ಈ ರಾಶಿಯವರ ನ್ಯಾಯಾಲಯದ ಕಲಹವು ಬಗೆಹರಿಯಲಿದೆ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ, ಗುರುವಾರ ಪ್ರಭಾವದ ಬಳಕೆ, ಅಪವಾದದ ಹೇಳಿಕೆ, ಪರರ ಮೇಲೆ ಕಳಕಳಿ ಇದು ಇಂದಿನ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಚತುರ್ಥೀ ನಿತ್ಯನಕ್ಷತ್ರ: ಮೃಹಶಿರಾ, ಯೋಗ: ಅತಿಗಂಡ ಕರಣ: ಗರಜ, ಸೂರ್ಯೋದಯ – 06 : 11 am, ಸೂರ್ಯಾಸ್ತ – 06 : 48 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:04 – 15:39, ಯಮಘಂಡ ಕಾಲ 06:11 – 07:46, ಗುಳಿಕ ಕಾಲ 09:21 – 10:55
ಕನ್ಯಾ ರಾಶಿ: ನಿಮ್ಮ ಮೃದುಸ್ವಭಾವದಿಂದ ಆಪತ್ತು. ಗೊಂದಲಗಳಿಂದ ವೃತ್ತಿಯನ್ನು ನಿರ್ಧರಿಸಲು ಕಷ್ಟವಾದೀತು. ಹೊಸ ಕೆಲಸಗಳನ್ನು ಹುಡುಕಲು ಪ್ರಯತ್ನಿಸಿ. ನ್ಯಾಯಾಲಯದ ಕಲಹವು ಬಗೆಹರಿಯಲಿದೆ. ಸಂಗಾತಿಯಿಂದ ಅಪಮಾನವೂ ಆಗಬಹುದು. ಬೇಕಾದುದನ್ನು ಯಾರದೋ ಮೂಲಕ ಪಡೆಯುವುದು ಅನಿವಾರ್ಯವಾಗಬಹುದು. ಕಾಲಾನಂತರ ನಿಮಗೆ ಉತ್ತಮವಾದ ಫಲವನ್ನೇ ನೀಡುವುದು. ತಿಳಿದುಕೊಳ್ಳುವ ಕುತೂಹಲವು ನಿಮ್ಮಲಿಂದು ಅಧಿಕವಾಗಿರುವುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ವ್ಯಾಪಾರದಲ್ಲಿ ಮುನ್ನಡೆಯಲು ಅವಸರದ ಹೆಜ್ಜೆ ಬೇಡ. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ನೀವು ಇರುವಿರಿ. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಕೋಪದಿಂದ ಎಲ್ಲವನ್ನೂ ಸಾಧಿಸಲಾಗದು. ಅದರ ಅರಿವಿರಲಿ. ವಿದ್ಯುತ್ ಗೆ ಸಂಬಂಧಿಸಿದ ಕಾರ್ಯದಲ್ಲಿ ಲಾಭವಿರಲಿದೆ.
ಮೇಷ ರಾಶಿ: ನಿಮ್ಮನ್ನು ಸಾಮಾಜಿಕ ಕಾರ್ಯಕ್ಕೆ ನಾಯಕರನ್ನಾಗಿ ಮಾಡಬಹುಸಿ. ನೀವು ಪ್ರಶಂಸಿಸುವುದರಲ್ಲಿ ಅರ್ಥವಿಲ್ಲ. ಉಪಯೋಗಕ್ಕೆ ಬಾರದ ಕೆಲಸವನ್ನು ಬಿಟ್ಟುಬಿಡುವುದು ಒಳ್ಳೆಯದು. ಮಂಗಲಕರವಾದ ಕಾರ್ಯಗಳನ್ನು ಮಾಡಲಿದ್ದೀರಿ. ಸ್ವಲ್ಪ ಆಯಾಸವು ಬಾಧಿಸಬಹುದು. ತಕ್ಕ ವಿಶ್ರಾಂತಿಯಿಂದ ಪರಿಹಾರವನ್ನು ಮಾಡಿಕೊಳ್ಳಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಭೂಮಿಯ ವ್ಯವಹಾರದ ಬಗ್ಗೆ ತಾತ್ಸಾರವು ಯಾರದೋ ಕಾರಣಕ್ಕೆ ಬರಬಹುದು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಅನಾರೋಗ್ಯ ಕಾರಣಕ್ಕೆ ವೈದ್ಯಾಲಯಕ್ಕೆ ಓಡಾಡ ಮಾಡುವಿರಿ. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಕೆಲವನ್ನು ನೀವು ಮನಸ್ಸಿನಿಂದ ತೆಗೆದರಷ್ಟೇ ನೆಮ್ಮದಿ ಸಾಧ್ಯ.
ವೃಷಭ ರಾಶಿ: ಮಕ್ಕಳಿಗೆ ಜವಾಬ್ದಾರಿ ಕೊಡಲು ಮನಸ್ಸಾಗುವುದು. ಇಂದು ಕಳೆದುಕೊಂಡ ಸಂಪತ್ತು ನಿಮಗೆ ಸಿಗುವುದು ನಿಮ್ಮ ಸಂತೋಷಕ್ಕೆ ಕಾರಣವಾಗುತ್ತದೆ. ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ಅಧಿಕವಾದ ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗಬೇಡಿ. ಸಾಮರ್ಥ್ಯ ಮತ್ತು ಸಂಪತ್ತಿಗೆ ಅನುಸಾರವಾಗಿ ಯೋಚನೆ ಹಾಗೂ ಯೋಜನೆಗಳು ಇರಲಿ. ಅನಿರೀಕ್ಷಿತ ಬಂಧುಗಳ ಆಗಮನದಿಂದ ನಿಮ್ಮ ಕಾರ್ಯಕ್ಕೆ ತೊಂದರೆಯಾದರೂ ತೋರಿಸಿಕೊಳ್ಳಲು ಹೋಗದೇ ಸಂತೋಷದಿಂದ ಇರುವಿರಿ. ಬಂಧುಗಳ ಮನೆಗೆ ಹೋಗಲು ನೆಪ ಸಿಗುವುದಿ. ನಿಮ್ಮ ಆಸ್ತಿಕತೆಯನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಬಳಿ ಯಾರೂ ವಾದಮಾಡಬಾರದು ಎನ್ನಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಕೆರಳಿಸುವ ಸ್ವಭಾವವನ್ನು ಬಿಡುವುದು ಉತ್ತಮ.
ಮಿಥುನ ರಾಶಿ: ಮಾರಾಟದ ವಿಭಾಗ ನಿಮ್ಮ ಜವಾಬ್ದಾರಿಗೆ ಬರಬಹುದು. ನಿಮ್ಮ ಪಕ್ಷಪಾತದ ಧೋರಣೆಯನ್ನು ನೀವು ಸಹಿಸಲಾರಿರಿ. ನಿಮಗೆ ಬೇಕಾದ ಸಲಹೆ ಸಹಕಾರಗಳು ಸಿಗಲಿವೆ. ಬಂಧುಗಳ ಮಾತು ಕಹಿ ಎನಿಸಬಹುದು. ನಿಮ್ಮ ಮನಸ್ಸನ್ನು ಕುಗ್ಗಿಸಬಹುದು. ಆಪ್ತರ ಮಾತುಗಳು ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಏನನ್ನಾದರೂ ಸಾಧಿಸಬೇಕು ಎನ್ನುವ ಛಲವು ನಿಮ್ಮ ನಿತ್ಯಮಂತ್ರವಾಗಲಿ. ವಿದ್ಯುತ್ ಯಂತ್ರ ದುರಸ್ತಿಗೆ ಖರ್ಚು ಹೆಚ್ಚು. ಆರ್ಥಿಕ ವ್ಯವಹಾರ ಶುದ್ಧರಾಗಿರಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಎಲ್ಲದಕ್ಕೂ ಇನ್ನೊಬ್ಬರನ್ನು ಬೊಟ್ಟು ಮಾಡುವುದು ಸರಿಯಾಗದು. ತಿದ್ದಿಕೊಳ್ಳುವ ಅಂಶಗಳನ್ನು ಗಮನಿಸುವುದು ಮುಖ್ಯವಾದೀತು. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.
ಕರ್ಕಾಟಕ ರಾಶಿ: ಸಣ್ಣ ವಿಚಾರಕ್ಕೆ ದೊಡ್ಡ ಒತ್ತಡ ಇರಲಿದೆ. ಎಲ್ಲವನ್ನೂ ಆರ್ಥಿಕ ದೃಷ್ಟಿಯಿಂದ ನಿರ್ಣಯಿಸುವುದು ಕಷ್ಟವೇ ಆದೀತು. ಹಳೆಯ ಸಿಟ್ಟನ್ನು ನೆನಪಿಸಿಕೊಂಡು ದ್ವೇಷವನ್ನು ಸಾಧಿಸುವ ಕೆಲಸವನ್ನು ಮಾಡಬೇಡಿ. ಭೂಮಿಯ ವ್ಯವಹಾರದ ಕಾರಣಕ್ಕೆ ಹೆಚ್ಚು ಓಡಾಟವನ್ನು ಮಾಡಬೇಕಾಗಿ ಬರಬಹುದು. ನಿಮ್ಮ ಪ್ರಭಾವವು ಜೊತೆಗಾರರಿಗೆ ಗೊತ್ತಾಗಲಿದೆ. ನಿಮ್ಮ ಸಹಾಯಕ್ಕೆ ಬರುವವರನ್ನು ಗೌರವಿಸಿ. ಸರಿಯಾದ ಸ್ಥಾನವನ್ನೂ ಕೊಡಬೇಕಾಗುವುದು. ಅನಿವಾರ್ಯತೆಯಿಂದ ಹಣವನ್ನು ಖರ್ಚುಮಾಡಬೇಕಾಗಿ ಬರುವುದು ಸ್ವಲ್ಪಮಟ್ಟಿಗೆ ಅಳುಕಿರುವುದು. ಅದನ್ನು ಗಮನಿಸಿಕೊಂಡು ಮಾಡಬೇಕಾದ ಕೆಲಸದಕಡೆ ಗಮನ ಹರಿಸಿ. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಕಾನೂನಾತ್ಮಕ ವಿಚಾರವು ನಿಮಗೆ ಅರ್ಥವಾಗದಿರಬಹುದು.
ಸಿಂಹ ರಾಶಿ: ಹೊಸ ನಿರೀಕ್ಷೆಯಲ್ಲಿ ಇರುವುದು ಬೇಡ. ಮನೆಯ ನಿರ್ಮಾಣದ ಕಾರ್ಯಕ್ಕೆ ಯಾರಿಂದಲಾದರೂ ತೊಂದರೆ ಬರಬಹುದು. ಯಾರಾದರೂ ನಿಮ್ಮ ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸದೇ ತೊಂದರೆಗಳನ್ನು ಕೊಡಬಹುದು. ಅದಕ್ಕೆ ಬೇಕಾದ ಕಾನೂನಿನ ಹಾದಿಯನ್ನು ಅನುಸರಿಸಿ ಸರಿಮಾಡಿಕೊಳ್ಳಿ. ನಿಮ್ಮಿಂದಾಗದ ಕಾರ್ಯವನ್ನು ಬೇರೆಯವರು ಮಾಡಿ ತೋರಿಸುವುದು ನಿಮಗೆ ಅಪಮಾನಕರವೆನಿಸವುದು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ವಿದೇಶ ವ್ಯವಹಾರದಲ್ಲಿ ಆತಂಕ ಎದುರಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ವಿವಾಹದ ಬಗ್ಗೆ ಎಲ್ಲರೂ ನಿಮ್ಮನ್ನು ಪ್ರಶ್ನಿಸುವರು. ಮುಜುಗರಕ್ಕೆ ಸಿಕ್ಕಿಕೊಳ್ಳಬೇಕಾದೀತು.




