AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ, ಗುರುವಾರ ಮಕ್ಕಳ ವರ್ತನೆಯಿಂದ ತಲ್ಲಣ, ಸ್ಥಾನ ಮಾನಕ್ಕೆ ಪ್ರಯತ್ನ, ಯೋಗದ ಬಳಕೆ ಇವೆಲ್ಲ ಈ ದಿನ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ
ಜ್ಯೀತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 10, 2025 | 1:25 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ: ಗಂಡ, ಕರಣ : ವಣಿಜ, ಸೂರ್ಯೋದಯ – 06:23 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:07 – 15:39, ಯಮಘಂಡ ಕಾಲ 06:23 – 07:56, ಗುಳಿಕ ಕಾಲ 09:29 – 11:01

ಮೇಷ ರಾಶಿ: ಸಂಶೋಧನೆಗೆ ಮಾರ್ಗದರ್ಶನ ಸಿಗಲಿದೆ. ತಪ್ಪುಗಳನ್ನು ನೀವೇ ಅರ್ಥಮಾಡಿಕೊಂಡರೆ ನಿಮಗೇ ಉತ್ತಮ. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ತೆರಿಗೆಯನ್ನು ನೀವು ಸರಿಯಾಗಿ ಕೊಡುವ ಬಗ್ಗೆ ಆಲೋಚನೆ ಇರುವುದು. ನೌಕರರ ಬಗ್ಗೆ ನಿಮಗೆ ಖುಷಿ ಇರುವುದು. ಬಂದಿದ್ದರಲ್ಲಿ ಸುಖವಾಗಿರಲು ಪ್ರಯತ್ನಿಸುವಿರಿ. ಅಧ್ಯಾತ್ಮದಲ್ಲಿ ಮನಸ್ಸು ಇರಲಿದೆ. ಬಂಧುಗಳ ಒಡನಾಟದಿಂದ ನೋವನ್ನು ಕಳೆಯುವಿರಿ. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದ್ಸು ದ್ವೇಷಿಸುವವರನ್ನು ಇಷ್ಟಪಡುವಿರಿ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೆ ಮಾಡಬೇಕಾದ ದಿನವಾಗುವುದು.

ವೃಷಭ ರಾಶಿ: ಯಾರ‌ನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ಇನ್ನೊಬ್ಬರ ಬಗ್ಗೆ ನಿಮಗೆ ಸಹಜವಾದ ಕರುಣೆ ಇರುವುದು. ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಪ್ರತಿಕೂಲ ಪರಿಸ್ಥಿತಿಯಲ್ಲಿ ನೀವು ಧೈರ್ಯವನ್ನು ಕಾಪಾಡಿಕೊಳ್ಳುವಿರಿ. ನಿಮ್ಮ ಮಕ್ಕಳ ಜೊತೆ ನೀವು ಯಾವುದಕ್ಕಾದರೂ ಕೋಪಗೊಳ್ಳುವಿರಿ. ರಾಜಕೀಯದಲ್ಲಿ ಡೋಲಾಯಮಾನವಾಗಿ ಇರಲಿದ್ದು ಆತಂಕವೂ ಇರಲಿದೆ. ಇಂದು ಎಲ್ಲ ಕಾರ್ಯಗಳಲ್ಲಿ ಸಾವಧಾನತೆ ಇರದು. ಕೆಲಸವೊಂದು ಯೋಚಿಸುವುದು ಮತ್ತೊಂದು ಆಗಬಹುದು. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ಇಂದು ನೀವು ಮಾಡಲು ಹೊರಟ ಕಾರ್ಯವು ನಿರ್ವಿಘ್ನವಾಗಿ ಮುಗಿಯುವುದು.

ಮಿಥುನ ರಾಶಿ: ಸಾಹಿತ್ಯಾಸಕ್ತರಿಗೆ ಗೌರವ, ಸಮ್ಮಾನ. ನಿಮಗೆ ಯಾರಾದರೂ ಇಂದು ಆಮಿಷವನ್ನು ತೋರಿಸಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಕೌಟುಂಬಿಕ ಭಿನ್ನಾಭಿಪ್ರಾಯಕ್ಕೆ ನೀವೇ ಪರಿಹಾರ ಕಂಡುಕೊಳ್ಳಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು.‌ ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ನಿಮಗೆ ಉತ್ತಮವಾಗಿರುತ್ತದೆ. ನೂತನ ಮನೆಯ ನಿರೀಕ್ಷೆಯಲ್ಲಿ ನೀವು ಇರುವಿರಿ. ಸಾಮಾಜಿಕ‌ ಜಾಲತಾಣದಲ್ಲಿ ಕ್ರಿಯಾಶೀಲರಾಗಿರುವಿರಿ. ನಿಮ್ಮ ಹವ್ಯಾಸವು ಬದಲಾಗಬಹುದು. ಪ್ರವಾಸಕ್ಕೆ ಹೋಗಲು ಉತ್ಸಾಹವು ಇರಲಿದೆ. ಎಲ್ಲರೂ ನಿಮ್ಮ ಬಗ್ಗೆ ಹೇಳಿ ಸಾಕಾದೀತು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಜಾಣತನದಿಂದ ಮಾಡಿಸಿಕೊಳ್ಳುವಿರಿ. ಸೌಂದರ್ಯಪ್ರಜ್ಞೆ ಅಧಿಕವಾಗುವುದು. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನಿಮ್ಮ ಬಗ್ಗೆ ಅತಿಯಾದ ವಿಶ್ವಾಸವು ಕೊನೆಯ ಕ್ಷಣದಲ್ಲಿ ಕಾರ್ಯವನ್ನು ಮಾಡುವಂತೆ ಮಾಡುವುದು.

ಕರ್ಕಾಟಕ ರಾಶಿ: ಪ್ರಶಸ್ತಿಗಳು ನಿಮ್ಮ ಮುಡಿಗೇರಲಿವೆ. ನಿಮ್ಮ ವರ್ತನೆಯಿಂದ ಅಧಿಕಾರವು ಸಿಗಬಹುದು. ಆಸ್ತಿಯ ಬಗ್ಗೆ ಸರಿಯಾದ ದಾಖಲೆಗಳು ಇರಲಿ. ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಅಶುಭಕರ ಸೂಚನೆಯನ್ನು ನಿರ್ಲಕ್ಷಿಸುವಿರಿ. ಅನುಮಾನದ ನಿಮ್ಮ ಸ್ವಭಾವವು ಅಧಿಕವಾಗುದು. ಎಲ್ಲವನ್ನೂ ಸಮಾನವಾಗಿ ನೋಡಲು ಕಷ್ಟವಾಗಬಹುದು. ಕಲಹಕ್ಕೆ ಏನಾದರೂ ವಿಷಯವನ್ನು ಹುಡುಕಿಕೊಳ್ಳುವಿರಿ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ಪರರ ಸೇವೆಗೆ ನಿಮ್ಮ‌ ಮನಸ್ಸು ಒಪ್ಪದು. ಮಕ್ಕಳ ಕಡೆಯಿಂದ ಆರ್ಥಿಕ ಸಹಾಯವನ್ನು ನಿರೀಕ್ಷಿಸಿ ಹತಭಾಗ್ಯರಾಗುವಿರಿ. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ಪ್ರೀತಿಪಾತ್ರರನ್ನು ಕೈಬಿಡಲಾರಿರಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಸಂಗಾತಿಯ ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು.

ಸಿಂಹ ರಾಶಿ: ಆಹಾರದ ವ್ಯತ್ಯಾಸದಿಂದ ಅನಾರೋಗ್ಯ. ಕೂಡಿಟ್ಟ ಹಣಕಾಸಿನಲ್ಲಿ ಖರ್ಚು. ಭೂಮಿಯ ಲಾಭವು ಆಗುವುದಾದರೂ ಅದನ್ನು ಪರಿಶೀಲಿಸಿ ಒಪ್ಪಿಕೊಳ್ಳಿ. ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ವಿದ್ಯಾರ್ಥಿಗಳು ಯಾವುದಾದರೂ ಸ್ಪರ್ಧೆಯಲ್ಲಿ ಭಾಗವಹಿಸಿದರೂ ಸ್ಥಾನವು ಸಿಗಲಿದೆ. ನಿಮ್ಮ ಆರೋಗ್ಯದಲ್ಲಿ ಸಮಸ್ಯೆಗಳನ್ನು ನೀವು ಅಲಕ್ಷ್ಯ ಮಾಡುವುದು ಸರಿಯಾಗದು. ನಿಮಗೆ ಕೊಟ್ಟ ಕೆಲಸಕ್ಕೆ ಏನಾದರೂ ನೆಪವನ್ನು ಹೇಳಿ ತಪ್ಪಿಸಿಕೊಳ್ಳುವಿರಿ. ಕನಸನ್ನು ನೀವು ನೆನಪಿನಲ್ಲಿ ಇಡುವಿರಿ. ಕೆಲವರ ಮೇಲೆ ನಂಬಿಕೆಯನ್ನು ಇಡಲಾರಿರಿ. ಕೆಲವು ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಲು ಸಾಧ್ಯವಾಗದೇ ಹೋಗಬಹುದು. ನಿಮ್ಮ ಬಹುದಿನದ ವಿದೇಶ ಪ್ರಯಾಣದ ಕನಸು ಇಂದು ನನಸಾಗುವುದು. ಹೂಡಿಕೆಯ ವಿಷಯದಲ್ಲಿ ಸ್ವಲ್ಪ ಹಿಂದೇಡು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ.

ಕನ್ಯಾ ರಾಶಿ: ಪ್ರಕೃತಿ ವಿಕೋಪದಿಂದ ಆಕಸ್ಮಿಕ ಅವಗಡ ಸಂಭವಿಸಬಹುದು.‌ ನಿಮಗೆ ಯೋಗ್ಯ ಸಂಗಾತಿಯ ಮಾಹಿತಿಗಳು ಸಿಗಲಿದೆ. ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವುದನ್ನು ತಪ್ಪಿಸಿ. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಗೆಲುವನ್ನು ಕಾಣಲು ಸೂಕ್ತ ಮಾಹಿತಿಯ ಕೊರತೆ ಕಾಣಿಸುವುದು. ನಕಲಿ ದಾಖಲೆಗಳ ಅನಾವರಣ. ಅಪಮಾನವನ್ನು ಸಹಿಸಲಾಗದು. ಏಕಾಂತದಲ್ಲಿ ಇಂದು ನೆಮ್ಮದಿಯನ್ನು ಕಾಣಬಯಸುವಿರಿ. ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಇರುವುದು. ಮಕ್ಕಳ ವಿವಾಹದ ಕುರಿತು ಅತಿಯಾದ ಚಿಂತೆ ಇರುವುದು. ನಿರುದ್ಯೋಗಿಗಳಿಗೆ ಎಲ್ಲರಿಂದ ಮಾನಸಿಕ ಹಿಂಸೆ ಆಗಬಹುದು. ಕಾನೂನನ್ನು ಗೌರವುಸಿ ಅದಕ್ಕೆ ಯೋಗ್ಯ ರೀತಿಯಲ್ಲಿ ನಡೆದುಕೊಳ್ಳಿ. ಮನೆಗೆ ಅತಿಥಿಗಳ ಆಗಮನ. ನಿಮಗೆ ಸಂತೋಷವಾಗುವುದು. ಕಳೆದುಕೊಂಡ ವಸ್ತುವಿನ ಬಗ್ಗೆ ಮೋಹವು ಹೆಚ್ಚಾಗುವುದು. ಹೊಸತನ್ನು ಏನನ್ನಾದರೂ ಮಾಡಬೇಕೆಂಬ ಬಯಕೆ ಬರುವುದು.

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್