗುವುದು. ಸ್ತ್ರೀಯರು ಮನೆಯಲ್ಲಿ ಆದ ಘಟನೆಯಿಂದ ತಾಳ್ಮೆಯನ್ನು ಕಳೆದುಕೊಳ್ಳಬಾರದು. ಬಂಧುಗಳ ಅಸಹಾಯವು ನಿಮಗೆ ಬೇಸರ ತರಿಸುವುದು. ಶುಭಸೂಚನೆಯನ್ನು ನೀವು ಗಮನಿಸುವುದು ಉತ್ತಮ. ಪೂರ್ವ ಆಲೋಚನೆಗಳು ದಿಕ್ಕು ತಪ್ಪಬಹುದು. ದ್ವೇಷವನ್ನು ಮುಂದುವರಿಸದೇ ಮುಕ್ತಾಯ ಮಾಡಿಕೊಳ್ಳಿ. ವಿದ್ಯುತ್ ವಸ್ತುಗಳಿಂದ ನಿಮಗೆ ಭಯ ಹಾಗೂ ಕೋಪವೂ ಬರುವುದು. ದೂರಾದ ಪ್ರೇಮಿಯನ್ನು ನೆನಪುಮಾಡಿಕೊಂಡು ದುಃಖಿಸುವಿರಿ. ಮೋಜಿನ‌ ಆಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಆಟದಲ್ಲಿ ಎಚ್ಚರವಿರಲಿ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ. ಲಲಿತಕಲೆಗಳಲ್ಲಿ ನಿಮ್ಮ ಛಾಪು ಮೂಡಿಸುವ ಪ್ರಯತ್ನ ಇರುವುದು.

ಕರ್ಕಾಟಕ ರಾಶಿ: ನಿಮ್ಮ ಪ್ರೇಮವನ್ನು ಪ್ರೇಮಿಯು ಪೂರ್ಣವಾಗಿ ಒಪ್ಪಲಾರನು. ಮನೆಗೆ ಬೇಕಾದ ವಸ್ತುಗಳನ್ನು ತರಲು ಸಂಗಾತಿಯ ಅನುಮತಿ ಪಡೆಯದೇ ಮಾಡುವಿರಿ. ಇಂದು ನೀವು ವಹಿಸಿಕೊಂಡ ಕಾರ್ಯವನ್ನು ಬಿಡದೇ ಮುನ್ನಡೆಸುವಿರಿ. ಕಛೇರಿಯಲ್ಲಿ ಉದ್ಯೋಗದ ಕಾರಣ ನಿಮ್ಮನ್ನು ದೂರದ ಊರಿಗೆ ಕಳುಹಿಸಬಹುದು. ನಿಮಗೆ ಯಾರನ್ನಾದರೂ ಸೋಲಿಸುವ ಖಯಾಲಿ ಶುರುವಾಗುವುದು. ಹೊಸ ಶೈಲಿ ಬಟ್ಟೆಯನ್ನು ಖರೀದಿಸುವಿರಿ. ನಿಮ್ಮ ಗುರಿಯನ್ನು ತಪ್ಪಿಸಲು ಬೇಕಾದ ಪಿತೂರಿಯು ನಡೆಯಬಹುದು. ನಿಮ್ಮ ಮಾತಿನ ವೇಗವನ್ನು ಅರ್ಥಮಾಡಿಕೊಳ್ಳಲು ಕಷ್ಟವಾದೀತು. ಕಛೇರಿಯಲ್ಲಿ ಸ್ತ್ರೀಯರಿಂದ ಸಹಕಾರವನ್ನು ಪಡೆಯುವಿರಿ. ಭಯದಲ್ಲಿ ನೀವು ಬಹಳ ಇಂದಿನ ದಿನವನ್ನು ಕಳೆಯಬೇಕಾದೀತು. ನಿಮ್ಮನ್ನು ನೀವೇ ತಮಾಷೆಗೆ ಅವಮಾನ ಮಾಡಿಕೊಳ್ಳುವಿರಿ. ಖಾಸಗಿ ಉದ್ಯೋಗದಲ್ಲಿ ಇರುವವರಿಗೆ ಆತಂಕವಿರಲಿದೆ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನೆರಮನೆಯವರ ಜೊತೆ ವಾದ ಮಾಡಬೇಕಾದೀತು.

ಸಿಂಹ ರಾಶಿ: ಸ್ಪರ್ಧಾತ್ಮಕ ವಿಚಾರಕ್ಕೆ ಉತ್ಸಾಹ ಕಡಿಮೆಯಾಗಲಿದೆ. ಮನೆಯಲ್ಲಿ ನಿಮ್ಮ ಆರ್ಥಿಕ ವ್ಯವಹಾರದ ಬಗ್ಗೆ ವಿಚಾರಿಸಬಹುದು. ಇಂದು ನೀವು ವಾಹನವನ್ನು ಚಲಾಯಿಸುವುದು ಬೇಡ. ಹೊಸ ಆದಾಯದ ಮೂಲವನ್ನು ಹುಡುಕುವುದು ಉತ್ತಮ. ನಿಮ್ಮ ಸಾಲವನ್ನು ಮನೆಯವರು ತೀರಿಸಬೇಕಾದೀತು. ಅಧಿಕ ಆದಾಯಕ್ಕೆ ನಿಮ್ಮ ಉದ್ಯಮವನ್ನು ವಿಸ್ತರಿಸುವಿರಿ. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ಆಗಬೇಕಾದುದನ್ನು ಮಾಡಿ. ಅನ್ಯರ ದೃಷ್ಟಿಯಿಂದ ನಿಮ್ಮ ಕೆಲಸ ಗೈಗೂಡದು. ಅನಗತ್ಯ ಓಡಾಟದಿಂದ ಶರೀರವು ದಣಿಯಬಹುದು. ದುರಭ್ಯಾಸವು ಆರೋಗ್ಯವನ್ನೂ ಗೌರವವನ್ನೂ ಹಾಳುಮಾಡಲಿದೆ. ಮನಸ್ಸಿಗೆ ಶಾಂತಿಯು ಇರಲಿದ್ದು ಉದ್ವೇಗದ ಸಂದರ್ಭವನ್ನು ಆರಾಮಾಗಿ ದಾಟುವಿರಿ. ಇಂದು ಕೆಲವರ ವರ್ತನೆಯು ಬೇಸರ ತರಿಸಬಹುದು. ಇಂದು ನಿಮ್ಮ‌ಪೂರ್ವಜರ ಜ್ಞಾನವು ಸಿಗಲಿದೆ. ಸತ್ಸಂಗ ಮೂಲಕ ಸಮಯವನ್ನು ಕಳೆಯುವಿರಿ. ರಾಜಕೀಯ ನೇತಾರರ ಸಹವಾಸವನ್ನು ಹೇಗೋ ಸಂಪಾದಿಸುವಿರಿ. ನಿಮ್ಮ ರಕ್ಷಣೆಯಲ್ಲಿ ನೀವಿರಿ.

ಕನ್ಯಾ ರಾಶಿ: ಚಿಕಿತ್ಸೆಯ ಕಾರಣದಿಂದ ನಿಮಗೆ ದಿನವನ್ನು ಒಂಟಿಯಾಗಿ ನಡೆಸುವುದು ಕಷ್ಟ. ಬಿಡುವಿನ ವೇಳೆಯನ್ನು ಮಕ್ಕಳು ದುರುಪಯೋಗ ಮಾಡಿಕೊಳ್ಳುವರು. ಏನಾದರೂ ಕೆಲಸವನ್ನು ಕೊಡುತ್ತಲೇ ಅವರನ್ನು ಸರಿಯಾದ ದಾರಿಗೆ ತರಬೇಕಾದೀತು. ಇಂದು ನಿಮ್ಮ ದುರಭ್ಯಾಸಗಳು ಇತರರಿಗೆ ಗೊತ್ತಾಗುವುದು. ತಂದೆ ತಾಯಿಗಳನ್ನು ಬಹಳ ಸಂತೋಷದಿಂದ‌ ನೋಡಿಕೊಳ್ಳುವಿರಿ. ಅವರು ಅಪೇಕ್ಷಿಸಿದ ಸ್ಥಳಕ್ಕೆ ಅವರನ್ನು ಕರೆದೊಯ್ಯುವಿರಿ. ನಿಮ್ಮ ಕೈಲಾದವರಿಗೆ ಸಹಾಯವನ್ನು ಮಾಡುವುದು ಒಳ್ಳೆಯದು. ಅತಿಥಿ ಸತ್ಕಾರದಿಂದ ಸಂತೋಷವಾಗಲಿದೆ. ವಿರೋಧಿಗಳಿಗೆ ನಿಮ್ಮ ಬಲ ಪ್ರದರ್ಶನವಾಗಲಿದೆ. ಕೃಷಿಕರಿಗೆ ತೊಂದರೆ, ಒತ್ತಡಗಳು ಕಾಣಿಸಿಕೊಳ್ಳುವುದು. ಹೊಸ ಜನರ ಭೇಟಿಯು ನಿಮಗೆ ಹೊಸ ದಾರಿಯನ್ನು ಮಾಡಿಕೊಟ್ಟೀತು. ನಿಮ್ಮದಲ್ಲದ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟವಾದೀತು. ಸ್ನೇಹಿತರಿಂದ‌ ಉದ್ಯೋಗದ ಪ್ರಾಪ್ತಿಯನ್ನು ನೀವು ನಿರೀಕ್ಷಿಸುವಿರಿ. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ. ಯಾರ ಪ್ರೀತಿಯನ್ನೂ ಕಡೆಗಾಣಿಸುವುದು ಬೇಡ.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ